ಆನೇಕಲ್ : ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಎಲ್ಲರೂ ನೀಡಿದ ಸಹಕಾರ ಕಾರಣ ಎಂದು ಹೆನ್ನಾಗರ ಗ್ರಾಪಂ ಅಧ್ಯಕ್ಷ ಕೆ.ವಿನಯ್ ಹೇಳಿದರು. ತಾಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಅಧಿಕಾರದ ಅವಧಿಯಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಕಾವೇರಿ ಕುಡಿಯುವ ನೀರಿನ ಯೋಜನೆ ಮೂಲಕ ಪ್ರತಿ ಮನೆಗೂ ಕಾವೇರಿ ನೀರು ತಲುಪಿಸುವ ಮಹತ್ತರದ ಕಾಮಗಾರಿ ಮಾಡಿರುವುದು ಖುಷಿ ತಂದಿದೆ. ಇದರ ಜತೆಗೆ ಕೆರೆ ಅಭಿವೃದ್ಧಿ, …
Read More »ಶಿವರಾತ್ರಿ ಹಬ್ಬದ ಬಳಿಕ ಬಜೆಟ್ ದಿನಾಂಕದ ಕುರಿತು ನಿರ್ಧಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಬಳಿಕ ರಾಜ್ಯ ಬಜೆಟ್ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಳಗ್ಗೆ ನಗರದ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳೊಂದಿಗೆ ಅವರು ಸಭೆ ನಡೆಸಿದರು. ಇದಕ್ಕೂ ಮುನ್ನ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಬ್ಬದ ಬಳಿಕ ಬಜೆಟ್ ದಿನಾಂಕ ತಿಳಿಸಲಾಗುವುದು ಎಂದರು. ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಂತ ಖರ್ಚಿನಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು …
Read More »ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ
ನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್‌ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಆಗ್ರಹಿಸಿದ್ದೇನೆ. ಡಿಪಿಆರ್‌ಗೆ ಒಪ್ಪಿಗೆ ನೀಡುವುದರಿಂದ …
Read More »ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್
ಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಬಂದ್ ನಡೆಯುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಪ್ರತಿಭಟನೆಯ ಕಹಳೆ ಮೊಳಗಿಸಲಿವೆ. ಈ ಕಾರ್ಮಿಕ ರೈತ ಸಂಘಟನೆಗಳಿಗೆ …
Read More »ಗ್ರಾಪಂ ಸದಸ್ಯರ ಆರಂಭದ 15 ತಿಂಗಳು ಅವಿಶ್ವಾಸಕ್ಕಿಲ್ಲ ಅವಕಾಶ: ಹೈಕೋರ್ಟ್
ಬೆಂಗಳೂರು: ಗ್ರಾಪಂ ಚುನಾಯಿತ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ 15 ತಿಂಗಳ ನಂತರ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶವಿದೆ ಎಂದು ಹೈಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಚಲ್ಡಿಗಾನಹಳ್ಳಿಯ ಗ್ರಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಗ್ರಾಪಂ ಸದಸ್ಯರ ಮನವಿ ಮೇರೆಗೆ ಕೊಲಾರ ಉಪವಿಭಾಗದ ಉಪವಿಭಾಗಾಧಿಕಾರಿ ದಿನಾಂಕ ನಿಗದಿಪಡಿಸಿದ್ದ ಕ್ರಮ ಪ್ರಶ್ನಿಸಿ ಗ್ರಾಪಂ ಅಧ್ಯಕ್ಷ ಸಿ.ಎನ್. ಶ್ರೀನಿವಾಸ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ …
Read More »ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
ಬೆಂಗಳೂರು: ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಅವರು ಆಯ್ಕೆಯಾಗಿದ್ದಾರೆ. ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್ ಹಂಚಿಕೊಂಡಿದ್ದಾರೆ. ಬಮೂಲ್ ಕುಟುಂಬಕ್ಕೆ ನಟಿ ಸುಧಾರಾಣಿ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ. ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ ಆಹಾರದೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದ್ದಾರೆ.
Read More »ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವ ನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, ನಮ್ಮ ವರಿಷ್ಠರು ಮಾತಾಡಿಕೊಂಡಿದ್ದೇವೆ. ಬೇರೆಯವರು ಟೆನ್ಶನ್ ತೆಗೆದುಕೊಳ್ಳುವುದಾಗಲಿ, ಹೇಳಿಕೆ ಕೊಡೋದರಿಂದಾಗಲಿ ಯಾರಿಗೂ ಇದರಿಂದ ಪ್ರಯೋಜನ ಇಲ್ಲ ಎಂದರು. ನನ್ನ ಪರ, ವಿರುದ್ಧ …
Read More »ಜೇನುಗಳಿಂದ ಇಪ್ಪತ್ತು ಮಕ್ಕಳ ಪ್ರಾಣ ಉಳಿಸಿ ತಾನು ಜೀವಕೊಟ್ಟ ಮಹಾತಾಯಿ.
ಜೇನುಗಳಿಂದ ಇಪ್ಪತ್ತು ಮಕ್ಕಳ ಪ್ರಾಣ ಉಳಿಸಿ ತಾನು ಜೀವಕೊಟ್ಟ ಮಹಾತಾಯಿ. ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ಅಂಗನವಾಡಿ ಅಡುಗೆ ಸಹಾಯಕಿ ಕಾಂಚನ್ ಬಾಯಿ ಮೇಘವಾಲ್ ಅವರ ತಮ್ಮ ಜೀವ ಬಲಿಕೊಟ್ಟು ಇಪ್ಪತ್ತು ಮಕ್ಕಳನ್ನು ರಕ್ಷಿಸಿದ್ದಾರೆ. ಇಪ್ಪತ್ತು ಪುಟ್ಟ ಕಂದಮ್ಮಗಳಿದ್ದ ಅಂಗನವಾಡಿ ಕೇಂದ್ರಕ್ಕೆ ಮರದಲ್ಲಿದ್ದ ಜೇನುಗೂಡು ಹಠಾತ್ತನೆ ಕದಡಿ ಸಾವಿರಾರು ಜೇನುನೊಣಗಳು ಆ ಕಂದಮ್ಮಗಳ ಮೇಲೆರಗಿದಾಗ ದಿಕ್ಕಾಪಾಲಾಗಿ ಓಡುತ್ತಿದ್ದ ಮಕ್ಕಳ ಆರ್ತನಾದ ಕೇಳಿದ ಕಾಂಚನ್ ಬಾಯಿ ಕ್ಷಣಾರ್ಧವೂ ಯೋಚಿಸದೇ ತನ್ನ ಪ್ರಾಣದ ಹಂಗು …
Read More »ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್.ವಿಶ್ವನಾಥ್
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರೋದು ರಾಜ್ಯ ಸರ್ಕಾರ. ಸುಮ್ಮನೆ ಕೇಂದ್ರದ ಮೇಲೆ ಆರೋಪ ಮಾಡೋದು ಬಿಟ್ಟು ದರ ಕಡಿಮೆ ಮಾಡಬೇಕು ಅಂತ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರ ಕಾರಣ. ಈಗಾಗಲೇ ನಮ್ಮ ಸಂಸದರು ಇದರ ಬಗ್ಗೆ ಹೇಳಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಬೇಕು ಅಂತ ಆಗ್ರಹಿಸಿದರು. ಮೆಟ್ರೋ …
Read More »ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ
ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮೆಟ್ರೋ ದರ ಏರಿಕೆ ಕುರಿತು ಬಿಜೆಪಿ ಹೋರಾಟ ಮಾಡಲಿದೆ ಅಂತ ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ. ಮೆಟ್ರೋ ದರ ಏರಿಕೆ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖ. ಸುಳ್ಳು ಬೆಳಗ್ಗೆ ಪ್ರಾರಂಭ ಮಾಡಿ ಅಂತ್ಯ ಮಾಡೋದು ಸುಳ್ಳಿನಿಂದಲೇ ಅಂತ …
Read More »
Laxmi News 24×7