Breaking News
Home / ರಾಜಕೀಯ (page 865)

ರಾಜಕೀಯ

ಬಿಎಸ್‌ವೈ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌

ಬೆಂಗಳೂರು: ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಂಬಂಧ ಲಂಚ ಪಡೆದ ಆರೋಪದ ಮೇಲೆ ನ್ಯಾಯಾಲಯದ ಸೂಚನೆ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.   ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಿ.ಎಸ್‌.ವಿಜಯೇಂದ್ರ, ಶಶಿಧರ್‌ ಮರಡಿ, ಸಂಜಯ್‌, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಮ್‌, ಶಾಸಕ ಎಸ್‌.ಟಿ. ಸೋಮಶೇಖರ್‌, ರೀಜಿನಲ್‌ ಕಮೀಷನರ್‌ ಡಾ.ಜಿ.ಸಿ.ಪ್ರಕಾಶ್‌, ಕೆ.ರವಿ. ವಿರೂಪಾಕ್ಷ ಯಮಕನಮರಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.   ತನಿಖೆ …

Read More »

ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ದ: ಯುವ ನಾಯಕ ರಾಹುಲ್‌ ಜಾರಕಿಹೊಳಿ

    ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ವಿವಿಧ ಸಮುದಾಯದ ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್‌ ಸಿಸ್ಟಮ್‌ ಗಳ ವಿತರಣೆ ಬೆಳಗಾವಿ: ಎಲ್ಲಾ ಸಮಾಜದ ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.   ನಗರದ ಜಾಧವ ನಗರ ಕಚೇರಿಯಲ್ಲಿ ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, …

Read More »

ಸಿದ್ದರಾಮಯ್ಯರ ಮುಂದೆ ಸಿ.ಟಿ ರವಿ ಇನ್ನೂ ಬಚ್ಚಾ: ಶಾಸಕ ರಾಘವೇಂದ್ರ ಹಿಟ್ನಾಳ್​​

ಕೊಪ್ಪಳ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾತನಾಡಿದರೆ ರಾಷ್ಟ್ರ ಮಟ್ಟದ ನಾಯಕನಾಗುತ್ತೇನೆಂಬ ಭಮ್ರೆಯಲ್ಲಿ ಸಿ.ಟಿ ರವಿ ಇದ್ದಾರೆ. ಸಿದ್ದರಾಮಯ್ಯರ ಮುಂದೆ ಸಿ.ಟಿ ರವಿ ಇನ್ನೂ ಬಚ್ಚಾ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ವಾಗ್ದಾಳಿ ನಡೆಸಿದರು. ಕೊಪ್ಪಳದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವದಲ್ಲಿ ಲಕ್ಷ ಲಕ್ಷ ಜನ ಸೇರಿದ್ದರು. ಅದು ರಾಜ್ಯದ ಜನ ಸಿದ್ದರಾಮಯ್ಯರ ಮೇಲಿರುವ ಪ್ರೀತಿಗೆ ಸಾಕ್ಷಿಯಾಗಿದೆ. ಅಂತವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು. ಸಿ.ಟಿ ರವಿಗೆ …

Read More »

ಪಿಎಸ್​​ಐ ನೇಮಕಾತಿ ಅಕ್ರಮ‌ ಆರೋಪಿ ನಿವಾಸದ ಬಳಿ ತಮಟೆ ಬಾರಿಸಿ ನೋಟಿಸ್ ಅಂಟಿಸಿದ ಸಿಐಡಿ ಅಧಿಕಾರಿಗಳು

ಬೆಂಗಳೂರು: ಪಿಎಸ್​​ಐ ನೇಮಕಾತಿ ಅಕ್ರಮ‌ ಪ್ರಕರಣದಲ್ಲಿ 36ನೇ ಆರೋಪಿ ಸಿದ್ದರಾಜು ಸದ್ಯ ಅರೆಸ್ಟ್ ಆಗಿದ್ದಾರೆ. ಇವರು ಪಿಎಸ್​​ಐ ಹಗರಣದಲ್ಲಿ ಮಧ್ಯವರ್ತಿಯಾಗಿದ್ದರು ಎನ್ನಲಾಗ್ತಿದೆ. ಪಿಎಸ್​​ಐಯಾಗಿ ಆಯ್ಕೆಯಾಗಿದ್ದ ಗಜೇಂದ್ರ, ಮನೋಜ್​​ಗೆ ಮಧ್ಯವರ್ತಿಯಾಗಿದ್ದ ಸಿದ್ದರಾಜು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಳೆದ ಐದು ತಿಂಗಳಿನಿಂದ ತಲೆಮರೆಸಿಕೊಂಡಿದ್ದರು. ಹೀಗಾಗಿ ಆರೋಪಿಯ ಲಗ್ಗೆರೆ ನಿವಾಸದ ಬಳಿ ತಮಟೆ ಬಾರಿಸಿ ನೋಟಿಸ್ ಅಂಟಿಸಿದ ಸಿಐಡಿ ಅಧಿಕಾರಿಗಳು ಆರೋಪಿಯ ಕುರಿತು ಮಾಹಿತಿ ನೀಡುವಂತೆ ಪ್ರಚಾರ ಮಾಡಿದ್ದರು. ಕೋರ್ಟ್​ನಿಂದ …

Read More »

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಕೇಸ್: ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಅರಭಾವಿಯ ಅಕ್ಷಯ್ ದುಂಡಪ್ಪ ಭಂಡಾರಿ, ಬಿರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟ್ಟಿ, ರಾಜಾಪುರದ ಶ್ರೀಧರ ಲಕ್ಕಪ್ಪ ಕಟ್ಟಿಕಾರ್ ಬಂಧಿತ ಆರೋಪಿಗಳು. ಆರೋಪಿ ಅಕ್ಷಯ್ ಭಂಡಾರಿ ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್ ತಂದು ಸಂಜು ಭಂಡಾರಿ ಈತನಿಗೆ ಕೊಟ್ಟಿದ್ದು ಹಾಗೂ ಇಲೆಕ್ಟ್ರಾನಿಕ್ ಡಿವೈಸ್‍ಗಳನ್ನು ಮಾಡಿಪಾಯಿ ಮಾಡಿದ್ದಾರೆ. ಈತನಿಂದ ಒಂದು ಮೊಬೈಲ್ ಮತ್ತು 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು 18 ಮಾಡಿಪಾಯಿ ಮಾಡಿದ ಇಲೆಕ್ಟ್ರಾನಿಕ್ ಡಿವೈಸ್ ಜಪ್ತಿ ಮಾಡಲಾಗಿದೆ. ಆರೋಪಿ ಬಸವರಾಜ ರುದ್ರಪ್ಪ ದುಂದನಟ್ಟಿ …

Read More »

ಬೆಳಗಾವಿಯ ೧೮ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ: ಗೋವಿಂದ ಕಾರಜೋಳ್

ಕಾಂಗ್ರೆಸ್ ನವರು ದೇಶ ಇಬ್ಬಾಗ ಮಾಡಿದ ಕಳಂಕ ಹೊತ್ತಿದ್ದಾರೆ. ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ ನಾಯಕರು ತಮ್ಮ ಸ್ವಾರ್ಥಕ್ಕಾಗಿ ದೇಶವನ್ನು ಇಬ್ಬಾಗ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು. ಬೆಳಗಾವಿ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ್ ರವರು, ದೇಶ ಇಬ್ಬಾಗ ಮಾಡಿದ ಪಾಪದ ಪ್ರಜ್ಞೆ ಕಾಂಗ್ರೆಸ್ ನವರಿಗೆ ಕಾಡುತ್ತಿದೆ. ಅದಕ್ಕಾಗಿ ಭಾರತ ಜೋಡೊ ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಕಡೆಯಿಂದ ಭಾರತವನ್ನು …

Read More »

ಬಿಜೆಪಿ ಸಂಸದ ಪಿ.ಸಿ. ಗದ್ದಿಗೌಡರ್ ಅವರಿಗೆ ಓಪನ್ ಹಾರ್ಟ್ ಸರ್ಜರಿ!

ಬೆಂಗಳೂರು: ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಬಿಜೆಪಿ ಸಂಸದ ಪಿ.ಸಿ. ಗದ್ದಿಗೌಡರ್ ಅವರಿಗೆ ಓಪನ್ ಹಾರ್ಟ್ ಸರ್ಜರಿ ಯಶಸ್ವಿಯಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಪಿ.ಸಿ. ಗದ್ದಿಗೌಡರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಾಗಲಕೋಟೆ ಕ್ಷೇತ್ರದ ಬಿಜೆಪಿ ಸಂಸದರಾದ ಗದ್ದಿಗೌಡರ್ ಹೃದಯದಲ್ಲಿ ಶೇಕಡ 70 ರಷ್ಟು ಬ್ಲಾಕ್ ಆಗಿದ್ದು, ಹೀಗಾಗಿ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿತ್ತು. ಗದ್ದಿಗೌಡರ್ ಅವರಿಗೆ ಕರೆ ಮಾಡಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ …

Read More »

ಅಕ್ರಮಗಳ ತನಿಖೆಯಾದರೆ ಇಡೀ ಸರ್ಕಾರವೇ ಜೈಲು ಪಾಲಾಗಲಿದೆ: ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಅಕ್ರಮಗಳ ತನಿಖೆಯಾದರೆ ಇಡೀ ಸರ್ಕಾರವೇ ಜೈಲು ಪಾಲಾಗಲಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಸರ್ಕಾರದ ವಿರುದ್ಧ ಸರಣಿ ಟ್ವೀಟ್‌ ಮಾಡಿರುವ ಕೆಪಿಸಿಸಿ, ’40 ಪರ್ಸೆಂಟ್‌ ಸರ್ಕಾರದ ಅಕ್ರಮಗಳ ತನಿಖೆಯಾದರೆ ಇಡೀ ಸರ್ಕಾರವೇ ಜೈಲು ಪಾಲಾಗಲಿದೆ.   ಸರ್ಕಾರದ ವಿರುದ್ಧ ಸರಣಿ ಟ್ವೀಟ್‌ ಮಾಡಿರುವ ಕೆಪಿಸಿಸಿ, ’40 ಪರ್ಸೆಂಟ್‌ ಸರ್ಕಾರದ ಅಕ್ರಮಗಳ ತನಿಖೆಯಾದರೆ ಇಡೀ ಸರ್ಕಾರವೇ ಜೈಲು ಪಾಲಾಗಲಿದೆ. ಪಿಎಸ್‌ಐ ಹಗರಣ, ಎಮ್‌ಎಸ್‌ಐಎಲ್‌ ಹಗರಣ, ಗಂಗಾ ಕಲ್ಯಾಣ ಹಗರಣ ಇವೆಲ್ಲವೂ …

Read More »

ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತ: ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತಗೊಳಿಸಿರುವ ವಿಚಾರಕ್ಕೆ ಸಂಬಂಂಧಿಸಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.   ಇಂದಿರಾ ಕ್ಯಾಂಟೀನ್‌ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ನೀಡದೆ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ’ ಎಂದು ಕಿಡಿಕಾರಿದ್ದಾರೆ. ಇಂದಿರಾ ಕ್ಯಾಂಟೀನ್‌ಗಳಿಗೆ 2017-2018, 2018-19ರಲ್ಲಿ ಕ್ರಮವಾಗಿ ₹100 ಮತ್ತು ₹145 ಕೋಟಿ ಅನುದಾನ …

Read More »

2013-17ರಲ್ಲೂ ಪಿಎಸ್‌ಐ ನೇಮಕಾತಿ ಅಕ್ರಮ: ಬಿಜೆಪಿ

ಬೆಂಗಳೂರು: 2013ರಲ್ಲಿ ನಡೆದ ಪಿಎಸ್‌ಐ ಮತ್ತು ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ಮಾಹಿತಿ ಕಲೆಹಾಕಿದ್ದು, ಅವುಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ಶಾಸಕ ಪಿ.ರಾಜೀವ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013 ರಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಪರೀಕ್ಷೆಯನ್ನೇ ಬರೆಯದ ಹಲವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಅಂಥವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇದರ ಸುಳಿವು ಪಡೆದು ವರದಿ …

Read More »