ಬೆಳಗಾವಿ: ‘ಹಿಂದೂ ಎಂಬುದು ಧರ್ಮವಲ್ಲ, ಅದು ಜೀವನಕ್ರಮವೆಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರೇ ಹೇಳಿದ್ದಾರೆ. ಆದರೆ, ಇಂದು ವೈದಿಕ ಧರ್ಮಕ್ಕೆ ಹಿಂದೂ ಧರ್ಮ ಎನ್ನಲಾಗುತ್ತಿದೆ. ಹೀಗೆ ಉಚ್ಚರಿಸಿದರೆ ಲಿಂಗಾಯತರೇನು ಹಿಂದೂಗಳಾಗು ವುದಿಲ್ಲ’ ಎಂದು ಗದುಗಿನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೇದ, ಆಗಮ, ಪುರಾಣವನ್ನು ವಿರೋಧಿಸಿದ ಲಿಂಗಾಯತ ಅವೈದಿಕ ಧರ್ಮವಾಗಿದೆ. ಲಿಂಗಾಯತರು ಮತ್ತು ಹಿಂದೂಗಳ ಆಚರಣೆಯಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ ಇವೆ’ ಎಂದರು. ‘ಹಿಂದೂಗಳು …
Read More »ಡಿಸೆಂಬರ್ 19ರಿಂದ 29ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಡಿ.19 ರಿಂದ 29 ರವರೆಗೆ ಬೆಳಗಾವಿಯಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ವಿಷಯ ತಿಳಿಸಿದರು. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ವಿಷಯ ತಿಳಿಸಿದರು. ‘ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು …
Read More »ಮತದಾರರ ಮಾಹಿತಿ ಕಳವಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕಾರಣ: ಕಾಂಗ್ರೆಸ್
ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಯ ಅನುಮತಿ ನೀಡಿ, ಮತದಾರರ ಮಾಹಿತಿ ಕಳವಿಗೆ ಬೆಂಗಳೂರು ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರಣರಾಗಿದ್ದಾರೆ’ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ‘ಮುಖ್ಯಮಂತ್ರಿ ಸ್ಥಾನಕ್ಕೆ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದೆ. ‘ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕು. ಇಡೀ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದೂ ಒತ್ತಾಯಿಸಿರುವ ಕಾಂಗ್ರೆಸ್ …
Read More »ಜೆಡಿಎಸ್: ಅಭ್ಯರ್ಥಿ ಪಟ್ಟಿ ಬಿಡುಗಡೆ ಇಂದು?
ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷಿ ‘ಪಂಚರತ್ನ’ ರಥಯಾತ್ರೆಯು ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಶುಕ್ರವಾರ ಪುನರಾರಂಭವಾಗಲಿದ್ದು, ಬೃಹತ್ ಸಮಾವೇಶ ಆಯೋಜಿಸಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 100 ಅಭ್ಯರ್ಥಿಗಳ ಪಟ್ಟಿಯನ್ನು ಈ ಸಮಾವೇಶದಲ್ಲಿ ಬಿಡುಗಡೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸಂಭಾವ್ಯ ಅಭ್ಯರ್ಥಿಗಳೂ ವೇದಿಕೆಯಲ್ಲೇ ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.
Read More »ಉಳುವವನೇ ಒಡೆಯ ನೀತಿ ಸೈನಿಕರಿಗೆ ಇಲ್ಲ
ಬೆಂಗಳೂರು: ‘ಸೈನಿಕರ ಮಾಲೀಕತ್ವದ ಗೇಣಿ ಜಮೀನುಗಳನ್ನು ಉಳುವವರಿಂದ ವಾಪಸು ಕೊಡಿಸಲು ಸರ್ಕಾರ ತನ್ನ ದೈತ್ಯ ಶಕ್ತಿ ಉಪಯೋಗಿಸಬೇಕು ಮತ್ತು ಇದು ಸರ್ಕಾರದ ಆದ್ಯ ಜವಾಬ್ದಾರಿ’ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಡುವಳಿ ಕಾಯ್ದೆ ಅಡಿಯಲ್ಲಿ ಕೈತಪ್ಪಿದ್ದ ಗೇಣಿ ಜಮೀನನ್ನು ಮರಳಿ ಪಡೆಯಲು 40 ವರ್ಷಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಅವರಿಗೆ ನ್ಯಾಯ ಒದಗಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ‘ಸೈನಿಕರನ್ನು …
Read More »ಪಿಎಸ್‌ಐ ನೇಮಕಾತಿ ಅಕ್ರಮ: ಮತ್ತೆ ಸಿಐಡಿ ವಶಕ್ಕೆ ಅಮ್ರಿತ್ ಪೌಲ್
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬುಧವಾರ ಸಿಐಡಿ ತಂಡವು ಮತ್ತೆ ವಶಕ್ಕೆ ಪಡೆದುಕೊಂಡಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.
Read More »36 ತಿಂಗಳು ಬಾಕಿ ವೇತನ ನೀಡಲು ಒತ್ತಾಯ
ಬೆಂಗಳೂರು: ಎಂ.ಆರ್.ಎನ್. ಶುಗರ್ಸ್ ಆಯಂಡ್ ಬಯೋಫೈನರ್ಸ್ ಮುಧೋಳ (ಮುರುಗೇಶ ನಿರಾಣಿ) ಅವರ ಸಂಸ್ಥೆಯಿಂದ 36 ತಿಂಗಳ ಶೇ 50ರಷ್ಟು ಬಾಕಿ ವೇತನ ಪಾವತಿಯಾಗಿಲ್ಲ ಎಂದು ಪಿ.ಎಸ್.ಎಸ್.ಕೆ ಎಂಪ್ಲಾಯೀಸ್ ಅಸೋಸಿಯೇಷನ್ ಆರೋಪಿಸಿದೆ. ‘ಸರ್ಕಾರ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸಚಿವ ಮುರುಗೇಶ ನಿರಾಣಿ ಅವರ ಸಂಸ್ಥೆಗೆ 41 ವರ್ಷಗಳ ಗುತ್ತಿಗೆ ನೀಡಿದೆ. 2020ರಲ್ಲಿ ಸಚಿವರ ನೇತೃತ್ವದಲ್ಲಿ ನಡೆದ ಕಾರ್ಮಿಕ ಮುಖಂಡರ ಸಭೆಯಲ್ಲಿ 3 ವರ್ಷಗಳಿಂದ ಕಾರ್ಖಾನೆ ನಡೆಯದ ಕಾರಣ ನಿಮ್ಮ ವೇತನ ನೀಡಿಲ್ಲ. …
Read More »ಕಾರವಾರ: ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಲು ಅವಕಾಶ ನೀಡಿ ಎಂದು ಜಿಲ್ಲಾಡಳಿತಕ್ಕೆ ಮನವಿ
ಕಾರವಾರ: ಜಿಲ್ಲೆಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಮರಳು ಕಾರ್ಮಿಕರ ಸಂಘವು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಹಸಿರು ಪೀಠದ ಆದೇಶದಂತೆ ಕರಾವಳಿಯಲ್ಲಿ ಕಳೆದ 2022ರ ಮೇ 18 ರಂದು ಸಾಂಪ್ರದಾಯಿಕವಾಗಿ ಮರಳುದಿಬ್ಬ ತೆರವುಗೊಳಿಸಿ ಸಾಗಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ಆದೇಶ ನೀಡಿದೆ. ಇದರಿಂದ ಜಿಲ್ಲೆಯಲ್ಲಿ ಮರಳು ತೆಗೆಯುವುದು ಸ್ಥಗಿತವಾಗಿದೆ. ಜಿಲ್ಲೆಯ ಜನರಿಗೆ ಮರಳು ಲಭ್ಯವಾಗುತ್ತಿಲ್ಲ. ಸದ್ಯ ಮಂಗಳೂರಿನ ಕೆಲವು ಗುತ್ತಿಗೆದಾರರು …
Read More »ಬಣಜಿಗರಿಗೆ ಅವಹೇಳನ ಆರೋಪ: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಪ್ರತಿಭಟನೆ
ಹೊಸಪೇಟೆ (ವಿಜಯನಗರ): ಬಣಜಿಗರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದವರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಎದುರು ಸೇರಿದ ಸಂಘದವರು ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮನವಿ ಪತ್ರ ಸಲ್ಲಿಸಿದರು. ಇತ್ತೀಚೆಗೆ ವಿಜಯಪುರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರು ವಿನಾಕಾರಣ ಬಣಜಿಗ ಸಮಾಜದ ಬಗ್ಗೆ …
Read More »Pro Kabaddi | ಕಬಡ್ಡಿ: ಯೋಧಾಸ್‌ಗೆ ಗೆಲುವು
ಪುಣೆ : ಪ್ರದೀಪ್ ನರ್ವಾಲ್ (22 ಪಾಯಿಂಟ್ಸ್) ಅವರ ಮಿಂಚಿನ ಆಟದ ನೆರವಿನಿಂದ ಯು.ಪಿ.ಯೋಧಾಸ್ ತಂಡ ಪ್ರೊ ಕಬಡ್ಡಿ ಲೀಗ್‌ನಲ್ಲಿ ಸುಲಭ ಗೆಲುವು ಪಡೆಯಿತು. ಬಾಳೇವಾಡಿಯ ಶಿವಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಯೋಧಾಸ್ 50-31 ರಲ್ಲಿ ದಬಾಂಗ್ ಡೆಲ್ಲಿ ತಂಡವನ್ನು ಮಣಿಸಿತು. ವಿಜಯಿ ತಂಡ ವಿರಾಮದ ವೇಳೆಗೆ 29-14 ರಲ್ಲಿ ಮುನ್ನಡೆಯಲ್ಲಿತ್ತು. ಪೈರೇಟ್ಸ್- ತಲೈವಾಸ್ ಪಂದ್ಯ ಟೈ: ಪಟ್ನಾ ಪೈರೇಟ್ಸ್ ಮತ್ತು ತಮಿಳ್ ತಲೈವಾಸ್ …
Read More »
Laxmi News 24×7