ಬೆಂಗಳೂರು: ಕೆಲ ದಿನಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದೆ. ಇದೇ ಸಮಯವನ್ನು ಕಾದು ಕುಳಿತಿರುವ ಕೆಲ ಖದೀಮರು ಟೊಮೆಟೊ ಕದಿಯುತ್ತಿದ್ದಾರೆ. ಗಾಡಿ ಟಚ್ ಆಗಿದೆ ಎಂದು ಸುಳ್ಳು ಹೇಳಿದ ಮೂವರು ಆರೋಪಿಗಳು ಟೊಮೆಟೊ ತುಂಬಿದ್ದ ಬೊಲೆರೊ ವಾಹನವನ್ನು ಹೈಜಾಕ್ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಈ ಸಂಬಂಧ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
Read More »ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿಹೆಲಿಕ್ಯಾಪ್ಟರ್ ಮೂಲಕ ಶ್ರೀನಗರ ತಲುಪಿದ ಧಾರವಾಡದ ಯಾತ್ರಿಗಳು!
ಧಾರವಾಡ : ನಿರಂತರ ಮಳೆಯಾಗುತ್ತಿರುವ ಪರಿಣಾಮ ಜಮ್ಮು ಕಾಶ್ಮೀರದ ಅಮರನಾಥ ಮಾರ್ಗ ಮಧ್ಯೆ ಗುಡ್ಡಕುಸಿತ ಉಂಟಾಗಿ ಅಮರನಾಥದಲ್ಲಿ ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿ ಶ್ರೀನಗರ ತಲುಪಿದ್ದಾರೆ. ಪಂಚತಾರಣಿ ಬಳಿ ಸಿಲುಕಿದ್ದ ಐವರು ಧಾರವಾಡ ಯಾತ್ರಿಗಳು ಸುರಕ್ಷಿತವಾಗಿ ಶ್ರೀನಗರ ತಲುಪಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಟೆಂಟ್‌ನಲ್ಲಿ ವಾಸವಾಗಿದ್ದ ಯಾತ್ರಿಗಳು ಸರ್ಕಾರದಿಂದ ಯಾವುದೇ ಸಹಾಯ ಸಿಗದ ಹಿನ್ನೆಲೆ ಹೆಲಿಕ್ಯಾಪ್ಟರ್ ಮೂಲಕ ಶ್ರೀನಗರಕ್ಕೆ ಪ್ರಯಾಣಿಸಿದ್ದಾರೆ. ಪ್ರತಿಯೊಬ್ಬರಿಗೆ 4200ರೂ. ನೀಡಿ ಹೆಲಿಕ್ಯಾಪ್ಟರ್ನಲ್ಲಿ ಪ್ರಯಾಣಿಸಿ ಸದ್ಯ ಐವರು …
Read More »ಜೈನ ಮುನಿಗಳ ಹತ್ಯೆ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಪಟ್ಟು
ಬೆಂಗಳೂರು: ಜೈನ ಮುನಿಗಳ ಹತ್ಯೆ ಕೃತ್ಯವನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಉತ್ತಮ ಅಧಿಕಾರಿಗಳ ತಂಡವನ್ನು ತನಿಖೆಗೆ ಒದಗಿಸಲಿದ್ದೇವೆ. ಘಟನೆಯಲ್ಲಿ ಭಾಗಿಯಾದ ಯಾರೂ ನಮ್ಮ ಸರ್ಕಾರದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡಿ, ನಿಮ್ಮ ಅವಧಿಯ ಪೊಲೀಸರೇ ಈಗಲೂ ಇದ್ದಾರೆ. ನಂಬಿಕೆ ಇಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜೈನ ಮುನಿಗಳ ಹತ್ಯೆ ವಿಷಯದ ಚರ್ಚೆಗೆ …
Read More »ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ
ಪಣಜಿ(ಗೋವಾ): ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ (ಪ್ರವಾಹ್) ರಚನೆಯಾದ ನಂತರ ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ. “ಮಹದಾಯಿ ವಿಷಯವಾಗಿ ಗೋವಾದ ಕಾನೂನು ತಂಡವು ದೆಹಲಿಯಲ್ಲಿದೆ. ನಾವು ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸುತ್ತೇವೆ ಎಂಬುದು ನನಗೆ ಖಾತ್ರಿಯಿದೆ. ಸರ್ವೋಚ್ಛ ನ್ಯಾಯಾಲಯದ ಮೇಲೆ ಸಂಪೂರ್ಣ ನಂಬಿಕೆ ನನಗೆ ಇದೆ. ಕರ್ನಾಟಕ ಏನೇ …
Read More »ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆ
ಬೆಂಗಳೂರು: ಇತ್ತೀಚೆಗೆ ವ್ಯಕ್ತಿಯೊಬ್ಬರು ಅಕ್ರಮವಾಗಿ ಸದನ ಪ್ರವೇಶಿಸಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ಘಟನೆ ವಿಧಾನಸೌಧದ ಆವರಣದಲ್ಲಿ ನಡೆದಿದೆ. ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿದೆ. ತಿಪ್ಪೇರುದ್ರಪ್ಪ ಎಂಬುವರು ಸದನದೊಳಗೆ ಅಕ್ರಮವಾಗಿ ಪ್ರವೇಶಿಸಿ ಭದ್ರತಾ ಲೋಪವಾದ ಹಿನ್ನೆಲೆಯಲ್ಲಿ ಇದೀಗ ವಿಧಾನಸೌಧದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧಕ್ಕೆ ಬರುವ ಎಲ್ಲರನ್ನೂ ತೀವ್ರವಾಗಿ ತಪಾಸಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿದೆ. …
Read More »ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದ ಗೃಹ ಸಚಿವ ಜಿ.ಪರಮೇಶ್ವರ
ಚಿಕ್ಕೋಡಿಯ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ರಾಜ ಮಹಾರಾಜರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಜೈನ್ ಮುನಿಗಳಿಗೆ, ಜೈನ್ ಬಸದಿಗಳಿಗೆ ಸರ್ಕಾರ ರಕ್ಷಣೆ ನೀಡುವಂತೆ ಆಗ್ರಹಿಸಿ ಸಲ್ಲೇಖನ ವ್ರತ ಕೈಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರು ನವಗ್ರಹ ಕ್ಷೇತ್ರಕ್ಕೆ ಭೇಟಿ ಕೊಟ್ಟು ಜೈನ್ ಮುನಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. …
Read More »ನಮಗೆ ಭದ್ರತೆ ಒದಗಿಸುವವರೆಗೂ ನಿರಂತರವಾಗಿ ಅಮರಣಾಂತ ಉಪವಾಸ ಶತಸಿದ್ಧ ಎಂದ ಸ್ವಾಮೀಜಿ
ಹುಬ್ಬಳ್ಳಿ : ನಮ್ಮ ಭಾರತ ದೇಶದಲ್ಲಿ ಆತಂಕವಾದಿಗೆ ಯಾವ ಶಿಕ್ಷೆಯಾಗುವುದಿಲ್ಲವೋ ಅಂತಹ ಶಿಕ್ಷೆ ಜೈನ ಮುನಿಗೆ ನೀಡಲಾಗಿದೆ. ಕಾಮಕುಮಾರ ನಂದಿ ಮಹಾರಾಜ ಅವರನ್ನು ಈ ರೀತಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಹುಬ್ಬಳ್ಳಿಯ ವರೂರಿನಲ್ಲಿ ಜೈನ ಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಹೇಳಿದ್ದಾರೆ. ವರೂರಿನಲ್ಲಿ ಮಾತನಾಡಿದ ಅವರು, ಇಂತಹ ಕ್ರೂರವಾದ ಘಟನೆಯಾದರೂ ಸಹ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸ್ಪಂದನೆ ಮಾಡಿರಲಿಲ್ಲ. ಮಾಧ್ಯಮಗಳ ಸಹಾಯದಿಂದ ಈ …
Read More »ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ:
ಬೆಳಗಾವಿ: ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಮಾವನೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾವನೂರು ಗ್ರಾಮದ ಗಜೇಂದ್ರ ಈರಪ್ಪ ಹುನ್ನೂರಿ(60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ(45) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಕೊಲೆ ಶುಕ್ರವಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಅಕ್ಕಪಕ್ಕದವರು ಭಾನುವಾರ ಬೆಳಗ್ಗೆ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ …
Read More »ಎಂಪಿ ಎಲೆಕ್ಷನ್ವರೆಗೂ ಕಾದು ನೋಡೋಣ.. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಈ ಬಜೆಟ್ ಪ್ರಣಾಳಿಕೆ ಬಜೆಟ್ ಎಂದು ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಅವರದ್ದು ಹಿಂದಿನ ಬಜೆಟ್ ಹಾಗೇ ಆಗಿದ್ದರೆ, ನಮ್ಮದು ಹಾಗೇ ಅಂದುಕೊಳ್ಳಲಿ ಎಂದಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ವಿಕ್ಷಪದವರಿಂದ ಟೀಕೆ ಸ್ವಾಭಾವಿಕ. ಆದರೆ, ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದರು. ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು …
Read More »ಜುಲೈ ಅಂತ್ಯದೊಳಗೆ ಮಳೆಯಾಗುವ ಮುನ್ಸೂಚನೆ: ಕೃಷ್ಣ ಬೈರೇಗೌಡ
ಕಾರವಾರ: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ. ಜುಲೈ ಅಂತ್ಯದೊಳಗೆ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮಾತನಾಡಿದ ಅವರು, ಕಾರವಾರ, ಬೆಳಗಾವಿ ಭಾಗದಲ್ಲಿ ಮಳೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗಿಲ್ಲ. …
Read More »
Laxmi News 24×7