Breaking News
Home / ರಾಜ್ಯ (page 1535)

ರಾಜ್ಯ

ಸುಪ್ರೀಂಕೋರ್ಟ್ʼಗೆ ನೂತನ ಒಂಬತ್ತು ನ್ಯಾಯಾಧೀಶರ ನೇಮಕ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ನೇಮಕಾತಿ ವಾರಂಟ್ʼಗಳಿಗೆ ಸಹಿ ಹಾಕಿದ್ದು, ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಾಧೀಶರನ್ನ ಗುರುವಾರ ಸುಪ್ರೀಂ ಕೋರ್ಟ್ʼಗೆ ನೇಮಿಸಲಾಗಿದೆ. ಉನ್ನತ ನ್ಯಾಯಾಲಯದ ಹೊಸ ನ್ಯಾಯಾಧೀಶರಲ್ಲಿ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರು ಸೆಪ್ಟೆಂಬರ್ 2027ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ (CJI) ಆಗಲಿದ್ದಾರೆ. ನ್ಯಾಯಮೂರ್ತಿ ಬೆಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ …

Read More »

ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

    ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ನವದೆಹಲಿಯ ಕರ್ನಾಟಕ ಭವನಕ್ಕೆ ಜಾರಕಿಹೊಳಿ ಸಹೋದರರು ಆಗಮಿಸಿದ್ದಾರೆ. ನಾವು ಬೇರೆ ಕೆಲಸದ ವಿಚಾರವಾಗಿ ನವದೆಹಲಿಗೆ ಬಂದಿದ್ದೇವೆ. ಸಿಎಂ ಬಂದಿದ್ದಾರೆಂದು ಗೊತ್ತಾಯ್ತು. ಹಾಗಾಗಿ, ಭೇಟಿಗೆ ಆಗಮಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಹೋಗುತ್ತೇವೆ. ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ​ಗೆ ಸಚಿವ ಸ್ಥಾನ …

Read More »

ಪ್ರತಿ ಕ್ವಿಂಟಾಲ್ ಗೆ 7,275 ರೂ.ಗಳಂತೆ ಹೆಸರು ಕಾಳು ಖರೀದಿಗೆ ಸಹಕಾರ ಇಲಾಖೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಹೆಸರು ಮತ್ತು ಉದ್ದು ಬೆಳೆಗೆ ಬೆಂಬಲ ಬೆಲೆ ಘೋಷಿಸಿ, ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಬೆಂಬಲ ಬೆಲೆ ಆಧಾರದ ಮೇಲೆ 30 ಸಾವಿರ ಟನ್ ಹೆಸರು ಕಾಳು ಹಾಗೂ 10 ಸಾವಿರ ಟನ್ ಉದ್ದಿನ ಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರತಿ ಎಕೆರೆಗೆ 4 ಕ್ವಿಂಟಾಲ್ ಗರಿಷ್ಟ, ಪ್ರತಿ ರೈತರಿಂದ 6 ಕ್ವಿಂಟಾಲ್ ಹೆಸರು ಕಾಳು ಖರೀದಿ ಮಾಡಬೇಕು. ಉದ್ದಿನ …

Read More »

ವಿದ್ಯಾರ್ಥಿನಿ ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆ : ಆರೋಪಿಗಳಿಗಾಗಿ ಶೋಧ

ಮೈಸೂರು : ಲಲಿತಾದ್ರಿಪುರದಲ್ಲಿ ನಡೆದಿದ್ದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇದೀಗ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಗ್ಯಾಂಗ್‌ರೇಪ್‌ ಮಾಡಿದ್ದ ಆರೋಪಿಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಿದೇ ಇದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆನ್ನುವ ಸ್ಫೋಟಕ‌ ಮಾಹಿತಿ ಬಹಿರಂಗವಾಗಿದೆ.   ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಯೋರ್ವಳು ತನ್ನ ಸ್ನೇಹಿತನ ಜೊತೆಗೆಯಲ್ಲಿ ಕುಳಿತಿದ್ದ ವೇಳೆಯಲ್ಲಿ ಬಂದಿದ್ದ ಕಾಮುಕರು, ಯುವಕನ ಮೇಲೆ …

Read More »

ಒಟ್ಟಾಗಿ ಊಟಕ್ಕೆ ಕುಳಿತಾಗಲೇ ಬಿತ್ತು ಸೀಲಿಂಗ್ ಫ್ಯಾನ್

ರಾತ್ರಿ ವೇಳೆ ಮಕ್ಕಳೊಂದಿಗೆ ತಂದೆ-ತಾಯಿ ನೆಮ್ಮದಿಯಾಗಿ ಕುಳಿತು ಊಟ ಮಾಡುತ್ತಿದ್ದಾರೆ. ಇದ್ದಕಿದ್ದಂತೆ ಸೀಲಿಂಗ್ ಫ್ಯಾನ್ ಅವರ ಮೇಲೆಯೇ ಕೆಳಕ್ಕೆ ಬಿದ್ದಿದೆ. ಇಂಥ ದೃಶ್ಯ ನೆನೆಸಿಕೊಂಡರೇ ಮೈಬೆವರುತ್ತದೆ. ಆದರೆ, ವಿಯೆಟ್ನಾಂನಲ್ಲಿ ಈ ಘಟನೆ ಜರುಗಿದೆ. ಮನೆಯ ಒಳಗಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಅದೃಷ್ಟವಶಾತ್ ಸೀಲಿಂಗ್ ಫ್ಯಾನ್ ಬ್ಲೇಡ್‍ಗಳು, ಊಟಕ್ಕೆ ಕುಳಿತಿದ್ದ ಮಕ್ಕಳ ತಲೆಯ ಮೇಲೆ ಬಿದ್ದಿಲ್ಲ. ಮಧ್ಯದ ಮೋಟಾರ್ ಭಾಗ ಕೂಡ ಯಾರ ತಲೆಗೂ ಬಡಿದಿಲ್ಲ. ಒಟ್ಟು ಆರು ಮಂದಿ …

Read More »

ಕೊರೊನಾ ಲಸಿಕೆ ಪಡೆಯಲು ಈತ ಮಾಡಿದ ಪ್ಲಾನ್ ಏನು ಗೊತ್ತಾ?

ರಾಂಚಿ: ಬಿಹಾರದ ಗೋಪಾಲಗಂಜ್ ಜಿಲ್ಲೆಯ ಲಸಿಕೆ ಕೇಂದ್ರದ ಕಿಟಕಿಯಿಂದ ಒಬ್ಬ ವ್ಯಕ್ತಿಯು ತನ್ನ ಕೋವಿಡ್ -19 (Corona vaccine) ಲಸಿಕೆ ತೆಗೆದುಕೊಳ್ಳುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ (social media) ಆಗಿದೆ. ಗೋಪಾಲಗಂಜ್ ಜಿಲ್ಲಾ ಕೇಂದ್ರದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಥಾವೆ ಬ್ಲಾಕ್‌ನಲ್ಲಿರುವ ಸುಕುಲವಾನ್ ಲಸಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಥಾವೆ ಬ್ಲಾಕ್ ಡೆವಲಪ್‌ಮೆಂಟ್ ಆಫೀಸರ್ (BDO) ಮನೀಶ್ ಕುಮಾರ್ ತಮಗೂ …

Read More »

ವಿಕ್ರಾಂತ್ ರೋಣ”ನ ನಂತರ ಕಾಲಿವುಡ್ ನಲ್ಲಿ ಕಿಚ್ಚ..!

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇತ್ತೀಚೆಗಷ್ಟೇ ತಮ್ಮ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣನ ಡಬ್ಬಿಂಗ್ ಕೆಲಸ ಮುಗಿಸಿದ್ದಾರೆ.. ಈ ನಡುವೆ ಅವರ ಅಭಿನಯದ ಕೋಟಿಗೊಬ್ಬ 3 ಕೂಡ ರಿಲೀಸ್ ಗಾಗಿ ಕಾಯ್ತಿದೆ.. ಆದ್ರೆ ಕಿಚ್ಚನ ಮುಂದಿನ ಸಿನಿಮಾ ಯಾವುದು ಯಾರ ಜೊತೆಗೆ ಅನ್ನೋ ಕ್ಯೂರಿಯಾಸಿಟಿ ಹೆಚ್ಚಾಗಿದೆ.. ಆದ್ರೆ ಮುಂದಿನ ಸಿನಿಮಾ ಕಾಲಿವುಡ್ ನಲ್ಲಾ ಅನ್ನೋ ಗುಸುಗುಸು ಶುರುವಾಗಿದೆ.. ಕಾಲಿವುಡ್ ಖ್ಯಾತ ನಿರ್ದೇಶರಕಾದ ವೆಂಕಟ್ ಪ್ರಭು …

Read More »

ರಾಜ್ಯದಲ್ಲಿ ಹಗರಣಗಳ ಸರ್ಕಾರ: ಡಿಕೆಶಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಹಗರಣಗಳ ಸರ್ಕಾರವಿದ್ದು, ಆರೋಗ್ಯ ಕ್ಷೇತ್ರದ ಔಷಧ, ವೆಂಟಿಲೇಟರ್‌, ಆಯಂಬುಲೆನ್ಸ್‌ ವಿಚಾರದಲ್ಲೂ ಹಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಕೇಂದ್ರ ಸರ್ಕಾರ 4 ಕೋಟಿ ರೂ.ಗೆ ಖರೀದಿಸಿದ್ದನ್ನು ರಾಜ್ಯ ಸರ್ಕಾರ 22 ಕೋಟಿ ರೂ.ಗೆ ಖರೀದಿ ಮಾಡುವಷ್ಟರ ಮಟ್ಟಿಗೆ ಹಗರಣದಲ್ಲಿ ಮುಳುಗಿದೆ ಎಂದು ಟೀಕಿಸಿದರು. ಕೋವಿಡ್‌ ಸಮಯದಲ್ಲಿ ಮಕ್ಕಳು ಶಾಲೆಗೆ ಹೋಗದ ಸಮಯದಲ್ಲಿ …

Read More »

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸಾಮೂಹಿಕ ಅತ್ಯಾಚಾರ ಪ್ರಸ್ತಾಪಿಸಿ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವೈಫಲ್ಯದ ಬಗ್ಗೆ ಸಿದ್ದರಾಮಯ್ಯ ಟೀಕಿಸಿದ್ದಾರೆ. ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು ಮೈಸೂರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ದುರದೃಷ್ಟಕರ ಸಂಗತಿ. ಈ ವೇಳೆ ನಾನು ಸಂತ್ರಸ್ತೆ ಮತ್ತು ಅವರ ಕುಟುಂಬಸ್ಥರ ಪರವಾಗಿ ನಿಲ್ಲುತ್ತೇನೆ. ಮುಖ್ಯಮಂತ್ರಿ ಹಾಗೂ ಗೃಹಸಚಿವರು ನ್ಯಾಯ ದೊರಕಿಸಿಕೊಡಬೇಕು ಎಂದು ವಿರೋಧ ಪಕ್ಷದ ನಾಯಕ …

Read More »

ಭೀಕರ ಅಪಘಾತ; ಮೀನಿನ ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ

ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಬಸ್ ಹಾಗೂ ಮೀನಿನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಎರಡೂ ವಾಹನಗಳ ಚಾಲಕರಿಗೆ ಗಾಯಗಳಾಗಿವೆ. ಮೀನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಹಾಗೂ ಅಂಕೋಲಾದಿಂದ ಕಾರವಾರ ಕಡೆಗೆ ಬರುತ್ತಿದ್ದ ಬಸ್​ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಚಾಲಕ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದ.. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನನ್ನ ಹೊರಗೆ ತೆಗೆದಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ …

Read More »