Breaking News
Home / ರಾಜ್ಯ (page 1512)

ರಾಜ್ಯ

ಭ್ರಷ್ಟಚಾರ ಕೇಸಲ್ಲಿ ಸಿಕ್ಕಿಬಿದ್ದ ಅಧಿಕಾರಿ; ಎಸಿಬಿಗೆ ಮಾಹಿತಿ ನೀಡ್ತೀರಾ? ಎಂದು ಪಕ್ಕದ ಮನೆಯವ್ರ ಮೇಲೆ ಹಲ್ಲೆ

ದಾವಣಗೆರೆ: ಎಸಿಬಿ ದಾಳಿಗೆ ಮಾಹಿತಿ‌ ನೀಡಿದ್ದಾರೆ ಎಂಬ ಆರೋಪ ಮಾಡಿ ಸರ್ಕಾರ ಅಧಿಕಾರಿ ಹಾಗೂ ಸಂಬಂಧಿಕರು ಪಕ್ಕದ ಮನೆಯವರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ನಗರಸಭೆಯ ಯೋಜನಾ ನಿರ್ದೇಶಕ ಎಚ್.ಕೆ.ಕೃಷ್ಣಪ್ಪ ಹಾಗೂ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಅಂತ ಇದೇ ಗ್ರಾಮದ ಎಚ್.ಜೆ.ಗಣೇಶ ಅವರ ಕುಟುಂಬಸ್ಥರಯ ಆರೋಪ ಮಾಡಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

Read More »

ಅರ್ಕಾವತಿ ಹಗರಣ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​​

ಬೆಂಗಳೂರು: ಅರ್ಕಾವತಿ ಲೇಔಟ್ ಭೂ ಅವ್ಯವಹಾರ ಹಗರಣ ಕೇಸ್​ಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾ. ಸಚಿನ್​ ಶಂಕರ್​ ಮಗದುಮ್ ನೇತೃತ್ವದ ವಿಭಾಗೀಯ ಪೀಠದಿಂದ ನೊಟೀಸ್ ಜಾರಿ ಮಾಡಲಾಗಿದ್ದು, ಈ ಮನವಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆಕ್ಷೇಪಣೆ ಬಳಿಕ ನವೆಂಬರ್ 15ಕ್ಕೆ ಅರ್ಜಿ ವಿಚಾರಣೆ ನಡೆಸುವುದಾಗಿ ವಿಭಾಗೀಯ ಪೀಠ …

Read More »

ಕೆಎಂಸಿ ಚುನಾವಣೆ ರದ್ದು ಆದೇಶಕ್ಕೆ ತಡೆ

ಬೆಂಗಳೂರು: ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ (ಕೆಎಂಸಿ) ನಡೆದಿದ್ದ ಚುನಾವಣೆ ರದ್ದುಗೊಳಿಸಿರುವ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಡಾ.ಮಧುಸೂಧನ ಕರಿಗನೂರು ಮತ್ತು ಇತರರು ಸಲ್ಲಿಸಿದ್ದ ರಿಟ್ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ನೇತೃತ್ವದ ವಿಭಾಗೀಯ ಪೀಠ, ಮಧ್ಯಂತರ ಆದೇಶ ನೀಡಿದೆ. ಈ ವಿಷಯದ ಬಗ್ಗೆ ವಿವರಣೆ ಅಗತ್ಯವಿದೆ ಎಂದು ತಿಳಿಸಿದ ಪೀಠ, ಕೆಎಂಸಿ ರಿಜಿಸ್ಟ್ರಾರ್ ಅವರಿಗೆ ನೋಟಿಸ್ ನೀಡಲು ಆದೇಶಿಸಿತು. ‘2020ರ ಜನವರಿ …

Read More »

ಮಕ್ಕಳ ಬ್ಯಾಗ್ ಮೇಲೆ ರಾಜಕೀಯ ನಾಯಕರ ಚಿತ್ರ ಮುದ್ರಿಸುವಂತಿಲ್ಲ: ಹೈಕೋರ್ಟ್

ಮದ್ರಾಸ್ : ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಬ್ಯಾಗ್, ಪಠ್ಯ ಪುಸ್ತಕಗಳನ್ನು ವಿತರಿಸುತ್ತದೆ. ಈ ಸಾಮಾಗ್ರಿಗಳ ಮೇಲೆ ಮುಖ್ಯಮಂತ್ರಿ ಅಥವಾ ಇನ್ಯಾರೇ ರಾಜಕೀಯ ನಾಯಕರ ಚಿತ್ರಗಳನ್ನು ಮುದ್ರಿಸಬಾರದು ಎಂದು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಪಿ.ಟಿ ಆದಿಕೇಶವಲು ಅವರ ನ್ಯಾಯಪೀಠವು ಆದೇಶ ಹೊರಡಿಸಿದೆ. ಮಕ್ಕಳಿಗೆ ಮತದಾನದ ಹಕ್ಕು ಇರುವುದಿಲ್ಲ. …

Read More »

ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಲು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Read More »

ಹಿರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಆತಂಕದಲ್ಲಿ ನದಿ ತೀರದ ಜನ

ಚಿಕ್ಕೋಡಿ: ಹಿರಣ್ಯಕೇಶಿ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ನದಿ ತೀರದಲ್ಲಿರುವ ಜನರಲ್ಲಿ ಆತಂಕ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ಬಳಿ ಹಿರಣ್ಯಕೇಶಿ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ. ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ನಂತರ ಮೊಸಳೆ ಕಾಣಿಸಿಕೊಂಡಿದ್ದು, ಈ ಪರಿಣಾಮ ನದಿ ದಡದಲ್ಲಿನ ಹೊಲಗದ್ದೆಯ ಜನರಿಗೆ ಭಯ ಎದುರಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ …

Read More »

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ: ಹೊರಟ್ಟಿ

ಧಾರವಾಡ: ಚಳಿಗಾಲದ ಅಧಿವೇಶನ ಬೆಳಗಾವಿದಲ್ಲಿ ನಡೆಯುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸಿಎಂ ಇದ್ದಾಗಲೂ ನಾನು ಬೆಳಗಾವಿ ಅಧಿವೇಶನದ ಬಗ್ಗೆ ಪತ್ರ ಬರೆದಿದ್ದೆ, ತೀರ್ಮಾನ ಮಾಡುವಂತೆ ಒತ್ತಾಯ ಮಾಡಿದ್ದೆ. ಆದರೆ ಒಟ್ಟು 900 ಅಧಿಕಾರಿಗಳು, ಶಾಸಕರು ಸೇರಿ ಬಹಳ ಜನ ಆಗುತ್ತಾರೆ. ಈಗ ಮಳೆಗಾಲ ಇದೆ, ಕೋವಿಡ್ ಕೂಡ ಇದೆ ಎಂದು ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಿದರು ಎಂದರು .ಈ …

Read More »

ಇಲಾಖೆಯಲ್ಲಿ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು :ರಾಜ್ಯದ ವಿವಿಧ ಇಲಾಖೆಯಲ್ಲಿನ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದೇ ನಮ್ಮ ಮೊದಲ ಗುರಿ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಕಚೇರಿಗೆ ಬಂದಿದ್ದೇವೆ, ಅಹವಾಲುಗಳನ್ನು ಸ್ವೀಕಾರ ಮಾಡಿದ್ದೇವೆ ಅಲ್ಲದೆ ಪ್ರತೀ ದಿನ ಕಾರ್ಯಾಲಯಕ್ಕೆ ಬಂದು ಅಹವಾಲು ಸ್ವೀಕಾರಕ್ಕೆ ಸೂಚನೆಯನ್ನೂ ನೀಡಿದ್ದೇವೆ ಎಂದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ 1.20 ಕೋಟಿ ಕುಟುಂಬ ಇದೆ. ಅವರಿಗೆ …

Read More »

ಕೋವಿಡ್ : ಮನೆಮನೆಗೆ ತೆರಳಿ ಲಸಿಕೆ ನೀಡಿಯೆಂದು ಆದೇಶಿಸಲು ಸಾಧ್ಯವಿಲ್ಲ : ಸುಪ್ರೀಂ ಅಭಿಪ್ರಾಯ

ನವ ದೆಹಲಿ : ದೇಶದಲ್ಲಿನ ಕೋವಿಡ್ 19 ಪರಿಸ‍್ಥಿತಿಯನ್ನು ಅವಲೋಕಿಸಿದರೇ, ಈಗಿರುವ ಲಸಿಕೆ ನೀತಿಯನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡಲು ಆಗುವುದಿಲ್ಲ, ಮಾತ್ರವಲ್ಲದೇ, ಪ್ರಸ್ತು ಸ್ಥಿತಿಯಲ್ಲಿ ಮನೆ ಮನೆಗೆ ಹೋಗಿ ಲಸಿಕೆಯನ್ನು ನೀಡಿ ಎಂದು ಆದೇಶಿಸಲು ಸಾಧ್ಯವಿಲ್ಲವೆಂದು ಇಂದು(ಸಪ್ಟೆಂಬರ್ 8) ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಯುವ ವಕೀಲರ ಸಂಘವೊಂದು ಅಂಗವಿಕಲರು, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ವರ್ಗದವರಿಗೆ ಹಾಗೂ ಕೋವಿನ್‌ ಪೋರ್ಟಲ್‌ ನಲ್ಲಿ ಹೆಸರು ನೋಂದಾಯಿಸಕೊಳ್ಳಲಾಗದೇ, ಲಸಿಕೆ ಸಿಗದೇ ಸಮಸ್ಯೆ …

Read More »

ಡ್ರಗ್ಸ್​ ‘ಸುಳಿ’ಯಲ್ಲಿ ರಾಣಾ ದಗ್ಗುಬಾಟಿ.. ED ಮುಂದೆ ಹಾಜರ

ಬಾಹುಬಲಿ ನಟಿ, ಟಾಲಿವುಡ್​ ಸ್ಟಾರ್​ ರಾಣಾ ದಗ್ಗುಬಾಟಿ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಎದುರು ಹಾಜರಾಗಿದ್ದಾರೆ. 2017ರ ಡ್ರಗ್ಸ್​ ಪ್ರಕರಣದ ಸಂಬಂಧ ರಾಣಾ ವಿಚಾರಣೆಗೆ ಎದುರಾಗಿದ್ದು, ಹೈದರಾಬಾದ್​​ನ ಇ.ಡಿ ಕಚೇರಿಗೆ ಇಂದು ಬೆಳಗ್ಗೆ ಆಗಮಿಸಿದರು. ಇ.ಡಿ ಅಧಿಕಾರಿಗಳು ಟಾಲಿವುಡ್​​ನ ಹಲವು ನಟ ನಟಿಯರಿಗೆ ಪ್ರಕರಣದ ಸಂಬಂಧ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ವರದಿಗಳ ಅನ್ವಯ 2017ರಲ್ಲಿ ಎಸ್​​​ಐಟಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ರಾಣಾ ವಿಚಾರಣೆಗೆ ಹಾಜರಾಗಿರಲಿಲ್ಲ. …

Read More »