Breaking News

ರಾಜಕೀಯ

ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿದೆ. ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಇದ್ದರು. ಆಂಧ್ರಪ್ರದೇಶ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತಡರಾತ್ರಿ ಎರಡು ಗಂಟೆಯಾದರೂ ಪಾರ್ಟಿ ನಡೆಯುತ್ತಿತ್ತು. ಅವಧಿ ಮೀರಿ ಪಾರ್ಟಿ ನಡೆಸಿದ್ದು, ಡ್ರಗ್ಸ್ ಬಳಕೆ ಮಾಡಲಾಗಿದೆ. ಹೈದರಾಬಾದ್ ಮೂಲದ ವಾಸು ಪಾರ್ಟಿ …

Read More »

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ನಿವಾಸಿಗಳಾದ ಭುಜೇಂದ್ರ ಹಾಗೂ ದೀಪಾ ದಂಪತಿಯ ಪುತ್ರಿ ಶಿವಾನಿ ಅಜ್ಜಿಯ ಮನೆಗೆ ಬಂದಿದ್ದಳು. ಶುಕ್ರವಾರ ರಾತ್ರಿ ತೋಟದ ಮನೆಯ ಮುಂದೆ ಆಟ ಆಡುವಾಗ ಬಾಲಕಿಯ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ …

Read More »

ಮೊಸಳೆಗಳಿವೆ ಎಚ್ಚರಿಕೆ!

ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು ಕಡಿಮೆ ಆದ ಕೂಡಲೇ ಆಹಾರ ಅರಸಿ ದಡಕ್ಕೆ ಬರುವ ಮೊಸಳೆಗಳನ್ನು ಅಲ್ಲಿಯ ಜನರು ಏನು ಮಾಡುತ್ತಾರೆ? ನದಿಯಿಂದ ದಡಕ್ಕೆ ಮೊಸಳೆ ಬಂದಿದೆ ಎನ್ನುವ ಸುದ್ದಿ ಹರಡುತ್ತಿದ್ದಂತೆ ದೊಡ್ಡ ಗುಂಪೇ ಸೇರುತ್ತದೆ. ಹೊರ ಬಂದ ಮೊಸಳೆಯನ್ನು ಭಯದಿಂದಾಗಿ ಕಲ್ಲು, ಬಡಿಗೆಗಳಿಂದ ಹೊಡೆದು ಇಲ್ಲವೆ ಟ್ರ್ಯಾಕ್ಟರ್‌ ಹಾಯಿಸಿ ಕೊಂದ ಉದಾಹರಣೆಗಳು ಇವೆ. ಆದರೆ, ಈಗ ಪರಿಸ್ಥಿತಿ …

Read More »

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು …

Read More »

ಇಂದೇ ಅರೆಸ್ಟ್ ಆಗ್ತಾರಾ ರೇವಣ್ಣ? ಗೃಹ ಸಚಿವರು ಹೇಳಿದ್ದೇನು?

ಕಲಬುರಗಿ, ಮೇ, 02: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬರೀ ರಾಜ್ಯ ಅಲ್ಲದೆ, ದೇಶಾದ್ಯಂತ ಸಂಚಲ ಮೂಡಿಸಿದೆ. ಮತ್ತೊಂದೆಡೆ ಈಗಾಗಲೇ ಎಸ್‌ಐಟಿ ತಂಡ ವಿಚಾರಣೆಗೆ ಮುಂದಾಗಿದೆ. ಇನ್ನು ಮಾಜಿ ಸಚಿವ ರೇವಣ್ಣ ಅವರು ಇಂದು (ಮೇ 02) ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.ಒಂದು ವೇಳೆ ವಿಚಾರಣಗೆ ಹಾಜರಾಗದಿದ್ದರೆ, ಅವರನ್ನು ಬಂಧಿಸಬೇಕಾಗುತ್ತದೆ ಎಂದು ಜಿ.ಪರಮೇಶ್ವರ್‌ ಕಲಬುರಗಿಯಲ್ಲಿ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಇಲ್ಲಿವರೆಗೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈಗಾಗಲೇ …

Read More »

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಗುರುವಾರ ಸಂಜೆ ಹೆಬ್ಬಾಳ್ಕರ್‌ ನಿವಾಸಕ್ಕೆ ಆಗಮಿಸಿದ ನಿರಂಜನ್ ಹಿರೇಮಠ ದಂಪತಿ, ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ …

Read More »

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!  : ಬೆಳಗಾವಿ : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಜಪಾನ್ ಮತ್ತು ಇಂಗ್ಲೆಂಡ್ ದೇಶಗಳನ್ನು ಹಿಂದೆ ಹಾಕಿ ಭಾರತ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿದೆ. ಇನ್ನೂ ಕೆಲವೆ ವರ್ಷದಲ್ಲಿ ನಮ್ಮ ದೇಶ ಆರ್ಥಿಕವಾಗಿ ಮೊದಲ ಸ್ಥಾನದಲ್ಲಿ ತರುವುದು ಮೋದಿಯವರ ಗುರಿ ಆಗಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌ …

Read More »

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

ಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರಣಿ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ತಿಂಗಳಾನುಗಟ್ಟಲೆ ಓಡಾಡಿದರು ವೀಸಾ ಸಿಗುವುದಿಲ್ಲ ಆದರೆ ಪ್ರಜ್ವಲ್ ರೇವಣ್ಣ ಅವರಿಗೆ ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು ಎಂದು ಪ್ರಶ್ನಿಸಿದರು. ಹಾವೇರಿಯಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಜರ್ಮನಿಗೆ ಹೋಗಲು ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು? ಜನರು ತಿಂಗಳುಗಟ್ಟಲೆ ಓಡಾಡಿದರೂ ವೀಸಾ …

Read More »

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ(Special investigative team) ಅಧಿಕಾರಿಗಳ ತಂಡ ಇಂದು ಬುಧವಾರ ಹಾಸನ ಜಿಲ್ಲೆಯ ಹೆಚ್ ಡಿ ರೇವಣ್ಣ ನಿವಾಸಕ್ಕೆ ತೆರಳಿ ಸ್ಥಳ ಮಹಜರು ನಡೆಸಲಿದ್ದಾರೆ. ಹಾಸನದಲ್ಲಿರುವ ಹೆಚ್ ಡಿ ರೇವಣ್ಣ ನಿವಾಸ ಮತ್ತು ಫಾರ್ಮ್ ಹೌಸ್ ನಲ್ಲಿ ತಮ್ಮ ವಿರುದ್ಧ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ನಿರಂತರವಾಗಿ ಲೈಂಗಿಕ …

Read More »

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಬಿಟ್ಟು ಕೆಳಗೆ ಇಳಿರಿ ಕೇವಲ 24 ಗಂಟೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬಿಡಿ ಅಧಿಕಾರದಿಂದ ಇಳೀರಿ ನೀವು 24 ಗಂಟೆಯಲ್ಲಿ ಅವರನ್ನ ನಾವು ಕಸ್ಟಡಿಗೆ …

Read More »