Breaking News

ರಾಜ್ಯ

ಬಿಪಿಎಲ್ ಕಾರ್ಡುದಾರರಿಗೆ ಈ ತಿಂಗಳು ಹಣ ಸಿಗೋದಿಲ್ಲ: ಸಚಿವ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಪ್ರತಿ ಯೂನಿಟ್​ಗೆ 170 ರೂಪಾಯಿ ಸರ್ಕಾರ ವರ್ಗಾವಣೆ ಮಾಡುತ್ತದೆ ಎಂದು ಘೋಷಣೆ ಮಾಡಲಾಗಿದೆ. ಆದರೆ, ಈ ತಿಂಗಳು ಯಾರಿಗೂ ಹಣ ಸಿಗೋದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಬೆಳಗಾವಿ ಜಿಲ್ಲಾಡಳಿತ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ …

Read More »

ಬಜೆಟ್ ಅಧಿವೇಶನ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ

ಬೆಂಗಳೂರು: ಬಜೆಟ್ ಅಧಿವೇಶನ ನಡೆಯುವ ಹಿನ್ನೆೆಲೆಯಲ್ಲಿ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಜು.3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅನುಮತಿ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ನಿಷೇಧಾಜ್ಞೆ ಜಾರಿಯಿರುವ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ …

Read More »

ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ,ಉಪ್ಪಿಟು ಸೇವಿಸಿ 70 ಮಕ್ಕಳು ಅಸ್ವಸ್ಥರಾದ

ರಾಯಚೂರು: ಜಿಲ್ಲೆಯ ಅಪ್ಪನದೊಡ್ಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಉಪ್ಪಿಟು ಸೇವಿಸಿ 70 ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಮಕ್ಕಳಿಗೆ ನೀಡಲು ತಯಾರಾದ ಬಿಸಿಯೂಟದ ಉಪ್ಪಿಟ್ಟಿಗೆ ಹಲ್ಲಿಯೊಂದು ಬಿದ್ದಿದ್ದು, ಮಕ್ಕಳು ಈ ಉಪ್ಪಿಟ್ಟನ್ನು ಸೇವಿಸಿ ಅಸ್ವಸ್ಥರಾಗಿದ್ದಾರೆ. ಈ ಘಟನೆಗೆ ಅಡುಗೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಇನ್ನು ಘಟನೆ ತಿಳಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕಾಗಮಿಸಿದ್ದಾರೆ. ಅಸ್ವಸ್ಥಗೊಂಡ ಮಕ್ಕಳಿಗೆ ಶಾಲೆ ಬಳಿಯೇ ಆರೋಗ್ಯ ತಪಾಸಣೆ ಮಾಡಿಸಿ 30 ಮಕ್ಕಳನ್ನು ಯಪಲದಿನ್ನಿ …

Read More »

ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ!

ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ! ಗೋಕಾಕ : ಜರ್ಮನಿ ದೇಶದ ಜರ್ಮನ್ ಸ್ಪೋರ್ಟ್ ಕಲೋನ್ ವತಿಯಿಂದ ಆಯೋಜಿಸಿರುವ 8 ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಮಂಜುಳಾ ಗೊರಗುದ್ದಿ ಆಯ್ಕೆಯಾಗಿದ್ದು ಅವರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ನೀಡಿದ್ದಾರೆ. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯುವ ನಾಯಕ ರಾಹುಲ್ …

Read More »

ಗೃಹಜ್ಯೋತಿ ಯೋಜನೆ ಆರಂಭ ಘೋಷಿಸಿದ ಸಿಎಂ: ಮಹಾರಾಷ್ಟ್ರ ದುರಂತಕ್ಕೆ ತೀವ್ರ ಆತಂಕ

ಬೆಂಗಳೂರು: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ವಿದ್ಯುತ್​ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮದದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯ ಬಿಲ್​ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣವನ್ನು ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ವಿರೋಧ …

Read More »

ಬಿಎಸ್​ವೈ ಭೇಟಿಯಾದ ರೇಣುಕಾಚಾರ್ಯ; ಟೀಕಾಪ್ರಹಾರ ಮುಂದುವರಿಸಿದ ಮಾಜಿ ಶಾಸಕ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕವೂ ಬಿಜೆಪಿ ನಾಯಕರ ವಿರುದ್ದ ತಮ್ಮ ಟೀಕಾಪ್ರಹಾರ ಮುಂದುರಿಸಿರುವ ಎಂ.ಪಿ. ರೇಣುಕಾಚಾರ್ಯ, ಯಡಿಯೂರಪ್ಪರನ್ನು ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಇಳಿಸಿದರು ಎಂದು ವಾಗ್ದಾಳಿ ನಡೆಸಿದರು.   ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಮಾತನಾಡಿದ ಅವರು, ಬಿಎಸ್ ವೈ ಪಾದಯಾತ್ರೆ ಪ್ರತಿಫಲವಾಗಿ ಬಿಜೆಪಿ ಈ ಮಟ್ಟಕ್ಕೆ ಬೆಳೆದಿದೆ. ಅವರು ಬಿಜೆಪಿಯ ಅಗ್ರಮಾನ್ಯ ನಾಯಕ. ಅಂತಹವರನ್ನು ಷಡ್ಯಂತ್ರ ಮಾಡಿ ಎರಡು ಬಾರಿ ಇಳಿಸಿದ್ರು. ಕಾಂಗ್ರೆಸ್ – …

Read More »

ಪ್ರತಿ ತಿಂಗಳು ಕಂದಾಯ ಪ್ರಗತಿ ಪರಿಶೀಲನೆ, ಜನಪರ ಯೋಜನೆಗಳಿಗೆ ಆದ್ಯತೆ: ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ: ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದಕ್ಕೆ ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆ ಹಾಗೂ ಚುರುಕಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಇಂದು ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಂದಾಯ ಇಲಾಖೆಯ …

Read More »

ಚಲಿಸುತ್ತಿದ್ದ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. 25 ಜನ ಸಜೀವ ದಹನ

ಮಹಾರಾಷ್ಟ್ರ: ಬುಲ್ಧಾನದಲ್ಲಿ ಪ್ರಯಾಣಿಕರ ಬಸ್‌ನ ಭೀಕರ ಅಪಘಾತ (Horrible Road Accident) ಸಂಭವಿಸಿದೆ. ಅಪಘಾತದಲ್ಲಿ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ …

Read More »

ಅಸಭ್ಯವಾಗಿ ವರ್ತಿಸಿದ ಮೂವರು ಮಂಗಳಮುಖಿಯರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ರಾಜಧಾನಿಯಲ್ಲಿ ಮಂಗಳಮುಖಿಯರ ಆಟಾಟೋಪ ಹೆಚ್ಚಾಗುತ್ತಿದೆ. ಕನಸಿನ ಮ‌ನೆ ಕಟ್ಟಿ ಗೃಹ ಪ್ರವೇಶ ಮಾಡುವಾಗಲೇ ಪ್ರವೇಶಿಸಿದ್ದ ಮೂವರು ಮಂಗಳಮುಖಿಯರು ಹೆಚ್ಚು ಹಣ ನೀಡುವಂತೆ‌ ಪೀಡಿಸಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಮೂವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕನಸಿನ ಮ‌ನೆ ಕಟ್ಟಿ ಗೃಹ ಪ್ರವೇಶ ಮಾಡುವಾಗಲೇ ಪ್ರವೇಶಿಸಿದ್ದ ಮೂವರು ಮಂಗಳಮುಖಿಯರು ಹೆಚ್ಚು ಹಣ ನೀಡುವಂತೆ‌ ಪೀಡಿಸಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಮೂವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೃತಿಕಾ, …

Read More »

ಚುನಾವಣೆಯ ಫಲಿತಾಂಶ ಬಂದು 47 ದಿನಗಳಾದರೂ ವಿರೋಧ‌ ಪಕ್ಷದ ನಾಯಕ ನೇಮಕ ಮಾಡಲು ಬಿಜೆಪಿಯವರಿಗೆ ಆಗಿಲ್ಲ: ಕೃಷ್ಣ ಭೈರೇಗೌಡ

ಬೆಳಗಾವಿ: ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದು 47 ದಿನಗಳಾದರೂ ವಿರೋಧ‌ ಪಕ್ಷದ ನಾಯಕನನ್ನು ನೇಮಕ ಮಾಡಲು ಬಿಜೆಪಿಯವರಿಗೆ ಆಗಿಲ್ಲ ಎಂದರೆ, ಇದಕ್ಕಿಂತ ರಾಜಕೀಯ ನಾಯಕತ್ವದ ವೈಫಲ್ಯ ಇನ್ಯಾವುದಾದರೂ ಕರ್ನಾಟಕದಲ್ಲಿ ಇದೆಯೇ? ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಟೀಕಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಕಂದಾಯ ಇಲಾಖೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಬೀದಿಗಿಳಿದು, ಒಬ್ಬರಿಗೊಬ್ಬರು ಕೆಸರೆರಚಾಟ ಮಾಡಿಕೊಳ್ಳುತ್ತಿದ್ದಾರೆ. ಅವರು ಆಡುತ್ತಿರುವ ಮಾತುಗಳನ್ನು …

Read More »