Breaking News

ರಾಜ್ಯ

ಮೈಸೂರು ನಗರದ ಟೌನ್​ಹಾಲ್​ನಲ್ಲಿ ಇಂದು ಮಹಿಷ ದಸರಾ ಆಚರಿಸಲಾಯಿತು.

ಮೈಸೂರು: ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ನಗರದ ಟೌನ್‌ಹಾಲ್​ನಲ್ಲಿ ಇಂದು ಮಹಿಷ ಉತ್ಸವ ಸಮಿತಿಯವರು ಮಹಿಷ ದಸರಾ ಆಚರಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಮಾತನಾಡಿ, ಮಹಿಷಾಸುರನ ಇತಿಹಾಸ ಹಾಗೂ ಮಹಿಷ ದಸರಾಗೆ ವಿರೋಧ ವ್ಯಕ್ತಪಡಿಸುತ್ತಿರುವವರ ವಿರುದ್ಧ ವಾಗ್ದಾಳಿ ನಡೆಸಿದರು.   ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ನಗರದ ಟೌನ್‌ಹಾಲ್‌ನಲ್ಲಿ ಉತ್ಸವ ಸಮಿತಿ ಮಹಿಷ ದಸರಾ ಆಚರಿಸಿತು. ಟೌನ್‌ಹಾಲ್ ಮುಂಭಾಗ ವೇದಿಕೆ ನಿರ್ಮಾಣ ಮಾಡಲಾಗಿತ್ತು. …

Read More »

ರಿಲಯನ್ಸ್​ ಜಿಯೋ ತನ್ನ ಹೊಸ ಜಿಯೋ ಭಾರತ್ ಸರಣಿಯ 4ಜಿ ಫೋನ್​ ಬಿಡುಗಡೆ ಮಾಡಿದೆ.

ಮುಂಬೈ: ರಿಲಯನ್ಸ್ ಜಿಯೋ ಜಿಯೋಭಾರತ್ ಬಿ 1 ಎಂಬ ಹೊಸ 4 ಜಿ ಫೋನ್ ಅನ್ನು ದೇಶದಲ್ಲಿ ಬಿಡುಗಡೆ ಮಾಡಿದೆ. ಕೈಗೆಟುಕುವ ಬೆಲೆಯ ಜಿಯೋಭಾರತ್ ಸರಣಿಯ ಮುಂದಿನ ಫೋನ್ ಇದು. ಈ ಫೋನ್ 2.4 ಇಂಚಿನ ಡಿಸ್​ಪ್ಲೇ, ಅಲ್ಫಾ ನ್ಯೂಮೆರಿಕ್ ಕೀ ಪ್ಯಾಡ್, ಬಹುಭಾಷಾ ಬೆಂಬಲ ಮತ್ತು 2000 ಎಂಎಎಚ್ ಬ್ಯಾಟರಿಯನ್ನು ಹೊಂದಿದೆ. ಬೆಲೆ 1,299 ರೂ. ಆಗಿದ್ದು, ಕಪ್ಪು ಬಣ್ಣದಲ್ಲಿ ಲಭ್ಯವಿದೆ. ಯುಪಿಐ ಪಾವತಿಗಳಿಗಾಗಿ ಜಿಯೋಪೇ ಬೆಂಬಲ, ಎಫ್‌ಎಂ ರೇಡಿಯೋ, …

Read More »

ಒಂದು ತಿಂಗಳೊಳಗೆ ಶೇ. 50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಿ: ಸರ್ಕಾರಕ್ಕೆ ಗಡುವು ನೀಡಿದ ಕೆಂಪಣ್ಣ

ಬೆಂಗಳೂರು : ಒಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಠ ಶೇ. 50ರಷ್ಟು ಬಾಕಿ ಇರುವ ಮೊತ್ತ ಬಿಡುಗಡೆ ಮಾಡದಿದ್ದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಗುತ್ತಿಗೆದಾರರ ಸಮಸ್ಯೆಗಳು ಬಗೆಹರಿಯುವುದಕ್ಕೆ ಬದಲಾಗಿ ಹೊಸದಾಗಿ ಮತ್ತಷ್ಟು ಸಮಸ್ಯೆಗಳು ಸೇರ್ಪಡೆಯಾಗಿವೆ. ಈಗಾಗಲೇ …

Read More »

ಪಂಚ ರಾಜ್ಯ ಚುನಾವಣೆಗೆ ರಾಜ್ಯದ ಹಣ ಬಳಕೆ ಆರೋಪ ಸುಳ್ಳು: ಅವರು ನೋಡಿದ್ದಾರಾ ಸಿಎಂ ಪ್ರಶ್ನೆ

ಬೆಂಗಳೂರು: ರಾಜ್ಯದ ಹಣ ಪಂಚರಾಜ್ಯಗಳ ಚುನಾವಣೆಗೆ ಬಳಕೆ ಮಾಡುತ್ತಾರೆ ಎಂಬ ಮಾಜಿ ಸಚಿವ ಮುನಿರತ್ನ ಅವರ ಆರೋಪ ಸುಳ್ಳು, ಅದನ್ನು ಅವರು ನೋಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುನಿರತ್ನ ಅವರು ಮಾಡಿರುವ ಈ ಆರೋಪದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನೀನು ನೋಡಿದ್ದೀಯಾ? ಅವರು ನೋಡಿದ್ದಾರಾ?. ಆರೋಪ ಮಾಡೋಕೆ ಏನು?. ಎಲ್ಲಾ ಆರೋಪಗಳು ಸುಳ್ಳುಗಳಿಂದ ಕೂಡಿವೆ. ಬಿಜೆಪಿ ಶಾಸಕರ ಆರೋಪಗಳು ನಿಜವಲ್ಲ ಎಂದು …

Read More »

ಮಹಿಷಾ ದಸರಾ, ಚಲೋ ಜಾಥಾಗೆ ನಿರಾಕರಣೆ: ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರದಲ್ಲಿ ನಿಷೇದಾಜ್ಞೆ, ಬಿಗಿ ಬಂದೋಬಸ್ತ್​​

ಮೈಸೂರು: ಮಹಿಷಾ ದಸರಾ ಆಚರಣೆ ಹಾಗೂ ಚಾಮುಂಡಿ ಬೆಟ್ಟ ಚಲೋ ಜಾಥಾಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರದಲ್ಲಿ ಮಧ್ಯರಾತ್ರಿಯಿಂದ ನಾಳೆ ಬೆಳಗ್ಗೆ6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷಾ ಪ್ರತಿಮೆ ಸುತ್ತ ಹಾಗೂ ನಾಲ್ಕು ಕಡೆ ಚಾಮುಂಡಿ ಬೆಟ್ಟದ ದ್ವಾರಗಳಲ್ಲಿ ಬಿಗಿಯಾದ ಪೊಲೀಸ್​ ಬಂದೋಬಸ್ತ್ ಹಾಕಲಾಗಿದೆ. ಈ ನಿಷೇಧಾಜ್ಞೆ ಕೇವಲ ಮಹಿಷಾ ದಸರಾ ಹಾಗೂ ಚಾಮುಂಡಿ ಚಲೋ …

Read More »

ಜ್ಯುವೆಲ್ಲರಿ ಶಾಪ್ ದರೋಡೆ ಪ್ರಕರಣ: ಹೈದರಾಬಾದ್​ನತ್ತ ಹೊರಟಿದ್ದ ಆರೋಪಿ ಸೆರೆ

ಬೆಂಗಳೂರು : ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದ ಪ್ರಕರಣದಲ್ಲಿ ಇದೀಗ ಒಬ್ಬ ಆರೋಪಿಯನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೃತ್ಯದ ಬಳಿಕ ಹೈದರಾಬಾದ್​ಗೆ ವಿಮಾನ ಹತ್ತುವ ಯತ್ನದಲ್ಲಿದ್ದ ಹುಸೇನ್​ ಎಂಬಾತನನ್ನು ಅರೆಸ್ಟ್​ ಮಾಡಲಾಗಿದ್ದು, ಆತನ ಬಳಿ ಸ್ವಲ್ಪ ಪ್ರಮಾಣದ ಚಿನ್ನಾಭರಣ ದೊರೆಕಿದೆ. ಇನ್ನುಳಿದ ಆರೋಪಿಗಳಾದ ಸಿಕಂದರ್, ಶಿವ ಹಾಗೂ ವಿಕಾಸ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ‌. ಸಣ್ಣಪುಟ್ಟ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಶಿವನಿಗೆ …

Read More »

ಆಪರೇಷನ್ ಮಾಡೋದು ಬಿಟ್ಟು, ಸಮರ್ಥ ಆಡಳಿತ ಮಾಡಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಸದಾನಂದಗೌಡ

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಒಳ್ಳೆಯ ಆಡಳಿತ ಕೊಡಬೇಕು ಅಂತಿದ್ದಾರೆ. ಬ್ರಾಂಡ್ ಬೆಂಗಳೂರು ಮಾಡಬೇಕು ಅಂದ್ರೆ ಆ ಕೆಲಸ ಮಾಡಬೇಕು, ಆಪರೇಷನ್ ಮಾಡೋದು ಬಿಟ್ಟು, ಸಮರ್ಥ ಆಡಳಿತ ಮಾಡಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಸದಾನಂದಗೌಡ ಕಿಡಿಕಾರಿದರು. ನನ್ನ ಸಂಪರ್ಕದಲ್ಲಿ ಅನೇಕರು ಇದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿಕೆ ವಿಚಾರವಾಗಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಮಾಡಬೇಕು ಅಂದ್ರೆ …

Read More »

ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಸಂಕಟ

ಬೆಳಗಾವಿ : ರಾಜ್ಯದಲ್ಲಿ ಅನಿಯಮಿತವಾಗಿ ಲೋಡ್ ಶೆಡ್ಡಿಂಗ್ ಸಂಭವಿಸುತ್ತಿದ್ದು, ರಾತ್ರಿ ಹೊತ್ತು ಕರೆಂಟ್ ಇಲ್ಲದೆ ಜನರು ಹಾಗೂ ಬೆಳೆಗಳಿಗೆ ನೀರು ಹಾಯಿಸಲಾಗದೆ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಬಿಜೆಪಿ ಹಾಗೂ ಆಡಳಿತಾರೂಢ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ಜಾಲತಾಣಗಳಲ್ಲಿ ಇದೇ ವಿಚಾರವನ್ನಿಟ್ಟುಕೊಂಡು ಕೆಸರೆರಚಾಟ ನಡೆಸುತ್ತಿವೆ. ಈ ಕುರಿತು ಟ್ವಿಟ್ಟರ್ ಹಾಗೂ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ರಾಜ್ಯ ಬಿಜೆಪಿ, ‘ಡಿಯರ್ ಕಾಂಗ್ರೆಸ್, ಕಾಣೆಯಾಗಿದ್ದ ಬಸ್ ಸ್ಟಾಂಡನ್ನು ಕೊನೆಗೂ ಹುಡುಕಿದ್ದೇವೆ ಎಂದು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತಿದ್ದೀರಿ, …

Read More »

ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿರುವಂತೆಯೇ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಮತ್ತೆ ಮುನ್ನೆಲೆಗೆ

ಬೆಳಗಾವಿ : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿರುವಂತೆಯೇ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರ ಗಡಿ ತಜ್ಞರ ಸಮಿತಿ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಧೈರ್ಯಶೀಲ್ ಮಾನೆ ಅವರು ಮುಂಬೈನಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಯೋಗದೊಂದಿಗೆ ಸಭೆ ನಡೆಸಿದ್ದಾರೆ. ಇಲ್ಲಿ ಮಹಾರಾಷ್ಟ್ರ ಸರ್ಕಾರದ ಜನ ಆರೋಗ್ಯ ವಿಮಾ ಯೋಜನೆಯನ್ನು ಕರ್ನಾಟಕದ 865 ಗಡಿ ಗ್ರಾಮಗಳ ಮರಾಠಿ ಭಾಷಿಕ ಜನರಿಗೆ ವಿಸ್ತರಿಸಲು ಚರ್ಚೆ ನಡೆಸಲಾಗಿದೆ. …

Read More »

ಪ್ರತ್ಯೇಕ 3 ಪೋಕ್ಸೊ ಪ್ರಕರಣ: ಅಪರಾಧಿಗಳಿಗೆ ದಂಡಸಮೇತ ಜೈಲು ಶಿಕ್ಷೆ

ಬೆಂಗಳೂರು : ಲೈಂಗಿಕ ದೌರ್ಜನ್ಯ ಸಂಬಂಧ ಪ್ರತ್ಯೇಕ ಮೂರು ಪೊಕ್ಸೋ ಪ್ರಕರಣಗಳಲ್ಲಿ ಮೂವರು ಅಪರಾಧಿಗಳಿಗೆ ತ್ವರಿತಗತಿ ವಿಶೇಷ ನ್ಯಾಯಾಲಯ (ಎಫ್​ಟಿಎಸ್​ಸಿ) ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತು. ನ್ಯಾಯಾಧೀಶರಾದ ಕೆ.ಎನ್‌.ರೂಪ ಅವರು ಅಪರಾಧಿಗಳಾದ ಬಾಬು, ದಿವಾಕರ ಹಾಗೂ ಚಿದಾನಂದ ಎಂಬವರಿಗೆ ಜೈಲುಶಿಕ್ಷೆ ವಿಧಿಸಿದರು. ಮಾರತ್​ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಬೀಸನಹಳ್ಳಿ‌ ‌ನಿವಾಸಿ ಬಾಬು ಎಂಬಾತನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ‌ ದಂಡ ವಿಧಿಸಲಾಗಿದೆ. ಬಾಬು ತಮಿಳುನಾಡು ಮೂಲದವನಾಗಿದ್ದು, ನಗರದಲ್ಲಿ …

Read More »