Breaking News
Home / ರಾಜ್ಯ (page 1519)

ರಾಜ್ಯ

ನಾಳೆ ವೀಕೆಂಡ್ ಕರ್ಫ್ಯೂ ಇರುವುದಿಲ್ಲ, ತಮ್ಮ ಗಮನಕ್ಕೆ…

ಗೋಕಾಕ ಕೋವಿಡ್ ಮಹಾಮಾರಿ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಮಾರ್ಗ ಸೂಚಿಯಂತೆ ಗಡಿ ಜಿಲ್ಲೆ ಬೆಳಗಾವಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿತ್ತು. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಹಿಂಪಡೆದು ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.ಗೋಕಾಕ ತಹಸೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಪ್ರತಿಕಾಗೋಷ್ಠಿ ತಿಳಿಸಿದ್ದಾರೆ.

Read More »

ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್ ಟಿಸಿ) 60ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಾಲ್ಕು ಸಾರಿಗೆ ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ ಮುಖ್ಯಮಂತ್ರಿಯವರ ಚಿನ್ನದ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು. ಸಾರಿಗೆ ನಿಗಮಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಗೆ ಐದು …

Read More »

ಬಟ್ಟೆ ಬ್ಯಾಗ್ ಖರೀದಿಯಲ್ಲಿ ರೋಹಿಣಿ ಅಕ್ರಮ: ಸಾ.ರಾ. ಮಹೇಶ್ ಆರೋಪ

ಮೈಸೂರು: ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್‌ಟಿ ಸೇರಿ ₹ 9 ಆಗುತ್ತದೆ. ಆದರೆ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕೈಮಗ್ಗ ಇಲಾಖೆಯವರಿಂದ ಖರೀದಿಸದೆ, ಖಾಸಗಿಯವರಿಂದ ಬ್ಯಾಗ್ ಖರೀದಿಸಿದ್ದಾರೆ. ಈ ಒಂದು ಬ್ಯಾಗ್ ಬೆಲೆ ₹ 52 ಇದೆ ಎಂದು ದಾಖಲೆ …

Read More »

ರಸ್ತೆ ಅಪಘಾತ, ದೇವನಕಟ್ಟಿಯ ಯೋಧ ಮುಂಬೈನಲ್ಲಿ ಸಾವು- ಸ್ವಗ್ರಾಮದಲ್ಲಿ ಅಂತಿಮ ನಮನ

ಚಿಕ್ಕೋಡಿ: ಸೇವೆಗೆ ಹಾಜರಾಗಲು ಹೊರಟಿರುವಾಗ ಸೆಪ್ಟೆಂಬರ್ 1ರಂದು ಮಾರ್ಗಮಧ್ಯೆ ಮುಂಬಯಿ ನಗರದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಯಭಾಗ ತಾಲೂಕಿನ ಯೋಧ ಯಲ್ಲಪ್ಪಾ ಬಾಲಪ್ಪಾ ನಾಯಿಕ ಅವರ ಅಂತ್ಯಸಂಸ್ಕಾರವನ್ನು ತಾಲೂಕಿನ ದೇವನಕಟ್ಟಿಯಲ್ಲಿ ಗುರುವಾರ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಭಾಗ ತಾಲೂಕು ದೇವನಕಟ್ಟಿ ನಿವಾಸಿಯಾದ ಯಲ್ಲಪ್ಪಾ ಅವರು, ಕಳೆದ 9 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ರಾತ್ರಿ ಸೇವೆಗೆ ಹಾಜರಾಗಲು ಸ್ವಗ್ರಾಮದಿಂದ ಜಮ್ಮು-ಕಾಶ್ಮೀರಕ್ಕೆ ಹೊರಟಿರುವಾಗ ಮಾರ್ಗಮಧ್ಯೆ ರಸ್ತೆಯ ಅಪಘಾತದಿಂದ ಸಾವನ್ನಪ್ಪಿದ್ದರು. ಯಲ್ಲಪ್ಪ ಅವರ …

Read More »

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವ ವಿಶ್ವಾಸವಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವ ವಿಶ್ವಾಸವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಜನರು ಈ ಬಾರಿ ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.   ಬೆಲೆ ಏರಿಕೆ ಜನರಿಗೆ ಈಗಾಗಲೇ ಹೊರೆಯಾಗಿದೆ. ಮತ್ತೆ ಎಲ್‍ಪಿಜಿ ಸಿಲಿಂಡರ್ ದರ 25 ರೂ. ಹೆಚ್ಚಿಸಲಾಗಿದೆ. ಇದು ನಿಲ್ಲುವ ಲಕ್ಷಣಗಳಿಲ್ಲ. …

Read More »

ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದ ವ್ಯಕ್ತಿ

ಮಂಗಳೂರು: ಕೊರೊನಾ ವೈರಸ್‌ ಸೋಂಕು ತಡೆಯಲು ನೀಡಲಾಗುತ್ತಿರುವ ಲಸಿಕೆಗಳ ಪೈಕಿ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳ ನಡುವೆ 84 ದಿನಗಳ ಅಂತರ ನಿಗದಿಪಡಿಸಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನಲ್ಲಿ ಬುಧವಾರ 19 ವರ್ಷದ ದಿನಗೂಲಿ ಕಾರ್ಮಿಕರೊಬ್ಬರಿಗೆ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ನೀಡಲಾಗಿದೆ. ಎರಡು ಡೋಸ್ ಲಸಿಕೆ ನೀಡುವುದರ ಪರಿಣಾಮ ಏನಾಗಬಹುದು ಎನ್ನುವುದು ಆರೋಗ್ಯಾಧಿಕಾರಿಗಳು ಊಹಿಸುವುದು ಕಷ್ಟ. ಹೀಗಾಗಿ ಲಸಿಕೆ ಪಡೆದ ವ್ಯಕ್ತಿಯನ್ನು ನಿಗಾದಲ್ಲಿ ಇರಿಸಲಾಗಿದೆ. …

Read More »

SSLC ಪಾಸಾದವರಿಗೆ ಗುಡ್ ನ್ಯೂಸ್: ಡಿಪ್ಲೊಮಾ ಪ್ರವೇಶಕ್ಕೆ ಸೆ. 20 ರವರೆಗೆ ಕಾಲಾವಕಾಶ

2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20 ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20 ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ತಿಳಿಸಿದ್ದಾರೆ. ಪ್ರವೇಶಾವಧಿಯನ್ನು …

Read More »

4000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಸರ್ಕಾರಕ್ಕೆ ಮೊದಲು ರಾಜ್ಯದಲ್ಲಿ 33,000 ಪೊಲೀಸ್ ಹುದ್ದೆಗಳು ಖಾಲಿ ಉಳಿದಿದ್ದವು. ಹೊದ್ದೆ ಕೊರತೆ ನೀಗಿಸುವ ಜೊತೆಗೆ ಇದರೊಂದಿಗೆ ಇನ್ನೂ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಹೆಚ್ಚುತ್ತಿರುವ ಸೈಬರ್ ಕ್ರೈಂ ಸೇರಿ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಅತ್ಯಾಧುನಿಕ ತಂತ್ರಜ್ಞಾನ, ಉಪಕರಣಗಳನ್ನು ಒದಗಿಸಿ …

Read More »

ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ : ಎಸ್.ಜಿ.ನಂಜಯ್ಯನಮಠ

ಬಾಗಲಕೋಟೆ : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನ ಸಾಮಾನ್ಯರು ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ದಿನದಿಂದ ದಿನಕ್ಕೆ ಅಡುಗೆ ಅನೀಲ, ಇಂಧನ, ದಿನ ಬಳಕೆ ವಸ್ತುಗಳ ಬಳಕೆ ದುಪ್ಪಟ್ಟಾಗುತ್ತಿದೆ. ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಆಕ್ರೋಶ ವ್ಯಕ್ತಪಡಿಸಿದರು.

Read More »

ಸೆ.5, 6ರಂದು ರಾಜ್ಯದ ಹಲವೆಡೆ ಹೈಅಲರ್ಟ್‌

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5 ಮತ್ತು 6ರಂದು ಗುಡುಗು ಸಹಿತ ವ್ಯಾಪಕ ಮಳೆ ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈಅಲರ್ಟ್‌ ಘೋಷಿಸಲಾಗಿದೆ. ಸೆ.5 ಮತ್ತು 6ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ …

Read More »