Home / ರಾಜಕೀಯ (page 753)

ರಾಜಕೀಯ

ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವೆಡೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. 2015-16ನೇ ಸಾಲಿನಲ್ಲಿ ಸ್ಥಾಪಿಸಿರುವ ಕೆಲವು ಕೃಷಿ ಯಂತ್ರಧಾರೆ ಕೇಂದ್ರಗಳ ಆರು ವರ್ಷಗಳ ಒಡಂಬಡಿಕೆ ಅವಧಿಯು ಮುಕ್ತಾಯವಾಗಿದೆ ಎಂದರು. ಸಂಬಂಧಪಟ್ಟ ಸೇವಾ …

Read More »

ಕೋವಿಡ್ ಕರಿಛಾಯೆ: ವಿಧಾನ ಮಂಡಲದ ಅಧಿವೇಶನ ಮೊಟಕು?

ಬೆಳಗಾವಿ, ಡಿ.24: ವಿಶ್ವದ ಅನೇಕ ದೇಶಗಳಲ್ಲಿ ಕೋವಿಡ್ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಮೊಟಕುಗೊಳ್ಳುವ ಸಾಧ್ಯತೆಯಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿಯೂ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.   ಸಂಸತ್‌ನ ಅಧಿವೇಶನವು ಒಂದು ವಾರ ಮುಂಚಿತವಾಗಿ ಮುಂದೂಡಲ್ಪಟ್ಟಿರುವುದರಿಂದ, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನವನ್ನೂ ಅನಿರ್ದಿಷ್ಟಾವಧಿಗೆ ಮುಂದೂಡಲು ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ …

Read More »

ಸನ್ಯಾಸತ್ವ ಬಿಟ್ಟು ರಾಜಕೀಯಕ್ಕೆ ಬನ್ನಿ: ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಸವಾಲ್

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಅದೇ ಸಮುದಾಯದವರಾದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಇಂದು ನೇರ ಸವಾಲ್ ಹಾಕಿದ್ದಾರೆ. ಬಾಗಲಕೋಟೆ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ”ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಮಾಡಿರುವ ಆರೋಪ ಸಾಬೀತು ಮಾಡಿದ್ರೆ ಇವತ್ತೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ. ಸಾಬೀತು ಮಾಡದೇ ಇದ್ರೆ ನೀವು ಸನ್ಯಾಸತ್ವ ತೊರೆದು ರಾಜಕೀಯಕ್ಕೆ ಬನ್ನಿ” ಎಂದು ಸವಾಲು ಹಾಕಿದರು. ನಿನ್ನೆ ಸಂದರ್ಶನದಲ್ಲಿ …

Read More »

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ

ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿಗಳಾಗಿದ್ದ ಎಂಜಿ ಹಿರೇಮಠ ಅವರನ್ನು ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಈಗ ಮತ್ತೆ ತವರು ಜಿಲ್ಲೆಗೆ ಪ್ರಾದೇಶಿಕ ಆಯುಕ್ತರನ್ನಾಗಿ ನಿಯುಕ್ತಿಯಾಗಿದ್ದಾರೆ. ಮೂಲತಃ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದವರಾದ ಎಂ.ಜಿ. ಹಿರೇಮಠ ಅವರು ಸುಮಾರು ಎರಡು ವರ್ಷಗಳ ಕಾಲ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Read More »

ಯತ್ನಾಳ ಅವರು ಮೊನ್ನೆ ದೆಹಲಿಯಲ್ಲಿ ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಬಂದಿದ್ದೇಕೆ? ನಿರಾಣಿ.

ಬಾಗಲಕೋಟೆ: ”ಬಸನಗೌಡ ಪಾಟೀಲ್ ಯತ್ನಾಳ ಅವರು ಮೊನ್ನೆ ದೆಹಲಿಯಲ್ಲಿ ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಬಂದಿದ್ದೇಕೆ? ತಮ್ಮನ್ನು ಮತ್ತು ಯಡಿಯೂರಪ್ಪ ಅವರನ್ನು ಒಂದು ಮಾಡಿ ಅಂತ ಕಾಲಿಗೆ ಬಿದ್ದು ಬಂದಿಲ್ವಾ…?” ಬಾಗಲಕೋಟೆ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಪ್ರಶ್ನಿಸಿದವರು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ. ”ನಿರಾಣಿಯವರು ಬಿಜೆಪಿ ಟಿಕೆಟ್ಗಾಗಿ ನನ್ನ ಮನೆ ಕಾಯ್ತಿದ್ದರು” ಎಂಬುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಹೇಳಿಕೆಗೆ ನಿರಾಣಿ ಈ ರೀತಿ ತಿರುಗೇಟು …

Read More »

ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಕರೆಕೊಟ್ಟಿದ್ದು, ಹೊಸ ಸಂಕಲ್ಪ: ಸಾಹುಕಾರ್’ ರಮೇಶ್​ ಜಾರಕಿಹೊಳಿ

ಬೆಳಗಾವಿ: ಸಚಿವ ಸ್ಥಾನ ನೀಡದ ಕಾರಣ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ವಿರುದ್ಧ ಮುನಿಸಿಕೊಂಡು ಸದನಕ್ಕೆ ಗೈರಾಗಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ (Ramesh Jarkiholi) ಅವರು, ಮುಖ್ಯಮಂತ್ರಿಗಳ (Chief Minister) ಜೊತೆಗಿನ ಮಾತುಕತೆಯ ಬಳಿಕ ಮುನಿಸು ದೂರ ಮಾಡಿ ಸಕ್ರಿಯರಾಗಿದ್ದಾರೆ. ಸಿಎಂ ವಿಶ್ವಾಸ ನೀಡಿದ ಬಳಿಕ ಸದನಕ್ಕೂ ಹಾಜರಾಗಿದ್ದ ರಮೇಶ್​ ಜಾರಕಿಹೊಳಿ ಅವರು ಸದ್ಯ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ (Belagavi Rural Constituency) ಪಕ್ಷ …

Read More »

8ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಮೂವರಿಂದ ಅತ್ಯಾಚಾರ ಶಂಕೆ

ಎಂಟನೇ ತರಗತಿ ವಿದ್ಯಾರ್ಥಿನಿ (8th Class Student) ಗರ್ಭಿಣಿಯಾಗಿರುವ (Pregnant) ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ (Koppal Taluk) ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾಚಾರ ನಡೆದಿರುವ ಅನುಮಾನಗಳು ವ್ಯಕ್ತವಾಗಿವೆ. ಕೊಪ್ಪಳ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಇದೀಗ ಆರು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ ಪೋಷಕರಿಗೆ (Parents) ಗೊತ್ತಾಗಿದೆ. ಈ ಸಂಬಂಧ …

Read More »

ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಯ ಬಗ್ಗೆ ಎರಡು ದಿನ ಮೀಸಲು ಇಡಲಾಗುತ್ತದೆ. ಈ ಭಾಗದ ಸಮಸ್ಯೆಗಳ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.   ಸಿಎಂ ಬಸವರಾಜ ಬೊಮ್ಮಾಯಿಯವರ ಭೇಟಿಯ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಗಳಿಗೆ ಚರ್ಚೆ ಮೀಸಲು ಇಡಲಾಗುತ್ತದೆ. ಮಂಗಳವಾರ- ಬುಧವಾರ ಎರಡು …

Read More »

ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಬ್ರೇಕ್: ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಈ ಸೂಚನೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ ಇಂದು ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ.   ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ …

Read More »

ಹಳೆ ಪಿಂಚಣಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `NPS’ ಬಗ್ಗೆ ಚರ್ಚೆಗೆ ಸಿಎಂ ಬೊಮ್ಮಾಯಿ ಒಪ್ಪಿಗೆ

ಬೆಳಗಾವಿ : ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಚರ್ಚೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.   ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ …

Read More »