Breaking News
Home / ರಾಜಕೀಯ (page 832)

ರಾಜಕೀಯ

ರಸ್ತೆ ತಡೆದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ನೂರಾರು ಕೋಟಿಯ ನಕಲಿ ಬಿಲ್ಲು, ಕಳಪೆ ಕಾಮಗಾರಿ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡ ಅನೂಪ್ ಅಯ್ಯಂಗಾರ್ ನೇತೃತ್ವದಲ್ಲಿ ಇಂದು ಕಾವೇರಿ ಥೀಯಟರ್ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಸ್ಥಳೀಯ ಶಾಸಕ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ವಿರುದ್ಧ 100ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು. ಪಾಲಿಕೆಯ ವಾರ್ಡ್‌ಗಳಲ್ಲಿ ನಕಲಿ ಬಿಲ್ಲುಗಳನ್ನು ಪಾಸ್ ಮಾಡಲಾಗಿದೆ. ಬಿಬಿಎಂಪಿ ಅಧಿಕಾರಿಗಳೇ ತಮ್ಮ ಅಸಹಾಯತೆ ವ್ಯಕ್ತಪಡಿಸಿದ್ದಾರೆ. ಇದನ್ನು ಸಂಪೂರ್ಣವಾಗಿ ವಿಚಾರಣೆಗೆ‌ ಒಳಪಡಿಸಬೇಕು. …

Read More »

ಔಷಧ ಚೀಟಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುತ್ತಿರುವ ಡಾಕ್ಟರ್​ ಇವರು! ಅಂಥದ್ದೇನಿದೆ ಈ ಚೀಟಿಯಲ್ಲಿ?

ಕೊಚ್ಚಿ: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಅದು ನಿಜವೂ ಹೌದು. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಆದರೆ, ಎಲ್ಲಾ ವೈದ್ಯರು ಬರವಣಿಗೆ ಅಸ್ಪಷ್ಟವಾಗಿರುತ್ತದೆ ಎಂದು ಸಾಮಾನ್ಯೀಕರಿಸಲು ಸಾಧ್ಯವಿಲ್ಲ. ಏಕೆಂದರೆ, ಇಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೇರಳದ ಪಾಲಕ್ಕಾಡ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ …

Read More »

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಮತ್ತಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಖಾರಿಫ್ ಋತುವಿನಲ್ಲಿ ಕಡಿಮೆ ಇಳುವರಿ, ರಫ್ತು ಇತರೆ ಕಾರಣದಿಂದ ಅಕ್ಕಿ ಬೆಲೆ ಏರಿಕೆ ಮುಂದುವರೆಯಬಹುದು ಎಂದು ಹೇಳಲಾಗಿದೆ. ರಫ್ತು ನೀತಿಯಲ್ಲಿ ಬದಲಾವಣೆ ಆಹಾರ ಸಚಿವಾಲಯ ನೀಡಿದ ಮಾಹಿತಿಯಲ್ಲಿ, ಭಾರತದ ಅಕ್ಕಿ ರಫ್ತು ನೀತಿಯಲ್ಲಿ ಇತ್ತೀಚಿನ ತಿದ್ದುಪಡಿಗಳ ಹಿಂದಿನ ವಿವರವಾದ ಕಾರಣಗಳನ್ನು ವಿವರಿಸಲಾಗಿದೆ. ಭಾರತದ ಅಕ್ಕಿ ರಫ್ತು ನಿಯಮಗಳಲ್ಲಿ ಇತ್ತೀಚಿನ ಬದಲಾವಣೆಗಳು ರಫ್ತಿಗೆ ಲಭ್ಯತೆಯನ್ನು ಕಡಿಮೆ ಮಾಡದೆ “ದೇಶೀಯ ಬೆಲೆಗಳನ್ನು …

Read More »

ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿ ಪೊಲೀಸ್​​ ವಶಕ್ಕೆ

ವಿಜಯಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಬಂದಿದ್ದ ವ್ಯಕ್ತಿಯನ್ನು ಯುವಕರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಜಿಲ್ಲೆಯ ‌ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ನಡೆದಿದೆ. ಹೋಂ ಗಾರ್ಡ್ ಶಾಂತೇಶ್ ಕೊರ್ತಿ ಎಂಬಾತ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 8 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ. ಹಣ ನೀಡುವುದಾಗಿ ಕರೆಸಿದ ಯುವಕರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀಕಾಂತ್​ ಎಂಬುವವರ ಬಳಿ ಹಣ ಪಡೆಯಲು ಶಾಂತೇಶ್ ಕೊರ್ತಿ ಬಂದಿದ್ದ. …

Read More »

ಕಾಂಗ್ರೆಸ್ ‘ಪೇ ಸಿಎಂ’ ಬಾಣಕ್ಕೆ ಬಿಜೆಪಿಯಿಂದ ‘ಸ್ಕ್ಯಾಮ್‌ ರಾಮಯ್ಯ’ ಪ್ರತಿಬಾಣ

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿದ್ದ ಕಾಂಗ್ರೆಸ್ ಈಗ ” ಪೇಸಿಎಂ” ಎಂಬ ವಿಶಿಷ್ಟ ಅಭಿಯಾನ ಆರಂಭಿಸಿದ್ದು, ಬಿಜೆಪಿ ‘ಸ್ಕ್ಯಾಮ್‌ ರಾಮಯ್ಯ’ ಎಂದು ತಿರುಗೇಟು ನೀಡುತ್ತಿದೆ. ಬೆಂಗಳೂರಿನ ಆಯಕಟ್ಟಿ‌ನ ಸ್ಥಳಗಳಲ್ಲಿ “ಪೇಸಿಎಂ” ಪೋಸ್ಟರ್ ಅಂಟಿಸಿ, ಸಾಮಾಜಿಕ ಜಾಲತಾಣದಲ್ಲೂ ” ಪೇಸಿಎಂ” ಅಭಿಯಾನ ತೀವ್ರಗೊಳಿಸಿತ್ತು. ಪ್ರತಿಯಾಗಿ ಬಿಜೆಪಿ ಹೋರಾಟಕ್ಕಿಳಿದು ಸಿದ್ದರಾಮಯ್ಯ ವಿರುದ್ಧ ಸಮರ ಸಾರಿದೆ.   ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ ‘ಸ್ಕ್ಯಾಮ್‌ ರಾಮಯ್ಯ’ …

Read More »

ಮಠಮಾನ್ಯಗಳಿಗೆ ಅನುದಾನ ನೀಡುವುದನ್ನು ಸರ್ಕಾರ ಬಿಡಲಿ: ಮರಿತಿಬ್ಬೇಗೌಡ

ವಿಧಾನಪರಿಷತ್ತು: ಸರ್ಕಾರ ದೇವಾಲಯ, ಪ್ರತಿಮೆ, ಮಠಗಳಿಗೆ ಹಾಗೂ ಜಾತಿ ಸಂಘಟನೆಗಳಿಗೆ ಸಾವಿರಾರು ಕೋಟಿ ರೂ.ಅನುದಾನ ನೀಡುವುದನ್ನು ಮೊದಲು ನಿಲ್ಲಿಸಲಿ. ಆ ಹಣವನ್ನು ಪ್ರವಾಹ ಸಂತ್ರಸ್ತರಿಗೆ ಬಳಕೆ ಮಾಡಿಕೊಳ್ಳಲಿ ಎಂದು ಜೆಡಿಎಸ್‌ನ ಮರಿತಿಬ್ಬೇಗೌಡ ಸರ್ಕಾರಕ್ಕೆ ಮನವಿ ಮಾಡಿದರು.   ನಿಯಮ 68ರ ಅಡಿಯಲ್ಲಿ ನಡೆದ ಅತಿವೃಷ್ಠಿ ಚರ್ಚೆಯ ವೇಳೆ ಮಾತನಾಡಿದ ಅವರು ಸರ್ಕಾರ ಈಗಾಗಲೇ ಮಠಗಳಿಗೆ ಮತ್ತು ಜಾತಿ ಸಂಘ-ಸಂಸ್ಥೆಗಳಿಗೆ ಕೋಟ್ಯಾಂತ ರೂ. ಅನುದಾನ ನೀಡುತ್ತಿದೆ. ಸರ್ಕಾರದ ಈ ನಡೆ ಸಂವಿಧಾನ ವಿರೋಧಿಯಾಗಿದೆ …

Read More »

ಕೃಷಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿಧಿ: ಶಿವನಗೌಡ ಪಾಟೀಲ

ಬೆಳಗಾವಿ: ಕೃಷಿ ಕಾರ್ಮಿಕರ ಮಕ್ಕಳಿಗೆ ಇದು ಸಂತಸದ ಸುದ್ದಿ. ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ‘ಮುಖ್ಯಮಂತ್ರಿ ರೈತ ವಿದ್ಯಾವಿಧಿ’ ಯೋಜನೆ ವಿಸ್ತರಿಸಲಾಗಿದೆ. ‍ಹಿಂದೆ ತಂದೆ- ತಾಯಿ ಅಥವಾ ಅಜ್ಜ- ಅಜ್ಜಿ ಹೆಸರಿನಲ್ಲಿ ಹೊಲ ಇದ್ದವರು ಮಾತ್ರ ಅರ್ಹರಾಗಿದ್ದರು. ಪ್ರಸಕ್ತ (2022-23) ವರ್ಷದಿಂದ ಕೃಷಿ ಕಾರ್ಮಿಕರ ಮಕ್ಕಳೂ ಈ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದರು. ರಾಜು ಕಡಕೋಳ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ …

Read More »

ಜಾತಿ ನಿಂದನೆ ಆರೋಪದಲ್ಲಿ ಸುಳ್ಳು ದೂರು ದಾಖಲಿಸಿದ್ರೆ ಬೀಳುತ್ತೆ ದಂಡ!

ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ನಗರದ ಅಪಾರ್ಟ್ಮೆಂಟ್‌ವೊಂದರ ನಿವಾಸಿಗಳ ಸಂಘದ ಪದಾಧಿಕಾರಿಗಳ ವಿರುದ್ಧ ಸುಳ್ಳು ದೂರು ದಾಖಲಿಸಿದ್ದ ವ್ಯಕ್ತಿಗೆ ಹೈಕೋರ್ಟ್ 25,000 ರೂಪಾಯಿ ದಂಡ ವಿಧಿಸಿದೆ.       ಬೆಂಗಳೂರು ನಗರದ ಕೈಲಾಶ್ ಅಪಾರ್ಟ್ಮೆಂಟ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅರುಣ ಕಣ್ಣೂರು, ಸಂಘದ ಕಾರ್ಯದರ್ಶಿ ರಾಮಲಿಂಗಯ್ಯ ಮತ್ತು ಅಪಾರ್ಟ್ಮೆಂಟ್ ನಿವಾಸಿಯಾಗಿರುವ ಬಿ.ಎನ್. ಅಭಿಷೇಕ್ ಅವರ ವಿರುದ್ಧದ ಅದೇ ಅಪಾರ್ಟ್ಮೆಂಟ್ …

Read More »

ಪೇ ಸಿಎಂ’ ಅಧಿಕೃತಗೊಳಿಸಲು ಮುಂದಾದ ರಾಜ್ಯ ಸರ್ಕಾರ

ವಿಧಾನ ಪರಿಷತ್ತು: ಕೇವಲ ಒಂದು ದಿನದ ಹಿಂದೆ ತೀವ್ರ ಸದ್ದು ಮಾಡಿದ್ದ “ಪೇ ಸಿಎಂ’ ಅನ್ನು ಈಗ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ! ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ “ಪೇ ಸಿಎಂ’ ಡಿಜಿಟಲ್‌ “ಪೇ ಟು ಚೀಫ್ ಮಿನಿಸ್ಟರ್‌ ರಿಲೀಫ್ ಫ‌ಂಡ್‌ (ಸಿಎಂಆರ್‌ಎಫ್) ಎಂಬ ಡಿಜಿಟಲ್‌ ಆಯಪ್‌ ಅಭಿವೃದ್ಧಿಪಡಿಸಿ, ಆ ಮೂಲಕ ಅಧಿಕೃತಗೊಳಿಸಲು ಮುಂದಾಗಿದೆ. ಇದರೊಂದಿಗೆ ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಲೆಕ್ಕಾಚಾರ ಇದಾಗಿದೆ ಎಂದು ಮೂಲಗಳು ತಿಳಿಸಿವೆ. “ಪೇ ಸಿಎಂ’ …

Read More »

ಇಂಡಿಯಾ ಟಾಪ್‌ 10 ಹೀರೋಗಳ ಪಟ್ಟಿ ಬಿಡುಗಡೆ : ರಾಕಿ ಭಾಯ್‌ಗೆ 5ನೇ ಸ್ಥಾನ

ಬೆಂಗಳೂರು : ಓರ್‌ಮ್ಯಾಕ್ಸ್‌ ಸಂಸ್ಥೆ ಭಾರತದ ಟಾಪ್‌ 10 ಹೀರೋಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟಾಲಿವುಡ್‌ ಸ್ಟಾರ್‌ ದಳಪತಿ ವಿಜಯ್‌ ಮೊದಲ ಸ್ಥಾನದಲ್ಲಿದ್ದಾರೆ. ರಾಕಿಂಗ್‌ ಸ್ಟಾರ್‌ ಯಶ್‌ ಸ್ಟಾರ್‌ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದು, ಅಭಿಮಾನಿಗಳಲ್ಲಿ ಸಂತೋಷ ಹೆಚ್ಚಿಸಿದೆ.   ಹೌದು, ಪ್ಯಾನ್‌ ಇಂಡಿಯಾ ಲೆವಲ್‌ನಲ್ಲಿ ಸೌಂಡ್‌ ಮಾಡುವ ಮೂಲಕ ಕೆಜಿಎಫ್‌ ಭಾರತದಾದ್ಯಂತ ಕನ್ನಡದ ಪತಾಕೆ ಹಾರಿಸಿತ್ತು. ಅದರಂತೆ ಯಶ್‌ ಸಹ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಮಿಂಚಿದ್ದಾರೆ. ಸದ್ಯ ಓರ್‌ಮ್ಯಾಕ್ಸ್‌ …

Read More »