Breaking News

ರಾಜ್ಯ

ರಾಜ್ಯ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುತ್ತಿದೆ: ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆಯನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಸರ್ಕಾರದ ವಿರುದ್ಧ ಸುದ್ದಿ ಮಾಡಿದ್ದಕ್ಕಾಗಿ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

Read More »

ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

ಬೆಂಗಳೂರು : ನಗರದ ಮೆಜೆಸ್ಟಿಕ್ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ರೈಲ್ವೆ ಇಂಜಿನ್​​ನಿಂದ ಹೊರ ಬಂದ ದಟ್ಟ ಹೊಗೆಯನ್ನು ಕಂಡ ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದು, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಬೆಳಗ್ಗೆ 6ಕ್ಕೆ ಬೆಂಗಳೂರು ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ಲಾಟ್ ಫಾರ್ಮ್ 3ರಲ್ಲಿ ನಿಂತಿತ್ತು. 7:10ರ …

Read More »

ಪ್ರತ್ಯೇಕ ಲಿಂಗಾಯತ ಧರ್ಮ‌ ಹೋರಾಟದಿಂದ ನಾನು ಹಿಂದೆ ಸರಿದಿಲ್ಲ: ವಿನಯ್​ ಕುಲಕರ್ಣಿ

ಬೆಳಗಾವಿ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವೇಳೆ ವೀರಶೈವ ಮಹಾಸಭೆಯಲ್ಲಿದ್ದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಅದರಲ್ಲಿನ ಬಹಳಷ್ಟು ಜನ ನಮಗೆ ಬೆಂಬಲ ಕೂಡ ಕೊಟ್ಟಿದ್ದರು. ಈಗ ನಾವೆಲ್ಲಾ ಒಂದಾಗಿ ಮತ್ತೆ ಹೋರಾಟ ಪ್ರಾರಂಭ ಮಾಡೋಣ ಎಂದು ಮಾತನಾಡಿದ್ದೇವೆ ಅಂತಾ ಮಾಜಿ ಸಚಿವ ವಿನಯ್​ ಕುಲಕರ್ಣಿ ಹೇಳಿದರು. ಬೆಳಗಾವಿಯ‌ಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನನ್ನು ಯಾರೂ ಹೈಜಾಕ್ ಮಾಡಿಲ್ಲ, ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಎಂದು ರಾಜ್ಯದ ಮುಖಂಡರನ್ನು ಮೊನ್ನೆ …

Read More »

ದಾವಣಗೆರೆಯಲ್ಲಿ 1920ರ ದಶಕದ ಕ್ಯಾಮೆರಾಗಳ ಪ್ರದರ್ಶನ

ದಾವಣಗೆರೆ: 184ನೇ ವಿಶ್ವ ಛಾಯಾಗ್ರಾಹಕರ ದಿನವನ್ನು (World Photography Day) ಜಿಲ್ಲೆಯ ಫೋಟೊಗ್ರಾಫರ್ಸ್ ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. 1920ರ ಕಾಲದಲ್ಲಿ ಬಳಕೆ ಮಾಡುತ್ತಿದ್ದ ಹಳೇ ಕ್ಯಾಮೆರಾಗಳನ್ನು ಪ್ರದರ್ಶನಕ್ಕಿಟ್ಟಿದ್ದು ಯುವಜನತೆಯನ್ನು ಆಕರ್ಷಿಸಿತು. ಪ್ರಸ್ತುತ ಮೊಬೈಲ್ ಜಮಾನದಲ್ಲಿ ಸುಲಭವಾಗಿ ಫೋಟೊ ತೆಗೆಯಬಹುದು. ಅದರೆ 1920ರ ಕಾಲದಲ್ಲಿ ಒಂದು ಫೋಟೊ ತೆಗೆಯಲು ಫೋಟೊಗ್ರಾಫರ್ಸ್​ ಎಷ್ಟು ಕಷ್ಟಪಡುತ್ತಿದ್ದರು ಎಂಬುದನ್ನು ಈ ಹಳೇ ಕ್ಯಾಮೆರಾಗಳು, ಅದರ ಬಿಡಿಭಾಗಗಳನ್ನು ಪ್ರದರ್ಶನಕ್ಕಿಡುವ ಮೂಲಕ ತೋರಿಸಲಾಯಿತು. ಫೀಲ್ಡ್​ ಕ್ಯಾಮರಾಫೋಟೋಗ್ರಾಫರ್ ಯೂತ್ ವೆಲ್​ಫೇರ್ ಅಸೋಸಿಯೇಷನ್ …

Read More »

ನೇಣಿಗೇರಲು ಸಿದ್ದವಿದ್ದೇನೆ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಕೆ.ಗೋಪಾಲಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ದವಿದ್ದೇನೆ ಎಂದು ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುತ್ತಾರೆ ಎನ್ನುವ ವದಂತಿ ಹರಡಿದೆ. ಹಾಗಾಗಿ ನನಗೆ ನಿನ್ನೆಯಿಂದ ಸ್ವೀಕರಿಸಲು ಸಾಧ್ಯವಾಗದಷ್ಟು ದೂರವಾಣಿ ಕರೆಗಳು ಬರುತ್ತಿದೆ. ಆದರೆ, ನಾನು ಯಾರನ್ನು ಭೇಟಿ ಆಗಿಲ್ಲ. ನಿನ್ನೆ ಸಂಜೆ (ಗುರುವಾರ) …

Read More »

ಬಾಕ್ಸ್​ ಆಫೀಸ್​ನಲ್ಲಿ Gadar 2 vs OMG 2 ಫೈಟ್​: 7ನೇ ದಿನದ ಕಲೆಕ್ಷನ್​ ಎಷ್ಟು?

Gadar 2 vs OMG 2- Collection Day 7: ಬಿಡುಗಡೆಯಾದ ಏಳನೇ ದಿನದಂದು ಗದರ್​ 2 ಮತ್ತು ಓಎಂಜಿ 2 ಸಿನಿಮಾಗಳು ಗಳಿಸಿದೆಷ್ಟು? ಆಗಸ್ಟ್​ 11ರಂದು ಬಿಡುಗಡೆಯಾದ ಬ್ಲಾಕ್​ಬಸ್ಟರ್​ ಸೀಕ್ವೆಲ್​ಗಳು ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿವೆ. ಸೂಪರ್​ಸ್ಟಾರ್​ ಸನ್ನಿ ಡಿಯೋಲ್​ ಅಭಿನಯದ ಗದರ್​ 2 ಮತ್ತು ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ ನಟನೆಯ ಓಎಂಜಿ 2 ಸಿನಿಮಾಗೆ ನಿರೀಕ್ಷೆಗೂ ಮೀರಿದ ರೆಸ್ಪಾನ್ಸ್​ ಸಿಕ್ಕಿದೆ. ವಾರದ ದಿನಗಳಲ್ಲಿಯೂ ಸಿನಿ ಪ್ರೇಮಿಗಳನ್ನು ಥಿಯೇಟರ್​ಗೆ …

Read More »

6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದ ಕಂದಾಯ ಸಚಿವ

ಬೆಂಗಳೂರು: ತಹಶೀಲ್ದಾರ್, ಎಸಿ ಹಾಗೂ ಡಿಸಿ ಮಟ್ಟದ ನ್ಯಾಯಾಲಯಗಳಲ್ಲಿ 6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, “ಕಳೆದ ಐದು ವರ್ಷಗಳಿಂದ ಇತ್ಯರ್ಥವಾಗದ ತಕರಾರು ಪ್ರಕರಣಗಳನ್ನು ಶೀಘ್ರದಲ್ಲೇ ವಿಲೇವಾರಿಗೊಳಿಸಿ ಎಂದು ಅಧಿಕಾರಿಳಿಗೆ …

Read More »

ಕಾಮಗಾರಿ ಬಿಲ್​ ಬಾಕಿ ಪ್ರಕರಣ: 2ನೇ ದಿನವೂ ಮುಂದುವರೆದ ಗುತ್ತಿಗೆದಾರರ ಪೊಲೀಸ್‌ ವಿಚಾರಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಿ ಬಾಕಿ ಉಳಿಸಿಕೊಂಡಿರುವ ಬಿಲ್‌ ಪಾವತಿಸುವಂತೆ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿ ಬೇಸತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಪೊಲೀಸ್ ವಿಚಾರಣೆ ಎರಡನೇ ದಿನವೂ ಮುಂದುವರೆದಿದೆ. 57 ಗುತ್ತಿಗೆದಾರರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನೀಡಿದ್ದರು. ನಿನ್ನೆ ಹಾಜರಾಗಿದ್ದ 16 ಜನ ಗುತ್ತಿಗೆದಾರರನ್ನು ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿ ವಿಚಾರಣೆ ನಡೆಸಿದ್ದರು. “ಇಂದು ಕೆಲವೊಂದಿಷ್ಟು ಗುತ್ತಿಗೆದಾರರು ಹಾಜರಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆ. 28 ತಿಂಗಳಿನಿಂದ …

Read More »

ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣ: ಕೋರ್ಟ್​ಗೆ ಶರಣಾದ ವಿಲ್ಸನ್ ಗಾರ್ಡನ್ ನಾಗ, ಡಬಲ್ ಮೀಟರ್ ಮೋಹನ

ಬೆಂಗಳೂರು : ಜೈಲಿಂದ ಬಿಡುಗಡೆಯಾಗುತ್ತಿದ್ದಂತೆ ಸಿದ್ದಾಪುರ ಮಹೇಶನನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹತ್ಯೆಯ ಹಿಂದಿದ್ದರು ಎನ್ನಲಾಗುತ್ತಿರುವ ಇಬ್ಬರು ಕುಖ್ಯಾತ ರೌಡಿಶೀಟರ್‌ಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿ ಹೊರಬಂದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್ ಮಹೇಶನನ್ನು ಕ್ಷಣಮಾತ್ರದಲ್ಲಿ ಅಟ್ಟಾಡಿಸಿ ಕೊಲೆ‌ ಮಾಡಲಾಗಿತ್ತು. ಭೀಕರ ಕೊಲೆ ಬೆಂಗಳೂರು ಭೂಗತ ಜಗತ್ತಿನ ರಿವೆಂಜ್ ರೌಡಿಸಂ ಅನ್ನು ಅನಾವರಣಗೊಳಿಸಿತ್ತು. ಈಗ ಕೊಲೆಯ ಮಾಸ್ಟರ್ ಮೈಂಡ್​ಗಳು ಎನ್ನಲಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ಡಬಲ್ …

Read More »

ಬೀದಿ ನಾಯಿ ರಕ್ಷಿಸಿದ ಕುಟುಂಬದ ಮೇಲೆ ದ್ವೇಷ: ಬಾಲಕನ ಥಳಿಸಿ ಕೊಂದ ನೆರೆಮನೆ ವ್ಯಕ್ತಿ

ಕುಶಿನಗರ (ಉತ್ತರ ಪ್ರದೇಶ): ಬೀದಿ ನಾಯಿಯ ರಕ್ಷಣೆಗೆ ಯತ್ನಿಸಿದ್ದ ನೆರೆಯ ಕುಟುಂಬದ ಮೇಲಿನ ಕೋಪದಿಂದ ವ್ಯಕ್ತಿಯೋರ್ವ ಆ ಕುಟುಂಬದ 12 ವರ್ಷದ ಬಾಲಕನನ್ನು ಕೊಲೆ ಮಾಡಿ ಶವ ಚರಂಡಿಗೆ ಎಸೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಡೆದಿದೆ.   ಇಲ್ಲಿನ ಮೈನ್​ಪುರ ಗ್ರಾಮದ ನಿವಾಸಿ ಮಧುಕರ್​ ಲಲಿತ್​ ತ್ರಿಪಾಠಿ ಎಂಬವರ ಪುತ್ರಿ ರಮಣ್ ತ್ರಿಪಾಠಿ ಕೊಲೆಯಾದ ಬಾಲಕ ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಶಮ್ಶುದ್ದೀನ್​ ಅಲಿಯಾಸ್​ ಮಾಂಗ್ರೂ ಎಂಬಾತನೇ …

Read More »