Breaking News
Home / ರಾಜ್ಯ (page 1351)

ರಾಜ್ಯ

ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರಕಾರ ಹಾಗಾಗಿ ವಿವೇಚನೆಯುಳ್ಳ ಪಂಚಾಯಿತಿ ಸದಸ್ಯರು ಕಾಂಗ್ರೆಸ್ ಗೆ ಮತ ನೀಡಲಿದ್ದಾರೆ:ಡಿ.ಕೆ.ಶಿವಕುಮಾರ

ಬೆಳಗಾವಿ – ಗ್ರಾಮ ಪಂಚಾಯಿತಿ ವ್ಯವಸ್ಥೆಗೆ  ಅತೀ ಹೆಚ್ಚು ಒತ್ತು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ.  1 ಲಕ್ಷ ದಿಂದ 5 ಲಕ್ಷಕ್ಕೆ ಅನುದಾನ ಏರಿಕೆ ಮಾಡಿದ್ದು ಕಾಂಗ್ರೆಸ್. ನರೇಗಾ ಜಾರಿಗೆ ತಂದು ಗ್ರಾಮ ಪಂಚಾಯಿತಿಗಳ ಜೀವ ಉಳಿಸಿದ್ದು ಕಾಂಗ್ರೆಸ್ ಸರಕಾರ. ಶೇ.50ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರಕಾರ ಹಾಗಾಗಿ ವಿವೇಚನೆಯುಳ್ಳ ಪಂಚಾಯಿತಿ ಸದಸ್ಯರು ಕಾಂಗ್ರೆಸ್ ಗೆ ಮತ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ …

Read More »

ಕೊಣ್ಣೂರು (ಗೋಕಾಕ): ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ; ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ

      ಗೋಕಾಕ:  ಕೊಣ್ಣೂರು ಶಾಲಾಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರಿಗೆ  ಶಾಲಾ ಪ್ರಾಚಾರ್ಯರು ಮನವಿ ಮಾಡಿಕೊಂಡ  ಹಿನ್ನೆಲೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರ ಸೂಚನೆ ಮೇರಿಗೆ  ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಇಂದು ಶಾಲೆಯ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕಿನ ಕೊಣ್ಣೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 245 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬಹು ವರ್ಷಗಳಿಂದ ಶಾಲೆಯೂ ಸುಣ್ಣ-ಬಣ್ಣ ಮಾಡಿಲ್ಲ,  ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ …

Read More »

ಗೆಳೆಯರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ, ಹೊಡೆದಾಟಕ್ಕೆ ತಿರುಗಿ ಓರ್ವನ ಕೊಲೆ

ಬೆಳಗಾವಿ – ಇಲ್ಲಿಯ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ, ಹೊಡೆದಾಟಕ್ಕೆ ತಿರುಗಿ ಓರ್ವನ ಕೊಲೆಯಾಗಿದೆ. ಭಾನುವಾರ ರಾತ್ರಿ 10.30ರ ಹೊತ್ತಿಗೆ ಘಟನೆ ನಡೆದಿದೆ. ಗೆಳಯರಿಬ್ಬರು ಸೇರಿ ಸಾರಾಯಿ ಕುಡಿದು ಬರುವಾಗ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಾಡ್ ನಿಂದ ಓರ್ವ ಇನ್ನೋರ್ವನ ತಲೆಗೆ ಹೊಡೆದಿದ್ದು, ಆತ ಅಲ್ಲಿಯೆ ಕುಸಿದು ಬಿದ್ದಿದ್ದಾನೆ. ನಂತರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಬದುಕುಳಿಯಲಿಲ್ಲ. ಸಾವಿಗೀಡಾದವನ …

Read More »

ಪುನೀತ್​​ ಇಲ್ಲದೇ ಕಳೆಯಿತು ಒಂದು ತಿಂಗಳು

ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಇಲ್ಲವಾಗಿ ಇಂದಿಗೆ (ನ.29) ಒಂದು ತಿಂಗಳು ಕಳೆದಿದೆ. ಅ.29ರಂದು ಅಪ್ಪು ಹೃದಯಾಘಾತಕ್ಕೆ ಒಳಗಾದ ಕರಾಳ ಸುದ್ದಿ ಕೇಳಿಬಂದಿತ್ತು. ಅವರು ಇಹಲೋಕ ತ್ಯಜಿಸಿದರು ಎಂಬ ಕಹಿ ಸುದ್ದಿ ಬಂದು ಕಿವಿಗೆ ಎರಗಿದಾಗ ಅದನ್ನು ಯಾರಿಂದಲೂ ನಂಬಲು ಸಾಧ್ಯವಾಗಿರಲಿಲ್ಲ. ಅಭಿಮಾನಿಗಳು ಮತ್ತು ಕುಟುಂಬದವರು ಈಗ ನೋವಿನ ಜೊತೆಯಲ್ಲೇ ಜೀವನ ಮುಂದುವರಿಸುವುದು ಅನಿವಾರ್ಯ ಆಗಿದೆ. ಅಪ್ಪು ಇನ್ನಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡು, ಮುಂದಿನ ಕಾರ್ಯಗಳನ್ನು ಮಾಡಲಾಗುತ್ತಿದೆ. ಪುನೀತ್​ ನೋಡಿಕೊಳ್ಳುತ್ತಿದ್ದ …

Read More »

ಕೊರೊನಾ ಹೊಸ ರೂಪಾಂತರಿ ‘ಓಮಿಕ್ರಾನ್’ ಗುಣಲಕ್ಷಣಗಳನ್ನು ವಿವರಿಸಿದ ವೈದ್ಯೆ

ಕೊರೊನಾದ ಹೊಸ ರೂಪಾಂತರಿ ಓಮಿಕ್ರಾನ್ ದಕ್ಷಿಣ ಆಫ್ರಿಕಾದ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದು, ಈ ಸೋಂಕು ಅತಿವೇಗವಾಗಿ ಹಬ್ಬುತ್ತಿರುವ ಕಾರಣ ಎಲ್ಲೆಡೆ ಆತಂಕ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಶ್ವದ ಹಲವು ರಾಷ್ಟ್ರಗಳು, ದಕ್ಷಿಣ ಆಫ್ರಿಕಾ ದೇಶಗಳಿಂದ ಆಗಮಿಸುವವರ ಮೇಲೆ ಪ್ರಯಾಣ ನಿರ್ಬಂಧ ಹೇರಿವೆ. ಆದಾಗ್ಯೂ ಕೂಡ ವಿಶ್ವದ ಇತರ ರಾಷ್ಟ್ರಗಳಲ್ಲೂ ಓಮಿಕ್ರಾನ್ ಸೋಂಕಿನ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಇದರ ಮಧ್ಯೆ ಓಮಿಕ್ರಾನ್ ಆತಂಕದಲ್ಲಿದ್ದವರಿಗೆ ನೆಮ್ಮದಿ ನೀಡುವಂತಹ ಸುದ್ದಿಯೊಂದನ್ನು ದಕ್ಷಿಣ ಆಫ್ರಿಕಾ ವೈದ್ಯಕೀಯ …

Read More »

: ಬಸ್ ಚಕ್ರಕ್ಕೆ ಸಿಲುಕಿ ಯುವಕ ಸಾವು, ಭಯಾನಕ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆ

ಹರಪ್ಪನಹಳ್ಳಿ: ಬೈಕ್ ನಿಯಂತ್ರಣ ತಪ್ಪಿ ಕೆಎಸ್‌ಆರ್ಟಿಸಿ ಬಸ್ ಚಕ್ರ ಕ್ಕೆ ಸಿಲುಕಿ ಯುವಕ‌ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಅಸೀಫ್ (20) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದು, ಬಸ್ ಓವರ್ ಟೇಕ್ ಮಾಡುವಾಗ ಸ್ಕೂಟಿಯಿಂದ ಕೆಳಗೆ ಬಿದ್ದ ಯುವಕ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಈ ದೃಶ್ಯ ಸ್ಥಳದಲ್ಲೆ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ತಾಯಿ,ಮಗುವಿನ ಜೀವ ಉಳಿಸಿದ ವೈದ್ಯರು

ಬೀದರ್‌: ಬ್ರೀಮ್ಸ್‌ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲೇ ಕ್ಲಿಷ್ಟಕರ್ ಶಸ್ತ್ರಚಿಕಿತ್ಸೆ ಮಾಡಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾರೆ. ಹೈದರಾಬಾದ್ ಕೇರ್ ಆಸ್ಪತ್ರೆಯ ಹಿರಿಯ ಕ್ಯಾನ್ಸರ್ ತಜ್ಞವೈದ್ಯ ಡಾ.ವಿಪಿನ್ ಗೋಯಲ್ ನೇತೃತ್ವದಲ್ಲಿ ಡಾ ಉಮಾ ದೇಶಮುಖ. ಡಾ.ಸಂಗಮೇಶ ಹಾಗೂ ಡಾ.ಪ್ರವೀಣ ಅವರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಬೆನ್ನುಮೂಳೆಗೆ ಅರಿವಳಿಕೆ ನೀಡಿ ಶಸ್ತ್ರಚಿಕಿತ್ಸೆ ಆರಂಭಿಸಿ ಗರ್ಭಾಶಯದ ಭಾಗವನ್ನು ಕತ್ತರಿಸಿ ಮಗುವನ್ನು ಹೊರಗೆ ತೆಗೆಯಲಾಗಿದೆ. ಈ ಮೂಲಕ ತಾಯಿ ಹಾಗೂ ಮಗುವಿನ ಜೀವ ಉಳಿಸಲಾಗಿದೆ. …

Read More »

ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ರೆಸಿಡೆಂಟ್ ಡಾಕ್ಟರ್ಸ್ ಇಂದು ‘OPD’ ಬಂದ್​ಗೆ ಕರೆ

ಬೆಂಗಳೂರು: ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ರೆಸಿಡೆಂಟ್ ಡಾಕ್ಟರ್ಸ್ ಇಂದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಲಿದ್ದಾವೆ. ವೈದ್ಯರಿಗೆ ಏಪ್ರಿಲ್ ತಿಂಗಳಿನಿಂದ ತಿಂಗಳಿಗೆ 10,000 ಕೋವಿಡ್ ಭತ್ಯೆ ಘೋಷಿಸಲಾಗಿತ್ತು. ಆದರೆ ಈ ಬಗ್ಗೆ ಇನ್ನೂ ರಾಜ್ಯ ಸರ್ಕಾರ ತೀರ್ಮಾನವನ್ನು ಕೈಗೊಂಡಿಲ್ಲ, ಇದಲ್ಲದೇ ಕೋವಿಡ್ ಅಪಾಯ ಭತ್ಯೆಗೆ ತಕ್ಷಣವೇ ಹಣವನ್ನು ಮಂಜೂರು ಮಾಡಬೇಕು ಹಾಗೂ ಸ್ನಾತಕೋತ್ತರ ಪದವೀಧರರು ಮತ್ತು ಇಂಟರ್ನ್‌ಗಳಿಗೆ ಸಕಾಲದಲ್ಲಿ ಸ್ಟೈ ಫಂಡ್ ಪಾವತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. …

Read More »

ಪೆಟ್ರೋಲ್ ಬಂಕ್‌ ಮಾದರಿಯಲ್ಲಿ ಬ್ಯಾಟರಿ ಬದಲಾವಣೆ ನಿಲ್ದಾಣಗಳ ಸ್ಥಾಪನೆಗೆ ಮುಂದಾದ ಬೌನ್ಸ್

ಎಲೆಕ್ಟ್ರಿಕ್ ಸ್ಕೂಟರ್ ಬಾಡಿಗೆ ನೀಡುವ ಸ್ಟಾರ್ಟ್‌ಅಪ್ ಬೌನ್ಸ್ ತನ್ನದೇ ನಿರ್ಮಾಣದ ಮೊದಲ ಇ-ಸ್ಕೂಟರ್‌ ಆದ ಇನ್ಫಿನಿಟಿಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲಿದೆ. ಪಾರ್ಕಿಂಗ್ ಪರಿಹಾರಗಳನ್ನು ನೀಡುವ ಪ್ಲಾಟ್‌ಫಾರಂ ಪಾರ್ಕ್+ ಜೊತೆಗೆ ಸಹಯೋಗ ಮಾಡಿಕೊಂಡಿರುವ ಬೌನ್ಸ್‌, 10ಕ್ಕಿಂತ ಹೆಚ್ಚು ನಗರಗಳ 3,500‌ ರಷ್ಟು ಸ್ಥಳಗಳಲ್ಲಿ ಬ್ಯಾಟರಿ ಬದಲಾವಣೆಗೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮುಂದಾಗಿದೆ.   ಈ ಸ್ಮಾರ್ಟ್ ಸವಲತ್ತು ವಸತಿ ಸಮುದಾಯಗಳು, ಪಾರ್ಕಿಂಗ್ ನಿಲ್ದಾಣಗಳು, ಮಾಲ್‌ಗಳು, ಕಾರ್ಪೋರೇಟ್ ಕಚೇರಿಗಳು ಸೇರಿದಂತೆ ಜನಸಮೂಹ ಸೇರುವ …

Read More »

ಮೀಟೂ ಕೇಸ್; ನಟ ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿದ್ದ ಮೀಟೂ ಆರೋಪಕ್ಕೆ ಕ್ಲೀನ್ ಚಿಟ್ ಸಿಕ್ಕಂತಾಗಿದೆ. ಅರ್ಜುನ್ ಸರ್ಜಾ ವಿರುದ್ಧದ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.   ನಟ ಅರ್ಜುನ್ ಸರ್ಜಾ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ನಟಿ ಶೃತಿ ಹರಿಹರನ್ ಆರೋಪಿಸಿದ್ದರು. ಅರ್ಜುನ್ ಸರ್ಜಾ ವಿರುದ್ಧ 2018ರಲ್ಲಿ ಕಬ್ಬನ್ ಪಾರ್ಕ್ …

Read More »