ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಇಂದಿನಿಂದ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ ಟರ್ಮಿನಲ್ 2ಗೆ ಶಿಫ್ಟ್ ಆಗಿದೆ. 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗಾರ್ಡನ್ ಟರ್ಮಿನಲ್ ಅತ್ಯಾಧುನಿಕ ತಂತ್ರಜ್ಞಾನವುಳ್ಳದ್ದಾಗಿದೆ. ಕಳೆದ ವರ್ಷ ನವೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಟರ್ಮಿನಲ್ ಅನ್ನು ಉದ್ಘಾಟನೆ ಮಾಡಿದ್ದರು. ಜನವರಿ 15ರಿಂದ ಕೆಲ ದೇಶಿಯ ವಿಮಾನಗಳ ಹಾರಾಟ ಮಾತ್ರ ಟಿ2ನಲ್ಲಿ …
Read More »ಡೀಸೆಲ್ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವರದಿ: ಸ್ಪಷ್ಟನೆ ನೀಡಿದ ನಿತಿನ್ ಗಡ್ಕರಿ
ನವದೆಹಲಿ: ”ವಾಯು ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್ಸೆಟ್ಗಳ (ಡೀಸೆಲ್ ಜನರೇಟರ್) ಮೇಲೆ ‘ಮಾಲಿನ್ಯ ತೆರಿಗೆ’ ರೂಪದಲ್ಲಿ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವಿಧಿಸಲು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಲಾಗುತ್ತದೆ” ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂಬುವುದು ವರದಿಯಾಗಿದೆ. ಈ ಕುರಿತು ಖುದ್ದು ಸಚಿವರೇ ಸ್ಪಷ್ಟನೆ ಕೊಟ್ಟಿದ್ದು, ಇಂತಹ ಯಾವುದೇ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ …
Read More »ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಂದು ರಾಜ್ಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಜೆಡಿಎಸ್‌ನೊಂದಿಗಿನ ಹೊಂದಾಣಿಕೆಯ ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ …
Read More »ಬಹಿರಂಗ ಹೇಳಿಕೆ ನೀಡದಂತೆ ಬಿ.ಕೆ.ಹರಿಪ್ರಸಾದ್ಗೆ ಕಾಂಗ್ರೆಸ್ ಹೈಕಮಾಂಡ್ ತಾಕೀತು
ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಶನಿವಾರ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಟೀಕಾಪ್ರಹಾರ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ, ಯಾರ ಬಗ್ಗೆಯೂ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಮೌಖಿಕ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹರಿಪ್ರಸಾದ್ ಹೇಳಿಕೆಗೆ ಆಕ್ಷೇಪ: ಸಿದ್ದರಾಮಯ್ಯರ ವಿರುದ್ಧ ಹರಿಪ್ರಸಾದ್ ಅವರು ಮುಸುಕಿನ ಗುದ್ದಾಟ ನಡೆಸುತ್ತಿರುವುದು ಆಡಳಿತ ಪಕ್ಷದೊಳಗೆ ಅಸಮಾಧಾನ ಉಂಟುಮಾಡಿದೆ. ಬಹಿರಂಗ ಹೇಳಿಕೆ ನೀಡುವ …
Read More »ಅಣ್ಣ ಚಿರು ಸಮಾಧಿ ಬಳಿ ಪತ್ನಿ ಸೀಮಂತ ನೆರವೇರಿಸಿದ ಧ್ರುವ ಸರ್ಜಾ
ಕನ್ನಡ ಚಿತ್ರರಂಗದಲ್ಲಿ ನಟನೆ ಮತ್ತು ಗುಣದಿಂದ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನಟ ಧ್ರುವ ಸರ್ಜಾ. ಸಿನಿಮಾ ಮತ್ತು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಕೆಲ ದಿನಗಳ ಹಿಂದೆ ಅಣ್ಣ ಚಿರಂಜೀವಿ ಸರ್ಜಾ ಸಮಾಧಿ ಬಳಿ ಮಲಗಿದ್ದ ಧ್ರುವ ಸರ್ಜಾ ಅವರ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಆಯಕ್ಷನ್ ಪ್ರಿನ್ಸ್ ಮನೆಯಲ್ಲಿ ಸೀಮಂತದ ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರವನ್ನು ವಿಶೇಷ …
Read More »ಜವಾನ್’ ಸಿನಿಮಾ ಬಿಡುಗಡೆಯಾಗಿ ಕೇವಲ ನಾಲ್ಕೇ ದಿನಗಳಲ್ಲಿ 8 ಹೊಸ ದಾಖಲೆಯನ್ನು ಬರೆದಿದೆ.
ಜವಾನ್’ ಸಿನಿಮಾ ಬಿಡುಗಡೆಯಾಗಿ ಕೇವಲ ನಾಲ್ಕೇ ದಿನಗಳಲ್ಲಿ 8 ಹೊಸ ದಾಖಲೆಯನ್ನು ಬರೆದಿದೆ. ಅವುಗಳ ಬಗ್ಗೆ ತಿಳಿಯಲು ಮುಂದೆ ಓದಿ.. ತಮಿಳು ಖ್ಯಾತ ನಿರ್ದೇಶಕ ಅಟ್ಲೀ ಮತ್ತು ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಕಾಂಬೋದಲ್ಲಿ ಮೂಡಿಬಂದ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7, ಗುರುವಾರದಂದು ಬಿಡುಗಡೆಯಾಗಿ ವಿಶ್ವದಾದ್ಯಂತ ಧೂಳೆಬ್ಬಿಸುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡ ಚಿತ್ರ ಕಲೆಕ್ಷನ್ ವಿಚಾರದಲ್ಲಿ ಅಬ್ಬರದ ಓಟ ಮುಂದುವರೆಸಿದೆ. ಶಾರುಖ್ ಸೇರಿದಂತೆ ನಯನತಾರಾ, …
Read More »ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆ ಸಂಬಂಧ 12 ಜನರನ್ನು ಬಂಧಿಸಲಾಗಿದೆ
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಮಾಲೀಕರ ಒಕ್ಕೂಟ ಕರೆ ನೀಡಿದ್ದ ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದರೆ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ. ಇಂದು ಬಂದ್ ವೇಳೆ ನಗರದ ಕೆಲವೆಡೆ ಬೈಕ್ ಟಾಕ್ಸಿಗಳ ಮೇಲೆ ಹಾಗೂ ಆಟೊ ಚಾಲಕರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿ, ಅಲ್ಲದೇ ವಾಹನಗಳನ್ನ ಜಖಂಗೊಳಿಸಿದ್ದರು. ಈ …
Read More »ಪ್ರಜ್ವಲ್ ರೇವಣ್ಣ ವಿರುದ್ಧದ ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ವಕೀಲ ಜಿ.ದೇವರಾಜೇಗೌಡ ಹೇಳಿದ್ದಾರೆ.
ಹಾಸನ: ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ ಸಿಗುವವರೆಗೂ ಪಾರ್ಲಿಮೆಂಟ್‌ನಲ್ಲಿ ಪ್ರಜ್ವಲ್ ರೇವಣ್ಣ ಭಾಗವಹಿಸು ಹಾಗಿಲ್ಲ. ನನ್ನಿಂದ ವಿಚ್ಛೇದನ ಪಡೆದ ಮಹಿಳೆಯನ್ನು ಕರೆದುಕೊಂಡು ಹೇಳಿಕೆ ನೀಡಿರುವವರನ್ನು ರಾಜಕೀಯವಾಗಿ ಮುಗಿಸುವವರೆಗೂ ಆ ಬ್ರಹ್ಮ ಬಂದರೂ ನಾನು ಕಾನೂನು ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ವಕೀಲರಾದ ಜಿ. ದೇವರಾಜೇಗೌಡ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನೀಡಿರುವ ತೀರ್ಪುನ್ನು ಅಮಾನತು ಮಾಡುವಂತೆ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದು, ಇದರ ವಿರುದ್ಧ ನಾವು ತಕರಾರು ಸಲ್ಲಿಸಿದ್ದೆವು. ಯಾರೇ ಆಗಲಿ ನ್ಯಾಯಾಲಯವನ್ನು ಗೌರವವಾಗಿ …
Read More »ದೆಹಲಿಯಲ್ಲಿ ಪಟಾಕಿಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟ ನಿಷೇಧ: ಗೋಪಾಲ್ ರೈ
ನವದೆಹಲಿ: ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು. ಇನ್ನು ಮುಂದೆ ಪಟಾಕಿಗಳ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದರು. ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ವಿತರಣೆಗೆ ಯಾರಿಗೂ ಪರವಾನಗಿ ನೀಡದಂತೆ ಗೋಪಾಲ್ ರೈ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದರು. ಜನರಲ್ಲಿನ ಜಾಗೃತಿ ಮತ್ತು ದೆಹಲಿ ಸರ್ಕಾರದ ಕ್ರಮಗಳಿಂದ ದೆಹಲಿಯಲ್ಲಿ ಮಾಲಿನ್ಯವು ನಿರಂತರವಾಗಿ ಕಡಿಮೆಯಾಗುತ್ತಿದೆ. ಆದರೆ, …
Read More »*ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಪುರಸಭೆ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. ಪಟ್ಟಣದ ತಹಶೀಲ್ದಾರ …
Read More »
Laxmi News 24×7