Breaking News

ರಾಜ್ಯ

ರಾಜ್ಯಪಾಲರ ನೇಮಕದಲ್ಲೂ ಕೇಂದ್ರದಿಂದ ಚಾಣಾಕ್ಷ ನಡೆ

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳಿಗೆ ವಿಶೇಷ ಸ್ಥಾನಮಾನವಿದೆ. ರಾಜ್ಯಪಾಲರು ಆಯಾಯ ರಾಜ್ಯಗಳ ಪ್ರಥಮ ಪ್ರಜೆಯಾಗಿದ್ದು ಇವರನ್ನು ಕೇಂದ್ರ ಸರಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ಅವರು ನೇಮಕ ಮಾಡುತ್ತಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ನಡುವಣ ಕೊಂಡಿಯಾಗಿ ರಾಜ್ಯಪಾಲರು ಕರ್ತವ್ಯ ನಿರ್ವಹಿಸುತ್ತಾರೆ. ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾದಾಗ ರಾಜ್ಯಪಾಲರ ಪಾತ್ರ ಅತೀ ಮಹತ್ವದ್ದಾಗಿರುತ್ತದೆ. ರವಿವಾರದಂದು ಕೇಂದ್ರ ಸರಕಾರದ ಶಿಫಾರಸಿನಂತೆ ಹೊಸದಾಗಿ …

Read More »

JDS ಶಾಸಕರು ಕಾಂಗ್ರೆಸ್ ಸೇರುವುದು ಖಚಿತ

ರಾಯಚೂರು: ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ನೂರಕ್ಕೆ ನೂರರಷ್ಟು ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರು 100 ಪರ್ಸೆಂಟ್ ಕಾಂಗ್ರೆಸ್ ಗೆ ಬರ್ತಾರೆ. ಯಾಕೆ ಅನುಮಾನಾನಾ? ಎಂದು ಪ್ರಶ್ನಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಯಾವತ್ತು ಬೇಕಾದರೂ ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ತಿಳಿಸಿದ್ದಾರೆ. ಅರಸಿಕೆರೆ ಜೆಡಿಎಸ್ ಶಾಸಕರಾಗಿರುವ ಶಿವಲಿಂಗೇಗೌಡರಿಗೆ …

Read More »

ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟ

ಬೆಂಗಳೂರು: ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟಿರುವ ಘಟನೆ ಬೆಂಗಳೂರಿನ ಮುನೇಶ್ವರ ಬ್ಲಾಕ್ ನಲ್ಲಿ ನಡೆದಿದೆ. ಚಿನ್ನ ಗಿರವಿ ಇಟ್ಟಿದ್ದಕ್ಕೆ ಕೇವಲ 50 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿ ಗಿರವಿ ಅಂಗಡಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಿರವಿ ಅಂಗಡಿ ಮಾಲೀಕ ಭರತ್ ಲಾಲ್ (54) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್. ಶೀಘ್ರವೇ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ ಸೃಷ್ಟಿಸಿದ ನೋಂದಣಿಗಳನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲಾಗುವುದು ಇದರಿಂದ …

Read More »

ಕುಮಾರಸ್ವಾಮಿ ಸೂಚಿಸಿದ ಕಡೆ ಭವಾನಿ ಸ್ಪರ್ಧಿಸುತ್ತಾರೆ: ಎಚ್‌.ಡಿ.ರೇವಣ್ಣ

ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಕುಟುಂಬದಲ್ಲಿ ಒಡಕಿಲ್ಲ. ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಸೂಚಿಸುವ ಕ್ಷೇತ್ರದಿಂದಲೇ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ’ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.   ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಗೊಂಡನಹಳ್ಳಿಯಲ್ಲಿ ಶನಿವಾರ ನಡೆದ ಹಳ್ಳಿಕಾರ ಮಠ ಸಮರ್ಪಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಭವಾನಿ ರೇವಣ್ಣ ಅವರ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಭವಾನಿ ಅಷ್ಟೇ ಏಕೆ ಪಕ್ಷದ …

Read More »

ಚುನಾವಣೆ ರೂಪುರೇಷೆ: ಆಯೋಗ ಸಿದ್ಧತೆ- ಮತಗಟ್ಟೆ ವರದಿ ಸಿದ್ಧಪಡಿಸಲು ಸೂಚನೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರೂಪುರೇಷೆ ಸಿದ್ಧಪಡಿಸುತ್ತಿರುವ ಚುನಾವಣಾ ಆಯೋಗ, ರಾಜ್ಯದ ವಲಯವಾರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದೆ. ಮೈಸೂರು, ಕಲಬುರಗಿಯಲ್ಲಿ ಒಂದು ಸುತ್ತಿನ ಸಭೆ ನಡೆಸಿರುವ ಆಯೋಗದ ಅಧಿಕಾರಿಗಳು, ಚುನಾವಣೆ ಸಿದ್ಧತೆ ಕೆಲಸ ಆರಂಭಿಸುವಂತೆ ಜಿಲ್ಲಾಧಿಕಾರಿಗಳು, ಎಸ್‌ಪಿಗಳು ಹಾಗೂ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.   ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಕಮಿಷನರ್‌ ಹಾಗೂ ಕಮಿಷನರೇಟ್ ವ್ಯಾಪ್ತಿಯ ಡಿಸಿಪಿಗಳ ಜೊತೆ ಶುಕ್ರವಾರ ಸಭೆ ನಡೆಸಿದ ಆಯೋಗ, ಮತಗಟ್ಟೆ ಹಂತದಲ್ಲಿ …

Read More »

ಬೆಳಗಾವಿ: ‘ಸರ್ಕಾರದ ಮೇಲೆ ಅವಲಂಬನೆ ಬಿಡಿ’

ಬೆಳಗಾವಿ: ‘ಸರ್ಕಾರಿ ಯೋಜನೆಗಳ ಮೇಲೆಯೇ ಪ್ರತಿಯೊಬ್ಬರು ಅವಲಂಬಿತರಾದರೆ ದೇಶ ಪ್ರಗತಿ ಹೊಂದುವುದು ಕಷ್ಟ. ಹಾಗಾಗಿ ದೇಶ ಮತ್ತು ತನಗೆ ಏನು ನೀಡುತ್ತಿದೆ ಎಂಬ ಸ್ವಾರ್ಥ ಚಿಂತನೆಯನ್ನು ತೊರೆಯುವುದು ಮುಖ್ಯ. ದೇಶ ಮತ್ತು ಸಮಾಜದ ಪ್ರಗತಿಗೆ ಶ್ರಮಿಸುವ ಅವಶ್ಯಕತೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ಪ್ರೊ.ತಳವಾರ ಸಾಬಣ್ಣ ಹೇಳಿದರು.   ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ನೇತೃತ್ವದಲ್ಲಿ ಶನಿವಾರ ಜರುಗಿದ ಪಂಡಿತ …

Read More »

ಕಾಣೆಯಾಗಿದ ಗೋಕಾಕ ಪ್ರತಿಷ್ಠಿತ ಉದ್ಯಮಿ ಶವವಾಗಿ ಪತ್ತೆ

ಗೋಕಾಕ : ಗೋಕಾಕ್ ನಗರದ  ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ರಾಜು/ಮುನ್ನಾ ಝಂವರ ಎಂಬ ಗೋಕಾಕ ನಗರದ ಉದ್ಯಮಿ ಶುಕ್ರವಾರ ಸಂಜೆ 6:00 ರ ಸುಮಾರಿಗೆ ನಗರದ ಸಿಟಿ ಹೆಲ್ತ್ ಕೇರ್ ವೈದ್ಯ ಸಚಿನ್ ಶಿರಗಾಂವಿ ಜೊತೆ ಸೇರಿ ಮಾತುಕತೆ ನಡೆಸಿದ ನಂತರ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಸಹಾ ಅಷ್ಟೇ ಹೊತ್ತಿಗೆ ಬಂದ್ ಆಗಿತ್ತು. ಈ ಬಗ್ಗೆ ರಾಜು …

Read More »

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ನಾಳೆ ಬೆಂಗಳೂರಿನಲ್ಲಿ `ಏರೋ ಇಂಡಿಯಾ-2023′ ಉದ್ಘಾಟನೆ

ಬೆಂಗಳೂರು : ಫೆಬ್ರವರಿ 13 ರ ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್​ಶೋ ವೈಮಾನಿಕ ಪ್ರದರ್ಶನ ನಡೆಯಲಿದೆ. ಹೀಗಾಗಿ ನಗರದ ಹಲವು ರಸ್ತೆಗಳಲ್ಲಿ ಕೆಲವೊಂದು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರದ ಯಲಹಂಕ ವಾಯುಸೇನಾ ನೆಲೆಯಲ್ಲ ದಿ:13-02-2023 ರಿಂದ 17-02-2023 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ-2023 ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ದಿ:13- 02-2023 ರ ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿಗಳು, ರಾಷ್ಟ್ರೀಯ ಮತ್ತು …

Read More »

ಹಿಂದೂ-ಮುಸ್ಲಿಂ ಬೇಧ ಮಾಡುವವರನ್ನು ಮನೆಯಲ್ಲಿ ಕುಳ್ಳಿರಿಸಿ: ಜನಾರ್ದನ ರೆಡ್ಡಿ

ಗಂಗಾವತಿ: ಗಂಗಾವತಿ ನಗರ ಮತ್ತು ಕ್ಷೇತ್ರದಾದ್ಯಂತ ಕೆಲವರು ಹಿಂದೂ-ಮುಸ್ಲಿಂ ಬೇಧಭಾವ ಮಾಡುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಂಡು ಗೆಲುವು ಪಡೆದು ಸ್ವಾರ್ಥ ಸಾಧಿಸುತ್ತಿದ್ದು ಕ್ಷೇತ್ರದ ಮತದಾರರು ಅಂತವರನ್ನು ಮನೆಯಲ್ಲಿ ಕುಳ್ಳಿರಿಸುವ ಮೂಲಕ ಎಲ್ಲರಿಗೂ ಆದ್ಯತೆ ನೀಡುವವರನ್ನು ಗೆಲ್ಲಿಸಿ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡುವಂತೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮನವಿ ಮಾಡಿದರು.   ಅವರು ನಗರದ ಸಂತೆಬಯಲು-ಮಹೆಬೂಬನಗರದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ …

Read More »