Breaking News
Home / ರಾಜಕೀಯ (page 853)

ರಾಜಕೀಯ

ಮಳೆಯಿಂದ ಕಪಿಲೇಶ್ವರ ಹೊಂಡಕ್ಕೆ ಸೇರಿದ ಗಲೀಜು ನೀರು

ಬೆಳಗಾವಿ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಪಿಲೇಶ್ವರ ಹೊಂಡಕ್ಕೆ ರಸ್ತೆಯ ಮೇಲೆ ಹರಿಯುತ್ತಿದ್ದ ನೀರು ನುಗ್ಗಿದ್ದು ಗಣೇಶ ವಿಸರ್ಜನೆಗೆ ತೊಂದರೆಯಾಗುತ್ತಿದೆ. ಮಳೆ ನೀರಿನೊಂದಿಗೆ ಡ್ರೆöÊನೇಜ್ ನೀರು ಹೊಂಡದೊಳಕ್ಕೆ ನುಗ್ಗಿದ್ದು ಪಾಲಿಕೆ ಅಧಿಕಾರಿಗಳು ಅದನ್ನು ಸ್ವಚ್ಛಗೊಳಿಸಿ ಶುದ್ಧ ನೀರನ್ನು ಹೊಂಡಕ್ಕೆ ತುಂಬಿಸಿದ್ದಾರೆ. ಬೆಳಗಾವಿಯಲ್ಲಿ ಸೆಪ್ಟೆಂಬರ್ ೯ರಂದು ಗಣೇಶ ವಿಸರ್ಜನೆ ಅತ್ಯಂತ ಅದ್ಧೂರಿಯಾಗಿ ನಡೆಯಲಿದೆ. ಆದರೆ ನಗರದ ಕಪಿಲೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಪಿಲೇಶ್ವರ ಹೊಂಡದಲ್ಲಿಯೇ ಸಾಂಪ್ರದಾಯಿಕ ಗಣೇಶ ವಿಸರ್ಜನೆಯನ್ನು ನೆರವೇರಿಸಲಾಗುತ್ತಿದೆ. ಆದರೆ ನಿನ್ನೆ …

Read More »

ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಮೇಲೆ ಐ.ಟಿ.ದಾಳಿ

ಹೊಸದಿಲ್ಲಿ: ದೇಣಿಗೆ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನೋಂದಾಯಿತ ಮತ್ತು ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಮೇಲೆ ಆದಾಯ ತೆರಿಗೆ ಇಲಾಖೆ ಬುಧವಾರ ದಾಳಿ ನಡೆಸಿದೆ. ದಿಲ್ಲಿ, ಗುಜರಾತ್‌, ಉ.ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ‌, ಹರಿಯಾಣ ಸೇರಿ ಹಲವು ರಾಜ್ಯಗಳ ಕನಿಷ್ಠ 110 ಸ್ಥಳಗಳಲ್ಲಿ ಏಕಕಾಲ ದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡರು.   ಆರ್‌ಯುಪಿಪಿಯಲ್ಲಿರುವ ಕನಿಷ್ಠ 198 ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಇತ್ತೀಚಿಗೆ ಭಾರತೀಯ ಚುನಾವಣ …

Read More »

ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್​.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್​ಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್​, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. …

Read More »

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 150 ಸ್ಥಾನಗಳಲ್ಲಿ ಗೆಲುವು: ಎಂ.ಬಿ ಪಾಟೀಲ್

ವಿಜಯನಗರ, ಸೆಪ್ಟೆಂಬರ್ 6: “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ” ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ಹೇಳಿದರು. ಹೊಸಪೇಟೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, “ಬಿಜೆಪಿ ದುರಾಡಳಿತಕ್ಕೆ ಬೇಸತ್ತಿರುವ ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್‌ಗೆ ಅಧಿಕಾರ ನೀಡಲಿದ್ದಾರೆ ಈ ಸಲ ಶೇ 50ಕ್ಕೂ ಹೆಚ್ಚು ಲಿಂಗಾಯತರ ಮತಗಳು ಕಾಂಗ್ರೆಸ್‌ಗೆ ಬೀಳಲಿವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. …

Read More »

‘ಈಡಿ’ಯಿಂದ ದೇಶದಾದ್ಯಂತ ೩೦ ಕಡೆಗಳಲ್ಲಿ ದಾಳಿ !

ದೆಹಲಿಯಲ್ಲಿನ ಆಪ ಸರಕಾರದಿಂದ ನಡೆದ ಮದ್ಯ ಧೋರೆಣೆಯ ಹಗರಣದ ಪ್ರಕರಣ ನವದೆಹಲಿ – ದೆಹಲಿಯಲ್ಲಿನ ಆಪ ಸರಕಾರದ ಮದ್ಯ ಧೋರಣೆಯಲ್ಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ‘ಈಡಿ’ಯು (ಜ್ಯಾರಿ ನಿರ್ದೇಶನಾಲಯವು) ‘ಎನ್‌.ಸಿ. ಆರ್‌’ನೊಂದಿಗೆ ‘ರಾಷ್ಟ್ರೀಯ ರಾಜಧಾನಿ ಕ್ಷೇತ್ರದೊಂದಿಗೆ) ದೇಶದಾದ್ಯಂತ ದಾಳಿ ಆರಂಭಿಸಿದೆ. ದೇಶದಲ್ಲಿ ೩೦ ಕಡೆಗಳಲ್ಲಿ ದಾಳಿ ನಡೆಸಲಾಗುತ್ತಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಇದರಲ್ಲಿ ದೆಹಲಿಯೊಂದಿಗೆ ಗುರುಗ್ರಾಮ, ಚಂಡೀಗಡ, ಲಕ್ಷ್ಮಣಪುರಿ, ಮುಂಬೈ, ಭಾಗ್ಯನಗರ, ಹಾಗೆಯೇ ಬೆಂಗಳೂರು ನಗರದಲ್ಲಿ ದಾಳಿ ನಡೆಯುತ್ತಿದೆ. ದೆಹಲಿಯ ಉಪಮುಖ್ಯಮಂತ್ರಿ …

Read More »

ಉಮೇಶ್ ಕತ್ತಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ (ಸೆಪ್ಟೆಂಬರ್ 6) ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ …

Read More »

ಹೊಸ ಸಾಹಸಕ್ಕೆ ಕೈ ಹಾಕಿದ ಕಲಾ ಸಾಮ್ರಾಟ್ ಎಸ್ ನಾರಾಯಣ್ ಪುತ್ರ!

ಸ್ಯಾಂಡಲ್‌ವುಡ್‌ನ ಶಿಸ್ತಿನ ನಿರ್ದೇಶಕ ಎಂದೇ ಖ್ಯಾತಿ ಪಡೆದಿರೋ ಎಸ್‌ ನಾರಾಯಣ್ ಹಾಗೂ ಅವರ ಪುತ್ರ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪುತ್ರ ಪವನ್ ಎಸ್ ನಾರಾಯಣ್ ನೇತೃತ್ವದಲ್ಲಿ ‘ಕಲಾ ಸಾಮ್ರಾಟ್ ಫಿಲ್ಮ್ ಅಕಾಡೆಮಿ’ಯನ್ನು ಆರಂಭಿಸಿದ್ದಾರೆ. ಶಿಕ್ಷಕರ ದಿನದಂದು ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ‘ಕಲಾ ಸಾಮ್ರಾಟ್ ಫಿಲ್ಮ್ ಅಕಾಡೆಮಿ’ಯನ್ನು ಉದ್ಘಾಟನೆ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ ಈ ನೂತನ ಫಿಲ್ಮ್ ಅಕಾಡೆಮಿಯನ್ನು ಉದ್ಘಾಟಿಸಿದ್ರೆ, ಹಿರಿಯ ನಟರಾದ ಮುಖ್ಯಮಂತ್ರಿ …

Read More »

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

  ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …

Read More »

ಶರಣಬಸವ ವಿವಿಯಿಂದ ಮಂಜಮ್ಮ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್

ಕಲಬುರಗಿ: ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದಿಂದ ಮಂಜಮ್ಮ‌ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ‌ ಮಾಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು. ಹಿರಿಯ ವಿಜ್ಞಾನಿಗಳಾದ ಡಾ.ಕಿರಣ್ ಕುಮಾರ್, ಡಾ.ಸತೀಶ್ ರೆಡ್ಡಿ, ಸಾಮಾಜಿಕ ಕಾರ್ಯಕರ್ತೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಡಾ ಮಂಜಮ್ಮ ಜೋಗತಿ, ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕದ ಹರಿಹರದ ಶಿವಯೋಗಾಶ್ರಮದ ಶರಣಬಸವಲಿಂಗ ಶಿವಯೋಗಿಗಳಿಗೆ ಮತ್ತು ಹೈದರಾಬಾದ್ …

Read More »

ತ್ಯಾಗರ್ತಿ: ಒಂದೇಕಡೆ ಗಣಪತಿ ಪ್ರತಿಷ್ಠಾಪನೆ

ತ್ಯಾಗರ್ತಿ: ಸರ್ವಧರ್ಮಿಯರನ್ನು ಹೊಂದಿರುವ ತ್ಯಾಗರ್ತಿ ಗ್ರಾಮ ಸುಮಾರು 5,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕವಾಗಿ ಸಂಘಟಿಸಿ ಮಾದರಿಯಾಗಿದೆ. ಕೆಲವು ವರ್ಷಗಳ ಹಿಂದೆ ಗ್ರಾಮದಲ್ಲಿ ಅಂಬೇಡ್ಕರ್ ಸಂಘ, ಮುಕ್ಕುಪ್ಪೆ ಸರ್ಕಲ್, ಕಾಗೋಡು ತಿಮ್ಮಪ್ಪ ವೃತ್ತ, ಬನ್ನಿಕಟ್ಟೆ, ಮಾರಿಕಾಂಬಾ ತವರು ಮನೆ ಹಾಗೂ ಮಾರಿಕಾಂಬಾ ದೇವಸ್ಥಾನ ಹೀಗೆ ಬೇರೆ ಬೇರೆ ಸ್ಥಳಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತಿತ್ತು.   ಗ್ರಾಮದ ಹಿರಿಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಚರ್ಚಿಸಿ ಎಲ್ಲರೂ ಸೇರಿ ಸಾರ್ವಜನಿಕ ಹಿಂದೂ ಮಹಾಸಭಾ …

Read More »