ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ. ಬಿಹಾರಕ್ಕೆ ಪ್ರವಾಸ ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘ ಕೀರ್ತಿಯನ್ನ (14) ಕೊಲೆ ಮಾಡಿದ್ದ ಮಾವ …
Read More »ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ
ಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು ಪೋಸ್ಟರ್‌ಗಳನ್ನ ಕಿತ್ತೆಸೆದು ಸರ್ಕಾದ ವಿರುದ್ಧ ಸಿಡಿದೆದ್ದಿದ್ದರು. ಈಗ ಜನಾಕ್ರೋಶಕ್ಕೆ ಕೆಎಸ್‌ಆರ್‌ಟಿಸಿ ಮಣಿದಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತಿನ ಪೋಸ್ಟರ್ ಅಂಟಿಸೋದರ ವಿರುದ್ಧ ಒಂದು ಆಂದೋಲನವೇ ಶುರುವಾಗಿತ್ತು. ಸಾರ್ವಜನಿಕರು, ಸಂಘಟನೆಗಳು ಬಸ್‌ಗಳಿಗೆ ಅಂಟಿಸಲಾಗಿದ್ದ ಜಾಹೀರಾತು ಪೋಸ್ಟರ್ ಕಿತ್ತೆಸೆಯೋ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ರೀತಿಯ ಜಾಹೀರಾತುಗಳಿಗೆ ಕಡಿವಾಣ …
Read More »ಮಂಡ್ಯ ಅಬಕಾರಿ ಡಿಸಿ ಅಮಾನತು…ಲೈಸೆನ್ಸ್ ನೀಡಲು ಲಂಚ ಆರೋಪ ಸಾಬೀತಾದ ಹಿನ್ನಲೆ ಕ್ರಮ
ಮಂಡ್ಯ ಅಬಕಾರಿ ಇಲಾಖೆ ಲಂಚಾವತಾರಕ್ಕೆ ಮತ್ತೊಂದು ನಿದರ್ಶನ. ಮಂಡ್ಯ ಅಬಕಾರಿ ಡಿಸಿ ಅಮಾನತ್ತು.ಸಿಎಲ್ 7 ಲೈಸೆನ್ಸ್ ನೀಡಲು ಲಂಚಕೇಳಿದ ಆರೋಪ ಸಾಬೀತಾದ ಹಿನ್ನಲೆ ಅಬಕಾರಿ ಉಪ ಆಯುಕ್ತ ನಾಗಶಯನ ಅಮಾನತಾಗಿದ್ದಾರೆ. ಲೈಸೆನ್ಸ್ ನೀಡಲು ಸುಂದರ್ ಎಂಬುವವರಿಂದ 60 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.ಸುಂದರ್ ಆಡಿಯೋ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಕೆ.ಆರ್.ಪೇಟೆಯ ಸೋಮನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಸಿಎಲ್ 7 ಬಾರ್ ತೆರೆಯಲು ಲೈಸೆನ್ಸ್ ನೀಡಲು ಸುಂದರ್ ಅರ್ಜಿ ಸಲ್ಲಿಸಿದ್ದರು. ಲೈಸೆನ್ಸ್ ನೀಡದೇ ಸಣ್ಣ …
Read More »ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡಿ : ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ
ಬೆಂಗಳೂರು:ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,674 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ …
Read More »ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್ 6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದಕ್ಕೆ ಪೂರ್ವ ಭಾವಿಯಾಗಿ ಇಂದಿನಿಂದ ಬಜೆಟ್ ತಯಾರಿಕೆಗೆ ಚಾಲನೆ ನೀಡಿದ್ದಾರೆ. ಅರಣ್ಯ-ಪರಿಸರ-ಜೀವಿ ಶಾಸ್ತ್ರ, ಕಾನೂನು-ನ್ಯಾಯ-ಮಾನವ ಹಕ್ಕುಗಳು-ಸಂಸದೀಯ ವ್ಯವಹಾರಗಳು-ಶಾಸನ ರಚನೆ-ಪ್ರವಾಸೋದ್ಯಮ, ತೋಟಗಾರಿಕೆ-ಗಣಿ-ಭೂ ವಿಜ್ಞಾನ, ಕಾರ್ಮಿಕ, ಒಳಾಡಳಿತ, ಕನ್ನಡ-ಸಂಸ್ಕೃತಿ-ಹಿಂದುಳಿದ ವರ್ಗಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಜೊತೆ …
Read More »ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ
ಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ ಏಪ್ರಿಲ್-ಮೇ ತಿಂಗಳ ಮಧ್ಯಭಾಗದಲ್ಲಿ ನಡೆಯಲಿದೆ. ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಆಯೋಗವು ಆಯಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಸೇರಿದಂತೆ ಎಲ್ಲಾ ಹಂತದ ಪರೀಕ್ಷೆಗಳು ಮಾರ್ಚ್- ಏಪ್ರಿಲ್ ತಿಂಗಳ ಅಂತ್ಯದೊಳಗೆ ಕೊನೆಗೊಳ್ಳುತ್ತವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಪ್ರಿಲ್- ಮೇ ತಿಂಗಳ ಮಧ್ಯ ಭಾಗದಲ್ಲಿ …
Read More »ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ
ಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು ಅಭಿಯಾನದ ಮಾದರಿ ಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುವ ವೇಳೆಯಲ್ಲಿ ಅವರು, ರಾಜ್ಯದಲ್ಲಿ 20 ಲಕ್ಷ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ ಎಂಬುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಕೇಂದ್ರ ವಿದೇಶಾಂಗ ಸಚಿವಾಲಯದ ಎಫ್ ಆರ್ ಆರ್ …
Read More »ರೀಲ್ಸ್, ಫೇಸ್ಬುಕ್ ಪೋಸ್ಟ್ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ
ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್ ಬುಕ್ ಪೋಸ್ಟ್ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್ಗೆ ಮಧ್ಯಂತರ ತಡೆ ನೀಡಿದೆ. ಅಕ್ರಮ ಬಾಂಗ್ಲಾ …
Read More »ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಮಾಣ ಕಡಿಮೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ವಿಧಾನ ಸಭೆ ಕಲಾಪದಲ್ಲಿ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಭಾರೀ ಗದ್ದಲಗಳು ನಡೆಯುತ್ತಿದೆ, ವಿಶೇಷ ಅಧಿವೇಶನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿದೆ. ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ತಿರಸ್ಕರಿಸಿದ ಅವರು, …
Read More »ಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್
ಬೆಂಗಳೂರು: ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆದೆ. ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಹೆಚ್.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಹೆಚ್.ಡಿ.ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು …
Read More »
Laxmi News 24×7