ಬೆಂಗಳೂರು, ಜನವರಿ 21: ಕರ್ನಾಟಕ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಉಳಿದಿದೆ. ಮತದಾರರನ್ನು ಸೆಳೆಯುವಲ್ಲಿ ಮೂರು ಪಕ್ಷಗಳು ಹಲವಾರು ಕಸರತ್ತು ನಡೆಸಿವೆ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಂಚರತ್ನ ಯಾತ್ರೆ ನಡೆಸುತ್ತಿದೆ. ಆಡಳಿತಾರೂಢ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತವಾಗಿದೆ. ಕಾಂಗ್ರೆಸ್ ಪಕ್ಷವು ಪ್ರಜಾಧ್ವನಿ ಯಾತ್ರೆಯನ್ನು ಕೈಗೊಂಡಿದೆ. ಈ ಬಾರಿಯ ಚುನಾವಣೆ ಮೂರು ಪಕ್ಷಗಳಿಗೆ ಅಗ್ನಿಪರೀಕ್ಷೆಯಾಗಲಿದೆ. ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬಂದು ಹೋಗುತ್ತಿದ್ದಾರೆ. ಇತ್ತ ಕಾಂಗ್ರೆಸ್‌ನಿಂದಲೂ ಪ್ರಿಯಾಂಕಾ ಗಾಂಧಿ …
Read More »ಜನಾರ್ಧನ ರೆಡ್ಡಿ ವಾಪಸ್ ಬಿಜೆಪಿಗೆ.? ವರಿಷ್ಠರು ನಿರ್ಧರಿಸಲಿ :B.L. ಸಂತೋಷ್
ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ವಿರುದ್ಧ ಅಸಮಾಧಾನಗೊಂಡು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸ್ಥಾಪನೆ ಮಾಡಿರುವ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ನಾಯಕರು ಜನಾರ್ಧನ ರೆಡ್ಡಿ ಮನವೊಲಿಕೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ರಾಜ್ಯ ಬಿಜೆಪಿ ನಾಯಕರ ಸಭೆಯಲ್ಲಿ ಜನಾರ್ಧನ ರೆಡ್ದಿ ಅವರನ್ನು ವಾಪಸ್ ಕರೆತರಬೇಕು ಎಂದು ಬಿಜೆಪಿ ನಾಯಕರು ಬಿ.ಎಲ್. ಸಂತೋಷ್ ಅವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಭೆಯಲ್ಲಿ ಮಾತನಾಡಿದ ಬಿ.ಎಲ್. ಸಂತೋಷ್, ಜನಾರ್ಧನ …
Read More »ಈಬಾರಿಯು ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲುವುದು ಎಂದ ಸಿದ್ದರಾಮಯ್ಯ
ಹಿಂದಿನ ಚುನಾವಣೆಯಲ್ಲಿಯೂ ನನ್ನನ್ನು ಸೋಲಿಸಲು ಬಾದಾಮಿಗೆ ಸ್ವತ: ಅಮಿತ್ ಶಾ ಅವರೇ ಬಂದಿದ್ದರು. ನನ್ನ ವಿರುದ್ಧ ಶ್ರೀರಾಮುಲು ಅವರನ್ನು ಕಣಕ್ಕಿಲಿಸಿದರು. ಆದರೂ ಬಾದಾಮಿಯಲ್ಲಿ ಜನರು ನನ್ನನ್ನು ಗೆಲ್ಲಿಸಿದರು. ಈಬಾರಿಯು ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಾರೇ ಬಂದರೂ ಕೋಲಾರದಲ್ಲಿ ನಾನೇ ಗೆಲ್ಲುತ್ತೇನೆ. ಬಾದಾಮಿಯಲ್ಲಿ ನನ್ನನ್ನು ಸೋಲಿಸಲು ಕೇಂದ್ರ ಸಚಿವ ಅಮಿತ್ ಶಾ ಬಂದಿದ್ದರು. ಅಶೋಕ್ …
Read More »ಸಂಚಲನ ಉಂಟು ಮಾಡಿದ ಪಿಎಸ್‌ಐ ಪರೀಕ್ಷಾ ಅಕ್ರಮ ಕಿಂಗ್ ಪಿನ್ ಆರ್.ಡಿ.ಪಾಟೀಲ್ ವಿಡಿಯೋ!
ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಗುರುವಾರ ರಾತ್ರಿ ಮನೆಯಿಂದ ಪರಾರಿಯಾದ ಬೆನ್ನಲ್ಲೇ ಅಜ್ಞಾತ ಸ್ಥಳದಿಂದ ವಿಡಿಯೋ ಒಂದನ್ನು ಹರಿಬಿಟ್ಟಿದ್ದಾರೆ. ಜನ ಬಯಸಿದರೆ 2000 23ರ ಚುನಾವಣೆಯಲ್ಲಿ ತಾವು ಕಣಕ್ಕಿಳಿಯಲು ತಯಾರಾಗಿದ್ದೇನೆ ಎನ್ನುವ ಸಂದೇಶವನ್ನು ರವಾನೆ ಮಾಡುವ ಮೂಲಕ ಅಫ್ಜಲ್ಪುರ ವಿಧಾನಸಭಾ ಕ್ಷೇತ್ರವಲ್ಲದೆ ರಾಜ್ಯದಲ್ಲಿ ಹೊಸ ಸಂಚಲನ ಉಂಟು ಮಾಡಿದ್ದಾರೆ. ವಿಡಿಯೋದಲ್ಲಿ ತಮ್ಮ ಅಭಿಮಾನಿ ಕುಲಕ್ಕೆ ನಮಸ್ಕಾರ ಹೇಳಿರುವ ರುದ್ರಗೌಡ ಪಾಟೀಲ, ‘ರಾಜಕೀಯ ಕುತಂತ್ರ ಮಾಡಿ …
Read More »ಕೊನೆಯ ದಿನದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸಂಭ್ರಮದ ಸಿದ್ದತೆ
ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಇಂದು ಸಂಭ್ರಮದ ತೆರೆ ಬೀಳಲಿದ್ದು, ಕೊನೆಯ ದಿನದಂದು ಮಹಾ ದಾಸೋಹ ಭವನದಲ್ಲಿ ದಾಸೋಹ ಸಿದ್ದತಾ ಕಾರ್ಯ ನಡೆದಿದೆ. ಪ್ರತಿ ವರ್ಷವೂ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ 15 ದಿನಗಳ ನಡೆಯಲಿದೆ. ಜ.8 ರಂದು ಮಹಾ ರಥೋತ್ಸವ ನಡೆದಿದೆ. ಮೂರು ದಿನಗಳ ಕಾಲ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡಿವೆ. ಇಂದು ಅಮವಾಸ್ಯೆ ನಿಮಿತ್ತ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ
*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಫೆ.10 ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರು: ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, …
Read More »ಅವರಿಗಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡೋಣ: ಬಹಿರಂಗ ಸಭೆಯಲ್ಲಿ ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಈ ಬಾರಿ ಕಾಂಗ್ರೆಸ್ ಸೋಲಿಸಲೇಬೇಕು. ಇದಕ್ಕಾಗಿ ಅವರು 3 ಸಾವಿರ ರೂ. ಗಿಫ್ಟ್ ಕೊಟ್ಟರೆ ನಾವು 6 ಸಾವಿರ ರೂ. ಗಿಫ್ಟ್ ಕೊಡುತ್ತೇವೆ. ಅವರು ಖರ್ಚು ಮಾಡಿದ್ದಕ್ಕಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡುತ್ತೇವೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುಳೇಬಾವಿಯಲ್ಲಿ ಶುಕ್ರವಾರ ಸಂಜೆ ನಡೆದ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಹಿರಂಗ ಸಭೆಯಲ್ಲಿ ಅವರು …
Read More »ಇಂದಿನಿಂದ ರಾಜ್ಯದಲ್ಲಿ 9 ದಿನ ‘ಬಿಜೆಪಿ ಸಂಕಲ್ಪ ಅಭಿಯಾನ’ : ವಿಜಯಪುರದಲ್ಲಿ ಜೆ.ಪಿ ನಡ್ಡಾ ಚಾಲನೆ
ಬೆಂಗಳೂರು: ಇಂದಿನಿಂದ (ಜ.21) ಜ. 29ರವರೆಗೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಭಿಯಾನ ನಡೆಯಲಿದ್ದು, ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಜ.21 ಇಂದು ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಜೆ.ಪಿ ನಡ್ಡಾ ಚಾಲನೆ ನೀಡಲಿದ್ದಾರೆ. ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಜೆ.ಪಿ ನಡ್ಡಾ, ಬಳಿಕ ವಿಜಯಪುರದಲ್ಲಿ …
Read More »18 ಕ್ಯಾರೆಟ್ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ
ಸೂರತ್: ಇತ್ತೀಚೆಗೆ ಜರುಗಿದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್ ಚಿನ್ನದಿಂದ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್‌ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 …
Read More »
Laxmi News 24×7