Breaking News

ರಾಜ್ಯ

ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್

ಹುಬ್ಬಳ್ಳಿ: ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಕಲಿ ವಿಳಾಸ ಪತ್ತೆಯಾಗಿದ್ದು, ಅದು ಹುಬ್ಬಳ್ಳಿಯ ಪ್ರೇಮ್ ರಾಜ್ ಅವರಿಗೆ ಸೇರಿದೆ. ಆಟೋರಿಕ್ಷಾದಲ್ಲಿ ಪತ್ತೆಯಾದ ಆಧಾರ ಕಾರ್ಡ್ ಹುಬ್ಬಳ್ಳಿಯ ಕೇಶ್ವಾಪುರ ಮಧುರಾ ಕಾಲೋನಿ ನಿವಾಸಿ ಪ್ರೇಮರಾಜ್ ಹೆಸರಿನಲ್ಲಿದೆ. ಆದರೆ ಈ ಆಧಾರ್ ಕಾರ್ಡ್ ಕಳೆದು ಹೋಗಿತ್ತು. ಇವರದೇ ವಿಳಾಸವನ್ನು ಬ್ಲಾಸ್ಟ್ ನಲ್ಲಿ ಬಳಕೆ ಮಾಡಲಾಗಿದೆ. ಪ್ರೇಮ್ ರಾಜ್‌ಗೂ ಈ ಪ್ರಕರಣಕ್ಕೆ ಸಂಬಂಧ ಇಲ್ಲ ಎನ್ನುತ್ತಿದ್ದಾರೆ ಕುಟುಂಬದವರು. “ನನ್ನ ಮಗ ಅಂಥವನಲ್ಲ. …

Read More »

ಕಳಸಾ-ಬಂಡೂರಿ ಪ್ರದೇಶಕ್ಕೆ ಗೋವಾ ತಂಡ ಭೇಟಿ

ಮಹತ್ವಾಕಾಂಕ್ಷೆಯ ಕಳಸಾ-ಬಂಡೂರಿ ಅಣೆಕಟ್ಟು ಯೋಜನೆ ಪೂರ್ಣಗೊಳಿಸುವ ಮೂಲಕ ಗೋವಾದ ಮಹಾದಾಯಿ ನೀರನ್ನು ತಿರುಗಿಸಲು ಕರ್ನಾಟಕ ಮುಂದಾಗಿದೆ. ಈ ಅಣೆಕಟ್ಟು ನಿರ್ಮಿಸಲು ಹಳತಾರ ಮತ್ತು ಕಳಸಾ ಪ್ರದೇಶಗಳಲ್ಲಿ ಮಣ್ಣು ಪರೀಕ್ಷೆ ಜತೆಗೆ ಉದ್ದೇಶಿತ ಕಾಲುವೆ ಅಗೆಯಲು ಗುರುತು ಹಾಕುವುದು ಬಹುತೇಕ ಪೂರ್ಣಗೊಂಡಿದೆ ಎಂದು ಗೋವಾ ಫಾರ್ವರ್ಡ್‌ ಶಾಸಕ ವಿಜಯ್‌ ಸರ್ದೇಸಾಯಿ ಹಾಗೂ ಪರಿಸರ ಹೋರಾಟಗಾರ ರಾಜೇಂದ್ರ ಕೇರ್ಕರ್‌ ಹೇಳಿದ್ದಾರೆ.   ಅವರು ಶುಕ್ರವಾರ ಕಳಸಾ-ಬಂಡೂರಿ ನಾಲಾ ವ್ಯಾಪ್ತಿಯ ಚೋರ್ಲಾ ಮಹಾದಾಯಿ ಜಲಾನಯನ …

Read More »

ವಿದ್ಯಾರ್ಥಿಗಳಿಗೆ ಸಂವಹನ ಕಲೆ ಮುಖ್ಯ: ಕತ್ತಿ

ಹುಕ್ಕೇರಿ: ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಜಾಣರಿದ್ದರೂ, ಆ ಜಾಣತನವನ್ನು ಬಿಂಬಿಸುವ ಸಂವಹನ ಕಲೆಯ ಕೊರತೆಯಿಂದ ಉದ್ಯೋಗಾವಕಾಶ ಕಳೆದುಕೊಳ್ಳುತ್ತಿದ್ದಾರೆಂದು ಮಾಜಿ ಸಂಸದರು ಹಾಗೂ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದರು.   ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಕಾರ್ಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡದ ಜತೆ ಇಂಗ್ಲಿಷ್‌ ಕಲಿಯಬೇಕು. ಶಿಕ್ಷಣ ಪಡೆದು ಇನ್ನೊಬ್ಬರ ಕೈಯಲ್ಲಿ ನೌಕರಿ ಮಾಡುವ …

Read More »

ನವಿಲುತೀರ್ಥ ಜಲಾಶಯ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಪಟ್ನಾಳ ಗ್ರಾಮದಲ್ಲಿ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಮುಳುಗಿಸಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಉರೂಫ್‌ ತನುಜಾ ಪರಸಪ್ಪ ಗೋಡಿ (32) ಮಕ್ಕಳಾದ ಸುದೀಪ (4) ರಾಧಿಕಾ (3) ಸಾವಿಗೀಡಾದವರು.   ಗೃಹಿಣಿ ಗುರುವಾರ ರಾತ್ರಿ ತಮ್ಮ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳಗಿಸಿ ಕೊಲೆ ಮಾಡಿದರು. ಬಳಿಕ ತಾವೂ ನೀರಿಗೆ ಹಾರಿದರು. ಕುಟುಂಬದವರು ರಾತ್ರಿಯಿಡೀ …

Read More »

ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ ನಡೆದ ತಮ್ಮ 23ನೇ ಹುಟ್ಟು ಹಬ್ಬದ ಸಮಾರಂಭದಲ್ಲಿ ಅಭಿಮಾನಿಗಳಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸಕ್ಕೆ …

Read More »

ಶೇಡಬಾಳ ಸ್ಟೇಶನ್ ಜನರ ಸಮಸ್ಯೆ ಆಲಿಸಿದ ತಹಶೀಲ್ದಾರ್

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಲ್ಲಿ ಒಂದಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಈ ಯೋಜನೆ ಅಡಿಯಲ್ಲಿ ಎಲ್ಲಾ ತಾಲೂಕ ಅಧಿಕಾರಿಗಳು ಗ್ರಾಮ ವಾಸ್ತವದಲ್ಲಿ ಉಳಿದು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಲೇಬೇಕು ಎಂದು ತಹಶೀಲ್ದಾರ್ ರಾಜೇಶ್ ಬುರ್ಲಿ ಅಧಿಕಾರಿಗಳಿಗೆ ಕರೆ ನೀಡಿದರು. ಶನಿವಾರ ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದಲ್ಲಿ ತಹಶೀಲ್ದಾರ್ ರಾಜೇಶ್ ಬುರ್ಲಿ ಮತ್ತು ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಪಾಲ್ಗೊಂಡು ಇಲ್ಲಿಯ ಜನರ ಸಮಸ್ಯೆಗಳನ್ನು ಆಲಿಸಿದರು. ಸ್ಥಳದಲ್ಲಿ ಅನೇಕ …

Read More »

ನಮಗೆ ರಸ್ತೆ ಕೊಡಿ: ಮಂಗಾಯಿ ನಗರ ನಿವಾಸಿಗಳಿಂದ ಡಿಸಿಗೆ ಮನವಿ

ಬೆಳಗಾವಿಯ ಮಂಗಾಯಿ ದೇವಸ್ಥಾನ ಬಳಿ ಇದ್ದ ರಸ್ತೆಯನ್ನು ಬಂದ್ ಮಾಡಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಇದರಿಂದ ಜನ ಓಡಾಡಲು ಹರಸಾಹಸ ಪಡಬೇಕಾಗಿದೆ. ಹೌದು ವಡಗಾವಿಯ ಮಂಗಾಯಿ ದೇವಸ್ಥಾನ ಬಳಿ ಇದ್ದ ಖಾಸಗಿ ಜಾಗದಲ್ಲಿಯೇ ಅನೇಕ ವರ್ಷಗಳಿಂದ ಇಲ್ಲಿನ ನಿವಾಸಿಗಳು ಓಡಾಡುತ್ತಿದ್ದರು. ಆದರೆ ಏಕಾಏಕಿ ಆ ಜಾಗದ ಮಾಲೀಕರು ರಸ್ತೆ ಬಂದ್ ಮಾಡಿ ತಡೆಗೋಡೆ ನಿರ್ಮಾಣ ಮಾಡಿದ್ದಾರೆ. ಇದರಿಂದ ಜನ ದಿನನಿತ್ಯ ಓಡಾಡಲು ಬಹಳಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ ತಮಗೆ ರಸ್ತೆ …

Read More »

ತಾವು ಸ್ಪರ್ಧೆಗಿಳಿಯುವ ಕ್ಷೇತ್ರ ಬಹಿರಂಗಪಡಿಸಿದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತಲ್ಲದೆ ಇದಕ್ಕಾಗಿ ಅವರು ಈ ಕ್ಷೇತ್ರಗಳ ಹಿಂದೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಹ ನಡೆಸಿದ್ದರು.   ಇದೀಗ ತಾವು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ …

Read More »

ಪಿಎಸ್‌ಐ ಅಕ್ರಮ ನೇಮಕಾತಿ: 12 ಆರೋಪಿಗಳಿಗೆ ಜಾಮೀನು

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಒಟ್ಟು 12 ಜನ ಆರೋಪಿಗಳಿಗೆ ನಗರದ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿದೆ.   ಜಾಗೃತ್‌, ಸೋಮನಾಥ, ರಘುವೀರ್, ಮಮತೇಶ್‌ ಗೌಡ, ಸಿ.ಎಂ.ನಾರಾಯಣ , ಆರ್. ಮಧು, ಸಿ.ಕೆ.ದಿಲೀಪ್‌ ಕುಮಾರ್, ರಚನಾ ಹಣಮಂತ, ಪ್ರವೀಣ್‌ ಕುಮಾರ್ ರಾಘವೇಂದ್ರ, ಮಧ್ಯವರ್ತಿಗಳಾದ ಕೇಶವಮೂರ್ತಿ ಮತ್ತು ಶರತ್‌ ಕುಮಾರ್ …

Read More »

ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿ, ಬೈಕ್ ಸವಾರ ಸಾವು

ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ. ಗುರುರಾಜ್ ಶಿರಶ್ಯಾಡ ಮೃತಪಟ್ಟಿರುವ ಬೈಕ್ ಸವಾರನಾಗಿದ್ದು ಬೈಕ್‌ನಲ್ಲಿ ಹೋಗುವಾಗ ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಇನ್ನೂ ಡಿಕ್ಕಿ ವಿಡಿಯೋ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Read More »