Breaking News

ರಾಜ್ಯ

ವರ್ಗಾವಣೆ ದಂಧೆ: 2022ರ ಮೊದಲ ವರ್ಗಾವಣೆ ಸಂಭ್ರಮಿಸಿದ್ದ ಸ್ಯಾಂಟ್ರೊ ರವಿ

ಬೆಂಗಳೂರು: ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್‌. ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದನೆಂಬ ಆರೋಪ ಕೇಳಿಬಂದಿದೆ.   ಸ್ಯಾಂಟ್ರೊ ರವಿ ವಿರುದ್ಧ ಮೈಸೂರು ವಿಜಯನಗರ ಠಾಣೆಗೆ ಜ. 2ರಂದು ದೂರು ನೀಡಿರುವ ಎರಡನೇ ಪತ್ನಿ, ವಾಟ್ಸ್‌ಆಯಪ್‌ ಸಂದೇಶ ಹಾಗೂ ಸ್ಟೇಟಸ್‌ಗಳನ್ನು ಪುರಾವೆಯಾಗಿ ನೀಡಿದ್ದಾರೆ. ಆರೋಪಿ ರವಿ ತನ್ನ ಸ್ಟೇಟಸ್‌ಗಳಲ್ಲಿ ವರ್ಗಾವಣೆಗೆ ಸಂಬಂಧಪಟ್ಟಂತೆ …

Read More »

ಹಲವು ಅಚ್ಚರಿಗಳ ಆಚರಣೆ ಮಕರ ಸಂಕ್ರಾಂತಿ

ಮಾನವ ಉತ್ಸವಪ್ರಿಯ. ದೇವತಾ ಉತ್ಸವಗಳನ್ನು ನಡೆಸುವುದು, ಹಬ್ಬಹರಿದಿನಗಳನ್ನು ಆಚರಿಸುವುದು ಎಂದರೆ ಎಲ್ಲಿಲ್ಲದ ಸಡಗರ. ಆದ್ದರಿಂದಲೇ ಕಾಳಿದಾಸ ಉತ್ಸವಪ್ರಿಯಾಃ ಖಲು ಮನುಷ್ಯಾಃ ಎಂದಿದ್ದಾನೆ.ನಾವು ಆಚರಿಸುವ ಉತ್ಸವಗಳಾಗಲಿ, ಹಬ್ಬಗಳಾಗಲಿ ವಿಶೇಷ ಅರ್ಥವನ್ನೊಳಗೊಂಡಿದೆ, ಪ್ರಾಕೃತಿಕ ಸಂಬಂಧ ವಿದೆ. ಅಧ್ಯಾತ್ಮದ ಹಿನ್ನೆಲೆಯಿದೆ. ವೈಜ್ಞಾನಿಕ ಪರಿಕಲ್ಪನೆ ಯಿದೆ. ಸುಸಂಸ್ಕೃತ ಮನುಕುಲದ ಹಂಬಲವಿದೆ. ಪಶುತ್ವ ವನ್ನು ಕಳೆದು ಮಾನವತ್ವದಿಂದ ದೈವತ್ವಕ್ಕೇ ರಿಸುವ ಉದಾತ್ತ ಭಾವವಿದೆ. ಪ್ರಾಕೃತಿಕ ಬದಲಾವಣೆಯನ್ನು ಗುರುತಿಸಿ ಅದು ಮನುಕುಲದ ಮೇಲೆ ಬೀರುವ ಪ್ರಭಾವವನ್ನು ನೆನಪಿಸುವು ದಕ್ಕಾಗಿ …

Read More »

ಒಂದೂವರೆ ವರ್ಷದಿಂದ ನಿರೀಕ್ಷೆಯಲ್ಲಿದ್ದ ಬೆಳಗಾವಿ ಮೇಯರ್, ಉಪಮೇಯರ್ ಚುನಾವಣೆ ದಿನಾಂಕ ಪ್ರಕಟ

ಬೆಳಗಾವಿ – ಒಂದೂವರೆ ವರ್ಷದಿಂದ ನಿರೀಕ್ಷೆಯಲ್ಲಿದ್ದ ಬೆಳಗಾವಿ ಮೇಯರ್, ಉಪಮೇಯರ್ ಚುನಾವಣೆ ದಿನಾಂಕ ಪ್ರಕಟವಾಗಿದೆ. ಪ್ರಾಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಸಾಮಾನ್ಯ ವರ್ಗದ ಮಹಿಳೆಗೆ ಮೇಯರ್ ಹಾಗೂ ಹಿಂದುಳಿದ ಬ ವರ್ಗದ ಮಹಿಳೆಗೆ ಉಪಮೇಯರ್ ಸ್ಥಾನ ಮೀಸಲಾಗಿದೆ. ಫೆಬ್ರವರಿ 6ರಂದು ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಗೆ ನಾಮಪತ್ರ ಸ್ವೀಕಾರ ಆರಂಭವಾಗಲಿದೆ. 3 ಗಂಟೆಗೆ ಸಭೆ ಆರಂಭವಾಗಲಿದ್ದು, ನಾಮಪತ್ರ ಪರಿಶೀಲನೆ, ಕ್ರಮ ಬದ್ಧ ನಾಮಪತ್ರಗಳ ಘೋಷಣೆ, …

Read More »

ಸಿದ್ದರಾಮಯ್ಯ ಸೀಟು ಖರೀದಿಸಿದ್ದು ನಾಚಿಕೆಗೇಡು: ಕೋಲಾರ ಸ್ಪರ್ಧೆಗೆ ಬಿಜೆಪಿ ಟೀಕೆ

ಬೆಂಗಳೂರು: ಕೋಲಾರದಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ಟೀಕೆ ಮಾಡಿದೆ. ‘ಇಷ್ಟು ದಿನ ಹುಡುಕಾಟ ನಡೆಸಿ ಈ ಸೀಟು ಖರೀದಿಸಿರುವ ಸಂಗತಿ ನಿಜಕ್ಕೂ ನಾಚಿಕೆಗೇಡಿನದ್ದು’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.   ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರಿಗಾಗಿ ಜೆಡಿಎಸ್‌ ಶಾಸಕ ಶ್ರೀನಿವಾಸ ಗೌಡ ಅವರು ಕ್ಷೇತ್ರ ತ್ಯಾಗ ಮಾಡುತ್ತಿರುವುದು, ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀನಿವಾಸಗೌಡ ಅವರು ತಮ್ಮ ಆಪ್ತರೊಂದಿಗೆ ಹೇಳಿಕೊಂಡಿರುವುದು …

Read More »

ಸಂತೋಷ್ ಖಂಡ್ರಿ ಗೋಕಾಕ ನಗರದ ಯುವಕರ ಕಣ್ಮಣಿ ನಿಧನ: ಸಂತಾಪ ಸೂಚಿಸಿದ ಜಾರಕಿಹೊಳಿ ಕುಟುಂಬ

ಗೋಕಾಕ: ಸಂತೋಷ್ ಖಂಡ್ರಿ ಗೋಕಾಕ ನಗರದ ಯುವಕರ ಕಣ್ಮಣಿ ಅನ್ಯಾಯದ ವಿರುದ್ಧ ಸಮರಕ್ಕೆ ಸಿದ್ದವಾಗುವ ಯುವಕ, ಇವರು ಹಾಗೂ ಸಂಗಡಿಗರೊಂದಿಗೆ ಶಬರಿ ಮಲೆ ಯಾತ್ರೆಗೆ ಗೋಕಾಕ ನಿಂದ ತೆರಳಿದ್ದರು, ಕೇರಳದ ಕಣ್ಣೂರು ರೈಲ್ವೇ ನಿಲ್ದಾಣದ ಬಳಿ ರೈಲ್ವೇ ಅಪಘಾತದಲ್ಲಿ ಇವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ, ಗೋಕಾಕ ನಗರದ ಬಿಜೆಪಿ ಕಾರ್ಯಕರ್ತರು, ಹಾಗೂ ಕರವೇ ಸ್ವಾಭಿಮಾನಿ ಬಣದ ಗೋಕಾಕ ತಾಲೂಕಾಧ್ಯಕ್ಷರಾಗಿ ಕೂಡ ಗುರುತಿಸಿ ಕೊಂಡಿದ್ದಾರೆ, ಸಾಹುಕಾರ ಮನೆತನದ ಚಿಕ್ಕವರು ಹಾಗೂ ದೊಡ್ಡವರ …

Read More »

ಸಿದ್ದರಾಮಯ್ಯ 2 ಕ್ಷೇತ್ರದಲ್ಲಿ ಸ್ಪರ್ಧಿಸಲಿ: ಹರಿದಾಡುತ್ತಿದೆ ದೇವರ ಸೂಚನೆ ವಿಡಿಯೊ

ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂದು ಮಳವಳ್ಳಿ ತಾಲ್ಲೂಕು ಚೊಟ್ಟನಹಳ್ಳಿ ಗ್ರಾಮದ ಆದಿನಾಡು ಚಿಕ್ಕಮ್ಮ ತಾಯಿ ಹೇಳಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಸಿದ್ದರಾಮಯ್ಯ ಅವರ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಈಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಆದಿನಾಡು ಚಿಕ್ಕಮ್ಮ ತಾಯಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.ದೇವರ …

Read More »

ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಒಂದು ಮಗುವಿನ ರಕ್ಷಣೆ

ಬಳ್ಳಾರಿ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿಯೂ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಸಿಂಧವಾಳ ಗ್ರಾಮದ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ಒಬ್ಬ ಮಗಳನ್ನು ರಕ್ಷಿಸಲಾಗಿದೆ. ಲಕ್ಷ್ಮಿ (35), ಶಾಂತಿ (3), ವೆನ್ನೆಲ (4) ಕಾಲುವೆಗೆ ಹಾರಿದ ದುರ್ದೈವಿ ತಾಯಿ, ಮಕ್ಕಳು. ಘಟನೆಯಲ್ಲಿ ಒಬ್ಬ ಮಗಳು ವೆನ್ನೆಲಳನ್ನು ಸ್ಥಳೀಯರು ದಡ ಸೇರಿಸಿ ರಕ್ಷಿಸಿದ್ದಾರೆ. ಮೂಲತಃ ಬಳ್ಳಾರಿ ನಗರದ ಗುಗ್ಗರಹಟ್ಟಿ ನಿವಾಸಿಯಾದ ಲಕ್ಷ್ಮಿಳನ್ನು ನೆರೆಯ ಆಂಧ್ರದ ಅಲೂರು ಗ್ರಾಮದ ವೀರಭದ್ರ ಎನ್ನುವವರೊಂದಿಗೆ …

Read More »

ಉಚಿತ ವಿದ್ಯುತ್ ಕಾಂಗ್ರೆಸ್ ನ ಸುಳ್ಳು ಡಂಗುರ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕ ನೀಡದೆ ಸತಾಯಿಸಿದವರು ಈಗ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿರುವುದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಇಂಧನ ಹಾಗೂ‌ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.   ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲಾ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ …

Read More »

ಟ್ರಕ್ ಗೆ ಢಿಕ್ಕಿಯಾದ ಸಾಯಿಬಾಬಾ ಭಕ್ತರಿದ್ದ ಬಸ್: 10 ಮಂದಿ ಮೃತ್ಯು, ಹಲವರಿಗೆ ಗಾಯ

ಮುಂಬೈ: ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ಸೊಂದು ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಟ್ರಕ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭೀಕರ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.     ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಿಎಂ ಶಿಂಧೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ …

Read More »

ಇದೇ 29ಕ್ಕೆ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆ

ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಇದೇ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಮೈಸೂರಿನ ಎಚ್‌.ಡಿ.ಕೋಟೆ ರಸ್ತೆಯಲ್ಲಿರುವ ಅಲ್ಲಾಳು ಗ್ರಾಮದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆಪ್ಟೆಂಬರ್‌ನಲ್ಲಿ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಚಾಮುಂಡಿಪುರಂನ ವಾಸಿಯಾಗಿದ್ದ ವಿಷ್ಣುವರ್ಧನ್‌ ಅವರು ತಮ್ಮ ಶಾಲಾ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದರು. ಮೈಸೂರಿನ ಜತೆ ಉತ್ತಮ ಒಡನಾಟ ಹೊಂದಿದ್ದ ಅವರು ತಮ್ಮ ಹೆಚ್ಚಿನ ಚಲನಚಿತ್ರಗಳ …

Read More »