Breaking News

ರಾಜಕೀಯ

ಟನಲ್ ರಸ್ತೆ ಯೋಜನೆಗೆ ಬಿಜೆಪಿ ವಿರೋಧ ರಾಜಕೀಯಪ್ರೇರಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಟನಲ್ ರಸ್ತೆ ಯೋಜನೆಯನ್ನು ಬಿಜೆಪಿಯವರು ರಾಜಕೀಯ ಉದ್ದೇಶಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಟನಲ್ ರಸ್ತೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಇಂದು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧ ಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು. ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ: ಟನಲ್ ರಸ್ತೆ ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ …

Read More »

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ಇಂದು ನಡೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆನೆಗಳ ಮೃತದೇಹಗಳ ಪರೀಕ್ಷೆ ನಡೆಸಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ದೇವರಾಯಿ ಗ್ರಾಮದ ಸಮೀಪದ ಸುಳೇಗಾಳಿಯ ರೈತ ಗಣಪತಿ ಸಾತೇರಿ ಗುರವ ಹಾಗೂ ಇತರೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಲು ಸೌರಶಕ್ತಿಯಿಂದ ಕಾರ್ಯನಿರ್ವಹಿಸುವ ಸೋಲಾರ್ …

Read More »

ದಾವಣಗೆರೆಯಲ್ಲಿ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ್​ ಅವರನ್ನು ಡಿಸಿಎಂ ಮಾಡಬೇಕೆಂಬ ಕೂಗು ಕೇಳಿಬಂದಿದೆ.

ದಾವಣಗೆರೆ: ಕಾಂಗ್ರೆಸ್​ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವುದರ ನಡುವೆ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ್​ ಅವರನ್ನು ಡಿಸಿಎಂ ಮಾಡಬೇಕೆಂಬ ಕೂಗು ಕೇಳಿಬಂದಿದೆ. ಎಸ್​.ಎಸ್​. ಮಲ್ಲಿಕಾರ್ಜುನ್​ ಅವರಿಗೆ ಡಿಸಿಎಂ ಹುದ್ದೆ ಕೊಡಿ ಎಂಬ ದಾವಣಗೆರೆ ಕಾಂಗ್ರೆಸ್​ ಕಾರ್ಯಕರ್ತರ ಕೂಗಿಗೆ, ಬೆಂಬಲಿಗರು ಧ್ವನಿಗೂಡಿಸಿದ್ದಾರೆ. ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಸರ್ಕಾರದ ಅವಧಿಗಳಲ್ಲಿ ಮೂರು ಬಾರಿ ಸಚಿವರಾಗಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. ಅಲ್ಲದೆ ರಾಜಕೀಯದಲ್ಲಿ ಹಿಡಿತ ಹೊಂದಿರುವ ಅವರನ್ನು …

Read More »

ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ: ಪ್ರಶಸ್ತಿಗಾಗಿ ಯಾರ ಹೆಸರನ್ನು ನಾನು ಶಿಫಾರಸ್ಸು ಮಾಡಿಲ್ಲ – ಸಿಎಂ

ಬೆಂಗಳೂರು: ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆದರೆ, ಪ್ರಶಸ್ತಿಗಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ ತೀರ್ಮಾನವಾಗಿದೆ. ಆದರೆ, ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು 70ನೇ …

Read More »

3ನೇ ಬಾರಿಗೆ ಆಯ್ಕೆಯಾದ ಸಹಕಾರ ರತ್ನ, ಶ್ರೀ ಅಣ್ಣಾಸಾಹೇಬ ಜೊಲ್ಲೆ

ನಿಪ್ಪಾಣಿ ತಾಲೂಕಿನಿಂದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ.,(BDCC) ನಿರ್ದೇಶಕರಾಗಿ ಸತತ 3ನೇ ಬಾರಿಗೆ ಆಯ್ಕೆಯಾದ ಸಹಕಾರ ರತ್ನ, ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಇಂದು ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಗೌರವ ನೀಡಿದ ರೈತ ಸಹೋದರರು,ನಮ್ಮ ಜಿಲ್ಲೆಯ ಸಹಕಾರಿ ಕ್ಷೇತ್ರದ ನಾಯಕರು, ಪಿ.ಕೆ.ಪಿ.ಎಸ್.ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಮತದಾರರು, ಹಾಗೂ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು – ನಿಮ್ಮೆಲ್ಲರಿಗೂ ಕೃತಜ್ಞತೆಗಳು. ನಿಮ್ಮ ವಿಶ್ವಾಸವೇ ನಮಗೆ ಶಕ್ತಿ, ನಿಮ್ಮ ಬೆಂಬಲವೇ ನಮಗೆ ಬಲ!

Read More »

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ ತರಿಸಿದೆ. ಈ ಘಟನೆ ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ. ಜಾರ್ಜ್ ಅವರು, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರೊಂದಿಗೆ ಇಂದು ಮೃತ ಹರೀಶ್ ಮತ್ತು ಉಮೇಶ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಚಿವ ಜಾರ್ಜ್ ಅವರು ವೈಯಕ್ತಿಕವಾಗಿ ತಲಾ 5 ಲಕ್ಷ ರೂ. ಸಹಾಯಧನ …

Read More »

ಬೆಂಗಳೂರು ಲಾಲ್‌ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

ಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್​ಬಾಗ್​ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ರಾಜ್ಯ ಸರ್ಕಾರದ ಟನಲ್ ಯೋಜನೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಲಾಲ್​ಬಾಗ್​ನಲ್ಲಿ ಜನಜಾಗೃತಿ ಅಭಿಯಾನ ನಡೆಸಿದರು. ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಅಶ್ವತ್ಥ ನಾರಾಯಣ ಅವರು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ, ಸಹಿ ಸಂಗ್ರಹಿಸಿದರು. ಇದೇ ವೇಳೆ, ಜಿಬಿಎ ಮುಖ್ಯ ಇಂಜಿನಿಯರ್ ಹಾಗೂ …

Read More »

ಇಬ್ಬರ ಬಲಿ ಪಡೆದ ಕಾಡಾನೆ ಸೆರೆ ಹಿಡಿಯಲು ಶೃಂಗೇರಿಗೆ ಆಗಮಿಸಿದ 6 ಸಾಕಾನೆಗಳು

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಆನೆ ಸೆರೆ ಕಾರ್ಯಾಚರಣೆಗೆ ಸಾಕಾನೆಗಳಾದ ಏಕಲವ್ಯ, ಧನಂಜಯ, ಪ್ರಶಾಂತ, ಹರ್ಷ ಸೇರಿ ಆರು ಆನೆಗಳನ್ನು ಶೃಂಗೇರಿ ತಾಲೂಕಿನ ಕೆರೆಕಟ್ಟೆ ಚೆಕ್‌ಪೋಸ್ಟ್​ಗೆ ಕರೆತರಲಾಗಿದೆ. ನಾಳೆಯಿಂದ ಒಂಟಿ ಸಲಗದ ಸೆರೆ ಕಾರ್ಯಾಚರಣೆ ಪ್ರಾರಂಭವಾಗಲಿದೆ. ಕಾಡಾನೆ ಕೆರೆಮನೆ ಗ್ರಾಮದ ಸುತ್ತಮುತ್ತ ರೈತರಿಗೆ ಹಾಗೂ ವಾಹನ ಸವಾರರಿಗೆ ಕಾಣಿಸಿಕೊಳ್ಳುತ್ತಿದ್ದು, ಸಿಕ್ಕ ಸಿಕ್ಕ …

Read More »

36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿ ಶಾಸಕ ಆಸೀಫ್ ಸೇಠ್ ಅವರಿಂದ ಚಾಲನೆ

36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿ ಶಾಸಕ ಆಸೀಫ್ ಸೇಠ್ ಅವರಿಂದ ಚಾಲನೆ ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ 36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿಯನ್ನು ಕೈಗೊಳ್ಳಲು ಉತ್ತರ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ 36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಉತ್ತರ ಶಾಸಕ ಆಸೀಫ್ ಸೇಠ್ ಅವರು ಇಂದು …

Read More »

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿಲಾಯಿತು. ಕನ್ನಡದ ಕಹಳೆ ನಾಡಿನ ಉದ್ದಗಲಕ್ಕೂ ಮೊಳಗಲಿ ಎಂದು ಶುಭ ಹಾರೈಸಿದೆ. ವಿವಿಧ ರಂಗಗಳಲ್ಲಿ ಸಾಧನೆಗೈದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ವೇದಿಕೆಯಲ್ಲಿ ಅಭಿನಂದಿಸಿದೆನು. ಈ ವೇಳೆ ಪರಮ ಪೂಜ್ಯರು, ಸ್ಥಳೀಯ ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.

Read More »