Breaking News
Home / ರಾಜ್ಯ (page 1550)

ರಾಜ್ಯ

ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…!

ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್​ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್​ ಬಂಗೇರರನ್ನು ಬಂಧಿಸಲಾಗಿತ್ತು. ಹರೀಶ್​ ಬಂಗೇರ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. …

Read More »

ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ

ಧಾರವಾಡ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ . 2003 ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಆದೇಶ ನೀಡಿದೆ. ಹುಬ್ಬಳ್ಳಿ- ಧಾರವಾಡ ಮಧ್ಯದ ಪ್ರಮುಖ …

Read More »

ಅಫ್ಘಾನಿಸ್ತಾನದಿಂದ ಬರಲು ಇಚ್ಛಿಸುವ ಹಿಂದೂಗಳಿಗೆ ಆಶ್ರಯ: ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್ 18: ಭಾರತಕ್ಕೆ ಬರಲು ಇಚ್ಛಿಸುವ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಸಿಖ್ ಹಾಗೂ ಹಿಂದೂಗಳಿಗೆ ಆಶ್ರಯ ನೀಡಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ತಾಲಿಬಾನ್ ಅಟ್ಟಹಾಸದಿಂದ ಅಫ್ಘಾನಿಸ್ತಾನ ನಲುಗುತ್ತಿದ್ದು, ಅಲ್ಲಿನ ಭಾರತೀಯರ ಸಹಾಯಕ್ಕೆ ಪ್ರಧಾನಿ ಮೋದಿ ಮುಂದಾಗಿದ್ದಾರೆ. ಆಫ್ಘನ್‌ನಲ್ಲಿ ಇರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು ಎಂದು ವಿದೇಶಾಂಗ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಹಾಯಕ್ಕಾಗಿ ಭಾರತದತ್ತ ನೋಡುತ್ತಿರುವ ನಿರಾಶ್ರಿತರಿಗೆ ಎಲ್ಲ ನೆರವು ನೀಡುವ ಜವಾಬ್ದಾರಿ ನಮ್ಮ …

Read More »

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಮೊದಲ ಆದ್ಯತೆ ನೀಡಿ : ಸಿಎಂ

ಬೆಂಗಳೂರು, ಆ. 17 : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ …

Read More »

ದಿಢೀರನೇ ದೆಹಲಿಗೆ ಹಾರಿದ ಸಚಿವ ಆನಂದ್ ಸಿಂಗ್..!

ನವದೆಹಲಿ,ಆ.18- ಖಾತೆ ಕ್ಯಾತೆ ತೆಗೆದು ಮುನಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕಳೆದ ರಾತ್ರಿ ದಿಢೀರನೇ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಯಲ್ಲಾಪುರ ಪ್ರವಾಸದಲ್ಲಿದ್ದ ಆನಂದ್ ಸಿಂಗ್ ದಿಢೀರನೇ ಗೋವಾ ಮೂಲಕ ಕಳೆದ ರಾತ್ರಿ ದೆಹಲಿಗೆ ತೆರಳಿದ್ದಾರೆ. ಮೂಲಗಳ ಪ್ರಕಾರ ಅವರು ಇಂದು ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ವೈಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರಕ್ಕೆ ಬಂದಿದ್ದ ಆನಂದ್ …

Read More »

2027 ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ

ನವದೆಹಲಿ: 2027 ರಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಲಿದ್ದಾರೆ ಎನ್ನಲಾಗಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027 ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯದ ಮುಖ್ಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಸಹ …

Read More »

ರಾಜ್ಯದ ಸರಣಿ ಚುನಾವಣೆಗಳಿಗೆ ಬಿಜೆಪಿ ತಂತ್ರ: ಹೊಸ ಬ್ರಾಂಡ್ ಅಂಬಾಸಿಡರ್ ಗಳನ್ನು ಸೃಷ್ಟಿಸುತ್ತಿದೆ ಜನಾಶೀರ್ವಾದ ಯಾತ್ರೆ!

ಚಿಕ್ಕಮಗಳೂರು : ರಾಷ್ಟ್ರೀಯ ನಾಯಕರ ಬಗ್ಗೆ ಅವಹೇಳನ ಸರಿಯಲ್ಲ, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಇದಕ್ಕೆ ಪಕ್ಷ, ಜಾತಿ, ಧರ್ಮ ಭೇದವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರಿಗೆ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ನಾಯಕರ ಬಗ್ಗೆ ಹುಕ್ಕಾ ಬಾರ್, ಎಣ್ಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರೀಯ ನಾಯಕರು ಗೌರವಾನ್ವಿತರು ಅವರನ್ನು ನಾವು ಗೌರವ ಪೂರ್ವಕವಾಗಿ ನೋಡಬೇಕು ಇಲ್ಲಿ ಯಾವುದೇ ಪಕ್ಷ, …

Read More »

ಮಳೆ ಕಮ್ಮಿ ಆಗ್ತಿದ್ದಂತೆ ಸಮುದ್ರಕ್ಕೆ ಇಳಿದ ಹವ್ಯಾಸಿ ಮೀನುಗಾರರು

ಉಡುಪಿ: ಮುಂಗಾರು ಮಳೆಯ ಅಬ್ಬರ ಕಡಿಮೆಯಾದ ಕೂಡಲೇ ಅರಬ್ಬಿ ಸಮುದ್ರದಲ್ಲಿ ಹವ್ಯಾಸಿ ಮೀನುಗಾರಿಕೆ ಜೋರಾಗಿದೆ. ಗಾಳ ಹಾಕಿ ಮೀನು ಹಿಡಿಯುವ ಹವ್ಯಾಸ ಹೊಂದಿರುವ ಯುವಕರು ದೋಣಿಗಳ ಜೊತೆ ಅರಬ್ಬಿ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಉದ್ಯಾವರ ನಾಗೇಶ್ ಕುಮಾರ್ ಮತ್ತು ಅವರ ಗೆಳೆಯರ ತಂಡ ಅರಬ್ಬಿ ಸಮುದ್ರದಲ್ಲಿ ಗಾಳ ಹಾಕಿದಾಗ ಶಾರ್ಕ್ ಮೀನೊಂದು ಗಾಳಕ್ಕೆ ಸಿಲುಕಿತ್ತು. ಗಾಳಕ್ಕೆ ಸಿಲುಕಿದ ನಂತರ ಕೆಲಕಾಲ ಸೆಣೆಸಾಟ ನಡೆಸಿದೆ. ತುಳುವಿನಲ್ಲಿ ತಾಟೆ ಮೀನು ಎಂದು ಕರೆಯುತ್ತಾರೆ. ಇದು …

Read More »

ಗೃಹ ಬಳಕೆ ಸಿಲಿಂಡರ್​ ಬೆಲೆ ಮತ್ತೆ ಏರಿಕೆ TODAYS TOP NEWS

1. ಗೃಹ ಬಳಕೆ ಸಿಲಿಂಡರ್​ ಬೆಲೆ ಮತ್ತೆ ಏರಿಕೆ ಮೊದಲೇ ತೈಲ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಸರ್ಕಾರ ಮತ್ತೆ ಶಾಕ್​ಕೊಟ್ಟಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲಿಯಂ ಕಂಪನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಿದ್ದರಿಂದ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 860 ರೂಪಾಯಿ ಆಗಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 68 …

Read More »

ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಚಾಲನೆ

ಬೆಂಗಳೂರು : ಬಿಬಿಎಂಪಿ ಹಮ್ಮಿಕೊಂಡಿರುವ ‘ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಗೋವಿಂದರಾಜ ನಗರದ ಕಾವೇರಿಪುರ ವಾರ್ಡ್‍ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಶ್ರೀ ವಿ ಸೋಮಣ್ಣ ಅವರು, ಈ ಕಾರ್ಯಕ್ರಮದಡಿಯಲ್ಲಿ ವೈದ್ಯರು ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಅಲ್ಲದೇ, ಕೋವಿಡ್ ಸೋಂಕಿನ ನಿಯಂತ್ರಣದ ಬಗ್ಗೆ ಸಲಹೆ ನೀಡಲಿದ್ದಾರೆ. ಪ್ರತಿ …

Read More »