Breaking News
Home / ರಾಜಕೀಯ (page 740)

ರಾಜಕೀಯ

ಕಾಂಗ್ರೆಸ್ – ಜೆಡಿಎಸ್ ಭ್ರಷ್ಟಾಚಾರದ ಪಾರ್ಟಿ

ಮಂಡ್ಯ : ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಷ್ಟಾಚಾರದಿಂದ ಕೂಡಿದ ಪಾರ್ಟಿ ಹಾಗೂ ಕುಟುಂಬ ರಾಜಕಾರಣ ಮಾಡುವ ಪಾರ್ಟಿ ಎಂದು ಬಿಜೆಪಿ ಚಾಣಕ್ಯ ಅಮಿತ್ ಶಾ ಗುಡುಗಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅಮಿತ್ ಶಾ ಭಾಷಣ ಮಾಡಿದ್ದಾರೆ. ಜೆಡಿಎಸ್ ಯಾವಾಗಲೂ ಹೇಗೆ ಒಂದು ಕುಟುಂಬವನ್ನು ಅಭಿವೃದ್ದಿ ಮಾಡಬೇಕು ಎಂದು ಯೋಚಿಸುತ್ತೆ, ಕಾಂಗ್ರೆಸ್ ಭ್ರಷ್ಟಾಚಾರ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಡಬನ್ ಎಂಜಿನ್ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. 2018 ರಲ್ಲಿ …

Read More »

ಬಿಜೆಪಿಯವರು ಜನರಿಗೆ ಚಾಕೊಲೇಟ್ ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ:

ಅಮಿತ್ ಶಾ ಮಂಡ್ಯಕ್ಕೆ ಬಂದಿದ್ದಾರೆ. ಡಬಲ್ ಎಂಜಿನ್ ಸರ್ಕಾರ ರೈತರಿಗೆ ಡಬಲ್ ಬೆಲೆ ಕೊಡುತ್ತೇವೆ ಎನ್ನುವುದನ್ನು ಬಹಿರಂಗವಾಗಿ ಹೇಳಬೇಕು. ಬಿಜೆಪಿಯವರು ಜನರಿಗೆ ಚಾಕೊಲೇಟ್ ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಕೇವಲ ಕಣ್ಣು ಒರೆಸುವುದರಿಂದ ಉಪಯೋಗವಿಲ್ಲ. ಜನರ ಸಮಸ್ಯೆ ಬಗೆಹರಿಸುವ ಕಾರ್ಯವನ್ನು ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೀರಿನ ಬೆಲೆ 23, 24 ಇದೆ. ಹಾಲಿನ ಬೆಲೆ 27,28 ಇದೆ. …

Read More »

ತಾಯಿಯನ್ನು ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟ ಇನ್ನೊಂದಿಲ್ಲ

ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿ ಶುಕ್ರವಾರ (ಡಿಸೆಂಬರ್ 30) ನಸುಕಿನ ವೇಳೆ ಅಹಮದಾಬಾದ್ ಮೆಹ್ತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.   ಹೀರಾಬೆನ್ ಮೋದಿ ಅವರ ನಿಧನಕ್ಕೆ ನೇಪಾಳ ಪ್ರಧಾನಿ ಪುಷ್ಪ ಕಮಾಲ್ ದಹಾಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹೀರಾಬೆನ್ ಮೋದಿ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಃಖವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರೀತಿಯ ತಾಯಿಯ ನಿಧನಕ್ಕೆ ಹೃದಯಾಂತರಾಳದ ಸಂತಾಪ …

Read More »

ಮೋದಿ ಎಷ್ಟು ಸಲ ಬೇಕಾದರೂ ರಾಜ್ಯಕ್ಕೆ ಬರಲಿ, ರಾಜ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಎಷ್ಟು ಬಾರಿ ಬೇಕಾದರೂ ರಾಜ್ಯಕ್ಕೆ ಬಂದರೂ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಾದೂ ನಡೆಯಲ್ಲ. ಮೋದಿ ಎಷ್ಟು ಬಾರಿ ಬಂದರೂ ಬಿಜೆಪಿ ಗೆಲ್ಲಲ್ಲ ಎಂದರು. ಅಮಿತ್ ಶಾ ಬಂದಾಕ್ಷಣ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತದೆಯೆಂದು ಹೇಳಲು ಆಗುತ್ತದೆಯೇ. …

Read More »

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ವಿಧೇಯಕಗಳನ್ನು ಮಂಡಿಸಲಾಗಿದ್ದು, ಒಂಬತ್ತು ವಿಧೇಯಕಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು ಒಂಬತ್ತು ದಿನಗಳ ಅಧಿವೇಶನದಲ್ಲಿ ಸುಮಾರು 41 ಗಂಟೆ 20 ನಿಮಿಷಗಳ ಕಾಲ ಕಲಾಪ ನಡೆದಿದೆ ಎಂದರು. ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿತಂದಿಲ್ಲ. ಒಟ್ಟು ಪ್ರತಿಶತ 75 ರಷ್ಟು ಹಾಜರಾತಿ ಇತ್ತು. ಇದು ಸರಿಯಾದ ಬೆಳವಣಿಗೆ ಅಲ್ಲ. ದಿನೇಶ ಗುಂಡೂರಾವ್ ಹರೀಶ್ ಪೂಂಜಾ, ಕೃಷ್ಣಪ್ಪ, ಜಮೀರ ಅಹ್ಮದ್ ಹಾಗೂ ಅನಿತಾ ಕುಮಾರಸ್ವಾಮಿ ಸೇರಿದಂತೆ ಒಂಬತ್ತು ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರಾಗಿದ್ದರು ಎಂದು ಕಾಗೇರಿ ಹೇಳಿದರು. ಕಲಾಪದಲ್ಲಿ ಒಟ್ಟು 2125 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು ಸದನದಲ್ಲಿ ಉತ್ತರಿಸಬೇಕಿದ್ದ 150 ಪ್ರಶ್ನೆಗಳ ಪೈಕಿ 146 ಪ್ರಶ್ನೆಗಳಿಗೆ ಮತ್ತು ಲಿಖಿತ ಮೂಲಕ ಉತ್ತರಿಸುವ 1923 ಪ್ರಶ್ನೆಗಳ ಪೈಕಿ 1614 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನಸೆಳೆಯುವ 289 ಸೂಚನೆಗಳ ಪೈಕಿ 85 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ಹೇಳಿದರು. ಮಹಾರಾಷ್ಟ್ರದ ಜನತೆಯು ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾದವನ್ನು ಖಂಡಿಸಿ ರಾಜ್ಯದ ಹಿತರಕ್ಷಣೆ ಗೆ ಕಟಿಬದ್ಧರಾಗಿರುವದಾಗಿ ಸದನವು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ ಎಂದರು. ಮುಖ್ಯವಾಗಿ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕಿತ್ತು. ಇದು ಎಲ್ಲರ ನಿರೀಕ್ಷೆ. ಹೆಚ್ಚಿನ ಕಾಲಾವಕಾಶ ಸಿಗದಿದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಸಲಾಗಿದೆ. ಮುಂದಿನ ಅಧಿವೇಶನದಲ್ಲಿ ಮೊದಲ ವಾರದ ಕಲಾಪದಲ್ಲೇ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು. ಈ ಬಾರಿಯ ಅಧಿವೇಶನ ದಾಖಲೆಯ ವೀಕ್ಷಕರ ಸಂಖ್ಯೆಗೆ ಸಾಕ್ಷಿಯಾಗಿದೆ. ಬೆಂಗಳೂರಿನಲ್ಲಿ ನಡೆದ ಅಧಿವೇಶನವನ್ನು 15000 ಜನರು ವೀಕ್ಷಿಸಿದ್ದರು. ಆದರೆ ಬೆಳಗಾವಿ ಅಧಿವೇಶನವನ್ನು 20 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಇದೊಂದು ದಾಖಲೆಯಾಗಿದೆ ಎಂದು ಕಾಗೇರಿ ಅವರು ಹೇಳಿದರು.

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ವಿಧೇಯಕಗಳನ್ನು ಮಂಡಿಸಲಾಗಿದ್ದು, ಒಂಬತ್ತು ವಿಧೇಯಕಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು ಒಂಬತ್ತು ದಿನಗಳ ಅಧಿವೇಶನದಲ್ಲಿ ಸುಮಾರು 41 ಗಂಟೆ 20 ನಿಮಿಷಗಳ ಕಾಲ ಕಲಾಪ ನಡೆದಿದೆ ಎಂದರು.   ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿತಂದಿಲ್ಲ. ಒಟ್ಟು ಪ್ರತಿಶತ 75 ರಷ್ಟು ಹಾಜರಾತಿ ಇತ್ತು. ಇದು ಸರಿಯಾದ …

Read More »

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ*

ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು …

Read More »

ರಮೇಶ್‌ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದಾರೆ.: ಮಹೇಶ್‌ ಕುಮಟಹಳ್ಳಿ

ರಮೇಶ್‌ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದಾರೆ. ಆ ಭರವಸೆ ಈಡೇರಿಸುತ್ತಾರೆಂದು ಅಥಣಿ ಶಾಸಕ ಮಹೇಶ್‌ ಕುಮಟಹಳ್ಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಮೇಶ್‌ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ಕೊಟ್ಟಿದ್ದಾರೆ. ಅದನ್ನು ಈಡೇರಿಸುತ್ತಾರೆ. ತಾನೂ ಕೂಡ ಸುಮ್ಮನೆ ಕುಳಿತಿಲ್ಲ. ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು. ಲಕ್ಷ್ಮಣ ಸವದಿ ಅವರಿಗೆ ಟಿಕೆಟ್‌ …

Read More »

ಪ್ರಸಕ್ತ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ: ಸಿಎಂ ಬೊಮ್ಮಾಯಿ

 ಪ್ರಸಕ್ತ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆಯ ಸಂದರ್ಭದಲ್ಲಿ ಉತ್ತರಿಸಿದ ಅವರು, ಇನ್ನು 15,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. 8000 ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಾಲೇಜು ಉಪನ್ಯಾಸಕರು, ಸಹ ಪ್ರಾಧ್ಯಾಪಕರು ಹಾಗೂ ಪ್ರಾಧ್ಯಾಪಕರ ಬೋಧನಾ ಕಾರ್ಯ ಶೈಲಿ ಬದಲಾವಣೆ ಮಾಡಲಿದ್ದು ಮುಂದಿನ …

Read More »

6 ಖಾಸಗಿ ವಿವಿ ಸ್ಥಾಪನೆ ಯತ್ನಕ್ಕೆ ಹಿನ್ನಡೆ

ಸುವರ್ಣ ವಿಧಾನಸೌಧ: ನೂತನವಾಗಿ 6 ಖಾಸಗಿ ವಿಶ್ವವಿದ್ಯಾಲಯ ರಚನೆಗೆ ತರಾತುರಿಯಲ್ಲಿ ಹೊರಟಿದ್ದ ಸರಕಾರಕ್ಕೆ ಕಲಾಪದಲ್ಲಿ ಸ್ವಪಕ್ಷೀಯ ಶಾಸಕರಿಂದಲೇ ಬಲವಾದ ವಿರೋಧ ವ್ಯಕ್ತವಾಯಿತು. ಖಾಸಗಿ ವಿಶ್ವವಿದ್ಯಾಲಯಗಳ ಮೇಲೆ ಸರ್ಕಾರಕ್ಕೆ ಯಾವುದೇ ನಿಯಂತ್ರಣ ಇರುವುದಿಲ್ಲ, ಹಾಗಿರುವಾಗ ವಿಧೇಯಕದಲ್ಲಿರುವ ಅಂಶಗಳನ್ನು ಸರಿಯಾಗಿ ವಿಶ್ಲೇಷಣೆ ಮಾಡದೆ, ಆ ಬಗ್ಗೆ ಚರ್ಚೆಯನ್ನೂ ಮಾಡದೆ ಅನುಮೋದಿಸುವುದು ಸದನದ ಗೌರವಕ್ಕೆ ಅಪಚಾರವಾದಂತೆ ಎಂದು ಹಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿಧೇಯಕಗಳನ್ನು ಹಿಂಪಡೆಯಬೇಕಾಗಿ ಬಂತು.   ವಿಧಾನಸಭೆಯಲ್ಲಿ ಗುರುವಾರ ಮಧ್ಯಾಹ್ನ ಸದಸ್ಯರ …

Read More »

ಮೀಸಲಾತಿ ಕೂಗು; ಸರಕಾರದ ಹೊಸ ತಂತ್ರ: ಲಿಂಗಾಯತ, ಒಕ್ಕಲಿಗರಿಗೆ ಪ್ರತ್ಯೇಕ ಕೆಟಗರಿ

ಬೆಳಗಾವಿ: ಕರ್ನಾಟಕದ ಪ್ರಬಲ ಸಮುದಾಯದಗಳಾಗಿರುವ ಲಿಂಗಾಯತ ಪಂಚಮಸಾಲಿ ಮತ್ತು ಒಕ್ಕಲಿಗ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎರಡು ಪ್ರತ್ಯೇಕ ಕೆಟಗರಿಗಳನ್ನು ಗುರುವಾರ (ಡಿ 29) ಅಸ್ತಿತ್ವಕ್ಕೆ ತಂದಿದೆ. 3ಎನಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2ಸಿ ವರ್ಗ ಹಾಗೂ 3ಬಿಯಲ್ಲಿದ್ದ ಲಿಂಗಾಯತರಿಗೆ 2ಡಿ ಎಂಬ ಮೀಸಲಾತಿ ವರ್ಗ ರಚಿಸಲು ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.   ಚುನಾವಣೆ ಸಮೀಪದಲ್ಲೇ ಇರುವ ವೇಳೆ ನಿರ್ಣಾಯಕ ಪ್ರಬಲ ಸಮುದಾಯದ 2 …

Read More »