Breaking News
Home / ರಾಜ್ಯ (page 1324)

ರಾಜ್ಯ

ನಾನು ಸತ್‌ ಹೋಗಿದ್ದೀನ್ರಿ. ನನ್ನನ್ಯಾಕೆ ಮಾತನಾಡಿಸ್ತೀರಿ. ಜೀವಂತ ಇರೋರನ್ನು ಮಾತನಾಡಿಸಿ ಹೋಗಿ.’

ಬೆಳಗಾವಿ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಹಲವರ ವಿರೋಧ ಕಟ್ಟಿಕೊಂಡಿರುವ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರು ಪ್ರಶ್ನೆ ಕೇಳಲು ಹೋದಾಗ ಅವರನ್ನು ತಡೆದ ರಮೇಶ್‌ ಕುಮಾರ್‌, ‘ಹೋಗ್ರಿ, ನನ್ನನ್ನೇಕೆ ಮಾತನಾಡಿಸುವಿರಿ? ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ’ ಎಂದು ಆಕ್ರೋಶದಿಂದ ಹೇಳಿದರು. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕನ್ನಡಿಗರ ಮೇಲೆ …

Read More »

ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ : ಇನ್ಮುಂದೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಜಾತಿ, ಆದಾಯ, ಸಂಧ್ಯಾ ಸುರಕ್ಷಾ ಪ್ರಮಾಣ ಪತ್ರ

ಹಾವೇರಿ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ತಾಲ್ಲೂಕು ಕಚೇರಿಗಳಿಂದ ಬೇರ್ಪಡಿಸಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಹಾವೇರಿ ಜಿಲ್ಲೆಯ ಶಿಗ್ಗಾಂವ್‍ನ ಬಿಸನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಗ್ರಾಮೀಣ ಭಾಗದ ಜನರು ಕೆಲವು ಸೇವೆಗಳಿಗಾಗಿ ತಾಲ್ಲೂಕು ಕೇಂದ್ರಕ್ಕೆ ಹೋಗುವುದನ್ನು ತಪ್ಪಿಸುವ ಸಲುವಾಗಿ …

Read More »

ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಘೋಷಿಸಿದ್ದಾರೆ.

: ಎಂಇಎಸ್ ಪುಂಡರ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಯಣ್ಣ ಪ್ರತಿಮೆ ವಿರೂಪಗೊಳಿಸಿದವರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಘೋಷಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಎಂಇಎಸ್ ಪುಂಡಾಟ ಪ್ರಕರಣದ ಬಗ್ಗೆ ಚರ್ಚೆಯಾಗಿದ್ದು, ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ವಪಕ್ಷಗಳ ನಾಯಕರು ಸರ್ಕಾರವನ್ನು ಒಕ್ಕೋರಲಿನಿಂದ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಭಾಷೆಯ ನೆಪದಲ್ಲಿ ಶಾಂತಿ ಕಡಡಲು ಯತ್ನಿಸಿರುವ ಎಂಇಎಸ್ ಪುಂಡರ …

Read More »

ಎಂಇಎಸ್ ನಿಂದ ಶಾಂತಿ ಸುವ್ಯವಸ್ಥೆ ಹಾಳಾಗುತ್ತಿದೆ. ಇಂತಹ ಸಂಘಟನೆಯನ್ನು ಮೊದಲು ನಿಷೇಧಿಸಬೇಕು: ಸಿದ್ದರಾಮಯ್ಯ

ಬೆಳಗಾವಿ: ಎಂಇಎಸ್ ನಿಂದ ಶಾಂತಿ ಸುವ್ಯವಸ್ಥೆ ಹಾಳಾಗುತ್ತಿದೆ. ಇಂತಹ ಸಂಘಟನೆಯನ್ನು ಮೊದಲು ನಿಷೇಧಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಅವರಿಗೆ ಮಾನ, ಮರ್ಯಾದೆ ಏನೂ ಇಲ್ಲ. ಅಂತವರಿಂದ ನೆಮ್ಮದಿ ಹಾಳಾಗುತ್ತದೆ. ನಾವು ಹೋಗಿ ಮಹಾರಾಷ್ಟ್ರದಲ್ಲಿ ಗಲಾಟೆ ಮಾಡುತ್ತೇವಾ? ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ವಿಧಾನಸಭೆಯಲ್ಲಿ ಎಂಇಎಸ್ ಪುಂಡಾಟ ಪ್ರಕರಣದ ಬಗ್ಗೆ ವಿಷಯ ಪ್ರಸ್ತಾಪವಾಗಿದ್ದು, ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಂಇಎಸ್ ಪುಂಡರು …

Read More »

ಇಬ್ಬರು ಮಹಾಪುರುಷರಿಗೆ ಮಾಡಿರುವ ಅಪಮಾನವನ್ನ ಖಂಡಿಸ್ತೀನಿ: ಹೆಬ್ಬಾಳ್ಕರ್​

ಬೆಳಗಾವಿ: ನಮ್ಮ ರಾಜ್ಯದಲ್ಲಾಗಲಿ, ಹೊರರಾಜ್ಯದಲ್ಲಾಗಲಿ ಶಿವಾಜಿ ಮಹಾರಾಜ ಪುತ್ಥಳಿಗೆ ಅವಮಾನ ಮಾಡಿರುವುದು, ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ಭಗ್ನ ಮಾಡಿರುವ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಇಬ್ಬರು ಮಹಾಪುರುಷರಿಗೆ ಅಪಮಾನ ಮಾಡಿರುವುದನ್ನು ನಾನು ಖಂಡಿಸುತ್ತೀನಿ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದರು. ನಗರದ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ರಾಜಕೀಯ ಬೇಳೆ ಬೇಯಿಸಲು ಈ ರೀತಿ ಮಾಡುತ್ತಿದ್ದಾರೆ. ಸಮಾಜದ, ರಾಜ್ಯದ ಮಧ್ಯೆ ಹೀಗೆ ಮಾಡಿ ಒಕ್ಕೂಟ …

Read More »

ಬೆಳಗಾವಿಯ ಅಧಿವೇಶನದಲ್ಲಿ ನಾಳೆಯೇ ಮತಾಂತರ ನಿಷೇಧ ಕಾಯ್ದೆ ಮಂಡನೆ : ಸಚಿವ ಸಂಪುಟ ತೀರ್ಮಾನ

ಬೆಳಗಾವಿ : ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದು ಪ್ರಮುಖ ನಿರ್ಧಾರವೂ ಇದೆ. ಪ್ರತಿ ಪಕ್ಷಗಳ ವಿರೋಧದ ನಡುವೆಯೂ ಕಾಯ್ದೆಯನ್ನು ಜಾರಿಗೆ ತರಲು ಬಿಜೆಪಿ ಮುಂದಾಗಿದೆ. ವಿಧಾನಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಪರಿಷತ್ತಿನಲ್ಲಿ …

Read More »

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಬಿಜೆಪಿ ಮಹಿಳಾಮಣಿಗಳ ಆಕ್ರೋಶ

ಬೆಳಗಾವಿ – ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ ನೀಡಿದ ಹೇಳಿಕೆ ಖಂಡಿಸಿ ಭಾರತೀಯ ಜನತಾಪಾರ್ಟಿ ಮಹಿಳಾ ಮೋರ್ಚಾ ಸೋಮವಾರ ಪ್ರತಿಭಟನೆ ನಡೆಸಿತು. ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಚಿನ್ನಾಕಟ್ಟಿ, ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್, ಮಹಾನಗರ ಅಧ್ಯಕ್ಷೆ ಸುವರ್ಣಾ ಪಾಟೀಲ ಮೊದಲಾದವರ ನೇತೃತ್ವದಲ್ಲಿ ನೂರಾರು ಮಹಿಳೆಯರು ಸುವರ್ಣ ವಿಧಾನಸೌಧದ ಬಳಿಯ ಸುವರ್ಣ ಗಾರ್ಡನ್ ನಲ್ಲಿ ಪ್ರತಿಭಟನೆ ನಡೆಸಿದರು. ರಮೇಶ್ ಕುಮಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ

Read More »

ಕಿಡಿಗೇಡಿಗಳಿಗೆ ಪೊಲೀಸರ ಭಯವಿಲ್ಲ:ಸಿದ್ದರಾಮಯ್ಯ

ಬೆಳಗಾವಿ: ಕೆಲ ಪುಂಡರು ರಾಯಣ್ಣ ಪ್ರತಿಮೆ ವಿರೂಪಗೊಳಿಸುವ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ದುರುದ್ದೇಶದಿಂದಲೇ ಇಂತ ಕೃತ್ಯವೆಸಗಲಾಗಿದೆ. ಇಂತಹ ಘಟನೆ ಖಂಡನಿಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಳಗಾವಿಯ ಆನಗೋಳದಲ್ಲಿ ಮರುಸ್ಥಾಪನೆಯಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಿದ್ದರಾಮಯ್ಯ, ರಾಯಣ್ಣ ಯಾವುದೆ ಒಂದು ಜಾತಿಗೆ ಸೀಮಿತರಾದವರಲ್ಲ, ಬ್ರೀಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನಾನಿ, ಮಹಾನ್ ದೇಶಭಕ್ತ. ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ …

Read More »

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ಕೆ.ಶಿವಕುಮಾರ್

ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದು, ಅದು ಸಹಜ. ನಾನು ಕೂಡ ನನ್ನ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ. ನಮ್ಮ ಜನರ ಎದುರು ನಮ್ಮ ಅಧಿಕಾರ ತೋರಲು ಆಗುವುದಿಲ್ಲ. ಹೀಗಾಗಿ ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ಶಾಂತಿ ಕಾಪಾಡುವುದೇ ಕಾಂಗ್ರೆಸ್ ಸಂಕಲ್ಪ. ಈ ಕೃತ್ಯವನ್ನು ಏಕಾಏಕಿಯಾಗಿ ಎಂಇಎಸ್ …

Read More »

ಎಂಇಎಸ್ ವಿರುದ್ಧ ಕರವೇ ನಾರಾಯಣಗೌಡ ನೇತೃತ್ವದ ಬಣದ ಪ್ರತಿಭಟನೆ

ಬೆಳಗಾವಿ: ಎಂಇಎಸ್ ವಿರುದ್ಧ ಕರವೇ ನಾರಾಯಣಗೌಡ ನೇತೃತ್ವದ ಬಣದ ಪ್ರತಿಭಟನೆ ತೀವ್ರಗೊಂಡಿದ್ದು, ಬೆಳಗಾವಿಯಲ್ಲಿ ಲಾರಿ, ಬಸ್ ಗಳ ಮೇಲೆ ಹತ್ತಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಎಂಇಎಸ್, ಶಿವಸೇನೆ ಪುಂಡಾಟ ಪ್ರಕರಣದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ಬೃಹತ್ ಪ್ರತಿಭಟನೆ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಕರವೇ ನಾರಾಯಣಗೌಡ ನೇತೃತ್ವದ ಬಣವನ್ನು ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ತಡೆದಿದ್ದಾರೆ. ಪೊಲೀಸರ …

Read More »