Breaking News

ರಾಜಕೀಯ

70 ಎಕರೆಯಲ್ಲಿ ಅತ್ಯಾಧುನಿಕ ಕ್ರೀಡಾ ನಗರ ಸ್ಥಾಪನೆ : ಬಜೆಟ್‌ನಲ್ಲಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯಗಳನ್ನು ಒಳಗೊಂಡ ಕ್ರೀಡಾ ನಗರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದಾಗಿ ಘೋಷಿಸಿದರು.   ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 4 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ …

Read More »

ರಾಯಚೂರು, ಮೈಸೂರು ಭಾಗದಲ್ಲಿ ನೂತನ ಜವಳಿ ಪಾರ್ಕ್‌ ಸ್ಥಾಪನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ವಲಯದಲ್ಲಿ ಸುಮಾರು 88,150 ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸಿದೆ. Electro System Design and Manufacturing (ESDM), ಚಾಲಿತ ವಾಹನಗಳಿಗೆ ಲಿಥಿಯಂ ಅಯಾನ್ ಬ್ಯಾಟರಿ ತಯಾರಿ ತಯಾರಿಕಾ ವಲಯ, ಆಟೊಮೊಬೈಲ್, ಡೇಟಾ ಸೆಂಟರ್ ಮತ್ತಿತ ವಲಯಗಳಲ್ಲಿ ಈ ಹೂಡಿಕೆಗಳನ್ನು ಮಾಡಲಾಗುತ್ತಿದೆ.   ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation …

Read More »

ಕೆಎಸ್ ಈಶ್ವರಪ್ಪ ವಿರುದ್ಧದ ಎಫ್​ಐಆರ್​ಗೆ ತಡೆ; ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳಿಗೆ ಹೈಕೋರ್ಟ್ ತರಾಟೆ

ಬೆಂಗಳೂರು, ಫೆ.16: ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಬಿಜೆಪಿ ಹಿರಿಯ ನಾಯಕಕೆಎಸ್ ಈಶ್ವರಪ್ಪ(KS Eshwarappa) ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ಕರ್ನಾಟಕ ಹೈಕೋರ್ಟ್ (Karnataka High Court) ತಡೆ ನೀಡಿದೆ. ದೇಶ ವಿಭಜನೆ ಹೇಳಿಕೆ ನೀಡಿದ್ದ ಡಿಕೆ ಸುರೇಸ್ ವಿರುದ್ಧ ಆಕ್ರೋಶ ಹೊರಹಾಕುವ ಭರದಲ್ಲಿ ಬಿಜೆಪಿ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ ಅವರು, ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ್​ ಕುಲಕರ್ಣಿ ರೀತಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ …

Read More »

2024: ಪುಸ್ತಕದಲ್ಲಿ ಬರೆದಿದ್ದನ್ನು ಓದುವ ಕೆಲಸ ಸಿಎಂ ಮಾಡಿದ್ದಾರೆ: ಯತ್ನಾಳ್‌

ಬೆಂಗಳೂರು: ಪುಸ್ತಕದಲ್ಲಿ ಬರೆದಿದ್ದನ್ನು ಓದುವ ಕೆಲಸ ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಭಾಗಕ್ಕೆ ಪ್ರಯೋಜನ ಒದಗಿಸದ ಬೋಗಸ್ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ್ದಾರೆ. ಸಿದ್ದರಾಮಯ್ಯ ಅವರು ಮಾಡಿದ ಭಾಷಣದಲ್ಲಿ ಅವರು ಕೇಂದ್ರ ಸರ್ಕಾರ (Union Government) ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸುವುದು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು …

Read More »

ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್ : ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರಿಗೂ ಆಗಾಗ ಹಲವು ಯೋಜನೆಗಳ ಘೋಷಣೆ ಮಾಡುತ್ತಿರುತ್ತಾರೆ. ಇದೀಗ ಈ ಬಾರಿಯ ಬಜೆಟ್ ನಲ್ಲೂ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಸಮಗ್ರ ಮತ್ತು ಸಮೃದ್ಧ ಕರ್ನಾಟಕ ಕಲ್ಪಿಸುವ ಕಲ್ಯಾಣ ಆಧಾರಿತ ಬಜೆಟ್ ಮಂಡಿಸಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ವಯಸ್ಸಿನ್ಲಲಿ ಸದನದ ಅತ್ಯಂತ ಹಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದರೂಮುಖ್ಯಮಂತ್ರಿ ಸಿದ್ದರಾಮಯ್ಯವರಿಗೆ(Siddaramaiah ) ಮೂರು ಗಂಟೆಗಳಿಗಿಂತ ಹೆಚ್ಚಿನ ಅವಧಿವರೆಗೆ ನಿಂತುಕೊಂಡು ಬಜೆಟ್ ಭಾಷಣ (Budget speech) ಓದುವಾಗ ದಣಿವಾಗಲಿಲ್ಲ.   ಆದರೆ, ಭಾಷಣ ಮುಗಿಸಿ ತಮ್ಮ ಸೀಟಿನ ಮೇಲೆ ಆಸೀನರಾದ ಅವರಿಗೆ ಗಂಟಲಾರಿಸಿಕೊಳ್ಳಲು 2 ಲೋಟ ನೀರು ಬೇಕಾಯಿತು! ಭಾಷಣದ ಅಂತ್ಯವನ್ನು ಮಹಾತ್ಮಾ ಗಾಂಧಿ (Mahatma Gandhi) ಮತ್ತು ಪಂಡಿತ ಜವಾಹರಲಾಲ್ ನೆಹರೂ (Pundit Jawaharlal Nehru) ಹೆಸರುಗಳನ್ನು ಉಲ್ಲೇಖಿಸುತ್ತಾ ಮಾಡಿದರು. ಗಾಂಧಿಯವರು …

Read More »

ವಿವಾದದ ಬೆನ್ನಲ್ಲೇ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್

ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆಯನ್ನು ಹೊರಡಿಸಿತ್ತು. ಈ ಆದೇಶಕ್ಕೆ ಎಲ್ಲೆಡೆ ವಿರೋಧ ಶುರುವಾಗುತ್ತಿದ್ದಂತೆ, ಇದೀಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು …

Read More »

ಇಸ್ಲಾಂ ಇರುವವರೆಗೂ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ

ಉತ್ತರ ಕನ್ನಡ : ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಾರೆ. ಇದೀಗ ಎಲ್ಲಿಯವರೆಗೆ ಇಸ್ಲಾಂ (Islam) ಇರುತ್ತದೊ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಬಿಜೆಪಿ (BJP), ಸಂಘಪರಿವಾರ ಇದ್ದಲ್ಲಿ ಮಾತ್ರ ನೆಮ್ಮದಿ ಎಂದಿದ್ದಾರೆ.   ಉತ್ತರ ಕನ್ನಡ (Uttara Kannada) ಜಿಲ್ಲೆಯ ಬನವಾಸಿಯಲ್ಲಿ (Banavasi) ಮಾತನಾಡಿದ ಅನಂತಕುಮಾರ್ ಹೆಗಡೆ, ಇಸ್ಲಾಂ ಇರುವವರೆಗೆ ಜಗತ್ತಿನಲ್ಲಿ ನೆಮ್ಮದಿ ಇರುವುದಿಲ್ಲ. ಇಂತಹ ಕಾಲಘಟ್ಟದಲ್ಲಿ ಹಿಂದೂ …

Read More »

ಇಂದು ರಾಜ್ಯ ಬಜೆಟ್‌: ಯಾರಿಗೆಲ್ಲ ಬಂಪರ್ ಗಿಫ್ಟ್ ಕೊಡಲಿದ್ದಾರೆ ಸಿಎಂ ಸಿದ್ದರಾಮಯ್ಯ

ಸಿಎಂ(CM) ಸಿದ್ದರಾಮಯ್ಯ(Siddaramaiah) ಅವರು ಇಂದು 15ನೇ ಬಜೆಟ್(Budget) ಮಂಡಿಸಲಿದ್ದಾರೆ. ಲೋಕಸಭಾ(Loka Saba) ಚುನಾವಣೆ ಹಿನ್ನೆಲೆಯಲ್ಲಿ ಯಾವೆಲ್ಲ ಘೋಷಣೆಯನ್ನು ಮಾಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. ಇಂದು ಬೆಳಗ್ಗೆ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ ಗೆ ಅನುಮೋದನೆ ಪಡೆಯಲಿದ್ದಾರೆ. ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ತೀವ್ರತರವಾದಂತಹ ನಿರೀಕ್ಷೆಗಳಿದ್ದು, ಯಾವ ಯಾವ ಕ್ಷೇತ್ರಗಳಿಗೆ ಅನುದಾನ, ಯಾರಿಗೆಲ್ಲ ಬಂಪರ್ ಗಿಫ್ಟ್ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. …

Read More »

ರಾಜ್ಯ ಬಜೆಟ್ ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿ

ಹುಬ್ಬಳ್ಳಿ (Hubballi): ರಾಜ್ಯ ಬಜೆಟ್ (State Budget) ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(dkshivakumar) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ, ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದಿದ್ದಾರೆ. ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು …

Read More »