ಬೆಳಗಾವಿಯ ಮುಜಾವರ ಗಲ್ಲಿಯಲ್ಲಿ ಬಿಡಾಡಿ ಹಸು ಸತ್ತು ಬಿದ್ದಿರುವ ಬಗ್ಗೆ ಬಿಲೀವ್ ಫೌಂಡೇಶನ್ ಸದಸ್ಯರಿಗೆ ಮಾಹಿತಿ ಸಿಕ್ಕಿದೆ. ಅದರಂತೆ ಬಿಲೀವ್ ಫೌಂಡೇಶನ್ ಸದಸ್ಯರು ಸ್ಥಳಕ್ಕೆ ತೆರಳಿ ಹಸುವನ್ನು ವಶಕ್ಕೆ ಪಡೆದು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದರು. ಸೌರಭ್ ಸಾವಂತ್, ಅತಿಶ ಧಾತೋಂಬೆ, ಅವಧೂತ್ ತುಡ್ವೇಕರ್, ನೀಲೇಶ್ ಹಿರೇಹೊಳ್ಳಿ, ರೋಹಿತ್ ಫಸಲ್ಕರ್ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಸ್ಥಳೀಯ ಕಾರ್ಪೊರೇಟರ್ ಮತ್ತು ಮಹಾನಗರ ಸಭೆಯ ಬೆಂಬಲ ಸಿಕ್ಕಿತು.
Read More »ಹುಂಚೇನಟ್ಟಿ ಗ್ರಾಮದ ಇಂಜಿನಿಯರಿಂಗ್ ಕಾಲೇಜು ಬಳಿ ಯುವಕನನ ಬರ್ಬರ ಹತ್ಯೆ
ಬೆಳಗಾವಿ ಸಮೀಪದ ಹುಂಚೇನಟ್ಟಿ ಗ್ರಾಮದ ಇಂಜಿನಿಯರಿಂಗ್ ಕಾಲೇಜು ಬಳಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ ಇಂಜಿನಿಯರಿಂಗ್ ಕಾಲೇಜು ಹಿಂಭಾಗದ ಆವರಣದಲ್ಲಿ ಕುಡಿದ ಮತ್ತಿನಲ್ಲಿ ಕೆಲ ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ಜಗಳದಲ್ಲಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಪಿರನವಾಡಿ ನಿವಾಸಿ ಅರ್ಬಾಜ್ ರಫೀಕ್ ಮುಲ್ಲಾ (25) ಕೊಲೆಯಾದವರು. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಂಜಾ ಅಥವಾ ಮದ್ಯದ ಅಮಲಿನಿಂದ ಗೊಂದಲ ಉಂಟಾಗಿರಬಹುದು …
Read More »ಬಾಯಿ ಚಪ್ಪರಿಸಿ ಹಾವು ತಿಂದ ಜಿಂಕೆ!, ಹೌಹಾರುವ ವಿಡಿಯೋ ಇಲ್ಲಿದೆ ನೋಡಿ
ನವದೆಹಲಿ: ಜಿಂಕೆ ಮಾಂಸಹಾರಿಯೇ..? ಜಿಂಕೆ ಕೇವಲ ಹುಲ್ಲು ತಿಂದು ಬದುಕುತ್ತದೆ ಅಲ್ಲವೇ? ಆದರೆ ಈ ವಿಡಿಯೋ ನೋಡಿದ್ರೆ ನೀವು ಹೌಹಾರುತ್ತೀರಿ. ಏಕೆಂದರೆ ಇಲ್ಲಿ ಜಿಂಕೆಯೊಂದು ಬಾಯಿ ಚಪ್ಪರಿಸಿ ಹಾವೊಂದನ್ನು ತಿನ್ನುತ್ತಿದೆ. ಹೌದು, ಇದು ಆಶ್ಚರ್ಯವಾದರೂ ನಿಜ. ಜಿಂಕೆ ಹಾವು ತಿನ್ನುತ್ತಿರುವ ವಿಡಿಯೋಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟಿಜನ್‍ಗಳು ಹೌಹಾರಿದ್ದಾರೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಡಾ.ಸಾಮ್ರಾಟ್ ಗೌಡ ತಮ್ಮ ಟ್ವಿಟರ್ ಖಾತೆಯಲ್ಲಿ …
Read More »‘ಅನ್ನಭಾಗ್ಯ’ ಯೋಜನೆ: ಇಂದು ಈ ಜಿಲ್ಲೆಯ ‘ಫಲಾನುಭವಿ’ಗಳ ಖಾತೆಗೆ ಹಣ ಜಮಾ
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿತ್ತು. ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬಾಗಲಕೋಟೆ ಬಳಿಕ, ಇಂದು ಇತರೆ ಜಿಲ್ಲೆಗಳ ಪಡಿತರ ಚೀಟಿದಾರರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಜುಲೈ.10ರಂದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದರು. …
Read More »ಬೆಂಗಳೂರಲ್ಲಿ ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ: ಮೈಮೇಲಿದ್ದ ಚಿನ್ನ, ಫೋನ್ ಪೇಯಿಂದ ಹಣ ಎಗರಿಸಿ ಎಸ್ಕೇಪ್
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವಕರ ಮನೆಗೆ ನುಗ್ಗಿದ ದರೋಡೆಕೋರರು, ಫೋನ್ ಪೇ ಮೂಲಕ 13 ಸಾವಿರ ರೂ. ಹಾಕಿಸಿಕೊಂಡು ಪರಾರಿಯಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡ್ರಗ್ಸ್ ಸೇವಿಸುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿ ಪರಿಶೀಲನೆ ನೆಪದಲ್ಲಿ ಮನೆಯೊಳಗೆ ಬಂದು, ಬಳಿಕ ಹಣ ಮತ್ತು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ವಿದ್ಯಾರಣ್ಯಪುರದ ರಾಮಚಂದ್ರಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನಾಲ್ವರು ಯುವಕರು ವಾಸಿಸುತ್ತಿದ್ದರು. ಈ ಪೈಕಿ ಮೂವರು ಖಾಸಗಿ ಕಂಪನಿಯಲ್ಲಿ …
Read More »ಚಂದ್ರಯಾನ – 3 ಮಿಷನ್ನಲ್ಲಿ ಬೆಳಗಾವಿ ಯುವ ವಿಜ್ಞಾನಿ
ಬೆಳಗಾವಿ: ಇಸ್ರೋದಿಂದ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಈ ಮಹತ್ಕಾರ್ಯದಲ್ಲಿ ಬೆಳಗಾವಿ ಜಿಲ್ಲೆ ಯುವಕನೊಬ್ಬ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ‘ಪ್ರಕಾಶ ಪೆಡ್ನೇಕರ್’ ಎಂಬ ಯುವ ವಿಜ್ಞಾನಿ ಚಂದ್ರಯಾನ- 3 ಮಿಷನ್ನಲ್ಲಿ ಕೆಲಸ ಮಾಡುತ್ತಿರುವವರು. ಚಂದ್ರಯಾನ-2 ರಲ್ಲಿಯೂ ಇವರು ಕೆಲಸ ಮಾಡಿದ್ದರು. ಶುಭ ಹಾರೈಸಿದ ಸ್ವಾಮೀಜಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಚಂದ್ರಯಾನ – 3 ಉಡಾವಣೆ ಬಗ್ಗೆ ಮಾತನಾಡಿರುವ ಬೆಳಗಾವಿಯ ನಾಗನೂರು ರುದ್ರಾಕ್ಷಿ …
Read More »ನಾಡ ಅಧಿದೇವತೆಗೆ ವಿಶೇಷ ನಾಗಲಕ್ಷ್ಮೀ ಅಲಂಕಾರ
ಮೈಸೂರು: ಇಂದು ಕೊನೆಯ ಆಷಾಢ ಶುಕ್ರವಾರದ ಸಂಭ್ರಮ. ನಾಡ ಅಧಿದೇವತೆಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಇದರ ಜೊತೆಗೆ ದೇವಾಲಯದ ಒಳಭಾಗದಲ್ಲಿ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರು ಬೆಳಗ್ಗೆಯಿಂದಲೇ ತಾಯಿಯ ದರ್ಶನ ಪಡೆಯುತ್ತಿದ್ದು, ರಾತ್ರಿಯವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಅನುಕೂಲಕ್ಕಾಗಿ ಸರತಿ ಸಾಲಿನ ವ್ಯವಸ್ಥೆ ಹಾಗೂ ಬಿಗಿಯಾದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿದೆ. ಗರ್ಭಗುಡಿಯ ಒಳಗಿರುವ ಮೂಲ ಚಾಮುಂಡೇಶ್ವರಿ ಮೂರ್ತಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಉತ್ಸವ …
Read More »“ಚಂದ್ರಯಾನ 3 ರಾಷ್ಟ್ರದ ಭರವಸೆ, ಕನಸುಗಳನ್ನು ಹೊತ್ತೊಯ್ಯಲಿದೆ”:
ನವದೆಹಲಿ: ಕೋಟ್ಯಾಂತರ ಕಂಗಳು ಎದುರು ನೋಡುತ್ತಿರುವ ಚಂದ್ರಯಾನ 3 ಉಡಾವಣೆಗೆ ಇನ್ನೇನು ಕೆಲವೇ ಕ್ಷಣಗಳಿರುವಾಗ ಪ್ರಧಾನಿ ಮೋದಿ ಅವರು ಯೋಜನೆಯ ಹಿಂದಿರುವ ಎಲ್ಲಾ ಭಾರತದ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ. ಎರಡು ದಿನಗಳ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ”ಈ ಚಂದ್ರಯಾನ 3 ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯಲಿದೆ” ಎಂದು ಬಣ್ಣಿಸಿದ್ದಾರೆ. ‘ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023 ಜುಲೈ 14 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಡುತ್ತದೆ. ನಮ್ಮ …
Read More »ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ
ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ರಾಯಚೂರು ತಾಲೂಕಿನ ನಡೆದಿದೆ. ಬೇವಿನ ಗಿಡಕ್ಕೆ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದ ಇಡಪನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ರಾಯಚೂರಿನ ರಿಮ್ಸ್‌ನ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಬಾಲಕಿಯ ಪೊಷಕರು, ”ನಾವು ವ್ಯಾಪಾರಕ್ಕೆ …
Read More »ನಟ ಮಾಸ್ಟರ್ ಆನಂದ್ ಪುತ್ರಿ ಹೆಸರಿನಲ್ಲಿ ಹಣ ದುರ್ಬಳಕೆ ಆರೋಪ: ಪತ್ನಿಯಿಂದ ಪ್ರಕರಣ ದಾಖಲು
ಬೆಂಗಳೂರು : ನಟ ಹಾಗೂ ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರು ಬಳಸಿ ನಟನೆ ಮಕ್ಕಳ ಪೋಟೋಶೂಟ್ ಮಾಡಿಸಲು ಪೋಷಕರಿಂದ ಹಣ ಪಡೆದು ಮಹಿಳೆಯೊಬ್ಬರು ಮೋಸ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ಕುರಿತು ಆನಂದ್ ಪತ್ನಿ ಯಶಸ್ವಿನಿ ಆನಂದ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿಶಾ ನರಸಪ್ಪ ಎಂಬುವರ ವಿರುದ್ಧ ದೂರು ನೀಡಲಾಗಿದೆ. ಆಯಡ್ ಶೂಟ್, ಕಾರ್ಯಕ್ರಮಗಳು, ಮಕ್ಕಳ ಟ್ಯಾಲೆಂಟ್ ಶೋ, ಖಾಸಗಿ ಚಾನಲ್ನಲ್ಲಿ ಟ್ಯಾಲೆಂಟ್ ಶೋ …
Read More »
Laxmi News 24×7