Breaking News

ರಾಜ್ಯ

ಅಕ್ರಮವಾಗಿ ಭಾರತದ ಜಲ ಗಡಿ ಪ್ರವೇಶಿಸಿದ ಪಾಕಿಸ್ತಾನಿ ಮೀನುಗಾರನ ಬಂಧನ

ಕಛ್ (ಗುಜರಾತ್): ಕಚ್‌ನ ಸಮುದ್ರ ಗಡಿಯಲ್ಲಿ ಆಗಾಗ ಕಳ್ಳಸಾಗಾಣಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೊತೆಗೆ ಪಾಕಿಸ್ತಾನಿ ನುಸುಳುಕೋರರು ಮತ್ತು ಪಾಕಿಸ್ತಾನಿ ಮೀನುಗಾರರು ಕೂಡ ಆಗಾಗ ಭಾರತದ ಯೋಧರ ಬಳಿ ಸಿಕ್ಕಿ ಬೀಳುತ್ತಿದ್ದಾರೆ. ಪ್ರಸ್ತತ ಬಿಎಸ್‌ಎಫ್ ತಂಡವು ಭಾರತದ ಕಚ್-ಪಾಕಿಸ್ತಾನ ಜಲ ಗಡಿ ಬಳಿಯ ಸರ್ ಕ್ರೀಕ್ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಬಂಧಿತ ವ್ಯಕ್ತಿಯ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಬಿಎಸ್‌ಎಫ್ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ, ಸರ್ ಕ್ರೀಕ್ ಬಳಿ ಇಂಜಿನ್ ಅಳವಡಿಸಿದ …

Read More »

ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದ ಪುತ್ರ ಉಮೇಶ್

ರಾಮನಗರ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ತಿಮ್ಮಕ್ಕ ಅವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆಗಿದ್ದು, ಇದು ಸುಳ್ಳು ಸುದ್ದಿ ಎಂದು ಪುತ್ರ ಉಮೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಉಮೇಶ್, ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ …

Read More »

ಧೋನಿಯನ್ನು ಬಿಗಿದಪ್ಪಿ ಮುತ್ತಿಕ್ಕಿದ ರಣ್​ವೀರ್​​; ಕ್ಯಾಪ್ಟನ್‌ ಕೂಲ್‌ ಜೊತೆ ರಾಮ್ ​​ಚರಣ್

ಎಂ.ಎಸ್‌.ಧೋನಿ ಅವರೊಂದಿಗೆ ನಟರಾದ ರಣ್​ವೀರ್​ ಸಿಂಗ್​ ಮತ್ತು ರಾಮ್​​ ಚರಣ್ ಇರುವ ಫೋಟೋಗಳು ವೈರಲ್ ಆಗಿವೆ. ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೊತೆ ಭಾರತೀಯ ಚಿತ್ರರಂಗದ ಸೂಪರ್​ ಸ್ಟಾರ್​ಗಳು ಕಾಣಿಸಿಕೊಂಡರು. ನಿನ್ನೆ, ಸೌತ್ ಸೂಪರ್‌ ಸ್ಟಾರ್ ರಾಮ್ ಚರಣ್ ತಮ್ಮ ಇನ್‌ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದೀಗ ಬಾಲಿವುಡ್ ನಟ ರಣ್​​ವೀರ್ ಸಿಂಗ್ ಕೂಡಾ ಅಪರೂಪದ ಫೋಟೋಗಳನ್ನು ಶೇರ್ ಮಾಡಿದ್ದಾರೆ. …

Read More »

ಬಿಪಿಎಲ್ ಕಾರ್ಡ್​ದಾರರಿಗೆ ಗುಡ್ ನ್ಯೂಸ್ : ಇಂದಿನಿಂದ ಹೆಸರು ಸೇರ್ಪಡೆ, ಪರಿಷ್ಕರಣೆಗೆ ಅವಕಾಶ

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬಿಪಿಎಲ್ ಕಾರ್ಡ್​ಗಳ ಪರಿಷ್ಕರಣೆ ಮಾಡಬಹುದಾಗಿದೆ. ಆದರೆ, ಹೊಸ ಕಾರ್ಡ್ ಪಡೆಯಲು ಮತ್ತಷ್ಟು ಕಾಯಬೇಕಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಪಿಎಲ್ ಕಾರ್ಡ್​ಗಳ ಪರಿಷ್ಕರಣೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ಒನ್‌, ಬೆಂಗಳೂರು ಒನ್‌, …

Read More »

ಕಾಂಗ್ರೆಸ್​ಗೆ ಲಿಂಗಾಯತರು ಮತ ಹಾಕಿಲ್ಲ ಎನ್ನುವವರು ಮೂರ್ಖರು: ವಿನಯ್ ಕುಲಕರ್ಣಿ

ಬೆಂಗಳೂರು: ಹಿರಿಯ ನಾಯಕ, ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರು, ಕಾಂಗ್ರೆಸ್​​ಗೆ ಲಿಂಗಾಯತರು ಓಟು ಹಾಕಿಲ್ಲ ಎನ್ನುವವರು ಮೂರ್ಖರು. ವೀರೇಂದ್ರ ಪಾಟೀಲ್ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದಾರೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಮನೂರು ಅವರ ವಿರುದ್ಧ ಯಾರು ಕೌಂಟರ್ ಕೊಡೋದು ಬೇಡ. ಅವರು ಹಿರಿಯರು, ನಮ್ಮ ಯಜಮಾನರು ಅವರು, ಅವರಿಗೆ 92 …

Read More »

10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕೊಲೆ ಮಾಡಿಸಿದ ಸುಂದರಿ..

ಕಾರವಾರ(ಉತ್ತರಕನ್ನಡ): ಗಂಡನ ಸ್ನೇಹಿತನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬಳು ಕೊನೆಗೂ ಅಂದರ್​ ಆಗಿದ್ದಾಳೆ. ಪ್ರಿಯಕರನಿಗೆ ಕೇವಲ 10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕುಮಟಾದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿಸಿರುವ ಪ್ರಕರಣವನ್ನು ಕುಮಟಾ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗಾರರ ಸುಳಿವು ನೀಡಿದ ಕೆಎಸ್‌ಆರ್​ಟಿಸಿ ಬಸ್ ಟಿಕೆಟ್: ಹಿಂದಿನ ಸೆ.30 ರಂದು ಕುಮಟಾ ತಾಲೂಕಿನ ದೇವಿಮನೆ ಘಟ್ಟದ ದೇವಸ್ಥಾನವೊಂದರ ಹಿಂಬದಿ ಪ್ರದೇಶದಲ್ಲಿ ಅಪರಿಚಿತ ಶವವೊಂದು ಪತ್ತೆಯಾದಾಗ, ಕುಮಟಾ ಪೊಲೀಸರು ತೆರಳಿ ಪರಿಶೀಲಿಸಿದ್ದರು. …

Read More »

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಪಿಎಂ ಕಿಸಾನ್ ಯೋಜನೆ’ ಹಣ 3,000 ರೂ.ಗೆ ಏರಿಕೆ ಸಾಧ್ಯತೆ!

ನವದೆಹಲಿ : ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಕಂತು ಹೆಚ್ಚಾಗಬಹುದು. ಪ್ರಸ್ತುತ, ಈ ಯೋಜನೆಯಡಿ, ಸರ್ಕಾರವು ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳನ್ನು ನೀಡುತ್ತದೆ.ಈ ಮೊತ್ತವನ್ನು 2000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತದೆ.   ವರದಿಯ ಪ್ರಕಾರ, ಕಳೆದ ವರ್ಷ ರೈತರ ಈ ಯೋಜನೆಯಡಿ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳನ್ನು ಉಳಿಸಿದೆ. ಅನರ್ಹ ಫಲಾನುಭವಿಗಳನ್ನು …

Read More »

ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ:

ಗದಗ, (ಅಕ್ಟೋಬರ್ 05): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದೆ. ಮಂಗಳೂರು ಮೂಲದ ಉದ್ಯಮಿಗೆ ವಂಚನೆ ಬೆನ್ನಲ್ಲೇ ಗದಗ ಜಿಲ್ಲೆಯಲ್ಲೂ ಅಭಿನವ ಹಾಲಶ್ರೀ(Abhinava Halashri) ವಿರುದ್ಧ ವಂಚನೆ ಕೇಸ್ ದಾಖಲಾಗಿತ್ತು. ಈಗ ಬೆಂಗಳೂರಿನ ಜೈಲಿನಲ್ಲಿದ್ದ ಹಾಲಶ್ರೀ ಸ್ವಾಮೀಯನ್ನು ಮುಂಡರಗಿ ಪೊಲೀಸ್ರು ಬಾಡಿ ವಾರಂಟ್ ಮೇಲೆ ಆಚೆ ಕರೆದುಕೊಂಡು ಬಂದು ಎಲ್ಲೆಡೆ ಸ್ಥಳ ಮಹಜರು …

Read More »

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರರಿಬ್ಬರ ಸಾವು, ಮೆಡಿಕಲ್​ ಶಾಪ್​ಗೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ​

ಮೈಸೂರು, ಅ.05: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ (Accident) ಘಟನೆ ಮೈಸೂರು ಜಿಲ್ಲೆ ಹೆಚ್​.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್​​ನಲ್ಲಿದ್ದ ಸೋಮಶೇಖರ್​(30), ನಾಗೇಶ್​​(28) ಮೃತಪಟ್ಟಿದ್ದಾರೆ. ಮೈಸೂರಿನಿಂದ ಹೆಚ್​.ಡಿ.ಕೋಟೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ (HD Kote Police Station) ಪ್ರಕರಣ ದಾಖಲಾಗಿದೆ. ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವಕ …

Read More »

ಬೆಳ್ಳಂಬೆಳಗ್ಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

ಶಿವಮೊಗ್ಗ, (ಅಕ್ಟೋಬರ್ 05): ಶಿವಮೊಗ್ಗದಲ್ಲಿ (Shivamogga) ಡಿಸಿಸಿ ಬ್ಯಾಂಕ್ ಅಧ್ಯಕ್ಷ R.M.ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ (ED Raid) ಮಾಡಿದೆ. ಇಂದು (ಅಕ್ಟೋಬರ್ 05) ಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.

Read More »