ಬೆಂಗಳೂರು: ನಗರದಲ್ಲಿ ಗಣಪತಿ ಹಬ್ಬಕ್ಕೆ ಕುಸಿತ ಕಂಡಿದ್ದ ಹೂವಿನ ಬೆಲೆ ನವರಾತ್ರಿಗೆ ಹೆಚ್ಚಳವಾಗಿದೆ. ಎಲ್ಲೆಡೆ ಹಬ್ಬದ ಸಡಗರ ಆರಂಭವಾಗಿದ್ದು, ಮಾರುಕಟ್ಟೆಯಲ್ಲಿ ಕೆಲವು ಹೂವುಗಳ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಆಯುಧ ಪೂಜೆ, ವಿಜಯದಶಮಿಯ ಸಂದರ್ಭಕ್ಕೆ ಮಲ್ಲಿಗೆ ಮೊಗ್ಗು, ಕನಕಾಂಬರ, ಸೇವಂತಿಗೆ ಹೂವು ಸೇರಿದಂತೆ ಮತ್ತಿತರ ಹೂವಿನ ಬೆಲೆಗಳು ಗ್ರಾಹಕರ ಕೈಸುಡುವ ಸಾಧ್ಯತೆ ಇದೆ. ಕನಕಾಂಬರ ಮಲ್ಲಿಗೆ, ಸೇವಂತಿಗೆ ಮತ್ತು ಕೆಂಪು ಗುಲಾಬಿ ಹೂವುಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಕೆ.ಆರ್.ಮಾರುಕಟ್ಟೆಯಲ್ಲಿ ಕನಕಾಂಬರ ಹೂವು …
Read More »ಒಂದೇ ಗರ್ಭಗುಡಿಯಲ್ಲಿ ನವದುರ್ಗೆಯರು:
ಹಾವೇರಿ : ದೇಶಾದ್ಯಂತ ಶರನ್ನಾವರಾತ್ರಿಯ ಸಂಭ್ರಮ ನಿನ್ನೆಯಿಂದ ಆರಂಭವಾಗಿದೆ. ಹಾವೇರಿಯ ನವದುರ್ಗೆಯರ ದೇವಸ್ಥಾನದಲ್ಲಿ ಸಹ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಇಡೀ ದೇಗುಲವೇ ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದೆ. ಹೌದು, ಈ ದೇವಸ್ಥಾನದ ಒಂದೇ ಗರ್ಭಗುಡಿಯಲ್ಲಿ 9 ದುರ್ಗೆಯರನ್ನು ಸ್ಥಾಪನೆ ಮಾಡಿರುವುದು ವಿಶೇಷ. ನವರಾತ್ರಿಯ ದಿನಗಳಲ್ಲಿ ಪ್ರತಿನಿತ್ಯ ಒಂದೊಂದು ದುರ್ಗಾ ಮಾತೆಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಮೊದಲ ದಿನ ಶೈಲಪುತ್ರಿ, ಎರಡನೇಯ ದಿನ ಬ್ರಹ್ಮಚಾರಿಣಿ, ಮೂರನೇ ದಿನ ಚಂದ್ರಘಂಟಾ, …
Read More »ಮೈಸೂರು ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಸರುವಾಸಿ: ಸಿದ್ದರಾಮಯ್ಯ
ಮೈಸೂರು: ”ಮೈಸೂರು ಮಹಾರಾಜರ ಕಾಲದಿಂದಲೂ ಕೂಡ ಕನ್ನಡ ನಾಡಿನಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಚ್ಚಿನ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಸಾಹಿತ್ಯ, ಸಂಸ್ಕೃತಿಗೆ ಹೆಸರಾದ ಜಿಲ್ಲೆ ಮೈಸೂರು. ಮೈಸೂರು ಸಾಹಿತ್ಯ ನೆಲೆಯ ತವರೂರು ಎಂದರೆ ತಪ್ಪಾಗಲಾರದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅರಮನೆ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು …
Read More »ಶಿವನ ಪಾದ ಸೇರಿದ ಅರಭಾವಿ ದುರದುಂಡೀಶ್ವರ ಪೀಠದ ಶಿವಯೋಗಿ ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ. …
Read More »ಹೃದಯಾಘಾತದಿಂದ ಅರಭಾವಿ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ
ಹೃದಯಾಘಾತದಿಂದ ಅರಭಾವಿ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ ಹೃದಯಾಘಾತದಿಂದ ಸ್ವಾಮೀಜಿ ಲಿಂಗೈಕ್ಯ, ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಸ್ವಾಮೀಜಿ ಲಿಂಗೈಕ್ಯ, ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ(೬೪) ಲಿಂಗೈಕ್ಯ, ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ಗೋಕಾಕನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಸೇವಕರು, ಚಿಕಿತ್ಸೆ ಫಲಕಾರಿಯಾಗದೆ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನ, ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹ,
Read More »ಇಂಗಳಿ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 29 ಲಕ್ಷ ಅನುದಾನ?:ಶಶಿಕಲಾ ಜೊಲ್ಲೆ
ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ ದೇವರು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿಶೇಷ ಪ್ರಯತ್ನದಿಂದ ರೂ. 29 ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಗ್ರಾಮದ ಬಿಜೆಪಿ ಕಾರ್ಯಕರ್ತರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮೊದಲಿಗೆ ಶ್ರೀ ಬೀರೇಶ್ವರ ಸಹಕಾರಿ ಇಂಗಳಿ ಶಾಖೆಯ ನಿರ್ದೇಶಕ ಪ್ರಕಾಶ ಮಿರ್ಜಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಂಕರ ಪವಾರ ಮಾತನಾಡಿ, …
Read More »ನಾಡಹಬ್ಬದ ಮಹತ್ವ ಕಡಿಮೆಯಾಗಬಾರದೆಂದು ಸಾಂಪ್ರದಾಯಿಕ ದಸರಾ ಆಚರಣೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಬರಗಾಲದ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ದಸರಾ ಆಚರಿಸುತ್ತಿಲ್ಲ. ಆದ್ರೆ ದಸರಾ ಮಹತ್ವಕ್ಕೆ ಯಾವುದೇ ಕುಂದು ಉಂಟಾಗದಂತೆ ಸಾಂಪ್ರದಾಯಿಕವಾಗಿ ನಾಡಹಬ್ಬವನ್ನು ಸರ್ಕಾರ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ದಸರಾ ಹಬ್ಬಕ್ಕೆ ನಾದಬ್ರಹ್ಮ ಹಂಸಲೇಖ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮುಖ್ಯಮಂತ್ರಿ ಅವರು ಭಾಷಣ ಮಾಡಿದರು. ಈ ವೇಳೆ, ದುರಾದೃಷ್ಟವಶಾತ್ ಈ ಬಾರಿ ಮಳೆಯಾಗಲಿಲ್ಲ. ಬರಗಾಲ ಬಂದಿದೆ. …
Read More »ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ: ಡೆತ್‌ನೋಟ್ ಆಧರಿಸಿ ಏಳು ಜನರ ವಿರುದ್ಧ ಎಫ್ಐಆರ್ ದಾಖಲು
ಕೊಪ್ಪಳ: ಗುತ್ತಿಗೆದಾರರ ಉಪಗುತ್ತಿಗೆ ಕೆಲಸ ಮಾಡಿಕೊಂಡು ಹಣಕಾಸಿನ ತೊಂದರೆಗೆ ಸಿಲುಕಿದ್ದ ಪರಿಣಾಮ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನು ಬರೆದಿಟ್ಟಿದ್ದ ಡೆತ್‌ನೋಟ್ ಆಧರಿಸಿ ಏಳು ಜನರ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಶನಿವಾರ ಎಫ್ ಐಆರ್ ದಾಖಲಿಸಲಾಗಿದೆ. ಕೊಪ್ಪಳದ ಬಿ ಟಿ ಪಾಟೀಲ ನಗರದ ನಿವಾಸಿ ರಾಜೀವ ಬಗಾಡೆ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವ. ಕಳೆದ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದರು. ಮನೆಯವರು ಗಮನಿಸಿ ಅವರನ್ನು ಹುಬ್ಬಳ್ಳಿಯ …
Read More »ಐವರು ಮತದಾರರಿರುವ ಈ ಮತಗಟ್ಟೆ ದೇಶದಲ್ಲೇ ಅತಿ ಚಿಕ್ಕದು; ಎಲ್ಲಿದೆ ಗೊತ್ತಾ?
ರಾಯಪುರ (ಛತ್ತೀಸ್ಗಢ) : ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯ. ಹೀಗಾಗಿ, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸರ್ಕಾರ, ಚುನಾವಣಾ ಆಯೋಗ, ಸಂಘಸಂಸ್ಥೆಗಳು ಜನರಲ್ಲಿ ಭಿನ್ನವಿಸಿಕೊಳ್ಳುತ್ತವೆ. ಓರ್ವ ಮತದಾರ ಇದ್ದರೂ, ಅಲ್ಲಿ ಚುನಾವಣಾಧಿಕಾರಿಗಳು ಕೆಲಸ ಮಾಡಿ ಅವರ ಮತವನ್ನು ಪಡೆದುಕೊಳ್ಳುತ್ತಾರೆ. ಇಂಥದ್ದೇ ಒಂದು ಮತಗಟ್ಟೆ ಛತ್ತೀಸ್ಗಢದಲ್ಲಿದೆ. ಇಲ್ಲಿ ಕೇವಲ 5 ಮತದಾರರಿದ್ದು, ಇದು ದೇಶದಲ್ಲಿಯೇ ಅತಿ ಚಿಕ್ಕ ಮತಗಟ್ಟೆ ಎಂಬ ಖ್ಯಾತಿ ಹೊಂದಿದೆ. ಛತ್ತೀಸ್‌ಗಢದ ಮೊದಲ ವಿಧಾನಸಭಾ ಕ್ಷೇತ್ರವಾದ ಭರತ್‌ಪುರ್ ಸೋನ್‌ಹತ್‌ನ ಶೆರಾದಂಡ್ ಎಂಬ …
Read More »ರಾಶಿ ಭವಿಷ್ಯ ನಿಮ್ಮ ಪರಿಶ್ರಮಕ್ಕೆ ಫಲ ಸಿಗುವ ಶುಭ ದಿನ
ಮೇಷ: ಈ ವಾರದಲ್ಲಿ ವ್ಯವಹಾರದಲ್ಲಿ ಸಾಕಷ್ಟು ಸಕ್ರಿಯರಾಗಲಿದ್ದೀರಿ. ದೂರದ ಊರುಗಳಿಗೆ ಪ್ರಯಾಣಿಸಲು, ಹೊಸ ವ್ಯಕ್ತಿಗಳನ್ನು ಸಂಪರ್ಕಿಸಲು ಮತ್ತು ಹಳೆಯ ಸಂಬಂಧಗಳನ್ನು ಪರಿಶೋಧಿಸಲು ನೀವು ಯತ್ನಿಸಲಿದ್ದು ನಿಮ್ಮ ವ್ಯವಹಾರಕ್ಕೆ ಒಳ್ಳೆಯ ಡೀಲ್ ಅಂತಿಮಗೊಳಿಸಲಿದ್ದೀರಿ. ಉದ್ಯೋಗಿಗಳು ಸಹ ತಮ್ಮ ಕೆಲಸದಲ್ಲಿ ನಿರತರಾಗಲಿದ್ದಾರೆ. ಕೆಲವು ಎದುರಾಳಿಗಳು ತಮ್ಮ ತಲೆ ಎತ್ತಬಹುದು. ಆದರೆ ನೀವು ತಾಳ್ಮೆಯಿಂದ ಇದ್ದು ನಿಮ್ಮ ವ್ಯವಹಾರಕ್ಕೆ ಮಾತ್ರವೇ ಗಮನ ನೀಡಬೇಕು. ಕಾಲ ಕಳೆದಂತೆ ಪರಿಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ವೈವಾಹಿಕ ಬದುಕಿನಲ್ಲಿ ಒತ್ತಡ ಕಾಣಿಸಿಕೊಳ್ಳಬಹುದು. …
Read More »
Laxmi News 24×7