Breaking News
Home / ರಾಜಕೀಯ (page 882)

ರಾಜಕೀಯ

ಕೊಪ್ಪಳದಲ್ಲಿ ಗಲಾಟೆ, ಕಲ್ಲುತೂರಾಟ; ಇಬ್ಬರು ಸಾವು- ನಿಷೇಧಾಜ್ಞೆ ಜಾರಿ

ಕೋಮುಘರ್ಷಣೆಯಿಂದ ಕರ್ನಾಟಕ ಬೆಂದು ಹೋಗಿದೆ. ಹೊತ್ತಿ ಉರಿದಿದ್ದ ಕರಾವಳಿ (Costal) ಈಗ ಶಾಂತವಾಗಿದೆ. ನಮ್ಮ ರಾಜ್ಯದ ಪೊಲೀಸರು (Police) ಎಲ್ಲಾ ಕಡೆ ಕಟ್ಟೆಚ್ಚರ ವಹಿಸಿದ್ದಾರೆ. ಸದ್ಯ ಕರ್ನಾಟಕ (Karnataka) ಮೊದಲಿನ ಸ್ಥಿತಿಗೆ ಮರಳಿದೆ. ಅದರ ನಡುವೆಯೇ ಈಗ ಕೊಪ್ಪಳದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಕೊಪ್ಪಳ‌ ಜಿಲ್ಲೆಯ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಮಾರಾಮಾರಿ (Attack) ನಡೆದಿದೆ. ಮಾರಾಮಾರಿಯಿಂದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. …

Read More »

ವಿವಾಹಿತ ಹೆಣ್ಣುಮಕ್ಕಳಿಗೂ ‘ಪೋಷಕರ ವಿಮೆ’ಯಲ್ಲಿ ಪಾಲಿದೆ ; ಹೈಕೋರ್ಟ್‌

ಬೆಂಗಳೂರು : ವಿವಾಹಿತ ಹೆಣ್ಣು ಮಕ್ಕಳಿಗೂ ಪೋಷಕರ ವಿಮೆಯಲ್ಲಿ ಪಾಲಿದೆ ಎಂದು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಪಘಾತದಲ್ಲಿ ತಮ್ಮ ತಂದೆ-ತಾಯಿಯ ಮರಣದ ನಂತ್ರ ವಿಮಾ ಕಂಪನಿಗಳಿಂದ ಪರಿಹಾರವನ್ನ ಪಡೆಯಲು ವಿವಾಹಿತ ಹೆಣ್ಣುಮಕ್ಕಳು ಅರ್ಹರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಪುತ್ರರಿಗೆ ಪರಿಹಾರದ ಹಕ್ಕನ್ನ ನೀಡುವಂತೆ ಸುಪ್ರೀಂಕೋರ್ಟ್‌ನ ಆದೇಶವನ್ನ ನ್ಯಾಯಾಲಯ ಉಲ್ಲೇಖಿಸಿದೆ. ‘ವಿವಾಹಿತ ಪುತ್ರರು ಅಥವಾ ವಿವಾಹಿತ ಹೆಣ್ಣುಮಕ್ಕಳು ಇಬ್ಬರೂ ಪೋಷಕರ ಮರಣದ ನಂತ್ರ ಪರಿಹಾರವನ್ನ ಪಡೆಯಲು ಅರ್ಹರಾಗಿರುತ್ತಾರೆ’ ಎಂದು …

Read More »

ಎಸಿಬಿ ರಚನೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ಆ.11. ಭ್ರಷ್ಟಚಾರ ನಿಗ್ರಹ ದಳ-ಎಸಿಬಿ ರಚನೆ ಮಾಡಿ ಈ ಹಿಂದಿನ ಕಾಂಗ್ರೆಸ್ ಸರ್ಕಾರ 2016ರಲ್ಲಿ ಮಾಡಿದ್ದ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದರಿಂದಾಗಿ ಹಿಂದೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.   ಅಲ್ಲದೆ, ಲೋಕಾಯುಕ್ತಕ್ಕೆ ಮೊದಲು ನೀಡಿದ್ದ ಅಧಿಕಾರವನ್ನು ಮರಳಿ ನೀಡಬೇಕು, ಅದಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಆಗಬೇಕು ಎಂದು ಹಿರಿಯ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ಕೆ.ಎಸ್. ಹೇಮಲೇಖಾ ಅವರ ನೇತೃತ್ವದ …

Read More »

ಎಸಿಬಿ ರಚನೆ ರದ್ದು: ಹೈಕೋರ್ಟ್ ನಡೆಗೆ ಸಂತೋಷ್ ಹೆಗ್ಡೆ ಹೇಳಿದ್ದೇನು?

ಬೆಂಗಳೂರು: ಎಸಿಬಿ ರಚನೆ ರದ್ದುಗೊಳಿಸಿ, ಇದುವರೆಗೂ ದಾಖಲಾಗಿದ್ದ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿರುವ ಹೈಕೋರ್ಟ್ ನಡೆಯನ್ನು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ. “ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶ ನನಗೆ ಬಹಳ ಸಂತೋಷ ತಂದಿದೆ. ಇದೊಂದು ಉತ್ತಮವಾದ ನಿರ್ಧಾರವಾಗಿದೆ. ಆದರೆ ಲೋಕಾಯುಕ್ತಕ್ಕೆ ಸರ್ಕಾರ ಅಧಿಕಾರ ನೀಡುವುದವರ ಜೊತೆಗೆ ಉತ್ತಮ ಅಧಿಕಾರಿಗಳನ್ನು ಕೂಡ ನೇಮಿಸಬೇಕು. ಸರ್ಕಾರ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಿಸಬಾರದು. ಲೋಕಾಯುಕ್ತರೇ ತಮಗೆ ಬೇಕಾದ ಅಧಿಕಾರಿಗಳನ್ನ ನೇಮಕ ಮಾಡಿಕೊಳ್ಳಬೇಕು‌. …

Read More »

ಪಿಡಿಓ ಹಾಗೂ ಗ್ರಾಮ ಪಂಚಾಯಿತಿ ಕ್ಲರ್ಕ್ ಲಂಚ ಪಡೆಯುತ್ತಿದ್ದ ವೇಳೆA.C.B.ಬಲೆಗೆ

ಖಾನಾಪುರ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿಯ ಪಿಡಿಓ ಹಾಗೂ ಗ್ರಾಮ ಪಂಚಾಯಿತಿ ಕ್ಲರ್ಕ್ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೌದು ನಿಟ್ಟೂರು ಗ್ರಾಮ ಪಂಚಾಯತಿ ಪಿಡಿಓ ಶ್ರೀದೇವಿ ಮತ್ತು ಕ್ಲರ್ಕ್ ಸಿದ್ದಪ್ಪ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದವರು. ಪ್ರಭುನಗರದ ನಿವಾಸಿ ರಾಮಚಂದ್ರ ಗಂಗಾರಾಮ ಪಾಟೀಲ ಇವರು ವ್ಹಿ ಪಿ ಸಿ ನಂಬರ್ 154 ಮನೆ ನಂಬರ್ 90 ನೇದ್ದು ಇದ್ದು ಇದರಲ್ಲಿ ಅರ್ಧ ಭಾಗದಲ್ಲಿ ತಂದೆಯ …

Read More »

ಅಥಣಿ ಪಟ್ಟಣದಲ್ಲಿ ರಾಯಣ್ಣನ ಭವ್ಯ ಮೂರ್ತಿಯ ಪ್ರತಿಷ್ಠಾಪನೆ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಭವ್ಯ ಮೂರ್ತಿಯ ಪ್ರತಿಷ್ಠಾಪನೆಯ ಕಾರ್ಯಕ್ರಮವು ಅಥಣಿ ಪಟ್ಟಣದಲ್ಲಿ ವಿಜೃಂಭಣೆಯಿಂದ ಜರುಗಿತು ಅಥಣಿ ಪಟ್ಟಣಕ್ಕೆ ಬೆಳಗಿನ ಜಾವ ಆಗಮಿಸಿದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ನೂರಾರು ಕುಂಭಹೊತ್ತ ಮಹಿಳೆಯರು ಮತ್ತು ಡೊಳ್ಳು ಕುಣಿತದೊಂದಿಗೆ ಉತ್ಸಾಹಿ ಯುವಕರು ಹಾಲುಮತದ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸ್ವಾಗತಿಸಿದರು.ಪಟ್ಟಣದ ಶಿವಾಜಿ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಿದ್ದೇಶ್ವರ ದೇವಸ್ಥಾನ ಹತ್ತಿರ ರಾಮಣ್ಣ ವೃತ್ತದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಚಿಕ್ಕೋಡಿ …

Read More »

8 ಐಪಿಎಸ್ ಅಧಿಕಾರಿಗಳಿಗೆ E.D. ಸಮನ್ಸ್

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು 8 ಐಪಿಎಸ್ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ. ಪಶ್ಚಿಮ ಬಂಗಾಳದ ಕಲ್ಲಿದ್ದಲು ಹಗರಣ ಸಂಬಂಧ ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್, ಕೋಟೇಶ್ವರ್ ರಾವ್, ಎಸ್.ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್, ತಥಾಗತ ಬಸು ಸೇರಿ 8 ಐಪಿಎಸ್ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಆಗಸ್ಟ್ 21ರಿಂದ 31ರವರೆಗೆ ಅಧಿಕಾರಿಗಳ ವಿಚಾರಣೆ ನಡೆಯಲಿದೆ. ಈ 8 …

Read More »

ಗಾಲಿ ಜನಾರ್ದನ ರೆಡ್ಡಿ ರೀ ಎಂಟ್ರಿ! ಮತ್ತೆ ಗಣಿಗಾರಿಕೆ ಗ್ಯಾರಂಟಿ!

ಅನಂತಪುರ, ಆಗಸ್ಟ್ 11: ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ಎದುರಿಸಿರುವ ಕರ್ನಾಟಕದ ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಮತ್ತೆ ಸಕ್ರಿಯ ಉದ್ಯಮಕ್ಕೆ ಎಂಟ್ರಿ ಕೊಡಲು ಮುಂದಾಗಿದ್ದಾರೆ. ಕಬ್ಬಿಣ ಅದಿರು ಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿರುವ ರೆಡ್ಡಿಗೆ ಆಂಧ್ರಪ್ರದೇಶ ಸರ್ಕಾರ ಮುಕ್ತ ಆಹ್ವಾನ ನೀಡಿರುವ ಸುದ್ದಿ ಬಂದಿದೆ.   ಕರ್ನಾಟಕ – ಆಂಧ್ರಪ್ರದೇಶದ ಗಡಿಯಲ್ಲಿರುವ ಓಬಳಾಪುರಂ ಗಣಿಯಲ್ಲಿ ಎಂದಿನಂತೆ ಚಟುವಟಿಕೆ ನಡೆಸಲು ಇದ್ದ …

Read More »

ಕೊಪ್ಪಳದಲ್ಲಿ ಕೋಮುಘರ್ಷಣೆ: 2 ಸಾವು, 6 ಮಂದಿಗೆ ಗಾಯ, ನಿಷೇದಾಜ್ಞೆ ಜಾರಿ

ಘರ್ಷಣೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಮೃತಪಟ್ಟಿದ್ದು, ೬ ಮಂದಿ ಗಾಯಗೊಂಡಿದ್ದಾರೆ . ಧರ್ಮಣ್ಣ ಹರಿಜನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ . ಗ್ರಾಮದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ . ಡಿವೈಎಸ್ ​ ಪಿ ರುದ್ರೇಶ್ ಉಜ್ಜನಕೊಪ್ಪ , ತಹಶೀಲ್ದಾರ್ ಧನಂಜಯ ಮಾಲಗತ್ತಿ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು , 100 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ . …

Read More »

ಮೋದಿ ವಿರುದ್ಧ ಯೋಗಿ ಬಂಡಾಯ: ಆಮ್‌ ಆದ್ಮಿ ಪಕ್ಷದ ನಾಯಕರು ನೀಡಿದ ಕಾರಣವೇನು?

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷವು, ‘ಬಿಜೆಪಿಯ ಉನ್ನತ ನಾಯಕತ್ವದ ವಿರುದ್ಧ ಯೋಗಿ ಆದಿತ್ಯನಾಥ್‌ ದಂಗೆ ಎದ್ದಂತಿದೆ’ ಎಂದು ಹೇಳಿದೆ. ‌ ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ‘ಉಚಿತ ಕೊಡುಗೆಗಳನ್ನು ನೀಡುವ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅಪಾಯಕಾರಿ’ ಎಂದು ಹೇಳಿದ್ದರು. …

Read More »