Breaking News
Home / ರಾಜಕೀಯ (page 798)

ರಾಜಕೀಯ

ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್ :

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರಣಗಳಿಂದಾಗಿ ಈಗಾಗಲೇ ಲಕ್ಷಾಂತರ ಕಾರ್ಡ್ ಗಳನ್ನು ಸರ್ಕಾರ ರದ್ದುಗೊಳಿಸಿದೆ. ಈ ನಡುವೆಯೂ ಹೊಸ ಬಿಪಿಎಲ್ ಕಾರ್ಡ್ ಗಳಿಗಾಗಿ ( BPL Ration Card ) ಅರ್ಜಿ ಸಲ್ಲಿಸುತ್ತಿರೋರ ಸಂಖ್ಯೆ ಏನೂ ಕಡಿಮೆ ಆಗಿಲ್ಲ. ಆದ್ರೇ ಹೊಸ ಕಾರ್ಡ್ ಗೆ ಅರ್ಜಿ ( New Ration Card Application ) ಸಲ್ಲಿಸಿ, ಆದ್ರೇ ಕಾರ್ಡ್ ಬಂತೋ ಇಲ್ಲವೋ, ಬರುತ್ತೋ ಇಲ್ಲವೇ ಎಂಬುದನ್ನು ಮಾತ್ರ ಕೇಳ ಬೇಡಿ ಎಂಬುದಾಗಿ …

Read More »

ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಸಿದ್ದರಾಮಯ್ಯ ಗರಂ!

ಹುಬ್ಬಳ್ಳಿ: ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ನಗರದ ಹೊಟೇಲ್‌ವೊಂದಕ್ಕೆ ಆಗಮಿಸಿದ್ದರು. ಈ ವೇಳೆ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಕಾಂಗ್ರೆಸ್ ಸ್ಥಳೀಯ ಮುಖಂಡ ಗಿರೀಶ ಗದಿಗೆಪ್ಪಗೌಡರ ಅವರು ‘ಮುಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಗದಿಗೆಪ್ಪಗೌಡರ ಜತೆ ಬಂದವರು ‘ಹೌದೋ ಹುಲಿಯಾ’ ಎಂದು ಪ್ರತಿಕ್ರಿಯಿಸಿದರು. ಈ ಸಂಗತಿ ಸಿದ್ದರಾಮಯ್ಯ ಅವರನ್ನು ಕೆರಳಿಸಿತು. …

Read More »

ಮುರುಘಾಶ್ರೀಗಳ ತಕ್ಕ ಶಿಕ್ಷೆಯಾಗಬೇಕು;: B.S.Y.

ಉಡುಪಿ: ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದಾರೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.   ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.ಇನ್ನು ಪೋಕ್ಸೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ …

Read More »

ಅಂತರ್ಜಲ ಹೆಚ್ಚಳ; ಕೆಂದೂರು ಗ್ರಾಮಸ್ಥರು ಕಂಗಾಲು

ಬಾದಾಮಿ: ಈ ಬಾರಿ ಮಳೆ ಪ್ರಮಾಣ ಹೆಚ್ಚಳವಾಗಿರುವುದರಿಂದ ಅಂತರ್ಜಲ ಮಟ್ಟವೂ ಹೆಚ್ಚಾಗಿದ್ದು, ಬಾದಾಮಿಯ ಕೆಂದೂರು ಗ್ರಾಮಸ್ಥರು ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಕೆಂದೂರು ಗ್ರಾಮದಲ್ಲಿ ಅಂತರ್ಜಲ ಹೆಚ್ಚಳದಿಂದಾಗಿ ಬೋರ್ ವೆಲ್ ಗಳಿಂದ ನೀರು ಹೊರಚಿಮ್ಮುತ್ತಿದ್ದು, ಜಮೀನುಗಳು ಜಲಾವೃತಗೊಂಡಿವೆ. ಬೋರ್ ವೆಲ್ ಗಳು, ಕೊಳವೆ ಬಾವಿಗಳಿಂದ ಏಕಾಏಕಿ ನೀರು ಹೊರಚಿಮ್ಮುತ್ತಿದ್ದು, ಕಳೆದ 20 ದಿನಗಳಿಂದ ಹೊಲಗದ್ದೆಗಳು ಕೆರೆಗಳಂತಾಗಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಹೊಲಗಳು ಸಂಪೂರ್ಣ ಜಲಾವೃತಗೊಂಡಿದ್ದು, ಶುಂಠಿ, ಕಡಲೆ, ಕಬ್ಬು ಬೆಳೆ ಸಂಪೂರ್ಣ ನೀರುಪಾಲಾಗಿವೆ. …

Read More »

ಬೆಚ್ಚಿ ಬೀಳಿಸುವ ಮಾಹಿತಿ-ಮುರುಘಾ ಶ್ರೀ ವಿರುದ್ಧ ಡ್ರಗ್ಸ್ ಸೇವನೆ ಆರೋಪ

ಚಿತ್ರದುರ್ಗ: ಪೋಕ್ಸೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳು ಸೇರಿದಂತೆ ಮೂವರು ಆರೋಪಿಗಳ ವಿರುದ್ಧದ ಆರೋಪ ಧೃಡವಾಗಿದೆ ಎಂದು ಚಿತ್ರದುರ್ಗ ಪೊಲೀಸ್ ವರಿಷ್ಟಾಧಿಕಾರಿ ಪರಶುರಾಮ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.   ಮುರುಘಾ ಶ್ರೀ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದರು. ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.ಪ್ರಕರಣದ ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ …

Read More »

ನನ್ನ ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಾಬೀತು ಮಾಡಿದ್ರೆ ಕ್ಷಮೆ ಅಲ್ಲ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಸತೀಶ ಜಾರಕಿಹೊಳಿ ಬಹಿರಂಗ ಸವಾಲು

ನನ್ನ ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಿಎಂ ಬೊಮ್ಮಾಯಿ ಅವರು ಒಂದು ಕಮೀಟಿ ರಚನೆ ಮಾಡಲಿ. ಈ ಸಮೀತಿ ಒಂದು ತಿಂಗಳಲ್ಲಿ ವರದಿ ಕೊಟ್ಟು, ಸಾಬೀತು ಮಾಡಿದ್ರೆ ಕ್ಷಮೆ ಅಲ್ಲ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಹೌದು ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಸಮಾವೇಶದಲ್ಲಿ ಹಿಂದೂ ಶಬ್ದದ ಬಗ್ಗೆ ಸತೀಶ ಜಾರಕಿಹೊಳಿ …

Read More »

ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ; H.D.K.

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು ಪ್ರಕರಣದ ಸಂಬಂಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ ಸರ್ಕಾರಿ ಆಸ್ಪತ್ರೆ ಕಾರ್ಯವೈಖರಿಯ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ಸಮಸ್ಯೆ ಹಲವಾರಿದೆ. ಸಿಬ್ಬಂದಿಗಳ ನಡವಳಿಕೆಯನ್ನು ನೋಡಿ, ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.   ಜನರು ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆ ಕಳೆದುಕೊಳ್ಳಲು ಪ್ರಮುಖ ಹುದ್ದೆಗಳ ಮೇಲೆ ಸರ್ಕಾರ ತೆಗೆದುಕೊಳ್ಳುತ್ತಿರುವ ನೀತಿಗಳು ಕಾರಣ. ಇದರಿಂದಾಗಿ ಎಲ್ಲರೂ ಆಸ್ಪತ್ರೆಯ ಮೇಲಿನ …

Read More »

ಕೆಲವೇ ತಿಂಗಳುಗಳಲ್ಲಿ ಜನರೇ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಕೆಲವೇ ತಿಂಗಳುಗಳಲ್ಲಿ ಜನರೇ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ. ಆಡಳಿತ ಸರ್ಕಾರವನ್ನು ಸೋಲಿಸುವ ಮೂಲಕ ನಿಮಗೆ ಗೌರವ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಯ ನೀಡಿದ್ದಾರೆ.   ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಪಕ್ಷದ ಹಿರಿಯ ನಾಯಕರಾಗಿ ನಮಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದೀರಿ. …

Read More »

ನ.11ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ; ಕಾರ್ಯಕ್ರಮ ಎಲ್ಲೆಲ್ಲಿ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನ. 11ರಂದು ಬೆಂಗಳೂರು ನಗರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಕಾರ್ಯಕ್ರಮಗಳ ವಿವರ ಇಂತಿದೆ‌. 1. ಶಾಸಕರ ಭವನದ ಆವರಣದಲ್ಲಿರುವ ಶ್ರೀ ಕನಕದಾಸ ಪುತ್ಥಳಿಗೆ ಮಾಲಾರ್ಪಣೆ. 2. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ. (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ) 3. ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಟರ್ಮಿನಲ್-2 ಲೋಕಾರ್ಪಣೆ. 4. ನಾಡಪ್ರಭು …

Read More »

ರಾಹುಲ್​ ಹೋದಲ್ಲಿ ಕಾಂಗ್ರೆಸ್​ಗೆ ಸೋಲು: B.S.Y.

ಉಡುಪಿ: ಪ್ರಧಾನ ನರೇಂದ್ರ ಮೋದಿ ಅವರ ಮುಂದೆ ರಾಹುಲ್​ ಗಾಂಧಿ ಬಚ್ಚಾ. ರಾಹುಲ್​ ಹೋದಲ್ಲಿ ಕಾಂಗ್ರೆಸ್​ ಸೋಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಲೇವಡಿ ಮಾಡಿದರು. ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಸೋಮವಾರ ಹಮ್ಮಿಕೊಂಡ ‘ಜನಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್​ನ​ ಕೆಲ ನಾಯಕರು ಸಿಎಂ ಆಗುವ ಭ್ರಮೆಯಲ್ಲಿದ್ದಾರೆ. ಅವರಿಗೆ ವಾಸ್ತವ ಸಂಗತಿ ತಿಳಿಸಲಿದ್ದೇವೆ. ಮೋದಿ ಟೀಕಿಸುವ ನೈತಿಕತೆ ಅವರಿಗೆ ಇಲ್ಲ. ರಾಹುಲ್​ ಹೋದಲ್ಲಿ ಕಾಂಗ್ರೆಸ್​ ಸೋಲುತ್ತದೆ ಎಂದರು. ಮೋದಿ ಪ್ರಧಾನಿಯಾಗಿ 8 …

Read More »