ಧಾರರವಾಡ: ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬಗ್ಗೆ ನಮ್ಮ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ ಎಂಬುದನ್ನು ಕಾದು ನೋಡಬೇಕಾಗಿದೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೋ ಗೊತ್ತಿಲ್ಲ. ಈ ಬಗ್ಗೆ ಪಕ್ಷದ ವೇದಿಕೆಯಲ್ಲೇ ನಾವು ಚರ್ಚೆ ಮಾಡುತ್ತೇವೆ ಎಂದರು. ನಮ್ಮ …
Read More »ಹುಬ್ಬಳ್ಳಿ ಜಯದೇವ ಆಸ್ಪತ್ರೆ’: ಜ.12ಕ್ಕೆ ಪ್ರಧಾನಿಯಿಂದ ಶಂಕುಸ್ಥಾಪನೆ ಸಾಧ್ಯತೆ
ಬೆಂಗಳೂರು: ಕಿತ್ತೂರು ಕರ್ನಾಟಕ ಭಾಗದ ಬಹುನಿರೀಕ್ಷಿತ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 2023ರ ಜ.12ಕ್ಕೆ ಶಂಕು ಸ್ಥಾಪನೆ ನೆರವೇರಿಸುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನಸಿನ ಕೂಸಾಗಿರುವ ಹುಬ್ಬಳ್ಳಿ ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿದ್ದು 2022-23ರ ರಾಜ್ಯ ಬಜೆಟ್‌ನಲ್ಲಿ 250 ಕೋಟಿ ರೂ. ಘೋಷಿಸಲಾಗಿತ್ತು. ಈ ಹಿಂದೆಯೇ ಹಲವು ಬಾರಿ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆಗೆ …
Read More »ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಮಾಡುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ
ಬೆಂಗಳೂರು: ಕೆಲ ದಿನಗಳಿಂದ ರಾಜಕೀಯ ಮರು ಪ್ರವೇಶದ ಬಗ್ಗೆ ಕುತೂಹಲಕ್ಕೆ ಕಾರಣವಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿಕೊಂಡಿದ್ದಾರೆ. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂದು ಹೊಸ ಪಕ್ಷ ಸ್ಥಾಪಿಸಿ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸುವುದಾಗಿ ಇಂದು ಹೇಳಿದ್ದಾರೆ. ಬಸವಣ್ಣನವರು ಹೇಳಿದ ಹಾಗೆ ಯಾವುದೇ ಜಾತಿ ಮತ ಭೇದ ಇಲ್ಲದ ಹಾಗೆ, ಮೇಲು ಕೀಳು ಇಲ್ಲದ ಹಾಗೆ ಏನೆಲ್ಲಾ ಅಭಿವೃದ್ಧಿ …
Read More »ಅಥಣಿ ಪುರಸಭೆ ಸದಸ್ಯರಿಂದ ಪ್ರತಿಭಟಣೆ
ಅಥಣಿ ಪುರಸಭೆ ಚುನಾವಣೆ ಮುಗಿದು ಇಂದಿಗೆ ವರ್ಷವಾಯ್ತು, ಇದುವರೆಗೂ ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಿಲ್ಲ ಇದರಿಂದ ಪಟ್ಟಣದ ಅಭಿವೃದ್ದಿಗೆ ಹಿನ್ನಡೆಯಾಗುತ್ತಿದೆ. ಸರಕಾರ ಜನತಾ ಜನಾರ್ಧನರಿಗೆ ಮೋಸಮಾಡುತ್ತಿದೆ ಎಂದು ಆರೋಪಿಸಿ ಪುರಸಭೆ ಸದಸ್ಯರು ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟಣೆ ಮಾಡಿದರು. ಪಟ್ಟಣದ ಪುರಸಭೆ ಆವರಣದಲ್ಲಿ ಬೆಳಿಗ್ಗೆ ಪ್ರತಿಭಟಣೆ ಮಾಡುತ್ತಾ ಮಾತನಾಡಿದ ಸದಸ್ಯ ರಾವಸಾಬ ಐಹೊಳೆ ಒಂದು ವರ್ಷವಾಯ್ತು ನಾವು ಆಯ್ಕೆಗೊಂಡು ಇದುವರೆಗೂ ಅಧಿಕಾರ ಸಿಕ್ಕಿಲ್ಲ, ಇದರಿಂದ ವಾರ್ಡಗಳಲ್ಲಿ ಯಾವುದೇ ಅಭಿವೃದ್ದಿ ಕಾರ್ಯವಾಗಿಲ್ಲ, …
Read More »ಹೆಣ್ಣುಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್
ಬೆಳಗಾವಿ: ಸಮಾಜ ಕಲ್ಯಾಣ, ಹಿಂದುಳಿದ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಕ್ರೈಸ್ತ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಂದ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕರಾಟೆ ಪ್ರದರ್ಶನ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್‌ಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಎಲ್ಲಾ …
Read More »ಡಿ.31 ರಿಂದ ಜ.3ರವರೆಗೆ ಗಡಿ ಭಾಗದ ಯಕ್ಸಂಬಾ ಪಟ್ಟಣದಲ್ಲಿ ಪ್ರೇರಣಾ ಉತ್ಸವ
ಚಿಕ್ಕೋಡಿ: ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರುಪ್ ವತಿಯಿಂದ ನಡೆಯುವ 11ನೇ ವರ್ಷದ ಪ್ರೇರಣಾ ಉತ್ಸವ ಡಿ.31 ರಿಂದ ಜ.3 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ ಬಸವ ಪ್ರಸಾದ ಜೊಲ್ಲೆ ತಿಳಿಸಿದರು. ಶನಿವಾರ ತಾಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಗ್ರುಪ್ ಸಭಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜೊಲ್ಲೆ ಗ್ರುಪ್ ಪ್ರೇರಣಾ ಶಕ್ತಿ ಜ್ಯೋತಿಪ್ರಸಾದ ಜೊಲ್ಲೆ ಜನ್ಮದಿನದ ಅಂಗವಾಗಿ ಪ್ರತಿ …
Read More »ಕೋವಿಡ್ ಆತಂಕ | ಹೊಸ ವರ್ಷಕ್ಕೆ ನೂತನ ಮಾರ್ಗಸೂಚಿ ಪ್ರಕಟ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ‘ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಭಾನುವಾರ ಕಂದಾಯ ಸಚಿವ ಆರ್. ಅಶೋಕ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಿ, ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದಾರೆ’ ಎಂದರು. ‘ಬೂಸ್ಟರ್ ಡೋಸ್ ಹೆಚ್ಚಿಗೆ ನೀಡಲು ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಶಿಬಿರ ಏರ್ಪಡಿಸಬೇಕು. …
Read More »ಕೊಲ್ಹಾಪುರದಲ್ಲಿ ಪ್ರತಿಭಟನೆ 26ರಂದು: ಕಿಣೇಕರ್
ಬೆಳಗಾವಿ: ‘ಮರಾಠಿಗರ ಮೇಲೆ ರಾಜ್ಯ ಸರ್ಕಾರ ಮಾಡುತ್ತಿರುವ ಅನ್ಯಾಯ ಖಂಡಿಸಿ ಡಿ.26ರಂದು ಮಹಾರಾಷ್ಟ್ರದ ಕೊಲ್ಹಾಪುರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ್ ಹೇಳಿದರು. ಇಲ್ಲಿನ ಮರಾಠಾ ಮಂದಿರದಲ್ಲಿ ಬುಧವಾರ ನಡೆದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಡಿ.19ರಂದು ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜಿಸಲು ಮುಂದಾಗಿದ್ದೆವು. ಆದರೆ, ಜಿಲ್ಲಾಡಳಿತ ಅನುಮತಿ ಕೊಡದೆ ಮರಾಠಿಗರಿಗೆ ಅನ್ಯಾಯ …
Read More »ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ
ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವೆಡೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. 2015-16ನೇ ಸಾಲಿನಲ್ಲಿ ಸ್ಥಾಪಿಸಿರುವ ಕೆಲವು ಕೃಷಿ ಯಂತ್ರಧಾರೆ ಕೇಂದ್ರಗಳ ಆರು ವರ್ಷಗಳ ಒಡಂಬಡಿಕೆ ಅವಧಿಯು ಮುಕ್ತಾಯವಾಗಿದೆ ಎಂದರು. ಸಂಬಂಧಪಟ್ಟ ಸೇವಾ …
Read More »ಕೋವಿಡ್ ಕರಿಛಾಯೆ: ವಿಧಾನ ಮಂಡಲದ ಅಧಿವೇಶನ ಮೊಟಕು?
ಬೆಳಗಾವಿ, ಡಿ.24: ವಿಶ್ವದ ಅನೇಕ ದೇಶಗಳಲ್ಲಿ ಕೋವಿಡ್ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಮೊಟಕುಗೊಳ್ಳುವ ಸಾಧ್ಯತೆಯಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿಯೂ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಸಂಸತ್‌ನ ಅಧಿವೇಶನವು ಒಂದು ವಾರ ಮುಂಚಿತವಾಗಿ ಮುಂದೂಡಲ್ಪಟ್ಟಿರುವುದರಿಂದ, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನವನ್ನೂ ಅನಿರ್ದಿಷ್ಟಾವಧಿಗೆ ಮುಂದೂಡಲು ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ …
Read More »
Laxmi News 24×7