Breaking News
Home / ರಾಜ್ಯ (page 1290)

ರಾಜ್ಯ

ಹೊಸ ವರ್ಷಾಚರಣೆ: ನಂದಿ ಬೆಟ್ಟದ ಸುತ್ತ ಮೂರು ದಿನ ನಿಷೇಧಾಜ್ಞೆ

ಬೆಂಗಳೂರು : ಬೆಂಗಳೂರು ನಗರದಲ್ಲಿ ರಾತ್ರಿ 10 ಗಂಟೆಯ ನಂತರ ಎಲ್ಲ ಬಾರ್‌, ಪಬ್‌ ಬಂದ್‌ ಮಾಡುವಂತೆ ಆದೇಶ ನೀಡಲಾಗಿದ್ದು, ಟಫ್‌ ರೂಲ್ಸ್‌ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿಯಲ್ಲಿದೆ ಎಂದು ನೆರೆಯ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರ ಉತ್ಸಾಹಕ್ಕೂ ಈಗ ಬೀಗ ಹಾಕಲಾಗಿದೆ. ನಂದಿ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಜ.3 ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸುವಂತೆ ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ …

Read More »

ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ ಪ್ರಯಾಣಿಕರಿಗೆ ಪಾಸಿಟಿವ್‌ ಬಂದಿದೆ. ಇಂದು ಬೆಳಗ್ಗಿನ  ಜಾವ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 9 ಮಂದಿಯಲ್ಲಿ ಸೋಂಕು ಕಾಣಿಸಿದೆ. ಇಂಗ್ಲೆಂಡ್‌ 5, ಅಮೆರಿಕ 2, ಘಾನಾ 1, ಸ್ಕಾಟ್‌ಲ್ಯಾಂಡ್‌ನಿಂದ ಬಂದ ಒಬ್ಬರಿಗೆ ಕೊರೊನಾ ಬಂದಿದೆ.

Read More »

ಹೊಸ ವರ್ಷಾಚರಣೆಯಲ್ಲಿ ಕುಡಿದವರಿಗೆ ಡ್ರಾಪ್ ಹೋಮ್ ಸೌಲಭ್ಯ!

ಡಿಸ್ಪುರ್: ಎಲ್ಲೆಡೆ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ನೀಡುವ ಹಾಗೂ ಕಫ್ರ್ಯೂ ನಿಯಮಗಳ ಬಗ್ಗೆ ಕೇಳಿಬರುತ್ತಿದೆ. ಆದರೆ ಅಸ್ಸಾಂನ ಬಿಸ್ವಂತ್ ಜಿಲ್ಲೆಯಲ್ಲಿ ಮಾತ್ರ ಹೊಸ ವರ್ಷಾಚರಣೆಗೆ ಉತ್ತೇಜನ ನೀಡುತ್ತಿದ್ದು, ಕುಡುಕರಿಗೆ ಹೊಸದೊಂದು ಸೌಲಭ್ಯವನ್ನೂ ಒದಗಿಸುತ್ತಿದೆ. ಡ್ರಂಕ್ ಆಂಡ್ ಡ್ರೈವ್ ನಿಂದಾಗುವ ಅಪಘಾತಗಳನ್ನು ತಪ್ಪಿಸಲು ಅಸ್ಸಾಂನ ಬಿಸ್ವಂತ್ ಜಿಲ್ಲಾಡಳಿತ ಎರಡು ಸಹಾಯವಾಣಿಯನ್ನು ಸ್ಥಾಪಿಸಿದೆ. ಹೊಸವರ್ಷದಲ್ಲಿ ಮದ್ಯಪಾನ ಮಾಡಿದವರನ್ನು ಮನೆಗೆ ಬಿಡಲು ಈ ಸೌಲಭ್ಯ ಬಳಸಿಕೊಳ್ಳಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ಕುಡಿತದ ಅಮಲಿನಲ್ಲಿ ಸಂಭವಿಸುವ …

Read More »

ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು: ಗೋವಿಂದ ಕಾರಜೋಳ

ಬೆಂಗಳೂರು: ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಗಮನಕ್ಕೆ ತಂದರು. ಬೆಳಗಾವಿ, ಬಾಗಲಕೋಟೆ ಮತ್ತು ಕಾರವಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿ ಬೆಳೆ ಸೇರಿ ಮನೆಗಳಿಗೂ ಹಾನಿಯಾಗಿದೆ. ಈ ಪರಿಣಾಮ ಅಲ್ಲಿನ ಜನರು ಬಸ್ ಶೆಲ್ಟರ್ ಮತ್ತು ಸಮುದಾಯ ಭವನಗಳಲ್ಲಿ ಇನ್ನೂ ಜನ ವಾಸಿಸುತ್ತಿದ್ದಾರೆ. ಅಂಥವರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗೋವಿಂದ …

Read More »

ಎಂಇಎಸ್ ನಿಷೇಧಕ್ಕೆ ಕರವೆ ಆಗ್ರಹ, ಜನಪ್ರನಿಧಿಗಳ ಭಾವಚಿತ್ರಗಳನ್ನ ದಹಿಸಿ ಅಸಮಾಧಾನ

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದು, ಎಂಇಎಸ್ ವಿರುದ್ಧ ದ್ವನಿ ಎತ್ತದ ಬೆಳಗಾವಿ ಶಾಸಕರನ್ನು ಹರಾಜು ಹಾಕಿ ಆಕ್ರೋಶ ವ್ಯಕ್ತಪಡಿಸಿವೆ. ಬೆಂಗಳೂರಿನ ಟೌನ್ ಹಾಲ್ ಎದುರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದು, ಎಂಇಎಸ್ ನಿಷೇಧಕ್ಕೆ ರಾಜ್ಯ ಸರ್ಕಾರ ಮುಂದಾಗುವಂತೆ ಆಗ್ರಹಿಸಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರವೇ ಕಾರ್ಯಕರ್ತರು ಸಿಎಂ ಬೊಮ್ಮಾಯಿ ಭೇಟಿ ಮಾಡಿ ಎಂಇಎಸ್ …

Read More »

ಹಿರಿಯ ನಟ ವೇಣುಮಿತ್ರ ಕಾಸರಗೋಡು ನಿಧನ

ಕಾಸರಗೋಡು: ಕಿರುತೆರೆ ನಟ, ಹಿರಿಯ ರಂಗಭೂಮಿ ಕಲಾವಿದ, ಕತೆಗಾರ, ಕುದುರೆಮುಖ ನಿವೃತ್ತ ನೌಕರ ಶ್ರೀ ವೇಣುಮಿತ್ರ ಕಾಸರಗೋಡು (73) ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ. ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡಿದ ‘ರಂಗ ಭಾಸ್ಕರ’ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಶ್ರೀಯುತರು ಭಾಜನರಾಗಿದ್ದರು. ಸಾಗರದೀಪ ಸಿನೆಮಾದಲ್ಲೂ ಬಣ್ಣ ಹಚ್ಚಿ ಹಿರಿತೆರೆಯಲ್ಲೂ ಸೈ ಎನಿಸಿಕೊಂಡಿದ್ದರು. ಶ್ರೀಯುತರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ

Read More »

ಏಪ್ರಿಲ್ ಕೊನೆಯ ವಾರಕ್ಕೆ ದ್ವಿತೀಯ ಪಿಯು ಪರೀಕ್ಷೆ :ಸಚಿವ ಬಿ ಸಿ ನಾಗೇಶ್

ಬೆಂಗಳೂರು:ದ್ವಿತೀಯ ಪಿಯು ಪರೀಕ್ಷೆಗಳು ಪಠ್ಯಕ್ರಮ ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್‌ನಲ್ಲಿ ನಡೆಯಲಿರುವ ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಂಗಳವಾರ ತಿಳಿಸಿದರು.   ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ , ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಇತರ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿಗಳ ಮೇಲೆ ಪರಿಣಾಮ ಬೀರುವುದರಿಂದ ಪರೀಕ್ಷೆಗಳನ್ನು ಏಪ್ರಿಲ್‌ನ ನಂತರ ವಿಳಂಬ ಮಾಡಲಾಗುವುದಿಲ್ಲ ಎಂದು ನಾಗೇಶ್ …

Read More »

ಜ.11, ಸರ್ಕಾರಿ ಪಡಿತರ ವಿತರಕರ ಬೃಹತ್ ಸಮ್ಮೇಳನ

ಬೆಳಗಾವಿ ನಗರದ ಕೊಂಡುಸ್ಕರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಬೆಂಗಳೂರು ನಗರ ಪಡಿತರ ವಿತರಕರ ಹಿತರಕ್ಷಣಾ ಸಂಘದ ಆಶ್ರಯದಲ್ಲಿ ರಾಜ್ಯಮಟ್ಟದ ಬೃಹತ್ ಸಮ್ಮೇಳನ ಸಮಾವೇಶ ಜ.11ರಂದು ಬೆಳಗ್ಗೆ 11ಗಂಟೆಗೆ ನಡೆಯಲಿದೆ ಎಂದು ಬೆಂಗಳೂರು ನಗರ ಸರ್ಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಜೆ.ಬಿ. ಕುಮಾರ್ ತಿಳಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತದ ಸಾರ್ವಜನಿಕ ವಿತರಣಾ ವ್ಯವಸ್ಥೆಯು …

Read More »

ಕರ್ನಾಟಕ ಸಹಿತ ಆರು ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚುವರಿ ಅನುದಾನ

ಹೊಸದಿಲ್ಲಿ: ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್.ಡಿ.ಆರ್.ಎಫ್.) ಅಡಿಯಲ್ಲಿ 2021ರ ಸಾಲಿನಲ್ಲಿ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದಿಂದ ಬಾಧಿತವಾದ ಆರು ರಾಜ್ಯಗಳಿಗೆ ಕೇಂದ್ರ ಹೆಚ್ಚುವರಿ ನೆರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ (ಎಚ್.ಎಲ್.ಸಿ.) ಅನುಮೋದಿಸಿದೆ. ‘ತೌಕ್ತೆ’ ಚಂಡಮಾರುತ ಹಿನ್ನೆಲೆಯಲ್ಲಿ ಗುಜರಾತ್‌ಗೆ ₹ 1,133.35 ಕೋಟಿಯನ್ನು, ‘ಯಾಸ್’ ಚಂಡಮಾರುತ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳಕ್ಕೆ ₹ 586.59 ಕೋಟಿ, 2021ರ ಮುಂಗಾರು ಋತುವಿನಲ್ಲಿ ಪ್ರವಾಹ …

Read More »

ಡಿಕೆಶಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್ : ಭಕ್ತರು ಅಂದ್ರೆ ಬಿಜೆಪಿ, ಆರ್​ಎಸ್ಎಸ್, ಡಿಕೆಶಿ ಕೂಡ ಆಗಿರಬಹುದು:

ಬೆಂಗಳೂರು: ಭಕ್ತರು ಅಂದ್ರೆ ಬಿಜೆಪಿ, ಆರ್​ಎಸ್ಎಸ್ ಕಾರ್ಯಕರ್ತರು ಆಗಿರಬಹುದು, ಡಿ.ಕೆ.ಶಿವಕುಮಾರ್ ಕೂಡ ಆಗಿರಬಹುದು ಎಂದು ಸಚಿವ ಕೋಟಾ ಶ್ರೀನಿವಾಸ್ ‌ಪೂಜಾರಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ​ಗೆ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ, ಆರ್​ಎಸ್​ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನು ಹಸ್ತಾಂತರಿಸುವ ಅಜೆಂಡಾ ಹೊಂದಿದೆ ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿ, ಭಕ್ತರು ಅಂದ್ರೆ ಎಲ್ಲರೂ ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಈ ಕುರಿತಾಗಿ ಇನ್ನೂ …

Read More »