Breaking News
Home / ರಾಜಕೀಯ (page 848)

ರಾಜಕೀಯ

ಇ.ಡಿ.ದಾಳಿ ಪ್ರಮಾಣ ಶೇ.27ರಷ್ಟು ಹೆಚ್ಚಳ; 2014ರಿಂದ 2022ರ ವರೆಗೆ 3,010 ದಾಳಿ

ನವದೆಹಲಿ: ದೇಶದಲ್ಲಿ ಆರ್ಥಿಕ ಅಪರಾಧಗಳ ಬಗ್ಗೆ ವಿಶೇಷವಾಗಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸುತ್ತಿರುವ ದಾಳಿಗಳ ಪ್ರಮಾಣ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಜತೆಗೆ ಈ ದಾಳಿಗಳ ವೇಳೆ 1 ಲಕ್ಷ ಕೋಟಿ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದೆ. 2004ರಿಂದ 2014ರ ವರೆಗೆ ಇ.ಡಿ. ಕೇವಲ 112 ದಾಳಿಗಳನ್ನು ನಡೆಸಿದ್ದರೆ, 2014ರಿಂದ 2022ರವರೆಗೆ 3,010 ದಾಳಿಗಳನ್ನು ನಡೆಸಲಾಗಿದೆ. ಶೇಕಡಾವಾರು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 27ರಷ್ಟು ಹೆಚ್ಚಾಗಿದೆ. ಕೋಲ್ಕತಾದ ಮೊಬೈಲ್‌ ಗೇಮಿಂಗ್‌ ಆಯಪ್‌ ವ್ಯಾಪಾರಿಯ ನಿವಾಸ …

Read More »

2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಕುಣಿಗಲ್ : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.   ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸ್​ನಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ವಿಧಾನಸಭೆ ಚುನಾವಣೆಯು ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ. ಇಲ್ಲಿಂದ ಹೊಸ ಅಧ್ಯಾಯ ಆರಂಭವಾಗಬೇಕಿದೆ. ಮುಂದಿನ 25 ವರ್ಷಗಳ …

Read More »

ಹಾಸನಾಂಬೆಯ ದರ್ಶನಕ್ಕೆ ಮೂಹೂರ್ತ ಫಿಕ್ಸ್, ಅಕ್ಟೋಬರ್ 13ರಿಂದ ದೇವಾಲಯ ಓಪನ್

ಹಾಸನ, ಸೆಪ್ಟೆಂಬರ್‌, 11: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಆದ್ದರಿಂದ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ …

Read More »

ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ವಿಧಿವಶ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಅವರು ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾದರು. ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ ರಾಜು ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ತೆಲುಗು ಚಿತ್ರರಂಗದಲ್ಲಿ ಬಂಡಾಯದ ನಟನಾ ಶೈಲಿಗಾಗಿ “ರೆಬೆಲ್ ಸ್ಟಾರ್” ಎಂದು ಪ್ರಸಿದ್ಧರಾಗಿದ್ದರು. ಅತ್ಯುತ್ತಮ ನಟನಿಗಾಗಿರುವ ಪ್ರಥಮ ನಂದಿ ಪ್ರಶಸ್ತಿಯ ವಿಜೇತರೂ ಆಗಿದ್ದರು. ಕೃಷ್ಣಂ ರಾಜು ಅವರು ತಮ್ಮ ವೃತ್ತಿಜೀವನದಲ್ಲಿ 183 ಕ್ಕೂ ಹೆಚ್ಚು …

Read More »

ಸೈಮಾ 2022: ಕನ್ನಡದ ಅತ್ಯುತ್ತಮ ನಟ, ಚಿತ್ರ, ನಿರ್ದೇಶಕ, ನಟಿ ಪ್ರಶಸ್ತಿ ಯಾರ ಪಾಲು? ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

ನಿನ್ನೆ ( ಸೆಪ್ಟೆಂಬರ್ 10 ) ಈ ಬಾರಿಯ ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್ಸ್ ( ಸೈಮಾ ) ಮೊದಲ ದಿನದ ಕಾರ್ಯಕ್ರಮ ಜರುಗಿತು. ದಕ್ಷಿಣ ಭಾರತ ಚಿತ್ರರಂಗದ ನಾಲ್ಕೂ ಭಾಷೆಯ ಚಿತ್ರಗಳಿಗೆ ಪ್ರತ್ಯೇಕವಾಗಿ ಈ ಸೈಮಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ಒಟ್ಟು 19 ವಿಭಾಗಗಳಲ್ಲಿ ಈ ಬಾರಿ ಕಲಾವಿದರ ನಾಮಿನೇಷನ್ ನಡೆದಿತ್ತು ಹಾಗೂ ಸೈಮಾ ವೆಬ್ ತಾಣದಲ್ಲಿ ಸಿನಿ ರಸಿಕರಿಗೆ ಬೆಸ್ಟ್ ಯಾರು ಎಂದು ವೋಟ್ ಮಾಡುವ …

Read More »

ವಿಕ್ರಮ ವಿಸಾಜಿ ಕೃತಿಗೆ ‘ಡಾ. ಗಿರಡ್ಡಿ ಪ್ರತಿಷ್ಠಾನ’ದ ಪ್ರಶಸ್ತಿ

ಧಾರವಾಡ: ಡಾ.ಗಿರಡ್ಡಿ ಗೋವಿಂದರಾಜ ಅವರ ಹೆಸರಿನಲ್ಲಿ, ನಗರದ ಗಿರಡ್ಡಿ ಗೋವಿಂದರಾಜ ಫೌಂಡೇಷನ್ ಪ್ರಸಕ್ತ ಸಾಲಿನಿಂದ ನೀಡುತ್ತಿರುವ ರಾಜ್ಯ ಮಟ್ಟದ ‘ಅತ್ಯುತ್ತಮ ವಿಮರ್ಶಾ ಕೃತಿ’ ಪ್ರಶಸ್ತಿಗೆ ಬೆಂಗ ಳೂರಿನ ಅಭಿನವ ಪ್ರಕಾಶನ ಪ್ರಕಟಿಸಿರುವ, ಕಲಬುರಗಿಯ ಡಾ.ವಿಕ್ರಮ ವಿಸಾಜಿ ಅವರ ‘ಪಠ್ಯದ ಭವಾವಳಿ’ ಕೃತಿ ಆಯ್ಕೆಯಾಗಿದೆ.   ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಇದು ಗಿರಡ್ಡಿ ಗೋವಿಂದರಾಜ ಫೌಂಡೇಷನ್ ವಿಮರ್ಶಾ ಕೃತಿಗೆ ನೀಡುತ್ತಿರುವ ಮೊದಲ ಪ್ರಶಸ್ತಿಯಾಗಿದೆ. ‘ಪ್ರಶಸ್ತಿಗಾಗಿ ರಾಜ್ಯದ …

Read More »

ಬೆಳಗಾವಿ | ಮಕ್ಕಳ ಕಳ್ಳರೆಂಬ ಸಂಶಯ: ಮೂವರು ವಶಕ್ಕೆ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ.   ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು …

Read More »

ಹವಾಮಾನ ವರದಿ; ಕರ್ನಾಟಕ ಕರಾವಳಿಗೆ 4 ದಿನ ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಮಳೆಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಿಗೆ 4 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾನುವಾರ 10 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.   ಭಾನುವಾರ ಮಳೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಸನ, ಚಿಕ್ಕಮಗಳೂರು, …

Read More »

ಸೈಮಾ 2022: ಪ್ರಶಸ್ತಿ ಬೇಟೆಯಲ್ಲಿ ಖಾತೆ ತೆರೆದ ದರ್ಶನ್ ಚಿತ್ರ ರಾಬರ್ಟ್; ಕನ್ನಡದ ಮೊದಲ ಅವಾರ್ಡ್!

ಸದ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೌತ್ ಇಂಡಿಯನ್ ಇಂಟರ್ ನ್ಯಾಶನಲ್ ಮೂವಿ ಅವಾರ್ಡ್ಸ್ ಕಾರ್ಯಕ್ರಮ ಅದ್ದೂರಿಯಾಗಿ ಜರುಗುತ್ತಿದೆ. ಇಂದು ( ಸೆಪ್ಟೆಂಬರ್‌ 10 ) ಆರಂಭವಾಗಿರುವ ಸೈಮಾ ಅವಾರ್ಡ್ಸ್ ನಾಳೆಯೂ ಸಹ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಚಂದನವನದ ರಾಕಿಂಗ್ ಸ್ಟಾರ್ ಯಶ್, ತೆಲುಗು ಚಿತ್ರರಂಗದ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ವಿಜಯ ದೇವರಕೊಂಡ, ತಮಿಳು ಚಿತ್ರರಂಗದ ಉಳಗನಾಯಗನ್ ಕಮಲ್ ಹಾಸನ್ ಮತ್ತು ಹಿಂದಿ ಚಿತ್ರರಂಗದ ನಟ ರಣವೀರ್ ಸಿಂಗ್ …

Read More »

ಜನಸ್ಪಂದನ ವೇದಿಕೆಯಲ್ಲಿ ‘ಕುಲದಲ್ಲಿ ಕೀಳ್ಯಾವುದೋ..’ ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ವಿಶ್ವನಾಥ್ ಡಾನ್ಸ್​ ಮಾಡುವ ಮೂಲಕ ಸಭಿಕರನ್ನು ರಂಜಿಸಿದರು. ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ವೇದಿಕೆಗೆ ಆಗಮಿಸಿದ ಎಂಟಿಬಿ ನಾಗರಾಜ್​, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ…’ ಹಾಡಿಗೆ ಕುಣಿದು ಕುಪ್ಪಳಿಸಿದರು. ನಾಗರಾಜ್​ಗೆ ಸಾಥ್​ ಕೊಟ್ಟ ಬಿಡಿಎ ಅಧ್ಯಕ್ಷ ವಿಶ್ವನಾಥ್ ಕೂಡ ಮಸ್ತ್​ ಸ್ಟೆಪ್​ ಹಾಕಿದರು. ಇವರಿಬ್ಬರ ಡಾನ್ಸ್​ ನೋಡಿ ಸಭಿಕರು ಕುಳಿತಲ್ಲೇ ಶಿಳ್ಳೆ ಹಾಕಿ ಚಪ್ಪಾಳೆಯ ಸುರಿಮಳೆಗೈದರು. ಹಲವರು ನಿಂತಲ್ಲೇ …

Read More »