ಚನ್ನಗಿರಿ: ಎಸ್‌ಸಿ, ಎಸ್‌ಟಿ ಮೀಸಲಾತಿ ಸಂಬಂಧ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು. ‘ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಶೇ 17 ಹಾಗೂ ಪಂಗಡದವರಿಗೆ ಶೇ 7 ಮೀಸಲಾತಿ ನೀಡಿರುವುದು ಸ್ವಾಗತಾರ್ಹ. ಆದರೆ ಇಷ್ಟಕ್ಕೆ ವಿಜಯೋತ್ಸವ ಆಚರಣೆ ಮಾಡಲು ಆಗುವುದಿಲ್ಲ. ಸದ್ಯ ಸರ್ಕಾರ ಕೇವಲ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಆಗುವವರಿಗೆ ಮಾತ್ರ ಮೀಸಲಾತಿಯನ್ನು ಕಲ್ಪಿಸುತ್ತಿದೆ. ಆದರೆ …
Read More »ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಎಲ್.ಕೆ.ಅತೀಕ್
ಬೆಳಗಾವಿ: ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿರುವುದರಿಂದ ಪ್ರತಿಯೊಂದು ಇಲಾಖೆಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15ನೇ ಹಣಕಾಸು ಯೋಜನೆಯಡಿ …
Read More »ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಸಿ.ಎಂ: ಇಬ್ರಾಹಿಂ
ಹುಬ್ಬಳ್ಳಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ. ಪಂಚರತ್ನ ಯಾತ್ರೆ ಮೂಲಕ ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಸಂಪೂರ್ಣ ಬಹುಮತ ಬಂದರೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಚುನಾವಣಾ ಆಮಿಷ ಕೋರ್ಟ್‌ಗೆ ಮೊರೆ: ಚುನಾವಣಾ …
Read More »ಅಂಗನವಾಡಿಗೆ ಅವಧಿ ಮೀರಿದ ಆಹಾರ ಪದಾರ್ಥ ಪೂರೈಕೆ?
ಬೆಂಗಳೂರು: ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಠಿಕ ಆಹಾರದ ಹೆಸರಿನಲ್ಲಿ ಬಳಕಗೆ ಯೋಗ್ಯವಲ್ಲದ ಆಹಾರ ಪದಾರ್ಥಗಳನ್ನು ಪೂರೈಸಿದೆಯೇ? ಹೌದು ಎನ್ನುತ್ತಿವೆ ತುಮಕೂರು ಜಿಲ್ಲೆಯ ಅಂಗನವಾಡಿಗಳಿಗೆ ಪೂರೈಕೆಯಾಗಿರುವ ಆಹಾರದ ಪಟ್ಟಣಗಳ ಮೇಲೆ ನಮೂದಾಗಿರುವ ದಿನಾಂಕಗಳು. ತಿಪಟೂರು, ತುಮಕೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಅಂಗನವಾಡಿಗಳಿಗೆ ಪೂರೈಕೆಯಾಗಿರುವ ತೊಗರಿ ಬೇಳೆ, ಹೆಸರು ಕಾಳು ಮತ್ತು ಮಿಶ್ರಿತ ಪೌಷ್ಠಿಕ ಆಹಾರದ ಪೊಟ್ಟಣಗಳ ಮೇಲೆ ಪ್ಯಾಕ್ ಮಾಡಿದ ದಿನಾಂಕವನ್ನು 2022ರ ನವೆಂಬರ್ ಎಂದು ಅಚ್ಚು ಹಾಕಲಾಗಿದೆ. ಉಪಯೋಗಿಸಬಹುದಾದ …
Read More »ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬೆಳಗಾವಿ: ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಗುಜರಾತ್ ಮೂಲದ ಬಿ.ಕೆ. ಕಂಗ್ರಾಳಿಯ ನಿವಾಸಿ ಆಕಾಶ ಭರತಕುಮಾರ ದೋಂಡಿಯಾ (19) ಬಂಧಿತ. ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿ ನಗರದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಬಾಲಕಿಯನ್ನು ಪುಸಲಾಯಿಸಿ ಸಲುಗೆ ಬೆಳೆಸಿದ ಆರೋಪಿ, ಗುಜರಾತಿಗೆ ಕರೆದೊಯ್ದು ಎರಡು ದಿನ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮರಳಿ ಬೆಳಗಾವಿಗೆ ಬಂದು ತಂದೆಗೆ …
Read More »ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭ
ನಂದಗಡ (ಖಾನಾಪುರ ತಾಲ್ಲೂಕು): ಕ್ರಾಂತಿಯ ನೆಲ, ರಕ್ತಸಿಕ್ತ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತ ತಾಲ್ಲೂಕಿನ ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭವಾಗಿದೆ. ಈ ಸ್ಥಳಕ್ಕೆ ಜಾಗತಿಕ ಗುರುತು ತಂದುಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಈಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹಲವು ವರ್ಷಗಳಿಂದ ನಂದಗಡ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಚನ್ನಮ್ಮನ ಕಿತ್ತೂರು, ಬೈಲಹೊಂಗಲದಲ್ಲಿ ಆದಂಥ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿಯೂ ಮಾಡಬೇಕು ಎಂದು ಜನ ದಶಕದಿಂದ ಹೋರಾಟ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಶುಕ್ರದೆಸೆ …
Read More »ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ : ಯತ್ನಾಳ
ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ವಿಜಯಪುರ ನಗರ ಶಾಸಕ ಯತ್ನಾಳ ವಾಗ್ದಾಳಿ ನಡೆಸಿದರು. ಬಿಜೆಪಿಗೆ ರೌಡಿ ಶೀಟರ್ ಗಳ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕ್ರಿಯೆ ನೀಡಿ ಕೊತ್ವಾಲ ರಾಮಚಂದ್ರ ಬೆಂಗಳೂರಿಗೆ ದೊಡ್ಡ ರೌಡಿ, ಅವನಿಗೆ ಸಿಗರೇಟ್ ತಂದು ಕೊಡುತ್ತಿದ್ದವರು ನಮಗೆ ಪಾಠ ಮಾಡುತ್ತಿದ್ದಾರೆ. ಬ್ಲೂ ಫೀಲಂ ನಡೆಸುವವರು ಬಿಜೆಪಿ ಬಗ್ಗೆ …
Read More »ಶಿಗ್ಗಾವಿಯಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಉದ್ಘಾಟಿಸಿದC.M. ಬೊಮ್ಮಾಯಿ
ಹಾವೇರಿ ಜಿಲ್ಲೆಯ ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಯಿಂದ 250 ಹಾಸಿಗೆಗಳಿಗೆ ಮೆಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು ಹಾಗೂ ಮತ್ತಿತರರು ಹಾಜರಿದ್ದರು.
Read More »ಬೆಂಗಳೂರು, ಮೈಸೂರು ಬಳಿಕ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷ; ಭಯಭೀತರಾದ ಪಿಜಿ ವಿದ್ಯಾರ್ಥಿಗಳು
ಬಳ್ಳಾರಿ: ಬೆಳಗಾವಿ, ಮೈಸೂರು, ಬೆಂಗಳೂರು ಬಳಿಕ ಇದೀಗ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೆಂದ್ರದ ಪಿಜಿ ಸೆಂಟರ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಇದೇ ಭಾಗದಲ್ಲಿ ಓಡಾಟ ನಡೆಸಿದೆ. ಪಿಜಿ ಸೆಂಟರ್ ನ ಮೆಟ್ಟಿಲುಗಳ ಮೇಲೆ, ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿಯೇ ಚಿರತೆ ಓಡಾಡುತ್ತಿದ್ದು, ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ …
Read More »ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಪುಟಾಣಿ ಸಹೋದರರು ಮೃತ್ಯು
ವಿಜಯಪುರ, ಡಿ.4: ಅಣ್ಣ-ತಮ್ಮಂದಿರಾದ ಬಾಲಕರಿಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿ ಶನಿವಾರ ನಡೆದಿದೆ. ರಮೇಶ್(9) ಮತ್ತು ಮಾಳಿಂಗರಾಯ(11) ಮೃತಪಟ್ಟ ಬಾಲಕರಾಗಿದ್ದಾರೆ. ಇವರಿಬ್ಬರು ಶನಿವಾರ ಶಾಲೆಯಿಂದ ಮನೆಗೆ ಬಂದ ಬಳಿಕ ದನಗಳನ್ನು ಮೇಯಿಸಲೆಂದು ತಮ್ಮ ಪಕ್ಕದ ಜಮೀನಿಗೆ ಹೋಗಿದ್ದರು. ಈ ವೇಳೆ ಅಲ್ಲಿರುವ ಕೃಷಿ ಹೊಂಡಕ್ಕೆ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆನ್ನಲಾಗಿದೆ. ಈ ಬಗ್ಗೆ ಬಸವನಬಾಗೇವಾಡಿ ಪೊಲೀಸ್ …
Read More »
Laxmi News 24×7