Breaking News

ರಾಜ್ಯ

ಕಾಂಗ್ರೆಸ್ ಪಕ್ಷದವರು ಕೋಳಕು ಬುದ್ದಿಯವರು ಇದ್ದಾರೆ ಎಂದ ಹುಕ್ಕೇರಿ ಶಾಸಕ ನಿಖಿಲ್ ಕತ್ತಿ

ಕಾಂಗ್ರೆಸ್ ಪಕ್ಷದವರು ಕೋಳಕು ಬುದ್ದಿಯವರು ಇದ್ದಾರೆ ಎಂದು ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಹೇಳಿದರು.ಅವರು ಇಂದು ಹುಕ್ಕೇರಿ ನಗರದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಪಕ್ಷದವರು ಗೋಹತ್ಯೆ ಕಾಯ್ದೆಯನ್ನು ಹಿಂಪಡೆಯುವ ಬಗ್ಗೆ ವಿಚಾರ ಮಾಡುತ್ತಿರುವದು ಹಾಸ್ಯಾಸ್ಪದವಾಗಿದೆ, ಇತ್ತೀಚೆಗೆ ವಿಧಾನಸೌಧದ ಸುತ್ತಲು ಗೋಮೂತ್ರ ಸಿಂಪಡಿಸುವ ಮೂಲಕ ಶುಧ್ಧಿಕರಣ ಮಾಡಿದ್ದಾರೆ ಈಗ ಅದೆ ಗೋವನ್ನು ಹತ್ಯೆ ಮಾಡಲು ಹೋರಟಿರುವ ಕಾಂಗ್ರೆಸ್ …

Read More »

ರಾತೋರಾತ್ರಿ ಮಚ್ಚೆ ಪಟ್ಟಣ ಪಂಚಾಯತ್ ಮುಂದೆ ಸಂಗೊಳ್ಳಿ ರಾಯಣ್ಣ ಪ್ರತಿಮೆ

ಮಚ್ಚೆ ಪಟ್ಟಣ ಪಂಚಾಯತ್ ಮುಂದೆ ರಾತೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಪ್ರತಿಷ್ಠಾಪನೆ ಮಾಡಲಾಗಿದೆ.ಬೆಳಗಾವಿ ಜಿಲ್ಲೆ ಮಚ್ಚೆ ಪಟ್ಟಣ ಪಂಚಾಯತ್ ಎದುರು ಸಂಗೋಳ್ಳಿ ರಾಯಣ್ಣ ಪ್ರತಿಷ್ಠಾಪನೆ ಮಾಡಿದ ಹಿನ್ನಲೆಯಲ್ಲಿ ಪರಸ್ಥಿತಿ ಉದ್ವಿಗ್ನ ಸ್ಥಿತಿಯಲ್ಲಿದ್ದು ಬೂದಿ ಮುಚ್ಚಿದ ಕೆಂಡದಂತೆ ಪರಸ್ಥಿತಿ ನಿರ್ಮಾಣ ವಾಗಿದೆ. ಕಳೆದ ಹಲವು ವರ್ಷಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಕನ್ನಡಪರ ಸಂಘಟನೆಗಳ ಮನವಿ ಮಾಡಿದ್ದವು ಅದೇ ರೀತಿಯಾಗಿ ನಿನ್ನೆ ರಾತ್ರಿ ಪ್ರತಿಷ್ಠಾಪನೆ ಮಾಡಲಾಗಿದ್ದು ಜೀಜಾಮಾತಾ ಅಥವಾ ಶಿವಾಜಿ …

Read More »

6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ.

ಮುಂಬೈ(ಮಹಾರಾಷ್ಟ್ರ): ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6.2 ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಚಿನ್ನವನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಾನುವಾರ ವಶಪಡಿಸಿಕೊಂಡಿದೆ. ಈ ಎರಡೂ ಪ್ರಕರಣಗಳಲ್ಲಿ ಒಟ್ಟು 4 ಮಂದಿಯನ್ನು ಬಂಧಿಸಲಾಗಿದೆ. ಮೊದಲ ಪ್ರಕರಣದಲ್ಲಿ ದುಬೈನಿಂದ ಬಂದ ಭಾರತೀಯ ಪ್ರಜೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪರಿಶೀಲಿಸಲಾಯಿತು. ಈ ವೇಳೆ, ಪ್ರಯಾಣಿಕರ ಸಾಮಾನು ಸರಂಜಾಮುಗಳನ್ನು ಪರಿಶೀಲಿಸಲಾಗಿದ್ದು, 56 ಮಹಿಳೆಯರ ಪರ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರ್ಸ್​ಗಳಲ್ಲಿ 24 ಕ್ಯಾರೆಟ್ …

Read More »

ರಾಜ್ಯಾದ್ಯಂತ ನಿನ್ನೆ (ಬುಧವಾರ) ಲೋಕಾಯುಕ್ತ ಅಧಿಕಾರಿಗಳು ಕೆಲವು ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ

ಬೆಂಗಳೂರು: ರಾಜ್ಯಾದ್ಯಂತ ನಿನ್ನೆ (ಬುಧವಾರ) ಲೋಕಾಯುಕ್ತ ಅಧಿಕಾರಿಗಳು ಕೆಲವು ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ವ್ಯಾಪಕ ಶೋಧ ನಡೆಸಿದ್ದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೊಪ್ಪಳ, ಮಂಗಳೂರು, ಹಾವೇರಿ, ಉಡುಪಿ ಸೇರಿದಂತೆ ಒಟ್ಟು 57 ಕಡೆ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ಕೋಟಿ ಕೋಟಿ ಮೌಲ್ಯದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಅಧಿಕಾರಿಗಳು, ಅಕ್ರಮ ಸಂಪತ್ತು: ಬೆಸ್ಕಾಂ ಚೀಫ್​ ಇಂಜಿನಿಯರ್​ಎಚ್.ಜೆ. ರಮೇಶ್ – ನಾಲ್ಕು …

Read More »

2 ಲಕ್ಷಕ್ಕೂ ಅಧಿಕ ಗಿಡ ನೆಟ್ಟ ಶಿವಾಜಿ ಕಾಗಣಿಕರ್

ಬೆಳಗಾವಿ: ಇಂದು ವಿಶ್ವ ಪರಿಸರ ದಿನ. ಉಸಿರಾಡಲು ಶುದ್ಧ ಗಾಳಿಯನ್ನು ನೀಡುವ ಮರಗಳನ್ನು ವರ್ಷಕ್ಕೊಮ್ಮೆ ಪರಿಸರ ದಿನದಂದು ಮಾತ್ರ ನೆನಪು ಮಾಡಿಕೊಳ್ಳುವ ಪರಿಸ್ಥಿತಿ ಇದೆ. ಆದರೆ, ಮರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು. ಅವುಗಳನ್ನು ಉಳಿಸಿ, ಬೆಳೆಸುವತ್ತ ಗಮನಹರಿಸಬೇಕಿದೆ. ಆಧುನೀಕರಣ ಹಾಗೂ ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮದಿಂದ ಅರಣ್ಯ ನಾಶವಾಗುತ್ತಿದೆ. ಇದರಿಂದ ಹಲವು ದುಷ್ಪರಿಣಾಮಗಳು ಎದುರಾಗುತ್ತಿದೆ. ಈ ನಡುವೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ವ್ಯಕ್ತಿಯೊಬ್ಬರು ನೆಲವನ್ನು ಹಚ್ಚ ಹಸಿರಾಗಿಸುವ ಧ್ಯೇಯವೊಂದರಲ್ಲಿ ತೊಡಗಿಸಿಕೊಂಡಿದ್ದು, …

Read More »

ಅಪರೂಪದ ಕಾಯಿಲೆಗೆ ತುತ್ತಾಗಿರುವ ಶೌರ್ಯ ಹುಲಿಗೆ ಸೂಕ್ತ ಚಿಕಿತ್ಸೆ

ಬೆಳಗಾವಿ : ಜಿಲ್ಲೆಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿರುವ ಶೌರ್ಯ ಎಂಬ ಹುಲಿಯು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದನ್ನು ವನ್ಯಜೀವಿ ವೈದ್ಯ ಡಾ. ಮದನ್ ಪತ್ತೆ ಹಚ್ಚಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿಗೆ ಸದ್ಯ ಅರಣ್ಯಾಧಿಕಾರಿಗಳು ಹಾಗೂ ವನ್ಯಜೀವಿ ವೈದ್ಯರು ಹುಲಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ. ವನ್ಯಜೀವಿ ವೈದ್ಯರಿಗೆ ಸುಲಭವಾಗಿ ಗುರುತಿಸಲಾಗದ cytauxzoon felis ಮತ್ತು mycoplasma ಎಂಬ ಅಪರೂಪದ …

Read More »

ಒಡಿಶಾ ರೈಲು ದುರಂತ.. ಸಂತ್ರಸ್ತ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಗೌತಮ್ ಅದಾನಿ

ಅಹಮದಾಬಾದ್ (ಗುಜರಾತ್): ಒಡಿಶಾದ ಭೀಕರ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಸಂತ್ರಸ್ತರಾಗಿರುವ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ಮುಂದಾಗಿದೆ. ಈ ಬಗ್ಗೆ ಖ್ಯಾತಿ ಉದ್ಯಮಿ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಪ್ರಕಟಿಸಿದ್ದಾರೆ. ಒಡಿಶಾ ರೈಲು ಅಪಘಾತದ ಸುದ್ದಿಯಿಂದ ತಾನು ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ನೀಡುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಗಳನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಗೌತಮ್ ಅದಾನಿ …

Read More »

ಭೂಮಿ ಮತ್ತು ಮನುಕುಲವನ್ನು ರಕ್ಷಿಸಲು ಪರಿಸರವನ್ನು ರಕ್ಷಿಸುವುದು ಅತ್ಯಂತ ಅವಶ್ಯಕ.

ಮಾನವರ ಜೀವನ ಮತ್ತು ಪರಿಸರದ ಮಧ್ಯೆ ಆಳವಾದ ಸಂಬಂಧವಿದೆ. ಪ್ರಕೃತಿಯಿಲ್ಲದೇ ಜೀವನವು ಅಸ್ತಿತ್ವದಲ್ಲಿರಲು ಸಾಧ್ಯವೇ ಇಲ್ಲ. ಪ್ರಕೃತಿಯೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಎಲ್ಲ ಮಾನವರಿಗೆ ಅವಶ್ಯಕವಾಗಿದೆ. ಆದರೆ, ತಂತ್ರಜ್ಞಾನದ ಆಮೂಲಾಗ್ರ ಬೆಳವಣಿಗೆ ಮತ್ತು ಆಧುನಿಕ ಜೀವನಶೈಲಿಯ ಹೆಚ್ಚಳದಿಂದ ಪರಿಸರಕ್ಕೆ ಸರಿಪಡಿಸಲಾಗದ ಅಪಾಯವಾಗುತ್ತಿದೆ ಎನ್ನುವುದು ಕೂಡ ಸತ್ಯ. ಇದಕ್ಕಾಗಿಯೇ ಪರಿಸರ ರಕ್ಷಣೆಯ ಬಗ್ಗೆ ಮತ್ತು ಪರಿಸರದ ಸ್ವಚ್ಛತೆಗಾಗಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ …

Read More »

ಬಸ್​ ಕಾರು ಮುಖಾಮುಖಿ ಡಿಕ್ಕಿ: ಐವರ ದುರ್ಮರಣ

ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 115 ಕಿಮೀ ದೂರದಲ್ಲಿರುವ ನಾಗ್ಭಿಡ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪಾ ಗ್ರಾಮದಲ್ಲಿ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. “ನಾಗ್ಪುರದಿಂದ ನಾಗಭೀಡ್‌ಗೆ ಕಾರಿನಲ್ಲಿ ಆರು ಜನರು ಪ್ರಯಾಣಿಸುತ್ತಿದ್ದಾಗ, ಈ ಕಾರು ವಿರುದ್ಧ …

Read More »

ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಆತ್ಮಹತ್ಯೆ

ಕೋಲಾರ ತಾಲೂಕಿನ ಅರಾಬಿಕೊತ್ತನೂರು ಗ್ರಾಮದಲ್ಲಿ ಕ್ವಾರೆಯಲ್ಲಿನ ನೀರಲ್ಲಿ ಜಿಗಿದು ಎಂಬಿಬಿಎಸ್​ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ‌. ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ ಪತ್ತೆಯಾಗಿದೆ. ದರ್ಶಿನಿ ಹೊಸಕೋಟೆ ತಾಲೂಕಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಳು ಎನ್ನಲಾಗಿದೆ. ದರ್ಶಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕಾಗಮಿಸಿದ ಪೊಲೀಸರು ಭೇಟಿ …

Read More »