Breaking News
Home / ರಾಜಕೀಯ (page 855)

ರಾಜಕೀಯ

ಸಂಕೇಶ್ವರ ಹೊರ ವಲಯದ ಹೈವೇ ಬಳಿ ಬಾವಿಯಲ್ಲಿ ಶವ ಪತ್ತೆ

ಸಂಕೇಶ್ವರ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬೈ ಪಾಸ್ ರಸ್ತೆಯ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ರವಿವಾರ ಬೆಳಿಗ್ಗೆ ವರದಿಯಾಗಿದೆ. ಸಂಕೇಶ್ವರ ನಗರದ ಹೊರ ವಲಯದಲ್ಲಿ ಹಾಯ್ದು ಹೋಗಿರುವ ಪುನಾ ಬೆಂಗಳೂರು ರಾಷ್ಟ್ರೀಯ ಬೈಪಾಸ್ ರಸ್ತೆಯಲ್ಲಿ ಇರುವ ಡಾ. ಸಚೀನ ಪಾಟೀಲ ಅವರ ಜಮೀನಿನಲ್ಲಿರುವ ಬಾವಿಯಲ್ಲಿ ವ್ಯಕ್ತಿಯೊರ್ವರ ಮೃತದೇಹವು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಈ ವ್ಯಕ್ತಿಯು ಮೂಲತಃ ನಿಪ್ಪಾಣಿ ಪಟ್ಟಣದವನು ಎಂದು ತಿಳಿದು ಬಂದಿದೆ. …

Read More »

ಮಹಿಳೆಯ ಜೊತೆ ದುರ್ನಡತೆ: ಶಾಸಕ ಲಿಂಬಾವಳಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಯ ವಿರುದ್ಧ ಬಳಸಿರುವ ಪದ ಹಾಗೂ ಅವರ ದುರ್ನಡತೆ ಬಿಜೆಪಿಯ ಹೀನಾಯ ಸಂಸ್ಕೃತಿಯನ್ನು ಎತ್ತಿ ತೋರುತ್ತದೆ. ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಅತ್ಯಂತ ಕೆಟ್ಟ ಪದ ಬಳಸಿರುವ ಅರವಿಂದ್ ಲಿಂಬಾವಳಿ ಕೂಡಲೇ ಮಹಿಳೆಯ ಬಳಿ ಕ್ಷಮೆ ಕೇಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ನಗರ ಪ್ರಚಾರ ಸಮಿತಿಯಿಂದ ಪ್ರತಿಭಟನೆ ನಡೆಸಿ ಹಾಗೂ ಪ್ರತಿಕೃತಿ ದಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ …

Read More »

ಸಿಇಟಿ ಗೊಂದಲಕ್ಕೆ ತೆರೆ; ಪುನರಾವರ್ತಿತ ವಿದ್ಯಾರ್ಥಿಗಳಿಗೆ ಹೈಕೋರ್ಟ್‌ ಸಿಹಿ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಗೊಂದಲಕ್ಕೆ ತೆರೆ ಎಳೆದಿರುವ ಹೈಕೋರ್ಟ್‌, 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ದಿಂದ ಅವಕಾಶ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ಪರ ತೀರ್ಪು ನೀಡಿದೆ.   2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2022 ಜು. 30ರಂದು ಹೊರ ಡಿಸಿದ್ದ ಟಿಪ್ಪಣಿಯನ್ನು ಹೈಕೋರ್ಟ್‌ ರದ್ದು …

Read More »

ಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ.? ಬಯಲಾಗುತ್ತಾ ಅಸಲಿ ಸತ್ಯ.?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು, ಸೋಮವಾರ ನ್ಯಾಯಾಲಯದ ಮುಂದೆ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಸ್ವಾಮೀಜಿಯನ್ನು ಬಂಧಿಸಿದ ಕೂಡಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಂದರ್ಭದಲ್ಲಿ ಸಾಮಾನ್ಯ ಪರೀಕ್ಷೆಗಳನ್ನು ಮಾಡಲಾಗಿತ್ತು. ಶುಕ್ರವಾರ ಪುರುಷತ್ವ ಪರೀಕ್ಷೆ ನಡೆಸಬೇಕಿತ್ತು. ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ. ಶನಿವಾರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಸ್ವಾಮೀಜಿ ಪುರುಷತ್ವ ಪರೀಕ್ಷೆ ಮಾಡಲಾಗಿದ್ದು, ಉಳಿದಂತೆ ವಿಚಾರಣೆ ಮುಂದುವರೆದಿದೆ. …

Read More »

ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಿಸಲು ಆಗ್ರಹ

ರಾಯಚೂರು: ಪೊಲೀಸ್‌ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಬೇಕು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಖೀಲ ಭಾರತ ನಿರುದ್ಯೋಗ ಯುವಜನರ ಹೋರಾಟ ಸಮಿತಿ ಸದಸ್ಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಒಂದೆಡೆ ಪದವೀಧರರು ಡಿಗ್ರಿಗಳನ್ನು ಪಡೆದು ಸಣ್ಣ ಪುಟ್ಟ ಕೆಲಸ ಮಾಡುವ ಪರಿಸ್ಥಿತಿ ಇದೆ. ಅಲ್ಲದೇ, ಕೋವಿಡ್‌ -19 ಪರಿಸ್ಥಿತಿಯಲ್ಲಿ, ಉದ್ಯೋಗ ಕಳೆದುಕೊಂಡು ಯುವಕರು ಕಂಗಾಲಾಗಿದ್ದಾರೆ. ಆದರೆ, ಸರ್ಕಾರಿ …

Read More »

ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ : ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್‌ ಬಹಿರಂಗ

ಚಿತ್ರದುರ್ಗ : ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದ್ದು, ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್ ಬಹಿರಂಗವಾಗಿದೆ. ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಿನ್ನೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳನ್ನು ವೈದ್ಯಕೀಯ ಟೆಸ್ಟ್‌ …

Read More »

ಮೋದಿ ಎಲ್ಲವನ್ನೂ ಮಾರಾಟ ಮಾಡುತ್ತಿದ್ದಾರೆಯೇ ಹೊರತು ಯಾವುದನ್ನೂ ಸ್ಥಾಪಿಸುತ್ತಿಲ್ಲ: ಎಂ.ಬಿ.ಪಾಟೀಲ್

ತುಮಕೂರು,ಸೆ.03: ಪ್ರಾಥಮಿಕ ಶಾಲೆಯಿಂದ ಐಐಟಿವರೆಗೆ ಸ್ಥಾಪನೆಯಾಗಿರುವುದು ಕಾಂಗ್ರೆಸ್ ಪಕ್ಷದಿಂದಲೇ ಹೊರತು ಬಿಜೆಪಿಯಿಂದಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಪ್ಪತ್ತು ವರ್ಷದಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ, ಕಾಂಗ್ರೆಸ್ ಮುಂದಾಲೋಚನೆಯಿಂದಲೇ ಹಸಿರು, ಬಿಳಿ ಮತ್ತು ಹಳದಿ ಕ್ರಾಂತಿಯಾಯಿತು, ನವರತ್ನಗಳ ಮೂಲಕ ಉದ್ಯಮ ಸ್ಥಾಪಿಸಿ ಉದ್ಯೋಗ ದೊರಕಿಸಿದೆ ಎಂದರು. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ರೈಲ್ವೆ, ಬಂದರು …

Read More »

ನಾನು ಮುರುಘಾ ಮಠಕ್ಕೆ ಹೋಗಿ ಬರ್ತಿನಿ; ಗದ್ದುಗೆಯಲ್ಲಿ ದರ್ಶನ ಪಡೆಯುತ್ತೇನೆ- ಎಂ.ಬಿ ಪಾಟೀಲ್‌

ತುಮಕೂರು: ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾನು ಮುಂದೆನೂ ಮುರುಘಾ ಮಠಕ್ಕೆ ಹೋಗ್ತೀನಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.   ತುಮಕೂರಿನಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಮುರುಘಾಮಠ ಬಹಳ ಐತಿಹಾಸಿಕ ಮಠ. 5 ಸಾವಿರ ವಿರಕ್ತ ಶಾಖಾ ಮಠ ಹೊಂದಿದ್ದಂತಹ ದೊಡ್ಡ ಮಠ ಇದು. ಅಲ್ಲಿ ಯಾರು ಇರ್ತಾರೆ, ಯಾರು ಇರಲ್ಲ ಅನ್ನೋದು ಮುಖ್ಯವಲ್ಲ. ನಾಳೆ ನಾನು ಚಿತ್ರದುರ್ಗಕ್ಕೆ ಹೋದರೆ …

Read More »

ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ: ಈಶ್ವರಪ್ಪ

ಶಿವಮೊಗ್ಗ: ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮುರುಘಾ ಶ್ರೀ ಬಂಧನ ವಿಚಾರವಾಗಿ ಮಾತನಾಡಿದ ಅವರು, ಮಠದ ಸ್ವಾಮಿಗಳು ಅಂದರೆ ನನಗೆ ದೇವರಿದ್ದಂತೆ. ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ. ತನಿಖೆ ನಡೆಯುತ್ತಿದೆ ಸತ್ಯವೋ ಸುಳ್ಳೋ ಹೊರಗೆ ಬರಲಿ. ಮಠ, ಮಂದಿರ, ಭಕ್ತಿ, ಜಾಗೃತಿ ಉಂಟು ಮಾಡುತ್ತದೆ ಎಂದಿದ್ದಾರೆ.    

Read More »

ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ದಲಿತ ಬಾಲಕಿಯರಿಗೆ ತಾರತಮ್ಯ ಮಾಡಿದ ಆರೋಪದ ಮೇಲೆ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಬರೋಡಿ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ರಾಮ್ ಗುರ್ಜರ್ ಎಂಬಾತ ತಯಾರಿಸಿದ ಮಧ್ಯಾಹ್ನದ ಊಟವನ್ನು ದಲಿತ ಬಾಲಕಿಯರು ಬಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲಾಲ್ ರಾಮ್, ದಲಿತ ಬಾಲಕಿಯರು ಬಡಿಸಿದ ಊಟವನ್ನು ಎಸೆಯುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. …

Read More »