Home / ರಾಜ್ಯ (page 1021)

ರಾಜ್ಯ

ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ಒಳಗಡೆ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡು ಹುಚ್ಚಾಟ

ಬೆಳಗಾವಿ: ನಗರದ ಕನ್ನಡ ಸಾಹಿತ್ಯ ಭವನ ಆವರಣದಲ್ಲಿರುವ ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ಒಳಗಡೆ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡು ಹುಚ್ಚಾಟ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಚೆನ್ನಮ್ಮ ವೃತ್ತದಲ್ಲಿರುವ ಸಾಹಿತ್ಯ ಭವನದ ಆವರಣದಲ್ಲಿ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ ಕಿತ್ತೂರು ತಾಲೂಕಿನ ಖೋದಾನಪುರ ಮೂಲದವನು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಹುಚ್ಚಾಟ ಪ್ರದರ್ಶನ ಮಾಡುತ್ತಿದ್ದವನನ್ನು ವಶಕ್ಕೆ ಪಡೆದುಕೊಂಡರು. ನಡೆದಿದ್ದೇನು? ಇಂದು ಬೆಳಗ್ಗೆ 7 ಗಂಟೆಗೆ ವ್ಯಕ್ತಿಯೊಬ್ಬ ಸಾಹಿತ್ಯ ಭವನದಲ್ಲಿರುವ ಶೌಚಾಲಯಕ್ಕೆ …

Read More »

ಕಾಲೇಜಿಗೆ ಟೋಪಿ ಹಾಕಿ ಬಂದ ವಿದ್ಯಾರ್ಥಿ ಮೇಲೆ ಹಲ್ಲೆ: ಪ್ರಿನ್ಸಿಪಾಲ್ ಸೇರಿ 7 ಮಂದಿ ಮೇಲೆ FIR

ಬಾಗಲಕೋಟೆ: ಕಾಲೇಜಿಗೆ ಟೋಪಿ ಹಾಕಿಕೊಂಡು ಬಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಾಲೇಜು ಪ್ರಿನ್ಸಿಪಾಲ್, ಪಿಎಸ್‍ಎ, ಕಾನ್ಸ್‍ಟೇಬಲ್ ಸೇರಿ ಏಳು ಜನರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಫೆಬ್ರವರಿ 18 ರಂದು ತೇರದಾಳ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ನವೀದ್ ಥರಥರಿ ಮುಸ್ಲಿಂ ಟೋಪಿ ಹಾಕಿಕೊಂಡು ಕಾಲೇಜಿಗೆ ಬಂದಿದ್ದನು. ಈ ಹಿನ್ನೆಲೆ ಅವನ ಮೇಲೆ ಹಲ್ಲೆ ಮಾಡಲಾಗಿತ್ತು. ಇದನ್ನು ಖಂಡಿಸಿ ನವೀದ್ ಥರಥರಿ ನ್ಯಾಯಾಲಯದ ಮೊರೆ …

Read More »

ಬೆಳಗಾವಿ: ಹಿಂದೂ-ಮುಸ್ಲಿಮರಿಂದ ಉರುಸ್ ಆಚರಣೆ

ಬೆಳಗಾವಿ: ಇಲ್ಲಿನ ಪೊಲೀಸ್‌ ಕೇಂದ್ರಸ್ಥಾನದಲ್ಲಿರುವ ಹಜರತ್‌ ಸೈಯದ್‌ ಕೈಸರಶಾಹ್‌ವಲಿ ದರ್ಗಾದಲ್ಲಿ ಮೂರು ದಿನಗಳವರೆಗೆ ನಡೆಯಲಿರುವ ಉರುಸ್‌ಗೆ ಚಾಲನೆ ದೊರೆತಿದೆ. ಈ ಪರಿಸರದಲ್ಲಿ ದರ್ಗಾ ಭಾವೈಕ್ಯತೆ ಕೇಂದ್ರವಾಗಿ ಗುರುತಿಸಿಕೊಂಡಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷ ಸಾಂಕೇತಿಕವಾಗಿ ಉರುಸ್‌ ಆಚರಿಸಲಾಗಿತ್ತು. ಕೊರೊನಾ ಪರಿಣಾಮ ತಗ್ಗಿದ್ದರಿಂದ ಈ ಬಾರಿ ಹಿಂದೂ-ಮುಸ್ಲಿಮರು ಒಟ್ಟಾಗಿ ಸೇರಿ ಸಡಗರದಿಂದ ಉರುಸ್‌ ಆಚರಿಸಿದರು. ಭಾವೈಕ್ಯದ ಸಂದೇಶ ರವಾನಿಸಿದರು. ಶುಕ್ರವಾರ ರಾತ್ರಿಯಿಂದಲೇ ವಿದ್ಯುತ್‌ ದೀಪಗಳ ಅಲಂಕಾರದಿಂದ ದರ್ಗಾ ಝಗಮಗಿಸುತ್ತಿದ್ದು, ಹಿಂದೂ-ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ …

Read More »

ವೇದಿಕೆಯ ಮೇಲೆ ಹಾಡುತ್ತಲೇ ಕುಸಿದುಬಿದ್ದು ಸಂಗೀತದಲ್ಲಿ ಲೀನರಾದ ಖ್ಯಾತ ಗಾಯಕ-

ತಿರುವನಂತಪುರ (ಕೇರಳ): ಕಲೆಯನ್ನು ಆರಾಧಿಸುವ ಕಲಾವಿದರು ಅದೇ ಕಲೆಯ ಪ್ರದರ್ಶನ ನೀಡುತ್ತಿರುವಾಗಲೇ ಮೃತಪಟ್ಟಿರುವ ಘಟನೆಗಳನ್ನು ಆಗಾಗ್ಗೆ ಕೇಳುತ್ತಲೇ ಇರುತ್ತವೆ. ಕಲೆಯನ್ನೇ ಉಸಿರಾಗಿಸಿಕೊಂಡವರು ಅಥವಾ ತಮ್ಮ ಕೆಲಸವನ್ನು ತುಂಬಾ ಪ್ರೀತಿಯಿಂದ ನಿರ್ವಹಿಸುವವರು ಕರ್ತವ್ಯದಲ್ಲಿ ಇರುವಾಗಿ ಏಕಾಏಕಿ ಮೃತಪಡುವ ಘಟನೆಗಳು ನಡೆಯುತ್ತಲೇ ಇರುತ್ತವೆ.   ಅಂಥದ್ದೇ ಒಂದು ಸಾವು ಖ್ಯಾತ ಗಾಯಕ ಎಡವ ಬಶೀರ್ ಅವರದ್ದು. ಮಲಯಾಳ ಚಿತ್ರದ ಹಿನ್ನೆಲೆ ಗಾಯಕರಾಗಿ ಬಹಳ ಪ್ರಸಿದ್ಧಿ ಪಡೆದಿರುವ ಬಶೀರ್​ ಅವರು, ಕೇರಳದ ಅಲಪ್ಪುಳದಲ್ಲಿ ನಡೆದ ‘ಬ್ಲೂ …

Read More »

ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿದ್ದ 65ರ ವೃದ್ಧೆ ಸಾವು: ನರ್ಸ್​ ಮುಂದೆ ಬಿಚ್ಚಿಟ್ಟ ಸತ್ಯದಿಂದ ಆರೋಪಿ ಬಂಧನ!

ಪತ್ತನಂತಿಟ್ಟ: ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಅಸುನೀಗಿದ್ದಾಳೆ. ಕೇರಳದ ಅಂಬಾಲಪುಳದಲ್ಲಿ ಈ ಘಟನೆ ನಡೆದಿದೆ. ಥೋಪುಂಪಡಿ ನಿವಾಸಿ ಸುನೀಶ್​ ಅಲಿಯಾಸ್​ ಅಪ್ಪು (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 25ರ ರಾತ್ರಿ 10 ಗಂಟೆ ಸುಮಾರಿಗೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಕಾಂಪೌಂಡ್​ ಗೋಡೆಯನ್ನು ಹತ್ತಿ ಮನೆಯ ಆವರಣಕ್ಕೆ ನುಗ್ಗಿದ ಆರೋಪಿ ಬಾಗಿಲು ಬಡಿದಿದ್ದಾನೆ. ಬಾಗಿಲು ತೆರೆಯುತ್ತಿದ್ದಂತೆ ವೃದ್ಧೆಯ ಮೇಲೆರಗಿ …

Read More »

ಬಿಜೆಪಿ ಬಿ.ಎಸ್.ಯಡಿಯೂರಪ್ಪ (Yeddyurappa ) ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.: ವಿಜಯೇಂದ್ರ

ಬೆಂಗಳೂರು : ಕಾಂಗ್ರೆಸ್ ನ ಜೊತೆಗೆ ಬಿಜೆಪಿಯಲ್ಲೂ ವಿಧಾನಪರಿಷತ್ ಸ್ಥಾನ ಕೈತಪ್ಪಿದ ಅಸಮಧಾನ ನಿಧಾನಕ್ಕೆ ಹೊಗೆಯಾಡಲಾರಂಭಿಸಿದೆ. ತಮಗೆ ವಿಧಾನಪರಿಷತ್ ಸ್ಥಾನ ಕೈ ತಪ್ಪಿದ್ದಕ್ಕೇ ಪರೋಕ್ಷವಾಗಿ ಅಸಮಧಾನ ತೋರಿಸಿಕೊಂಡಿರೋ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra), ಹಾಸನದಲ್ಲಿ ನಡೆದ ಸಮಾರಂಭದಲ್ಲಿ ಪಕ್ಕಾ ರಾಜಕೀಯ ಭಾಷಣ ಮಾಡಿದ್ದು, ಪರೋಕ್ಷವಾಗಿ ಬಿಜೆಪಿ ಬಿ.ಎಸ್.ಯಡಿಯೂರಪ್ಪ (Yeddyurappa ) ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅಷ್ಟೇ ಅಲ್ಲ ಬಿಎಸ್ವೈ ವಿರುದ್ಧದ ಷಡ್ಯಂತ್ರಗಳಿಗೆ ಹೆದರೋದಿಲ್ಲ ಎಂಬರ್ಥದಲ್ಲಿ …

Read More »

ಎಸ್​​ಐ ಡೀಲು, ಎಲ್ರಿಗೂ ಪಾಲು: 50 ಕೋಟಿ ರೂ.ಗೂ ಹೆಚ್ಚು ವಹಿವಾಟು, ಮಾರಾಟಕ್ಕಿಳಿದಿದ್ದ ಏಜೆಂಟ್​ಗಳು.

ಬೆಂಗಳೂರು: ಪಿಎಸ್​ಐ ನೇಮಕಾತಿಗೆ ಅಂಟಿಕೊಂಡಿರುವುದು ಅಲ್ಲೊಂದು, ಇಲ್ಲೊಂದು ಅಕ್ರಮದ ಕಪುಪಚುಕ್ಕೆಯಲ್ಲ. ಬದಲಿಗೆ ಭ್ರಷ್ಟಾಚಾರದ ಕೂಪದಲ್ಲಿ ಉನ್ನತ ಹಂತದ ಅಧಿಕಾರಿಗಳಿಂದ ಕೆಳಸ್ತರದ ಸಿಬ್ಬಂದಿವರೆಗೆ ಎಲ್ಲರೂ ಮಿಂದೆದ್ದಿದ್ದಾರೆ. ಮೇಲಿದ್ದವರ ಅಣತಿ ಮೇರೆಗೆ ಹುದ್ದೆಗಳ ಮಾರಾಟ ನಡೆದಿದೆ ಎಂಬುದು ಸಿಐಡಿ ತನಿಖೆಯಿಂದ ಬೆಳಕಿಗೆ ಬಂದಿದೆ.   ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಸಬ್ ಇನ್​ಸ್ಪೆಕ್ಟರ್ ಅಕ್ರಮ ನೇಮಕಾತಿ ಹಗರಣದಲ್ಲಿ 50 ಕೋಟಿ ರೂ.ಗಳಿಗೂ ಅಧಿಕ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಾಮಮಾರ್ಗದಲ್ಲಿ ಸಬ್ ಇನ್​ಸ್ಪೆಕ್ಟರ್ …

Read More »

ಎಸ್ ಸಿ-ಎಸ್ ಟಿ ಬಿಪಿಲ್ ಕುಟುಂಬಗಳಿಗೆ ಉಚಿತ ವಿದ್ಯುತ್: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಎಸ್​ಸಿ-ಎಸ್​ಟಿ ಬಡ ಕುಟುಂಬಗಳಿಗೆ 75 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಬಾಬು ಜಗಜೀವನ್‌ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್‌ ಉಚಿತ ವಿದ್ಯುತ್‌ ಯೋಜನೆಯನ್ನು …

Read More »

ಬಸವಣ್ಣನವರ ಅನುಭವ ಮಂಟಪ ಪೀರಭಾಷಾ ಬಂಗ್ಲೆ ಆಗಿದೆ ಎಂದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ .

ಬೆಳಗಾವಿ: ಬಸವಣ್ಣನವರ ಅನುಭವ ಮಂಟಪ ಪೀರಭಾಷಾ ಬಂಗ್ಲೆ ಆಗಿದೆ ಎಂದು ಬೆಳಗಾವಿಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ಬಸವಣ್ಣನವರ ಅನುಭವ ಮಂಟಪ ಕುರಿತು ಮಾತನಾಡಿದ ಅವರು, ವಿಶ್ವದ ಮೊದಲ ಸಂಸತ್ತು ಬಸವಣ್ಣನವರ ಅನುಭವ ಮಂಟಪ. ಬಸವಣ್ಣನವರ ಮೂಲ ಅನುಭವ ಮಂಟಪ ಪೀರಭಾಷಾ ಬಂಗ್ಲೆಯಾಗಿದೆ. ನಾವೆಲ್ಲ ಇದನ್ನು ನೋಡಿ ಸುಮ್ಮನ್ನೆ ಕುಳಿತುಕೊಂಡರೆ ಹೇಗೆ? ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಸರ್ಕಾರ ಅನುಭವ ಮಂಟಪದ ಪೂರ್ತಿ ಜವಾಬ್ದಾರಿ ತೆಗೆದುಕೊಂಡು ಅಭಿವೃದ್ಧಿ ಮಾಡಬೇಕು …

Read More »

ಕನ್ನಡಿಗರನ್ನು ಕೆಣಕಿದರೆ ಸರ್ಕಾರ ಸಹಿಸಲ್ಲ; MES ಪುಂಡರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಿನ್ನೆ ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟವನ್ನು ತೀವ್ರವಾಗಿ ಖಂಡಿಸುತ್ತೇವೆ. ಕನ್ನಡ ಹಾಡು ಹಾಕಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಾನೂನು ಕೈಗೆ ತೆಗೆದುಕೊಂಡರೆ …

Read More »