ವಿಜಯಪುರ: ನಾಟಕ ಪ್ರದರ್ಶನದ ವೇಳೆ ದಿಢೀರ್ ಕುಸಿದು ಬಿದ್ದು ಪೋಸ್ಟ್ಮ್ಯಾನ್ ಸಾವನ್ನಪ್ಪಿರುವ ಮನಕಲಕುವ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಶರಣು ಬಾಗಲಕೋಟೆ (24) ಎಂಬುವರೆ ಹೃದಯಾಘಾತದಿಂದ ಸಾವನ್ನಪ್ಪಿದ ಪೋಸ್ಟ್ಮ್ಯಾನ್ ಆಗಿದ್ದಾರೆ. ನಾಟಕ ಪ್ರದರ್ಶನ ವೇಳೆ ಡಾನ್ಸ್ ಮಾಡಲು ವೇದಿಕೆ ಏರಿದ್ದ ಶರಣು ಕೊಟ್ಯಾಳ್ಗೆ ಹೃದಯಾಘಾತವಾಗಿದೆ. ”ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ” ನಾಟಕ ಪ್ರದರ್ಶನ ವೇಳೆ ಈ ಘಟನೆ ನಡೆದಿದೆ. …
Read More »ಕಾವೇರಿ ರಕ್ಷಣಾ ಯಾತ್ರೆಗೆ ಬಿಜೆಪಿ ಸಜ್ಜು: ಬಿಎಸ್ವೈ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದ ವಿರುದ್ಧ ಕಾವೇರಿ ರಕ್ಷಣಾ ಯಾತ್ರೆ ನಡೆಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದ್ದು, ಈ ಸಂಬಂಧ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಹೋರಾಟಕ್ಕೆ ರೂಪುರೇಷೆ ತಯಾರಿಸುತ್ತಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭಗೊಂಡಿದೆ. ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಕಾವೇರಿ …
Read More »8 ದಿನಗಳಲ್ಲಿ ಆಯೋಗದ ಪೀಠಕ್ಕೆ ಕಟ್ಟಡ ಸಿಗುವಂತೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟಬೆಳಗಾವಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ ವಕೀಲರು
ಬೆಳಗಾವಿಯಲ್ಲಿ ರಾಜ್ಯ ಗ್ರಾಹಕ ಆಯೋಗದ ಪೀಠ ಮಂಜೂರಾಗಿ 2 ವರ್ಷ ಕಳೆದರೂ ಕಟ್ಟಡದ ಕೊರತೆಯಿಂದ ಇನ್ನೂ ಕಾರ್ಯ ನಿರ್ವಹಿಸುತ್ತಿಲ್ಲ. ಆದ್ದರಿಂದ ಮುಂದಿನ 8 ದಿನಗಳಲ್ಲಿ ಆಯೋಗದ ಪೀಠಕ್ಕೆ ಕಟ್ಟಡ ಸಿಗುವಂತೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಬೆಳಗಾವಿಯ ವಕೀಲರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಗ್ರಾಹಕ ಆಯೋಗದ ಶಾಶ್ವತ ಪೀಠವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕು ಎಂದು ವಕೀಲರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಇದಕ್ಕಾಗಿ ಅನೇಕ ಮೆರವಣಿಗೆಗಳು, ಆಂದೋಲನಗಳು ನಡೆದವು. ಅಂದಿನ …
Read More »ಭೂಸ್ವಾಧೀನಾಧಿಕಾರಿ, ಉಪತಹಶೀಲ್ದಾರ್ಗೆ ತಲಾ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ
ತುಮಕೂರು : ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತಬಸುಮ್ ಜಹೇರಾ ಹಾಗೂ ಬೆಳ್ಳಾವಿ ಉಪ ತಹಶೀಲ್ದಾರ್ ಶಬ್ಬೀರ್ ಅವರಿಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶ ರಾಮಲಿಂಗೇಗೌಡ ಈ ತೀರ್ಪು ನೀಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಜಯರಾಮ ಎಂಬುವರು 2017ರಲ್ಲಿ …
Read More »ಇಂದಿರಾ ಕ್ಯಾಂಟಿನ್ಗಳ ಯಾವುದೇ ಬಿಲ್‌ಗಳನ್ನು ಬಾಕಿ ಉಳಿಸಿಕೊಂಡಿಲ್ಲ: ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಇಂದಿರಾ ಕ್ಯಾಂಟಿನ್ಗಳ ಬಿಲ್‌ಗಳನ್ನು ಕಾನೂನಾತ್ಮಕವಾಗಿ ಪಾವತಿ ಮಾಡಲಾಗಿದೆ. ಯಾವುದೇ ರೀತಿಯ ಬಿಲ್‌ಗಳನ್ನು ಬಾಕಿ ಉಳಿಸಿಕೊಂಡಿಲ್ಲ. ಕೆಲವು ಸಣ್ಣಪುಟ್ಟ ಬಿಲ್‌ಗಳು ಮಾತ್ರ ಬಾಕಿ ಇದ್ದು, ಬಹುತೇಕ ಕ್ಲಿಯರ್ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದರು. ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಹಾಗೂ ಟಿಕೆಟ್ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಚೈತ್ರ ಕುಂದಾಪುರ ಅವರ ಆರೋಪಕ್ಕೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪ್ರತಿಕ್ರಿಯಿಸಿರುವ ತುಷಾರ್ ಗಿರಿನಾಥ್, 2019ರ ರಾಜ್ಯ ಲೆಕ್ಕ ಪರಿಶೋಧನಾ ಆಡಿಟ್ …
Read More »ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದ ನೈರುತ್ಯ ರೈಲ್ವೆ
ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದೆ. ನೈರುತ್ಯ ರೈಲ್ವೆಯು 19.27 ದಶಲಕ್ಷ ಟನ್ ಸರಕುಗಳನ್ನು ಲೋಡ್ ಮಾಡಿ ರೂ. 1,909.77 ಕೋಟಿ ಆದಾಯ ಗಳಿಸಿದೆ. ಇದಲ್ಲದೆ 8.27 ಮಿಲಿಯನ್ ಟನ್ ಕಬ್ಬಿಣದ ಅದಿರನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 37.6 ರಷ್ಟು ಹೆಚ್ಚಾಗಿದೆ. ಇದರ ಜೊತೆಗೆ ನ 270 ಆಟೋಮೊಬೈಲ್ ರೇಕ್ಗಳನ್ನು …
Read More »ಮರಾಠ ಮೀಸಲಾತಿಗೆ ಸಿಎಂ ಶಿಂಧೆ ಭರವಸೆ:
ಜಲ್ನಾ (ಮಹಾರಾಷ್ಟ್ರ): ಮರಾಠಾ ಮೀಸಲಾತಿಯ ಬೇಡಿಕೆಗಾಗಿ ಜಲ್ನಾದಲ್ಲಿ ಕಳೆದ 16 ದಿನಗಳಿಂದ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಕೊನೆಗೊಂಡಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನೀಡದ ಭರವಸೆ ಮೇರೆಗೆ ಧರಣಿ ನಡಸುತ್ತಿದ್ದ ಮನೋಜ್ ಜಾರಂಜ್ ಅವರು ಉಪವಾಸವನ್ನು ಹಿಂಪಡೆದಿದ್ದಾರೆ. ಸಿಎಂ ಶಿಂಧೆ ಅವರ ಕೈಯಿಂದ ಮನೋಜ್ ಅವರು ಜ್ಯೂಸ್ ಕುಡಿಯುವ ಮೂಲಕ ಉಪವಾಸ ಕೊನೆಗೊಂಡಿತು. ಈ ವೇಳೆ ಮಾತನಾಡಿದ ಮನೋಜ್ ಜಾರಂಗೆ, ಮರಾಠ ಮೀಸಲಾತಿ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ …
Read More »ತಮಿಳುನಾಡು ಸರ್ಕಾರ ಪ್ರತಿ ಮನೆಯೊಡತಿಗೆ ತಲಾ ₹1000 ರೂ. ನೀಡುವ ಯೋಜನೆಯನ್ನು ನಾಳೆ (ಸೆ. 15 ರಂದು) ಜಾರಿಗೆ ತರಲಿದೆ.
ಚೆನ್ನೈ (ತಮಿಳುನಾಡು): ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆಯೇ ತಮಿಳುನಾಡು ಸರ್ಕಾರ ಇದೀಗ ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ಪ್ರತಿ ತಿಂಗಳು ತಲಾ 1000 ರೂ ಆರ್ಥಿಕ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ಆ ರಾಜ್ಯದ 1.06 ಕೋಟಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಬೃಹತ್ ಯೋಜನೆಗೆ ನಾಳೆ ( ಸೆ.15 ರಿಂದ) ಚಾಲನೆ ನೀಡಲಿದೆ. ಈ ಬಗ್ಗೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, …
Read More »ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದೆ. ಒಟ್ಟು 161 ತೀವ್ರ ಮತ್ತು 34 ಸಾಧಾರಣ ಬರಪೀಡಿತ ತಾಲೂಕುಗಳೆಂದು ಆದೇಶ ಹೊರಡಿಸಿದೆ.
ಬೆಂಗಳೂರು : ಕೊನೆಗೂ ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದೆ. 161 ತಾಲೂಕುಗಳನ್ನು ತೀವ್ರ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ. 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿದ್ದು, ಈ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳು ಮತ್ತು 34 ಸಾಧಾರಣ ಬರಪೀಡಿತ ತಾಲೂಕುಗಳೆಂದು ತಕ್ಷಣದಿಂದ ಜಾರಿಗೆ ಬರುವಂತೆ …
Read More »ರಾಜ್ಯ- ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ ಎಂದು ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದಾರೆ.
ದಾವಣಗೆರೆ : ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ ಎಂದು ಕೋಡಿಮಠ ಮಹಾಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯ ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದ್ರೇ ಮುಂದಿನ ಭವಿಷ್ಯ ಹೇಳುವೆ, ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರುತ್ತದೆ. ಆತಂಕ ಪಡುವ ಅಗತ್ಯವಿಲ್ಲ ಎಂದರು. ಅನೇಕ ತಪ್ಪು ಒಪ್ಪುಗಳು ಪ್ರಾಣಿಗಳಲ್ಲಾಗುತ್ತಿವೆ ಹಾಗೂ …
Read More »
Laxmi News 24×7