Home / ರಾಜಕೀಯ (page 756)

ರಾಜಕೀಯ

ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಎರಡು ಹೆಜ್ಜೆ ಮುಂದೆ ಹೋಗಿದ್ದೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಹೈಕಮಾಂಡ್ ಜೊತೆ ವಿಸ್ತೃತ ಚರ್ಚೆ ನಡೆದಿದ್ದು, ಕಳೆದ ಬಾರಿಗಿಂತ ಎರಡು ಹೆಜ್ಜೆ ಮುಂದೆ ಹೋಗಿದ್ದೇವೆ. ಸಂಪುಟ ವಿಸ್ತರಣೆ ವಿಷಯ ಅಂತಿಮ ಹಂತಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಒಂದು ಪ್ರಕ್ರಿಯೆ, ಇದೀಗ ಈ ವಿಷಯದಲ್ಲಿ ಕಳೆದ ಬಾರಿಗಿಂತ ಎರಡು …

Read More »

ಸರ್ ಕೊಲೆ ಮಾಡ್ತಾರೆ ಬದುಕಿಸಿ: ಪೊಲೀಸರಿಗೆ ಗೋಗರೆದು ಶರಣಾದ ರೌಡಿ ಶೀಟರ್ ಸ್ಟಾರ್ ನವೀನ್

ಬೆಂಗಳೂರು : ಬೆಂಗಳೂರು ಸಿಸಿಬಿ ಮತ್ತು ಸೌಥ್ ಪೊಲೀಸರು ಹುಡುಕಾಡುತ್ತಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಸ್ಟಾರ್ ಇದ್ದಕ್ಕಿದ್ದಂತೆ ಸಿದ್ದಾಪುರ ಪೊಲೀಸರಿಗೆ ಕರೆ ಮಾಡಿ ಸರ್ ನನ್ನ ಉಳಿಸಿ, ಇಲ್ಲದಿದ್ದರೆ ನನ್ನ ಕೊಲೆ ಮಾಡುತ್ತಾರೆ ಎಂದು ಗೋಗರೆದಿದ್ದ. ಇನ್ನೂ ನವೀನ ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಫಾಲೋ ಮಾಡಿದ ಗ್ಯಾಂಗ್‌ನಿಂದ ಈತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಮೈಸೂರಿಗೆ ಎದುರಾಳಿಗಳಿಗೆ ಮೆಸೇಜ್ ಪಾಸ್​ ಮಾಡಿದ್ದ ವಿಷಯ ಕೇಳಿಸಿಕೊಂಡು ಜಾಗೃತನಾದ ರೌಡಿಶೀಟರ್ ನವೀನ ತಕ್ಷಣ ಸಿಸಿಬಿ …

Read More »

8 ತಿಂಗಳು ತಿರುಪತಿ ತಿಮ್ಮಪ್ಪನ ದರ್ಶನ ಬಂದ್.?

ತಿರುಪತಿ: ಗರ್ಭಗುಡಿ ಮೇಲಿನ ಗೋಪುರದ ಚಿನ್ನದ ಲೇಪನ ಕಾರ್ಯ ಕೈಗೊಳ್ಳುವುದರಿಂದ ಎಂಟು ತಿಂಗಳ ಕಾಲ ತಿರುಪತಿ ತಿರುಮಲದಲ್ಲಿ ತಿಮ್ಮಪ್ಪನ ದರ್ಶನ ಬಂದ್ ಆಗಲಿದೆ. ತಾತ್ಕಾಲಿಕವಾಗಿ ಗರ್ಭಗುಡಿ ನಿರ್ಮಿಸಿ ಭಕ್ತರಿಗೆ ದರ್ಶನ ಕಲ್ಪಿಸಲು ಚಿಂತನೆ ನಡೆದಿದೆ.   ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಾರ್ಷಿಕ ಒಂದು ಕೋಟಿಗೂ ಅಧಿಕ ಭಕ್ತರು ಬರುತ್ತಾರೆ. ಗರ್ಭಗುಡಿಯನ್ನು ಕನಿಷ್ಠ ಆರರಿಂದ ಎಂಟು ತಿಂಗಳ ಕಾಲ ಮುಚ್ಚುವ ಸಾಧ್ಯತೆ ಇದ್ದು, ಗರ್ಭಗುಡಿಯ ಮೇಲೆ ಮೂರು ಅಂತಸ್ತಿನ …

Read More »

ವಿಧಾನಸಭೆಯಲ್ಲಿ `SC-ST’ ಮೀಸಲಾತಿ ಹೆಚ್ಚಳ ಮಸೂದೆ ಪಾಸ್

ಬೆಳಗಾವಿ : ಪರಿಶಿಷ್ಟ ಜಾತಿ (SC) ಮತ್ತು ಪಂಗಡದ (ST) ವರ್ಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಹೆಚ್ಚಿಸುವ ಮಸೂದೆಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ನೀಡಿದೆ. ಈ ಮೂಲಕ ಎಸ್ ಸಿ ಗೆ ಪ್ರಸ್ತುತ ಶೇ. 15 ರಷ್ಟು ಇದ್ದ ಮೀಸಲು 17 ಕ್ಕೆ ಹಾಗೂ ಎಸ್ ಟಿ ಗೆ ಇದ್ದ ಶೇ. 3 ರಷ್ಟು ಮೀಸಲು ಶೇ. 7 ಕ್ಕೆ ಹೆಚ್ಚಾಗಲಿದೆ.   ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ …

Read More »

ವರಿಷ್ಠರ ಸಮ್ಮತಿ ದೊರೆಯದ ಕಾರಣ ಮತ್ತೆ ಸಂಪುಟ ವಿಸ್ತರಣೆ ಠುಸ್ ಆಗಿದೆ? ಸಿ.ಎಂ ಬೊಮ್ಮಾಯಿ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ ಹೊತ್ತು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಎರಡೂವರೆ ಗಂಟೆಗಳ ಕಾಲ ಸಭೆ ನಡೆಸಿದರು. ಆದರೆ ವರಿಷ್ಠರ ಸಮ್ಮತಿ ದೊರೆಯದ ಕಾರಣ, ಸಂಪುಟ ವಿಸ್ತರಣೆ ಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.   ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್, ಕರ್ನಾಟಕ ಉಸ್ತುವಾರಿ ಅರುಣ್ …

Read More »

ಮಾಳಿ ಸಮುದಾಯದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ

ಮುಗಳಖೋಡ: ‘ಮಾಳಿ/ ಮಾಲಗಾರದಂತಹ ಸಣ್ಣ ವೃತ್ತಿಪರ ಸಮುದಾಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹400 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದಲ್ಲಿ ಸೋಮವಾರ ನಡೆದ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮುದಾಯದ ರಾಜ್ಯಮಟ್ಟದ ದ್ವಿತೀಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.   ‘ಕಂಬಾರ, ಕುಂಬಾರ, ಪತ್ತಾರ, ಕ್ಷೌರಿಕ, ನೇಕಾರ ಸೇರಿದಂತೆ ಹಲವು ಸಣ್ಣ ಸಮಯದಾಯಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ. ಮುಂದಿನ ದಿನಗಳಲ್ಲಿ ನಿಮ್ಮ …

Read More »

ಮತ್ತೆ ವಿದೇಶದತ್ತ ಉಕ್ರೇನ್‌ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು

ವಿಜಯಪುರ: ಉಕ್ರೇನ್‌-ರಷ್ಯಾ ಯುದ್ಧದ ಪರಿಣಾಮ ಜೀವ ಉಳಿಸಿಕೊಂಡು ಭಾರತಕ್ಕೆ ಮರಳಿದ್ದ ನಿರಾಶ್ರಿತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸದ ಕಾರಣಕ್ಕೆ ನಿರಾಶರಾದ ವಿದ್ಯಾರ್ಥಿಗಳು ಇದೀಗ ವಿದೇಶದತ್ತ ಮುಖ ಮಾಡತೊಡಗಿದ್ದಾರೆ.   ಉಕ್ರೇನ್‌ನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮರಳಿದ್ದ ಸುಮಾರು 700 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ದೇಶದ ವಿವಿಧ ರಾಜ್ಯಗಳ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಮುಂದುವರಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ) ನಿರಾಕರಿಸಿದೆ. …

Read More »

ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಠಾಕ್ರೆ

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸುವಂತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರ ವಿಧಾನಸಭೆಗೆ ತಿಳಿಸಿದ್ದಾರೆ.   ‘ಕರ್ನಾಟಕದ ಮುಖ್ಯಮಂತ್ರಿ ಆಕ್ರಮಣಕಾರಿಯಾಗಿದ್ದು, ಮಹಾರಾಷ್ಟ್ರ ಸಿಎಂ ಶಿಂದೆ ಮೌನವಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು. ಪ್ರಸ್ತಾವನೆಯಲ್ಲಿ ಇದನ್ನು ಸೇರಿಸಿ ಸದನ ಅಂಗೀಕರಿಸಬೇಕು’ ಎಂದು ಉದ್ಧವ್ ಹೇಳಿದ್ದಾರೆ. ಉದ್ಧವ್ …

Read More »

“ರಕ್ತ ಪರೀಕ್ಷೆ ಆಗಲಿ, ಮದ್ಯಪಾನ ಮಾಡಿರೋದು ಸಿಕ್ಕಿದ್ರೆ ರಾಜಕೀಯ ನಿವೃತ್ತಿ”

ಬೆಳಗಾವಿ : ಸಿ.ಟಿ ರವಿ ಮೂರು ಸಾವಿರ ಕೋಟಿ ಆಸ್ತಿ ಬಗ್ಗೆ ಕಾಂಗ್ರೆಸ್ ಆರೋಪದಿಂದ ತಲೆ ಕೆಟ್ಟು ಕಳ್ಳಬಟ್ಟಿ ಕುಡಿದು ಮಾತಾನ್ನಾಡುತ್ತಾರೆ ಎಂಬ ಬಿಕೆ ಹರಿಪ್ರಸಾದ್ ಆರೋಪಕ್ಕೆ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದಾರೆ. ನನ್ನ ಬ್ಲಡ್ ನಲ್ಲಿ ಗಾಂಜಾ, ಮದ್ಯಪಾನ ಮಾಡಿರೋದು ಏನಾದ್ರೂ ಸಿಕ್ಕಿದ್ರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಅವರ ರಕ್ತದಲ್ಲಿ ಏನಾದ್ರು ಸಿಕ್ಕರೆ ಏನು? ಎಂಬ ಪ್ರಶ್ನೆಯನ್ನು ಮುಂದಿಟ್ಟರು. ಅಧಿವೇಶನಕ್ಕೂ ಮುನ್ನ ಮಾತಾನಾಡಿದ ಶಾಸಕ ಸಿ ಟಿ ರವಿ, …

Read More »

ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ, ಹೊಸ ವರ್ಷದ ಆಚರಣೆಗೆ ಹಲವು ರೂಲ್ಸ್‌ ಜಾರಿ,

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್‌ ಲೈನ್ಸ್‌ ರಿಲೀಸ್‌ ಮಾಡಿದೆ. ಇಂದು ಕೋವಿಡ್‌ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್‌ ಗಳಲ್ಲೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ …

Read More »