Breaking News
Home / ರಾಜಕೀಯ (page 828)

ರಾಜಕೀಯ

ರಾಜ್ಯ ಸರ್ಕಾರ’ದಿಂದ ಬಿಗ್ ಆರ್ಡರ್: ‘ಸರ್ಕಾರಿ ಕಚೇರಿ ಲಂಚ ಮುಕ್ತ’ಕ್ಕೆ ಖಡಕ್ ಕ್ರಮ

ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ.     ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ …

Read More »

ವಿಜಯಪುರ: ಮಕ್ಕಳ ಕಳ್ಳರ ವದಂತಿ; ಮಹಿಳೆಯರು ಸೇರಿ ನಾಲ್ವರಿಗೆ ಸಾರ್ವಜನಿಕರಿಂದ ಥಳಿತ

ವಿಜಯಪುರ: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.   ನಗರದ ಗ್ಯಾಂಗ್ ಬಾವಡಿ ಪರಿಸರದಲ್ಲಿ ಅಪರಿಚಿತ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಉತ್ತರ ಭಾರತದ ಶೈಲಿಯಲ್ಲಿ ಮಾತನಾಡಿದ್ದು, ಅನುಮಾನದ ಬಂದ ಸ್ಥಳೀಯರು, ಮಕ್ಕಳ ಕಳ್ಳರೆಂದು ಶಂಕಿಸಿ, ಸಾರ್ವಜನಿಕರ ಸಹಕಾರದಿಂದ ನಾಲ್ವರನ್ನೂ ಹಿಡಿದು ಥಳಿಸಿದ್ದಾರೆ. ನಗರಕ್ಕೆ ಉತ್ತರ ಭಾರತದಿಂದ …

Read More »

ಕಮಲದ ಸುತ್ತಲಿರುವ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ: ಕೇಜ್ರಿವಾಲ್

ಅಹಮದಾಬಾದ್‌ : ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಗುಜರಾತ್‌ನಲ್ಲಿ 80% ಖಾಸಗಿ ಉದ್ಯೋಗಗಳು ಗುಜರಾತ್‌ನ ಜನರಿಗೆ ಮೀಸಲಾಗಿರುತ್ತವೆ ಎಂದು ಆಪ್ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.   ಟೌನ್‌ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್‌ನ ಯುವ ಸಮುದಾಯದೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ‘ಕಮಲ’ದ ಸುತ್ತ ಸಾಕಷ್ಟು ‘ಕೆಸರು’ ಬಿದ್ದಿದೆ. ಆ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ, ಅದನ್ನು “ಪೊರಕೆ ” ಯಿಂದ ಸ್ವಚ್ಛಗೊಳಿಸಬೇಕಾಗುತ್ತದೆ …

Read More »

ಹಳೆಯ ಮಾದರಿಯಲ್ಲಿ ಎಸ್‌ಎಸ್ ಎಲ್ ಸಿ ಪರೀಕ್ಷೆ ವಿಧಾನ, ಇನ್ನು ಮುಂದೆ ಬಹು ಆಯ್ಕೆ ಪ್ರಶ್ನೆಗಳು

ಬೆಂಗಳೂರು: ಕರ್ನಾಟಕ ಸರ್ಕಾರವು ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಹಿಂದಿನ ಮಾದರಿಗೆ ಮರಳಲಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸರಿಯಾಗಿ ಪಾಠಗಳು ನಡೆಯದಿದ್ದುದರಿಂದ ಕಳೆದ ಎರಡು ವರ್ಷ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿತ್ತು. (MCQ) ಆದರೆ ಈ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳು ಹಿಂದಿನ ಮಾದರಿಗೆ ಮರಳಬೇಕಾಗಿದೆ. ಪ್ರಬಂಧ-ಮಾದರಿಯ ಪ್ರಶ್ನೆಗಳಿಗೆ ವಿವರವಾದ ಉತ್ತರಗಳನ್ನು ಇನ್ನು ಮುಂದೆ ನೀಡಬೇಕು. ಪಠ್ಯಕ್ರಮವನ್ನು ಕಡಿತಗೊಳಿಸುವ ನಿರ್ಧಾರವೂ ಹಿಂಪಡೆಯಲಿದ್ದು, ವಿದ್ಯಾರ್ಥಿಗಳು ಸಂಪೂರ್ಣ …

Read More »

ರಾಜ್ಯದಲ್ಲಿ 5 ವಿಮಾನ ನಿಲ್ದಾಣ ನಿರ್ಮಾಣ

ಹುಬ್ಬಳ್ಳಿ: ‘ರಾಜ್ಯದಲ್ಲಿ ಐದು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಶನಿವಾರ ನಡೆದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94ನೇ ಸಂಸ್ಥಾಪನಾ ದಿನ ಹಾಗೂ ‘ವಾಣಿಜ್ಯ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.   ‘ದಿನದಿಂದ ದಿನಕ್ಕೆ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಕಷ್ಟು ಉದ್ಯಮಿಗಳು ಒಲವು ತೋರಿಸುತ್ತಿದ್ದಾರೆ. ರಾಜ್ಯದ ಎಲ್ಲ …

Read More »

ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. 25 ಕೋಟಿ ರೂ. ಲಾಟರಿ ಗೆದ್ದಿದ್ದರೂ ಕಂಗಾಲಾಗಿ ಹೋಗಿರುವ ಆಟೋ ಚಾಲಕ!

ತಿರುವನಂತಪುರಂ: ಕಳೆದ ವಾರ ಲಕ್ಕಿ ಡ್ರಾ ಮೂಲಕ 25 ಕೋಟಿ ಬಹುಮಾನ ಗೆದ್ದಿದ್ದ, ಆಟೋ ಚಾಲಕ ಕಂಗಾಲಾಗಿ ಹೋಗಿದ್ದಾನೆ. ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದ ಆಟೋ ಚಾಲಕ ಅನೂಪ್, ಮಲೇಷ್ಯಾಕ್ಕೆ ತೆರಳಿ ದುಡಿಯಲು ದಾರಿ ಕಂಡು ಕೊಂಡಿದ್ದ. ಇನ್ನೇನು ಮಲೇಷ್ಯಾಗೆ ತೆರಳಬೇಕು ಅನ್ನುವಷ್ಟರಲ್ಲಿ ಲಾಟರಿ ಗೆದ್ದಿರುವುದು ತಿಳಿದಿದೆ.   ಲಾಟರಿಯಲ್ಲಿ ಕೋಟಿ ಬಹುಮಾನ ಬಂದಿದೆ. ಇನ್ನು ಮುಂದೆ ನೆಮ್ಮದಿಯ ಬದುಕನ್ನು ಕಾಣಬಹುದು ಎಂದು ನಿರ್ಧರಿಸಿದ್ದರು. ಆದರೆ ಆಗಿದ್ದೇ ಬೇರೆ. ಬಹುಮಾನ ಬಂದಿರುವುದು ಗೊತ್ತಾಗುತ್ತಿದ್ದಂತೆ …

Read More »

ಧರ್ಮಸ್ಥಳ, ಕುಕ್ಕೆ ದೇಗುಲದಲ್ಲಿ ಶರ್ಟ್, ಬನಿಯನ್ ಬಿಚ್ಚಿಸುವ ಪದ್ಧತಿ ರದ್ದಿಗೆ ಮನವಿ

ಧರ್ಮಸ್ಥಳ, ಸೆಪ್ಟೆಂಬರ್ 24: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನ ಹಾಗೂ ಕುಕ್ಕೆಯ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳು ತಮ್ಮ ಶರ್ಟ್ ಹಾಗೂ ಬನಿಯನ್ ಅನ್ನು ಬಿಚ್ಚಿಕೊಂಡು ಹೋಗುವ ಪದ್ಧತಿಯು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪದ್ಧತಿಯನ್ನು ರದ್ದು ಮಾಡುವಂತೆ ಇದೀಗ ಮನವಿ ಸಲ್ಲಿಸಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದಿರುವ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ಹಾಗೂ …

Read More »

ನಕಲಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು : ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನೌಕರಿ ಪಡೆದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ವಿಧಾನಪರಿಷತ್ ನಲ್ಲಿ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ …

Read More »

ನವರಾತ್ರಿಗೆ ಕರೆಂಟ್ ಶಾಕ್; ಕೇಂದ್ರದ ಹಾದಿಯಲ್ಲೇ ರಾಜ್ಯ ಸರ್ಕಾರ: H.D.K.

ಬೆಂಗಳೂರು: ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಸರ್ಕಾರ ಇಂಧನ ದರ ಏರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶನಿವಾರ ಆರೋಪಿಸಿದ್ದಾರೆ. ಈ ಕುರಿತು ‘ನವರಾತ್ರಿಗೆ ಕರೆಂಟ್ ಶಾಕ್’ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೇಳಿದ್ದಾರೆ.     …

Read More »

ರಮೇಶ್ ಜಾರಕಿಹೊಳಿಗೆ ಮಾತ್ರ ಸರಕಾರ ಉರುಳಿಸುವ ಶಕ್ತಿ ಇದೆ: ಸತೀಶ್ ಜಾರಕಿಹೊಳಿ

ಸಹೋದರ ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇz.ೆ ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸಹೋದರ ರಮೇಶ ಜಾರಕಿಹೊಳಿ ಕಾಲೆಳೆದಿದ್ದಾರೆ. ಗೋಕಾಕ್ ನಗರದಲ್ಲಿ ಇಂದು ಶನಿವಾರ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸಹೋದರಿಗೆ ಸರ್ಕಾರ …

Read More »