Breaking News
Home / ರಾಜ್ಯ (page 1354)

ರಾಜ್ಯ

ಬಿಜೆಪಿಯವರು ಎಲ್ಲಿ ಸೋಲುತ್ತೀರಿ ಅದನ್ನೂ ಹೇಳಿ: ಡಿ.ಕೆ.ಶಿವಕುಮಾರ್

ರಾಮನಗರ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುತ್ತೇವೆ ಎನ್ನುವ ಬಿಜೆಪಿಯವರು, ಸೋಲುವ ಉಳಿದ 10 ಕ್ಷೇತ್ರಗಳು ಯಾವುವು ಎಂಬುದನ್ನೂ ಬಹಿರಂಗಪಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.   ಕನಕಪುರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಬಿಜೆಪಿ 25 ಕ್ಷೇತ್ರಗಳನ್ನೂ ಗೆಲ್ಲಬಹುದು. ಅವರು ಮತ್ತು ಜೆಡಿಎಸ್‌ನವರು ಯಾವಾಗ ಕಿತ್ತಾಡುತ್ತಾರೋ ಯಾವಾಗ ಒಂದಾಗುತ್ತಾರೋ ಅವರಿಗೇ ಗೊತ್ತು’ ಎಂದು ಅವರು ಲೇವಡಿ ಮಾಡಿದರು.

Read More »

ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು

ಬೆಂಗಳೂರು: ಇಲ್ಲಿನ ಗ್ರಾಮೀಣ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಆರ್.ಎನ್.ವಾಸುದೇವ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಆದಾಯಕ್ಕಿಂತ ಶೇ.1408ರಷ್ಟು ಆಸ್ತಿ ಗಳಿಸಿರುವ ವಾಸುದೇವ್, ತನ್ನ, ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿ ಗಳಿಸಿರುವ ಬಗ್ಗೆ ತಿಳಿದುಬಂದಿದೆ. ಬಾಡಿಗೆಗೆ ನೀಡುವ ಉದ್ದೇಶದಿಂದ 5 ಕಡೆ ಮನೆಗಳ ನಿರ್ಮಾಣ ಮಾಡಿದ್ದರು. ವಾಸುದೇವ್​ ಕುಟುಂಬ ಸದಸ್ಯರ ಹೆಸರಲ್ಲಿ 28 ಮನೆಗಳು ಪತ್ತೆ ಆಗಿದೆ. ಕೆಂಗೇರಿಯ ಶಾಂತಿ ವಿಲಾಸ ಲೇಔಟ್​ನ ಚರ್ಚ್ …

Read More »

ಹಾಸನ: 9 ವರ್ಷ ಸಂಸಾರ ಮಾಡಿ ಪತ್ನಿಗೆ ಕೈಕೊಟ್ಟ ಪತಿ; ಬೇರೊಂದು ಯುವತಿ ಜತೆ ಎಂಗೇಜ್ಮೆಂಟ್

ಹಾಸನ: ಪ್ರೀತಿಸಿ ಮದುವೆಯಾಗಿ 9 ವರ್ಷಗಳ ಕಾಲ ಸಂಸಾರ ಮಾಡಿ, ಪತ್ನಿಗೆ ಮೋಸ ಮಾಡಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಮೊದಲ ಮದುವೆ ಮುಚ್ಚಿಟ್ಟು ಮತ್ತೊಂದು ಮದುವೆ ಆಗಲು ಪತಿ ಮುಂದಾಗಿದ್ದು, ಈಗಾಗಲೇ ನಿಶ್ಚಿತಾರ್ಥ (engagement) ಕೂಡ ಮಾಡಿಕೊಂಡಿದ್ದಾನೆ. ಹೀಗಾಗಿ ನೊಂದ ಪತ್ನಿ, ಪತಿ ಹಾಗೂ ಆತನ ಕುಟುಂಬದ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಲೇಜಿನಲ್ಲಿ ಪರಿಚಯವಾಗಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಅಕ್ಷತಾ …

Read More »

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

ಬೆಳಗಾವಿ, ‌-ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ಸೂಚನೆ ನೀಡಿದರು. ಅಧಿವೇಶನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ನ.27) ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಡಿ.ಕೆ ಶಿವಕುಮಾರ್ ಭಾನುವಾರ ಬೆಳಗಾವಿಗೆ

ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಯ ಪ್ರಚಾರಾರ್ಥ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.  ಭಾನುವಾರ ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸುವ ಅವರು,ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದು ಸೋಮವಾರ ದಿನಾಂಕ 29 ರಂದು ಬೆಳಗಾವಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರ ಸಭೆ ನಡೆಸಿ ವಿಧಾನ ಪರಿಷತ್ತಿನ ಚುನಾವಣೆಯ ಕುರಿತು ಚರ್ಚಿಸಲಿದ್ದಾರೆ. ಉಸ್ತುವಾರಿಗಳ ನೇಮಕ ವಿಧಾನ ಪರಿಷತ್ತಿನ ಚುನಾವಣೆಯ ಹಿನ್ನಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿಗೆ ಇಬ್ಬರು ವೀಕ್ಷಕರನ್ನು ಕೆಪಿಸಿಸಿ ನೇಮಿಸಿದೆ. ಬೆಳಗಾವಿ …

Read More »

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿನೀಡದಿದ್ದರೆ ಬಸವರಾಜ ಬೊಮ್ಮಾಯಿಸಹ ಅಧಿಕಾರ ಕಳೆದುಕೊಳ್ಳುತ್ತಾರೆ:ವಿಜಯಾನಂದ ಕಾಶಪ್ಪನವರ

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿನೀಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಹ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರಭವಿಷ್ಯ ನುಡಿದಿದ್ದಾರೆ. ಅವರು ಇಲ್ಲಿನ ಕಳ್ಳಿಗುಡ್ಡ ಗ್ರಾಮದಲ್ಲಿ ಮಾತನಾಡಿ, ಮೀಸಲಾತಿ ನೀಡದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡರು. ಮೀಸಲಾತಿ ನೀಡದೇ ಹೋದರೆ ಈಗ ಬೊಮ್ಮಾಯಿ ಸಹ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಗುಡುಗಿದ್ದಾರೆ. ಸಮುದಾಯದಿಂದ ಒಗ್ಗಟ್ಟಿನ ಹೋರಾಟ ನಡೆದಿದ್ದರೆ ಇಷ್ಟೊತ್ತಿಗಾಗಲೇ ನಮ್ಮ ಮಕ್ಕಳ ಕೈಯಲ್ಲಿ ಸಟಿ೯ಫಿಕೆಟ್ ಇರಬೇಕಾಗಿತ್ತು. ಸಮಾಜವನ್ನು …

Read More »

60 ವರ್ಷದ ಇತಿಹಾಸದಲ್ಲಿ ದೇಶಕ್ಕೆ ಕಾಂಗ್ರೆಸ್​ ಕೊಡುಗೆ ಏನಪ್ಪಾ ಅಂದ್ರೆ ಭ್ರಷ್ಟಾಚಾರ, ಭಯೋತ್ಪಾದನೆ, ನಿರುದ್ಯೋಗ, ಬಡತನ:ಕಟೀಲ್​

ಬಾಗಲಕೋಟೆ : 60 ವರ್ಷದ ಇತಿಹಾಸದಲ್ಲಿ ದೇಶಕ್ಕೆ ಕಾಂಗ್ರೆಸ್​ ಕೊಡುಗೆ ಏನಪ್ಪಾ ಅಂದ್ರೆ ಭ್ರಷ್ಟಾಚಾರ, ಭಯೋತ್ಪಾದನೆ, ನಿರುದ್ಯೋಗ, ಬಡತನ ಎಂದು ಕಾಂಗ್ರೆಸ್​ ಪಕ್ಷದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ದೇಶಕ್ಕೆ ನಾಲ್ಕು ಕೊಡುಗೆ ಕೊಟ್ಟಿದೆ : ನಗರದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಮಟ್ಟದ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, 60 ವರ್ಷದ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷವು ಈ ದೇಶಕ್ಕೆ ನಾಲ್ಕು ಕೊಡುಗೆ …

Read More »

10 ನಿಮಿಷಗಳ ಅಂತರದಲ್ಲಿ ಸಚಿವ ರಮೇಶ ಜಾರಕಿಹೊಳಿ, ಲಖನ್ ಜಾರಕಿಹೊಳಿ ಒಂದೇ ವೇದಿಕೆ ಮೇಲೆ ಪ್ರಾಚರ!!

  ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಮತಯಾಚನೆ ಮಾಡಿದರು. ಇನ್ನು ನನಗೇ ಪ್ರಥಮ ಪ್ರಾಶಸ್ಥ್ಯದ ಮತವನ್ನು ಕೊಡಿ ಎಂದು ಮತಯಾಚನೆ ಮಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಮತಯಾಚನೆ ಮಾಡಿದರು. ಇನ್ನು ಈ ಮೊದಲು 10 ನಿಮಿಷಗಳ ಮೊದಲು ಅದೇ ವೇದಿಕೆ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಪರಿಷತ್ ಬಿಜೆಪಿ …

Read More »

ಸಪ್ನಾ ಬುಕ್ ಸ್ಟಾಲ್ ಇಡೀ ಭಾರತದ ಅತೀ ದೊಡ್ಡ ಪುಸ್ತಕ ಭಂಡಾರ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ ವತಿಯಿಂದ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಸಾಹಿತಿಗಳು ರಚಿಸಿರುವ 66 ಕನ್ನಡ ಪುಸ್ತಕಗಳನ್ನು ಸಿಎಂ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿಗಳು ಎಲ್ಲ ವಿಷಯಗಳ ಪುಸ್ತಕ ಒಂದು ಕಡೆ ಸಿಗಬೇಕು ಎಂದರೆ ಸಪ್ನಾ ಬುಕ್ ಹೌಸ್‍ಗೆ ಹೋಗಬೇಕು. ನಾನು ಹಲವಾರು ಬಾರಿ ಇಲ್ಲಿಗೆ ಭೇಟಿ ಕೊಟ್ಟಿದ್ದೇನೆ. ಹಲವಾರು ಗಂಟೆ ಅಲ್ಲಿ ಕಳೆದಿದ್ದೇನೆ. ಒಳಗಡೆ ಹೋದರೆ ಅಲ್ಲಿನ ಜಗತ್ತೇ …

Read More »

ಮೊದಲನೇ ವೋಟ್ ಬಿಜೆಪಿಗೆ ಹಾಕಿ, ಆದರೆ ಎರಡನೇ ವೋಟ್‍ನ್ನು ಕಾಂಗ್ರೆಸ್‍ಗೆ ಹಾಕಬೇಡಿ: ಬಾಲಚಂದ್ರ ಜಾರಕಿಹೊಳಿ

ಮೊದಲನೇ ವೋಟ್ ಬಿಜೆಪಿಗೆ ಹಾಕಿ, ಆದರೆ ಎರಡನೇ ವೋಟ್‍ನ್ನು ಕಾಂಗ್ರೆಸ್‍ಗೆ ಹಾಕಬೇಡಿ ಎನ್ನುತ್ತಲೇ ಪರೋಕ್ಷವಾಗಿ ಪಕ್ಷೇತರ ಅಭ್ಯರ್ಥಿ, ಸಹೋದರ ಲಖನ್ ಜಾರಕಿಹೊಳಿಗೆ ವೋಟ್ ಹಾಕುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ ನೀಡಿದ್ದಾರೆ. ಹೌದು ಬೆಳಗಾವಿ ಎಂಎಲ್‍ಸಿ ಫೈಟ್ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಈ ಸಂಬಂಧ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಮತದಾರರಿಗೆ ಯಾವುದೇ ರೀತಿ ಗೊಂದಲ ಆಗುತ್ತಿಲ್ಲ. ನಾವಂತೂ ಮೊದಲ ವೋಟ್ ಬಿಜೆಪಿಗೆ ಹಾಕಿ, …

Read More »