Breaking News
Home / ರಾಜಕೀಯ (page 774)

ರಾಜಕೀಯ

ಕಲ್ಯಾಣ ಕರ್ನಾಟದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಧೂಳಿಪಟ: ಕಾಂಗ್ರೆಸ್ ವಿಶ್ವಾಸ

ಕಲಬುರಗಿ: ರಾಜ್ಯದ ಬಿಜೆಪಿ ಸರ್ಕಾರದ ವೈಫಲ್ಯ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ತೋರಿರುವ ನಿರ್ಲಕ್ಷ್ಯದ ವಿರುದ್ದ ಜನ ಬೇಸತ್ತಿರುವುದರಿಂದ ಮುಂಬರುವ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಕ ಭಾಗದ ಎಲ್ಲ41 ಕ್ಷೇತ್ರಗಳಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎಂದು ಕಾಂಗ್ರೆಸ್ ನಾಯಕರು ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಡಾ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಂಘಟಿತ ಪ್ರಯತ್ನ ಹಾಗೂ …

Read More »

ರಾಜ್ಯದಲ್ಲಿ ಕಾಂಗ್ರೆಸ್‌ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲೂ ಕಾಂಗ್ರೆಸ್‌ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಗುಜರಾತ್‌ ಫ‌ಲಿತಾಂಶದ ನಂತರ ದೇಶದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಇರಬೇಕೆಂಬ ವಿಚಾರಕ್ಕೆ ಮತದಾರರು ಮುದ್ರೆ ಒತ್ತಿದ್ದಾರೆ. ಕರ್ನಾಟಕದಲ್ಲೂ ಅದೇ ಫ‌ಲಿತಾಂಶ ಮರುಕಳಿಸಲಿದೆ ಎಂದು ಹೇಳಿದರು. ಮುಂದಿನ ಐದು ವರ್ಷಗಳಲ್ಲಿ ಇಡೀ ದೇಶದಲ್ಲಿ ಕಾಂಗ್ರೆಸ್‌ ಹೆಸರು ಹೇಳುವವರು ಇರುವುದಿಲ್ಲ. ಭಾರತ್‌ ಜೋಡೋ ಯಾತ್ರೆಯಿಂದ ರಾಹುಲ್‌ಗಾಂಧಿ ಗಡ್ಡ ಬೆಳೆದಿದ್ದು ಬಿಟ್ಟರೆ ಬೇರೇನೂ …

Read More »

ಐವರು ಸಮಾಜಘಾತುಕರಿಗೆ ಬೆಳಗಾವಿಯಿಂದ ಗಡಿಪಾರು ಮಾಡಿದ ಡಿಸಿಪಿ ಗಡಾದಿ

ಬೆಳಗಾವಿ: ನಗರದಲ್ಲಿ ಮಟ್ಕಾ, ಜೂಜಾಟ, ಅಕ್ರಮ ಸಾರಾಯಿ ಮಾರಾಟ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಐವರನ್ನು ಜಿಲ್ಲೆಯಿಂದ ಗುರುವಾರದಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಅವರು ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದ್ದಾರೆ.   ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಖಂಜರ ಗಲ್ಲಿಯ ಮಹ್ಮದಶಫಿ ಮೋದಿನಸಾಬ ತಹಶೀಲ್ದಾರ(68), ಇಜಾರಹ್ಮದ ಮಹ್ಮದ ಇಸಾಕ ನೇಸರಿಕರ(48), ಮಾಳಮಾರುತಿ ಠಾಣೆ ವ್ಯಾಪ್ತಿಯ ಗ್ಯಾಂಗವಾಡಿಯ ಜಯಪಾಲ ಲೋಂಡೆ(36), ಕಣಬರ್ಗಿ ಪಾಟೀಲ …

Read More »

ಗಡಿ ವಿವಾದ; ಕೇಂದ್ರ ಸರ್ಕಾರ ಮೂಕ ಪ್ರೇಕ್ಷಕನಾಗಿ ಉಳಿಯಬಾರದು: ಪವಾರ್

ಮುಂಬಯಿ : ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ನಡುವೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಗುರುವಾರ ಕೇಂದ್ರ ಸರ್ಕಾರ ಮೂಕ ಪ್ರೇಕ್ಷಕನಾಗಿ ಉಳಿಯಬಾರದು ಎಂದು ಹೇಳಿದ್ದಾರೆ. ಎನ್‌ಸಿಪಿ ಸಭೆಯನ್ನುದ್ದೇಶಿಸಿ ಮಾತನಾಡಿ, ಭಾಷಾ ಮಾಧ್ಯಮ ಮತ್ತು ಚಳವಳಿಯ ಕಲ್ಪನೆಯನ್ನು ನಾಶಮಾಡಲು ಅಧಿಕಾರವನ್ನು ದುರುಪಯೋಗಪಡಿಸಿಕೊಂಡರೆ ಪ್ರತಿಕ್ರಿಯೆ ಉಂಟಾಗುತ್ತದೆ. ಆದರೆ ಕೇಂದ್ರವು ಅದರತ್ತ ಕಣ್ಣು ಮುಚ್ಚಿ ಕುಳಿತಿದೆ ಎಂದು ಪವಾರ್ ಹೇಳಿದರು. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದವು ಎರಡು ರಾಜ್ಯಗಳ ನಡುವೆ …

Read More »

ಕೆಲ ದಿನಗಳ ಹಿಂದೆ ಕಣ್ಮರೆಯಾಗಿದ್ದ ಕುಷ್ಟಗಿಯ ಕೃಷಿ ಅಧಿಕಾರಿ ಬೆಂಗಳೂರಿನಲ್ಲಿ ಪತ್ತೆ

ಕುಷ್ಟಗಿ: ಡಿ.1ರಿಂದ ಕಣ್ಮರೆಯಾಗಿದ್ದ ಕುಷ್ಟಗಿ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅವರು, ಸಾಮಾಜಿಕ ಜಾಲತಾಣ ಸುಳಿವಿನಿಂದ ಪತ್ತೆ ಹಚ್ಚಿರುವ ಮಾಹಿತಿ ಪೋಲಿಸ್ ಮೂಲಗಳು ದೃಢಪಡಿಸಿವೆ‌. ಡಿ.1 ರ ಬೆಳಗ್ಗೆ ಅವರ ಸ್ವಗ್ರಾಮ ಹಿರೇಅರಳಹಳ್ಳಿ (ಯಲಬುರ್ಗಾ) ಗ್ರಾಮದಿಂದ ಅವರ ಪರಿಚಯಸ್ಥ ಹನುಮಂತ ಕೊಂಡಗುರಿ ಬೈಕಿನಲ್ಲಿ ಕುಷ್ಟಗಿ ಬಸ್ ನಿಲ್ದಾಣದವರೆಗೂ ಬಂದಿಳಿದು, ಅಲ್ಲಿಂದ ಕಣ್ಮರೆಯಾಗಿದ್ದರು. ಮನೆಯಲ್ಲಿ ತಮ್ಮ ಎರಡು ಮೋಬೈಲ್ ಬಿಟ್ಟು ಹೋದವರು ಸಂಜೆಯಾದರೂ ಮನೆಗೆ ಮರಳದೇ …

Read More »

ಹೆಚ್. ವಿಶ್ವನಾಥ್ – ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ‘ಬಾಂಬೆ ಬಾಯ್ಸ್’ ನಡೆ.!

ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ ‘ಬಾಂಬೆ ಬಾಯ್ಸ್’ ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಪೈಕಿ ಬಹುತೇಕರು ಮಂತ್ರಿಯಾಗಿದ್ದು, ಹೆಚ್. ವಿಶ್ವನಾಥ್ ಅವರಿಗೆ ಅವಕಾಶ ಸಿಕ್ಕಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನು ಐದಾರು ತಿಂಗಳು ಬಾಕಿ ಇದ್ದು, ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳಾಗುತ್ತಿವೆ.   ಇದರ ಮಧ್ಯೆ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅಚ್ಚರಿ …

Read More »

ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಇನ್ಮುಂದೆ ಸಂಕಷ್ಟ..

ಬೆಂಗಳೂರು: ಟ್ರಾಫಿಕ್ ದಂಡ ಕಟ್ಟದೇ ಓಡಾಡ್ತಿದ್ರೆ ನಿಮ್ಮ ವಾಹನಗಳನ್ನ ರೋಡಿಗಿಳಿಸೋಕೆ ಅಗಲ್ಲ, ಪೊಲೀಸರು ದಂಡದ ರಶೀದಿಯನ್ನ ನಿಮ್ಮ ಮನೆಗೆ ಕಳಿಸಿದ್ರೂ ಡೋಂಟ್ ಕೇರ್ ಎಂದವರಿಗೆ ಕಾದಿದೆ ಬಿಗ್ ಶಾಕ್. ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಇನ್ಮುಂದೆ ಸಂಕಷ್ಟ. ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳ ಮೇಲೆ ಕಾನೂನು ಅಸ್ತ್ರ. ಆರ್​ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ರೂಪಿಸಲಾಗಿದೆ. ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ …

Read More »

ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ.

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ ಹಿನ್ನೆಲೆ ಪೊಲೀಸರ ವಿರುದ್ಧ ಕರವೇ ಶಿವರಾಮೇ ಗೌಡ ಕೆಂಡಾಮಂಡಲವಾಗಿದ್ದಾರೆ. ಎಂಇಎಸ್ ಪುಂಡರನ್ನ,ಮರಾಠಿ ಪುಂಡರನ್ನ ಮೊದಲು ಬಂಧಿಸಿ, ಕರ್ನಾಟಕದ ಬಸ್ಸುಗಳಿಗೆ ಬೆಂಕಿ ಹಚ್ಚಿದವರನ್ನ ಬಂಧಿಸಿ, ನಮ್ಮನ್ನ ಬಂಧಿಸಿ ಹೋರಾಟವನ್ನ ಹತ್ತಿಕ್ಕಲಾಗ್ತಿದೆ. ರಾಜ್ಯ ಸರ್ಕಾರ ಕನ್ನಡಪರ ಹೋರಾಟವನ್ನ ಹತ್ತಿಕ್ಕುತ್ತಿದೆ, ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಕರವೇ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ಆರಂಭಕ್ಕೂ ಮುನ್ನವೇ ರಾಜ್ಯ ಸರ್ಕಾರ ಹತ್ತಿಕ್ಕುತ್ತಿದೆ, ಹೋರಾಟಕ್ಕೂ ಮೊದಲೇ ನಮ್ಮನ್ನ ಬಂಧಿಸಲಾಗುತ್ತಿದೆ. ಎಂದು …

Read More »

ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಗುಜರಾತ್​​​​ ಎಲೆಕ್ಷನ್​ ಬೇರೆ.. ಕರ್ನಾಟಕದ ಎಲೆಕ್ಷನ್​ ಬೇರೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಕಾಂಗ್ರೆಸ್ ಡ್ರೈವರ್ ಇಲ್ಲದ ಬಸ್​. ಗೊತ್ತು ಗುರಿಯೂ ಇಲ್ಲ. ಹೆಚ್​ಡಿಕೆ ಕರೆಸಿ ಸರ್ಕಾರ ಮಾಡಿ ಆನಂತ್ರ ಅವರೇ ಮುಂಬಯಿಗೆ ಕಳಿಸಿದ್ರು. ಕರ್ನಾಟಕದಲ್ಲಿ ಪ್ರಾದೇಶಿಕ ಶಕ್ತಿಗೆ ಜನ ಮಣೆ ಹಾಕ್ತಾರೆ. ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್​​​ ನಡೆಯಲ್ಲ, ದೇವೇಗೌಡರ ದೊಡ್ಡ ಮ್ಯಾಜಿಕ್​​ ನಡೆಯುತ್ತೆ ಎಂದು ಇಬ್ರಾಹಿಂ ಹೇಳಿದ್ದಾರೆ.

Read More »

ಗಡಿ ವಿವಾದ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಟಾರ್ಗೆಟ್

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಟಾರ್ಗೆಟ್ ಮಾಡಲಾಗುತ್ತಿರುವದನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ ಖಂಡಿಸಿದೆ. ರಾಜ್ಯ ರಸ್ತೆ ಸಾರಿಗೆ ಬಸ್ ಗಳಿಗೆ ಕಪ್ಪು ಬಣ್ಣ ಬಳಿದು ವಿರೋಧಿಸಿ ಮಹಾರಾಷ್ಟ್ರ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಲಾಗಿದೆ. ಮಹಾರಾಷ್ಟ್ರ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಹಾರಾಷ್ಟ್ರದಲ್ಲಿ ಶಿವಸೇನೆ, ಮಹಾರಾಷ್ಟ್ರ ನವ ನಿರ್ಮಾಣ …

Read More »