Breaking News
Home / ರಾಜ್ಯ (page 1529)

ರಾಜ್ಯ

ಮಿಸ್ಟರ್‌ ಫರ್ಫೆಕ್ಟ್‌ ʼMS ಧೋನಿʼ ವಿಶ್ವದ 2ನೇ ಶ್ರೀಮಂತ ಕ್ರಿಕೆಟಿಗ : ತಿಂಗಳಿಗೆ ʼಮಾಹಿʼ ಗಳಿಸುವುದೆಷ್ಟು ಗೊತ್ತಾ?

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಗಸ್ಟ್ 2020ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ʼನಿಂದ ನಿವೃತ್ತರಾಗಿರಬಹುದು. ಆದ್ರೆ, ಇದು ಕ್ರಿಕೆಟಿಗನ ಜನಪ್ರಿಯತೆ, ಅಭಿಮಾನಿಗಳು, ಅನುಯಾಯಿಗಳ ಮೇಲೆ ಪರಿಣಾಮ ಬೀರಿಲ್ಲ. ಹಾಗಾಗಿನೇ ಇವ್ರು ಇನ್ನೂ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿ ಉಳಿದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಅನ್ನು ಮುನ್ನಡೆಸುತ್ತಿರುವ ಧೋನಿ, ಜಾಹೀರಾತುಗಳು ಮತ್ತು ಪ್ರೋಮೋಗಳನ್ನ ಒಳಗೊಂಡ ಲೀಗ್ʼನ ಫೇಸ್‌ ಆಗಿದ್ದಾರೆ. ಇನ್ನು ವಿಶ್ವದಾದ್ಯಂತ ಲೀಗ್ʼನ ಬೆಳವಣಿಗೆ ಮತ್ತು …

Read More »

ಕಾಂಗ್ರೆಸ್ ನ 60 ವರ್ಷದ ಆಡಳಿತ ದೇಶಕ್ಕೆ ಶಾಪವಾಗಿತ್ತು; ‘ಕೈ’ ನಾಯಕರಿಗೆ ಸಚಿವ ಶ್ರೀರಾಮುಲು ತಿರುಗೇಟು

ಗದಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷದ ಆಡಳಿತ ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನತೆಗೆ ಶಾಪವಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಶಾಪವಾಗಿತ್ತು. ಆ ಶಾಪದಿಂದ ಮುಕ್ತಿ ದೊರೆತು ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದಿದೆ. ರಾಜ್ಯದಲ್ಲಿ …

Read More »

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಸಚಿವ ಈಶ್ವರಪ್ಪ ಭೇಟಿ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿನೋಬ ನಗರದಲ್ಲಿನ ನಿವಾಸಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಚರ್ಚಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿ ತವರು ಜಿಲ್ಲೆಗೆ ಬಂದಿರುವ ಯಡಿಯೂರಪ್ಪ ಅವರ ಜತೆ ಉಪಾಹಾರ ಸೇವಿಸುತ್ತಾ ಅರ್ಧ ತಾಸು ಮಾತುಕತೆ ನಡೆಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ತಮ್ಮ ಗಮನಕ್ಕೆ ತಾರದೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನೇರವಾಗಿ ಹಣ ಬಿಡುಗಡೆ ಮಾಡಿದ್ದಾರೆ ಎಂದು …

Read More »

ಹಿಂದಿನಿಂದ ಬಂದು ಯುವತಿಗೆ ಮುತ್ತಿಟ್ಟು ಓಡಿದ ಯುವಕ:

ಬೆಂಗಳೂರು ಹಾಡಹಗಲೇ ನಾಲ್ವರು ಪುಂಡರ ಜೊತೆ ಬಂದಿದ್ದ ಓರ್ವ ಯುವಕ 16 ವರ್ಷದ ಅಪ್ರಾಪ್ತೆಗೆ ಮುತ್ತಿಟ್ಟಿದ್ದಾನೆ. ಬೆಂಗಳೂರಿನ ದೊಡ್ಡಬಿದರುಕಲ್ಲು ಬಳಿ ಶನಿವಾರ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಅಪ್ರಾಪ್ತೆ ಕಿರುಚಾಡ್ತಿದ್ದಂತೆ ಯುವಕ ಮುತ್ತು ಕೊಟ್ಟು ಪರಾರಿಯಾಗಿದ್ದಾನೆ. ಮುತ್ತು ನೀಡಿದ್ದು ಅಲ್ಲದೇ ಸೋಮವಾರ ಒಬ್ಬಳೇ ಸಿಗು ಎಂದು ವಾರ್ನಿಂಗ್ ನೀಡಿದ್ದಾನೆ. ಈ ಎಲ್ಲ ಘಟನೆಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪ್ರಾಪ್ತೆ ದೊಡ್ಡಮ್ಮನ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದು, …

Read More »

ಮೈಸೂರು ಗ್ಯಾಂಗ್​ರೇಪ್​ ಪ್ರಕರಣ: ಭಯಾನಕವಾಗಿದೆ ಆರೋಪಿಗಳ ಹಿನ್ನೆಲೆ, ದುಷ್ಕೃತ್ಯವೇ ಇವರ ಫುಲ್​ ಟೈಂ ಕೆಲ್ಸ!

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್​ರೇಪ್​ ಪ್ರಕರಣದ ಐವರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಇನ್ನೊರ್ವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಈಗಾಗಲೇ ಹಾಜರುಪಡಿಸಿ 10 ದಿನಗಳ ಕಾಲ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆಯನ್ನು ಚುರುಕುಗೊಳಿಸಿದ್ದಾರೆ. ಬಂಧಿತರೆಲ್ಲರೂ ತಮಿಳುನಾಡಿನ ತಿರುಪ್ಪೂರ್ ಹಾಗೂ ಸೂಸೈಪುರಂ ಗ್ರಾಮದವರಾಗಿದ್ದು, ಆರೋಪಿಗಳನ್ನು ಭೂಪತಿ, ಜೋಸೆಫ್​, ಮುರುಗೇಶನ್​ ಮತ್ತು ಪ್ರಕಾಶ್​ ಎಂದು …

Read More »

ಶೌಚಾಲಯದಲ್ಲಿ ನೇಣಿಗೆ ಶರಣಾದ ಅತ್ಯಾಚಾರ ಆರೋಪಿ

ವಿಜಯಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿದ್ದ ಆರೋಪಿಯೋರ್ವ ಇದೀಗ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶೌಚಾಲಯದಲ್ಲಿಯೇ ತನ್ನ ಪ್ಯಾಂಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೋಷಕರ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ …

Read More »

ಯಾವುದೇ ರಾಜ್ಯಕ್ಕೆ ಹೋದರೂ ಒಂದೇ ವಾಹನ ನಂಬರ್ – ಈಗಿನ ವ್ಯವಸ್ಥೆ ಹೇಗಿದೆ? ಯಾರಿಗೆ ಸಿಗಲಿದೆ?

ನವದೆಹಲಿ: ಖಾಸಗಿ ವಾಹನ ಹೊಂದಿರುವ ವ್ಯಕ್ತಿಗಳು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವಾಸ್ತವ್ಯ ಬದಲಿಸಿದರೆ ವಾಹನದ ಮರು ನೋಂದಣಿ ಮಾಡುವುದು ದೊಡ್ಡ ಸಮಸ್ಯೆ. ಆದರೆ ಇನ್ನು ಮುಂದೆ ಈ ಸಮಸ್ಯೆ ಬರುವುದಿಲ್ಲ. ಈ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ‘ಬಿಎಚ್’ ಅಂದರೆ ಭಾರತ್ ಸೀರಿಸ್ ನಂಬರ್ ನೀಡಲು ಮುಂದಾಗಿದೆ. ಈ ಸಂಖ್ಯೆ ಹೇಗಿರಲಿದೆ? ಬಿಎಚ್ ಸೀರಿಸ್‍ನಡಿ ವಾಹನದ ಸಂಖ್ಯೆ YY BH #### XX  ಮಾದರಿಯಲ್ಲಿ ಇರಲಿದೆ. YY ಅಂದರೆ …

Read More »

ಸಿಂಪಲ್ ಸಿಎಂ: ಬಸವರಾಜ ಬೊಮ್ಮಾಯಿ

ಬೆಂಗಳೂರು,ಆ.29- ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಒಂದು ತಿಂಗಳು ಸಂದಿದೆ. ರಾಜ್ಯದ ಗದ್ದುಗೆಗೇರಿದ ಕೆಲವೇ ದಿನಗಳಲ್ಲಿ ಅವರು ಮಾಡಿದ ಕೆಲಸಗಳು ಜನಪ್ರಿಯವಾಗುವ ಜೊತೆಗೆ ಸಿಂಪಲ್ ಸಿಎಂ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. # ಬೊಮ್ಮಾಯಿ ಸಿಎಂ ಆಗಿದ್ದೇ ಅಚ್ಚರಿ: ಸಿಎಂ ರೇಸ್‍ನಲ್ಲಿ ಹಲವಾರು ನಾಯಕರ ಹೆಸರುಗಳು ಕೇಳಿ ಬಂದಿದ್ದವು. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಅಥವಾ ಹಿಂದುಳಿದ ವರ್ಗಗಳ ಸಮುದಾಯದವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ …

Read More »

ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ

ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ  112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು.   “ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್‌ಇನ್‌ಸ್ಪೆಕ್ಟರ್‌ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳು, ಮಹಿಳಾ ಪೊಲೀಸ್‌ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು. …

Read More »

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.

ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು.   ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ‌ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು. ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 …

Read More »