ಸಾಗರ: ತಾಲೂಕಿನ ಮುಂಬಾಳು ಗ್ರಾಮದ ಬೋರ್‌ವೆಲ್ ಕಂಟ್ರಾಕ್ಟರ್ ಲೋಕನಾಥ್ ಅವರ ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್ ಕಳ್ಳತನಕ್ಕೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಮಾಲು ಸಹಿತ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಮುಂಬಾಳು ಗ್ರಾಮದ ಲೋಕನಾಥ್ ಅವರು ತಮ್ಮ ಖಾಲಿ ಜಾಗದಲ್ಲಿ ಸಂಗ್ರಹಿಸಿಟ್ಟಿದ್ದ ಬೋರ್‌ವೆಲ್ ಕೇಸಿಂಗ್ ಪೈಪ್‌ಗಳು ಕಳ್ಳತನವಾಗಿರುವುದಕ್ಕೆ ಸಂಬಂಧಪಟ್ಟಂತೆ ಗ್ರಾಮಾಂತರ ಠಾಣೆಗೆ ಫೆ. 17ರಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆ ಪೊಲೀಸರು …
Read More »ಆಯಾ ಮತಕ್ಷೇತ್ರಗಳಿಗೆ ಇವಿಎಂ ರವಾನೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ರ್ಯಾಂಡಮೈಜೇಷನ್(ಯಾದೃಚ್ಛಿಕ) ಪ್ರಕ್ರಿಯೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಏ.4) ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಪ್ರಥಮ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಯಿತು. ಜಿಲ್ಲೆಯ ಹದಿನೆಂಟು ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 4434 ಮತಗಟ್ಟೆಗಳಿವೆ. ಬ್ಯಾಲೆಟ್ ಯುನಿಟ್-5321(ಶೇ.120), 5321 ಕಂಟ್ರೋಲ್ ಯುನಿಟ್(ಶೇ.120) ಮತ್ತು 5765-ವಿವಿಪ್ಯಾಟ್ (ಶೇ.130)ಗಳನ್ನು …
Read More »ಇಂದೇ ಬಿಡುಗಡೆಯಾಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ
ನವದೆಹಲಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದ್ದು, ಕೆಲ ಹೊತ್ತಲ್ಲೇ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆಯಾಗಲಿದೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಮುಕ್ತಾಯವಾಗಿದ್ದು, ಸಭೆ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ. 40 ಕ್ಷೇತ್ರಗಳಿಗೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು …
Read More »ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮೊದಲ ಹಂತದ ಪಟ್ಟಿ, ಬೆಳಗಾವಿ ಉತ್ತರ- ಅನಿಲ್ ಬೆನಕೆ,ದಕ್ಷಿಣ- ಅಭಯ್ ಪಾಟೀಲ್ ?
ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಳಿಸಿದ್ದು, ಮೊದಲ ಹಂತದ ಪಟ್ಟಿ ಸಿದ್ಧಪಡಿಸಿದೆ. 50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿದ್ದು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿರುವ ರಾಜ್ಯ ಬಿಜೆಪಿ ಹೈಕಮಾಂಡ್ ಗೆ ರವಾನಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು: ನಿಪ್ಪಾಣಿ- ಶಶಿಕಲಾ ಜೊಲ್ಲೆ ಕುಡುಚಿ- ಪಿ ರಾಜೀವ್ ರಾಯಭಾಗ- …
Read More »ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ
ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಮದರಿ ಹತ್ತಿರ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಯ ಮೇಲೆ ಚುನಾವಣಾ ಅಧಿಕಾರಿಗಳು ಇಂದು ರಾತ್ರಿ ಎರಡನೇ ಬಾರಿ ದಾಳಿ ನಡೆಸಿದ್ದು ದಾಳಿಯ ವೇಳೆ ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ, ದೇವರ ಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎಸ್.ಆರ್.ಪಾಟೀಲ ಅವರಿಗೆ ಸೇರಿದ ಗೋಡೆ ಗಡಿಯಾರ, ಟೀಶರ್ಟ್ ಸೇರಿ ಅಂದಾಜು 40-50 ಲಕ್ಷ ರೂ ಮೌಲ್ಯದ ಸಾಮಗ್ರಿಗಳನ್ನು ಸೀಜ್ ಮಾಡಲಾಗಿದೆ. ಮಾ.27 ಮತ್ತು …
Read More »ಕಿಸ್ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಖುಲಾಸೆ
ಮುಂಬಯಿ : ಚುಂಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ಮುಂಬಯಿಯ ಸೆಷನ್ಸ್ ಕೋರ್ಟ್ ಎತ್ತಿಹಿಡಿದಿದೆ. ರಾಜಸ್ಥಾನದಲ್ಲಿ 2007ರಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಹಾಲಿವುಡ್ ನಟ ರಿಚರ್ಡ್ ಗಿಯರ್ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕವಾಗಿ ಚುಂಬಿಸಿದ್ದಕ್ಕೆ ಕೇಸು ದಾಖಲಾಗಿತ್ತು. ಇಂಥ ವರ್ತನೆ ದೇಶದ ಸಂಸ್ಕೃತಿಗೆ ಅವಮಾನಿಸುವ ಕೃತ್ಯವೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. 2022ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್, ಶಿಲ್ಪಾ ನಿರ್ದೋಷಿ. ಅವರು ಕೃತ್ಯದ …
Read More »ಬಣ ರಾಜಕೀಯ ಮಾಡಿದರೆ ಶಾಸ್ತಿ; ಬೆಳಗಾವಿ ಮುಖಂಡರಿಗೆ ಜೋಶಿ ಎಚ್ಚರಿಕೆ
ಬೆಳಗಾವಿ: ಯಾವುದೇ ಕಾರಣಕ್ಕೂ ಗುಂಪುಗಾರಿಕೆ ರಾಜ ಕಾರಣ, ಬಣ ರಾಜಕೀಯಕ್ಕೆ ಅವಕಾಶ ಇಲ್ಲ. ಇನ್ನೊಬ್ಬರ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸಿ ಜಿಲ್ಲೆಯಿಂದ ಕನಿಷ್ಠ 15 ಸ್ಥಾನಗಳನ್ನು ಗೆಲ್ಲಬೇಕು. ಏನೇ ಅಸಮಾಧಾನ ಇದ್ದರೂ ನಮ್ಮ ಜತೆ ನೇರವಾಗಿ ಮಾತನಾಡಬೇಕು. – ಇದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡ ರಿಗೆ ನೀಡಿದ ಖಡಕ್ ಸೂಚನೆ.ಚುನಾವಣೆ ಸಂದರ್ಭದಲ್ಲಿ ಬಣ ರಾಜಕೀಯಕ್ಕೆ ಅಂತ್ಯ ಹಾಡ …
Read More »ಡಿ.ಕೆ.ಶಿ. ವಿರುದ್ಧ FIR ದಾಖಲು
ಮಂಡ್ಯ: ಮಂಡ್ಯದಲ್ಲಿ ರೋಡ್ ಶೋ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ ಹಣ ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶದಂತೆ …
Read More »ರಾಮನವಮಿಯಂದು ರಾಮನ ಅವತಾರ ಫಸ್ಟ್ ಪೋಸ್ಟರ್ ಬಿಡುಗಡೆ
ಬೆಂಗಳೂರು: ಕವಲುದಾರಿ ಖ್ಯಾತಿಯ ರಿಷಿ ರಾಮನ ಅವತಾರ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ರಾಮನವಮಿಯ ಸಂದರ್ಭದಲ್ಲಿ ತಯಾರಕರು ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಸುನಿ ನಿರ್ದೇಶನದ ‘ಚಮಕ್’ ಚಿತ್ರದಲ್ಲಿ ಸಹಾಯಕ ನಿರ್ದೇಶಕ ಮತ್ತು ಬರಹಗಾರನಾಗಿದ್ದ ವಿಕಾಸ್ ಪಂಪಾಪತಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಡ್ರಾಮಾ ಆಗಿರುವ ಈ ಚಿತ್ರದಲ್ಲಿ ಶುಭ್ರ ಅಯ್ಯಪ್ಪ, ಪ್ರಣೀತಾ ಸುಭಾಷ್ ಮತ್ತು ಅರುಣ್ ಸಾಗರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ …
Read More »ಉಡುಪಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯಕ್ಕೆ ಸ್ವಯಂ ನಿವೃತ್ತಿ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕುಂದಾಪುರ ವಾಜಪೇಯಿ ಎಂದು ಖ್ಯಾತಿ ಪಡೆದಿದ್ದ ಜನಮೆಚ್ಚುಗೆಯ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣೆ ರಂಗಕ್ಕೆ ಗುಡ್ ಬೈ ಹೇಳಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕುಂದಾಪುರ ವಿಧಾನಸಭೆ ಕ್ಷೇತ್ರವನ್ನು ಕಮಲದ ಪಾಳಾಯಕ್ಕೆ ವಶ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಪಕ್ಷದ ಜನಪ್ರಿಯ ಶಾಸಕರಾದ ಸೋಲಿಲ್ಲದ ಸರದಾರರಾಗಿ ಮೇರೆದ ಹಾಲಾಡಿ ಶ್ರೀನಿವಾಸ ಶೆಟ್ಟಿ …
Read More »
Laxmi News 24×7