ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಗಣನೀಯವಾಗಿ ಇಳಿಯುತ್ತಿರುವುದು ದೊಡ್ಡ ಸಮಸ್ಯೆ. ಇದರ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಡಾ. ವೈ.ಎ.ನಾರಾಯಣ ಸ್ವಾಮಿ ನಿಯಮ 72ರ ಅಡಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಯನ್ನು ಕಾಲಕಾಲಕ್ಕೆ ಭರ್ತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಫಲಿತಾಂಶ ಹೆಚ್ಚಳಕ್ಕೆ 2020ರ ನಂತರದ ಖಾಲಿ …
Read More »ಪಾಲಿಕೆ ಮುಖ್ಯ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ಗಳ ಪರಿಶೀಲನೆ
ಬೆಂಗಳೂರು : ನಗರದ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಅವರು, ಬಾಕಿ ಇರುವ ದುರಸ್ತಿ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೊದಲು ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್ಗೆ ಭೇಟಿ …
Read More »ರಸ್ತೆ ಇಲ್ಲ, ಜೋಳಿಗೆಯಲ್ಲಿ ವೃದ್ಧೆಯನ್ನು ಹೊತ್ತು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು
ಚಿಕ್ಕಮಗಳೂರು : ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆಯುತ್ತಿವೆ. ಹೀಗಿದ್ದರೂ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಶುದ್ಧ ಕುಡಿಯುವ ನೀರು, ಸರಿಯಾದ ರಸ್ತೆ ಸೇರಿದಂತೆ ಇನ್ನೂ ಅನೇಕ ಅಗತ್ಯ ಕನಿಷ್ಟ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಇದಕ್ಕೆ ಹೊಸದೊಂದು ನಿದರ್ಶನ ಸಿಕ್ಕಿದೆ. ಚಿಕ್ಕಮಗಳೂರಿನ ಅರಣ್ಯ, ಪರ್ವತ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸರಿಯಾದ ರಸ್ತೆಗಳಿಲ್ಲ. ಔಷಧೋಪಚಾರಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಬೀದಿ ದೀಪಗಳಿಲ್ಲದೆ ಜನರು ಶೋಚನೀಯ ಜೀವನ ನಡೆಸುತ್ತಿದ್ದಾರೆ. ವಾಹನಗಳು ಓಡಾಡುವ ರಸ್ತೆಗಳಿಲ್ಲದ …
Read More »ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ವಿಚಾರದ ಹಿನ್ನೆಲೆ ಮೌನ ಪ್ರತಿಭಟನೆಗೆ ಅಖಿಲ ಭಾರತೀಯ ಕಾಂಗ್ರೆಸ್ ಕರೆ ನೀಡಿತ್ತು. ಇಂದು ಬುಧವಾರ ಬೆಳಗಾವಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಜಿಲ್ಲೆಯ ಕೈ ಕಾರ್ಯಕರ್ತರು ಧರಣಿ ನಡೆಸಿದರು. ಈ ವೇಳೆ ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಸಾಥ್ ನೀಡಿದರು. ರಾಹುಲ್ ಗಾಂಧಿಯವರ ಸತ್ಯದ ನಡಿಗೆಯಲ್ಲಿ ನಮ್ಮ ಹೆಜ್ಜೆ, ಸರ್ವಾಧಿಕಾರಿ ಧೋರಣೆಯ ಮೋದಿಯವರಿಗೆ ಧಿಕ್ಕಾರ, ನಮ್ಮ ಹೆಜ್ಜೆ ಜನತಾ ನ್ಯಾಯಾಲಯದತ್ತ …
Read More »ಸಂಬಳ ಬೇಕು, ಪಾಠ ಮಾತ್ರ ಮಾಡಲ್ಲ’
ಶಿಕ್ಷಕರು ಮಕ್ಕಳಿಗೆ ದೇವರ ಸಮಾನ. ತಾಯಿ ನಂತರ ಮಕ್ಕಳಿಗೆ ಶಿಕ್ಷಕರೇ ಎಲ್ಲವೂ ಎಂದರೆ ತಪ್ಪಾಗಲಾರದು. ಇಂಥಾ ಗುರುಗಳು ಯಾವಾಗಲೂ ಮಕ್ಕಳಿಗೆ ಪಾಠ ಮಾಡುವ ಕೆಲಸ ಮಾಡಬೇಕು. ಅದರಲ್ಲೂ ಮಕ್ಕಳಿಗಾಗಿಯೇ ಶಾಲೆ ಇರುವುದು. ಮಕ್ಕಳಿಗೆ ಪಾಠ ಮಾಡಲು ಎಂದೇ ಶಿಕ್ಷಕರ ನೇಮಕ ಮಾಡಿ ಸಂಬಳ ನೀಡುವುದು. ಇಲ್ಲೋರ್ವ ಕಿಡಿಗೇಡಿ ಶಿಕ್ಷಕನೋರ್ವ ಸಂಬಳ ತೆಗೆದುಕೊಂಡು ಸರಿಯಾಗಿ ಪಾಠ ಮಾಡದ ಘಟನೆ ಸಂಭವಿಸಿದೆ. ಅಲ್ಲದೇ ಈ ವಿಷಯ ಯಾರಿಗೂ ಗೊತ್ತಾಗಬಾರದು ಎಂದು ತನ್ನ ಬದಲಿಗೆ …
Read More »ಜೈನಮುನಿಹತ್ಯೆ ಮಾಡಿದ ಆರೋಪಿಗಳಿಗೆ ವರ್ಷದೊಳಗೆ ಮರಣ ದಂಡನೆ ವಿಧಿಸಬೇಕು:ಅಬ್ದುಲ್ ಅಜೀಮ್
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ಆಗಬೇಕು. ಹತ್ಯೆ ಮಾಡಿದವರ ಜತೆಗೆ ಹತ್ಯೆಗೆ ಪ್ರಚೋದನೆ, ಸಾಧನ, ಸಲಕರಣೆ ಒದಗಿಸಿದವರನ್ನೂ ಶಿಕ್ಷೆಗೆ ಒಳಪಡಿಸಬೇಕು. ಅಪರಾಧಿಗಳಿಗೆ ಅತ್ಯಂತ ಕಠಿಣ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ …
Read More »ಬೆಂಗಳೂರಿನಲ್ಲಿ ಸಿಇಒ, ಎಂಡಿ ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೆಂಗಳೂರು : ಖಾಸಗಿ ಕಂಪನಿಗೆ ನುಗ್ಗಿ ಎಂ.ಡಿ ಹಾಗೂ ಸಿಇಒ ಇಬ್ಬರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡ ಪೊಲೀಸರ ತಂಡ ಆರೋಪಿಗಳಾದ ಫೆಲಿಕ್ಸ್, ವಿನಯ್ ರೆಡ್ಡಿ ಹಾಗೂ ಶಿವು ಎಂಬವರನ್ನು ಕುಣಿಗಲ್ ಸಮೀಪ ಬಂಧಿಸಿದೆ. ಪ್ರಕರಣದ ವಿವರ: ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಫೆಲಿಕ್ಸ್ನನ್ನು ಸದಾ ನಿಂದಿಸುತ್ತಿದ್ದ ಫಣೀಂದ್ರ ಇತ್ತೀಚೆಗೆ ಆತನನ್ನು ಕೆಲಸದಿಂದಲೂ ತೆಗೆದು ಹಾಕಿದ್ದರು. ಅದೇ ದ್ವೇಷಕ್ಕೆ ಫೆಲಿಕ್ಸ್, …
Read More »ರಾಜ್ಯ ಸರ್ಕಾರದ ಹಣಕಾಸು ವ್ಯವಹಾರಗಳಲ್ಲಿ ಲೋಪದೋಷ? (ಸಿಎಜಿ) ವರದಿ
ಬೆಂಗಳೂರು: 2021-22ರ ಅಂತ್ಯಕ್ಕೆ 37.37 ಕೋಟಿ ರೂಪಾಯಿ ಮೊತ್ತದ ಹಣ ದುರುಪಯೋಗ, ನಷ್ಟ ಸಂಭವಿಸಿದ್ದು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ತಿಳಿಸಿದೆ. ಮಂಗಳವಾರ ವಿಧಾನಮಂಡಲದ ಉಭಯಸದನದಲ್ಲಿ ಮಾರ್ಚ್ 2022ಕ್ಕೆ ಕೊನೆಗೊಂಡ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಲಾಯಿತು. ವರದಿಯಲ್ಲಿ ಹಣಕಾಸುಗಳ ವ್ಯವಹಾರದ ವಿಶ್ಲೇಷಣಾತ್ಮಕ ವಿಮರ್ಶೆ ಮಾಡಲಾಗಿದ್ದು, ಐದು ಆಧ್ಯಾಯಗಳಲ್ಲಿ ರಚಿಸಲಾಗಿದೆ. ಅವಲೋಕನ, ರಾಜ್ಯದ ಹಣಕಾಸು ವ್ಯವಹಾರಗಳು, ಆಯವ್ಯಯ ನಿರ್ವಹಣೆ, ಲೆಕ್ಕಗಳ ಗುಣಮಟ್ಟ …
Read More »ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ಟಿ.ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಟಿ.ನರಸೀಪುರ ಹೊರವಲಯದಲ್ಲಿ ಯುವ ಬ್ರಿಗೇಡ್ನ ಸಕ್ರಿಯ ಸದಸ್ಯ ವೇಣುಗೋಪಾಲ್ ನಾಯಕ್ ಎಂಬುವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಆರೋಪಿಗಳ ಬಂಧನಕ್ಕೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಈ ತಂಡ ಸೋಮವಾರ ಬೆಳಗ್ಗೆ ಪ್ರಮುಖ ಆರೋಪಿಗಳಾದ ಮಣಿಕಂಠ ಹಾಗೂ ಸಂದೇಶ್ …
Read More »ಜೈನ ಮುನಿ ಕೊಲೆ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ:C.M.
ಬೆಂಗಳೂರು: ಜೈನ ಮುನಿ ಕೊಲೆ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ. ನಮ್ಮ ರಾಜ್ಯದ ಪೊಲೀಸರ ಕೈಯಿಂದಲೇ ಗಂಭೀರವಾಗಿ ತನಿಖೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಶೂನ್ಯ ವೇಳೆಯಲ್ಲಿ ಜೈನ ಮುನಿ ಕೊಲೆ ಹಾಗೂ ಟಿ ನರಸೀಪುರ ಯುವ ಬ್ರಿಗೇಡ್ ಕಾರ್ಯಕರ್ತ ಕೊಲೆ ಪ್ರಕರಣ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಜೈನ ಮುನಿ ಕೊಲೆ ಅಮಾನುಷವಾದದ್ದು. ಯಾರೇ ಕೊಲೆ ಮಾಡಿದರೂ ಶಿಕ್ಷೆ ಆಗಬೇಕು. …
Read More »
Laxmi News 24×7