Breaking News

ರಾಜಕೀಯ

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ರೈತರ ಜೀವಕ್ಕೆ ಬೆಲೆ ಇಲ್ಲ. ಇದೊಂದು ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ರೈತರಿಗೆ ರಾಜ್ಯದಲ್ಲಿ ಉಜ್ವಲ ಭವಿಷ್ಯ ಇಲ್ಲದಂತಾಗಿದೆ. ಸರ್ಕಾರ ರೈತರ ಆತ್ಮಹತ್ಯೆ …

Read More »

ಕಲೆ, ಸಾಹಿತ್ಯ, ಸಂಗೀತಕ್ಕೂ ಬೇಕು ಮಾನ್ಯತೆ: ಡಾ. ನಾ. ಸೋಮೇಶ್ವರ ಅಭಿಮತ

ಯಲಹಂಕ: ಆಧುನಿಕ ಸಮಾಜದಲ್ಲಿ ವಿಜ್ಞಾನ ಮತ್ತು ಗಣಿತಕ್ಕೆ ನೀಡುತ್ತಿರುವ ಮಾನ್ಯತೆ ಕಲೆ, ಸಾಹಿತ್ಯ ಮತ್ತು ಸಂಗೀತಕ್ಕೆ ದೊರಕುತ್ತಿಲ್ಲ ಎಂದು ಡಾ. ನಾ. ಸೋಮೇಶ್ವರ ಹೇಳಿದ್ದಾರೆ. ಗುರುಪೂರ್ಣಿಮೆ ಪ್ರಯುಕ್ತ ಸಂಸ್ಕಾರ ಭಾರತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇತಿಹಾಸತಜ್ಞ, ಶಾಸನ ಸಂಶೋಧಕ ಕೆ.ಆರ್. ನರಸಿಂಹನ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಶಾಸನ ಸಂಶೋಧನೆಗೆ ನರಸಿಂಹನ್ ನೀಡಿರುವ ಕೊಡುಗೆ ಅಪಾರ. ಒಂದು ಸಂಸ್ಥೆ, ಒಂದು ವಿಶ್ವವಿದ್ಯಾಲಯ ಮಾಡಬೇಕಾದ ಕೆಲಸವನ್ನು ಅವರ ತಂಡ ಮಾಡುತ್ತಿರುವುದು ಶ್ಲಾಘನೀಯ ಎಂದರು. 120ಕ್ಕೂ …

Read More »

ಭಾರತದಲ್ಲಿ ಎಲ್ಲಾ ಮಾದರಿಗಳ ‘ಐಫೋನ್’ ಬೆಲೆ ಇಳಿಕೆ

ನವದೆಹಲಿ : ಐಫೋನ್ ಖರೀದಿದಾರರಿಗೆ ಆಪಲ್ ಸಿಹಿ ಸುದ್ದಿ ನೀಡಿದೆ. ಭಾರತದಲ್ಲಿ ತನ್ನ ಐಫೋನ್ ಶ್ರೇಣಿಯ ಬೆಲೆಗಳನ್ನ ಕಡಿತಗೊಳಿಸಿದೆ. ಭಾರತದ ಇತ್ತೀಚಿನ ಬಜೆಟ್ ಘೋಷಣೆಯ ಹಿನ್ನೆಲೆಯಲ್ಲಿ ಬೆಲೆ ಕಡಿತ ಬಂದಿದೆ. ಆಮದು ಮಾಡಿಕೊಳ್ಳುವ ಮೊಬೈಲ್ ಫೋನ್ಗಳು ಮತ್ತು ಬಿಡಿಭಾಗಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನ (BCD) 20% ರಿಂದ 15%ಕ್ಕೆ ಇಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಕೇಂದ್ರ ಬಜೆಟ್ ಭಾಷಣದಲ್ಲಿ ಘೋಷಿಸಿದರು. ಗಮನಾರ್ಹವಾಗಿ, ಆಪಲ್ ಭಾರತೀಯ …

Read More »

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ:H.D.K.

ನವದೆಹಲಿ: ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನವದೆಹಲಿಯಲ್ಲಿ ಶುಕ್ರವಾರ ಸಂಜೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ …

Read More »

ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ

ಸುಲ್ತಾನಪುರ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಉತ್ತರ ಪ್ರದೇಶದಲ್ಲಿ ಇಂದು ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ದಿಢೀರ್ ಭೇಟಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಇಂದು ಹಾಜರಾದರು. ಅಲ್ಲಿಂದ ಲಖನೌಗೆ ಹಿಂತಿರುಗುವ ವೇಳೆ ವಿಧಾಯಕ ನಗರದಲ್ಲಿ ಚಮ್ಮಾರನ ಅಂಗಡಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ …

Read More »

ಉಕ್ಕಿ ಹರಿಯುತ್ತಿದೆ ವೇದಗಂಗಾ ನದಿ

ನಿಪ್ಪಾಣಿ: ವೇದಗಂಗಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹುನ್ನರಗಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನವೇ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು, ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಸಂಜೆಯವರೆಗೆ ಸುಮಾರು 40ಕ್ಕೂ ಅಧಿಕ ಕುಂಟುಂಬಗಳು ಜಾನುವಾರುಗಳ ಸಮೇತ ಸ್ಥಳಾಂತರಣೆ ಮಾಡಿದ್ದು 50ಕ್ಕೂ ಅಧಿಕ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ಹುನ್ನರಗಿ ಗ್ರಾಮದ 41 ಕುಟುಂಬಗಳಲ್ಲಿಯ ಒಟ್ಟು 89 ಜನರಿಗೆ ಸ್ಥಳಾಂತರಿಸಲಾಗಿದೆ. ಇವರಲ್ಲಿ 26 ಕುಟುಂಬಗಳು ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಸ್ಥಾಪಿಸಿದ ಗಂಜಿ ಕೇಂದ್ರದಲ್ಲಿ …

Read More »

ಕಚೇರಿ ಒಳಗಡೆ ಕೊಡೆ ಹಿಡಿದು ಕೆಲಸ ಮಾಡುವ ಸಿಬ್ಬಂದಿ;

ಹಾವೇರಿ: ನಿರಂತರ ಮಳೆಯಿಂದಾಗಿ ಇಲ್ಲಿನ ತಹಸೀಲ್ದಾರ್ ಕಚೇರಿ ಮಾಳಿಗೆ ಸೋರುತ್ತಿದ್ದು, ಇದರಿಂದ ರಕ್ಷಿಸಿಕೊಳ್ಳಲು ಇಲ್ಲಿನ ಸಿಬ್ಬಂದಿ ಶುಕ್ರವಾರ ಛತ್ರಿ ಹಿಡಿದುಕೊಂಡೇ ಕೆಲಸ ಮಾಡಬೇಕಾದ ದುಸ್ಥಿತಿ ಎದುರಾಗಿತ್ತು. ಹೌದು…ಎರಡು ವಾರಗಳಿಂದ ಸುರಿಯುತ್ತಿರುವ ಮಳೆಗೆ ಕಟ್ಟಡದ ನೆಲ ಮಹಡಿವರೆಗೂ ಸೋರಿಕೆ ಉಂಟಾಗಿದೆ. ಇದರಿಂದ ರಕ್ಷಿಸಿಕೊಳ್ಳಲು ಇಲ್ಲಿನ ಸಿಬ್ಬಂದಿ ಛತ್ರಿ ಹಿಡಿದುಕೊಂಡು ಹರಸಾಹಸ ಮಾಡುವಂತಾಗಿದೆ. ಮಹತ್ವದ ದಾಖಲೆಗಳು, ಕಂಪ್ಯೂಟರ್ ರಕ್ಷಿಸಿಕೊಳ್ಳುವುದೇ ಇಲ್ಲಿನ ಸಿಬ್ಬಂದಿಗೆ ದೊಡ್ಡ ಸವಾಲಾಗಿದೆ. ಮಳೆ ನೀರು ಸೋರಿಕೆಯಿಂದ ಆದಾಯ, ಜಾತಿ, ಆಸ್ತಿ ಪತ್ರಗಳು …

Read More »

ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಸಂಸದರ ಪ್ರತಿಭಟನೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (MUDA) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾದಿರುವುದನ್ನು ಖಂಡಿಸಿ ಶುಕ್ರವಾರ ಸಂಸತ್ ಭವನದ ಆವರಣದಲ್ಲಿ ಕರ್ನಾಟಕದ NDA ಸಂಸದರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು. ಕರ್ನಾಟಕದ ಬಿಜೆಪಿ ಮತ್ತು ಜೆಡಿಎಸ್ ನ ಎರಡೂ ಸದನಗಳ ಸಂಸದರು ದೆಹಲಿಯಲ್ಲಿ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿದರು. …

Read More »

ಹೊಸನಗರ: ಭಾರಿ ಮಳೆ, ಹೆದ್ದಾರಿ ಮೇಲೆ ಉರುಳಿದ ಬೃಹತ್ ಮರ

ಹೊಸನಗರ: ತಾಲ್ಲೂಕಿನಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಹೊಸನಗರ ಸಮೀಪದ ಹೋಲಿ ರಿಡೀಮರ್ ಶಾಲೆ ಬಳಿ ಬೃಹತ್ ಗಾತ್ರದ ಮರವೊಂದು ಹೆದ್ದಾರಿ ಮೇಲೆ ಉರುಳಿ ಬಿದ್ದಿದೆ. ಶುಕ್ರವಾರ ಮಧ್ಯಾಹ್ನ 1.30ರ ವೇಳೆಗೆ ಹೆದ್ದಾರಿಗೆ ಮರ ಬಿದ್ದಿದ್ದು, ಈ ಮಾರ್ಗದ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಸಿಬ್ಬಂದಿ ದೌಡಾಯಿಸಿ, ಸ್ಥಳೀಯರ ಸಹಕಾರದಿಂದ ಮರ ತೆರವು ಮಾಡಿದರು. ಕಾರ್ಯಾಚರಣೆ ವೇಳೆ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಹೆಚ್ಚಿನ ವಾಹನ …

Read More »

ಚಿಕ್ಕೋಡಿ | ತುಂಬಿದ ಜಲಾಶಯಗಳು: ನೀರಿನ ಹರಿವು ಹೆಚ್ಚಳ

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಕೃಷ್ಣಾ ನದಿಯಿಂದ ರಾಜ್ಯಕ್ಕೆ 216220 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾದಲ್ಲಿ 19.8 ಸೆಂ.ಮೀ., 16.8 ಸೆಂ.ಮೀ., ಕಾಳಮ್ಮವಾಡಿಯಲ್ಲಿ 15 ಸೆಂ.ಮೀ., ಮಹಾಬಳೇಶ್ವರದಲ್ಲಿ 26.7 ಸೆಂ.ಮೀ., ನವಜಾದಲ್ಲಿ 17.2 ಸೆಂ.ಮೀ., ರಾಧಾನಗರಿಯಲ್ಲಿ 23.4 ಸೆಂ.ಮೀ., ಸಾಂಗಲಿಯಲ್ಲಿ 2.6 ಸೆಂ.ಮೀ., ಕೊಲ್ಹಾಪುರದಲ್ಲಿ 10.4 ಸೆಂ.ಮೀ. ನಷ್ಟು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಚಿಕ್ಕೋಡಿಯಲ್ಲಿ 5.2 ಸೆಂ.ಮೀ., ಅಂಕಲಿಯಲ್ಲಿ 4.2 ಸೆಂ.ಮೀ., ಸದಲಗಾದಲ್ಲಿ 5.7 …

Read More »