Home / ರಾಜ್ಯ (page 1551)

ರಾಜ್ಯ

ರಾಜ್ಯದ ಸರಣಿ ಚುನಾವಣೆಗಳಿಗೆ ಬಿಜೆಪಿ ತಂತ್ರ: ಹೊಸ ಬ್ರಾಂಡ್ ಅಂಬಾಸಿಡರ್ ಗಳನ್ನು ಸೃಷ್ಟಿಸುತ್ತಿದೆ ಜನಾಶೀರ್ವಾದ ಯಾತ್ರೆ!

ಚಿಕ್ಕಮಗಳೂರು : ರಾಷ್ಟ್ರೀಯ ನಾಯಕರ ಬಗ್ಗೆ ಅವಹೇಳನ ಸರಿಯಲ್ಲ, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಇದಕ್ಕೆ ಪಕ್ಷ, ಜಾತಿ, ಧರ್ಮ ಭೇದವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರಿಗೆ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ನಾಯಕರ ಬಗ್ಗೆ ಹುಕ್ಕಾ ಬಾರ್, ಎಣ್ಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು ರಾಷ್ಟ್ರೀಯ ನಾಯಕರು ಗೌರವಾನ್ವಿತರು ಅವರನ್ನು ನಾವು ಗೌರವ ಪೂರ್ವಕವಾಗಿ ನೋಡಬೇಕು ಇಲ್ಲಿ ಯಾವುದೇ ಪಕ್ಷ, …

Read More »

ಮಳೆ ಕಮ್ಮಿ ಆಗ್ತಿದ್ದಂತೆ ಸಮುದ್ರಕ್ಕೆ ಇಳಿದ ಹವ್ಯಾಸಿ ಮೀನುಗಾರರು

ಉಡುಪಿ: ಮುಂಗಾರು ಮಳೆಯ ಅಬ್ಬರ ಕಡಿಮೆಯಾದ ಕೂಡಲೇ ಅರಬ್ಬಿ ಸಮುದ್ರದಲ್ಲಿ ಹವ್ಯಾಸಿ ಮೀನುಗಾರಿಕೆ ಜೋರಾಗಿದೆ. ಗಾಳ ಹಾಕಿ ಮೀನು ಹಿಡಿಯುವ ಹವ್ಯಾಸ ಹೊಂದಿರುವ ಯುವಕರು ದೋಣಿಗಳ ಜೊತೆ ಅರಬ್ಬಿ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಉದ್ಯಾವರ ನಾಗೇಶ್ ಕುಮಾರ್ ಮತ್ತು ಅವರ ಗೆಳೆಯರ ತಂಡ ಅರಬ್ಬಿ ಸಮುದ್ರದಲ್ಲಿ ಗಾಳ ಹಾಕಿದಾಗ ಶಾರ್ಕ್ ಮೀನೊಂದು ಗಾಳಕ್ಕೆ ಸಿಲುಕಿತ್ತು. ಗಾಳಕ್ಕೆ ಸಿಲುಕಿದ ನಂತರ ಕೆಲಕಾಲ ಸೆಣೆಸಾಟ ನಡೆಸಿದೆ. ತುಳುವಿನಲ್ಲಿ ತಾಟೆ ಮೀನು ಎಂದು ಕರೆಯುತ್ತಾರೆ. ಇದು …

Read More »

ಗೃಹ ಬಳಕೆ ಸಿಲಿಂಡರ್​ ಬೆಲೆ ಮತ್ತೆ ಏರಿಕೆ TODAYS TOP NEWS

1. ಗೃಹ ಬಳಕೆ ಸಿಲಿಂಡರ್​ ಬೆಲೆ ಮತ್ತೆ ಏರಿಕೆ ಮೊದಲೇ ತೈಲ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಸರ್ಕಾರ ಮತ್ತೆ ಶಾಕ್​ಕೊಟ್ಟಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲಿಯಂ ಕಂಪನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಿದ್ದರಿಂದ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 860 ರೂಪಾಯಿ ಆಗಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 68 …

Read More »

ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಚಾಲನೆ

ಬೆಂಗಳೂರು : ಬಿಬಿಎಂಪಿ ಹಮ್ಮಿಕೊಂಡಿರುವ ‘ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಗೋವಿಂದರಾಜ ನಗರದ ಕಾವೇರಿಪುರ ವಾರ್ಡ್‍ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಶ್ರೀ ವಿ ಸೋಮಣ್ಣ ಅವರು, ಈ ಕಾರ್ಯಕ್ರಮದಡಿಯಲ್ಲಿ ವೈದ್ಯರು ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಅಲ್ಲದೇ, ಕೋವಿಡ್ ಸೋಂಕಿನ ನಿಯಂತ್ರಣದ ಬಗ್ಗೆ ಸಲಹೆ ನೀಡಲಿದ್ದಾರೆ. ಪ್ರತಿ …

Read More »

ಬಾಲಕಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ

ಕೊಚ್ಚಿ: ತಂದೆಯ ಜತೆಗೆ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ತೆರಳಲು ಅಪ್ರಾಪ್ತ ವಯಸ್ಕ ಬಾಲಕಿಗೆ ಕೇರಳ ಹೈಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ. ಕಳೆದ ವರ್ಷ ಇದೇ ಮಾದರಿಯ ಪ್ರಕರಣದಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸಿ ಇದೇ ತೆರನಾದ ತೀರ್ಪು ನೀಡಿತ್ತು. ಜತೆಗೆ ಕೇರಳ ಸರಕಾರ ಲಸಿಕೆ ಪಡೆದವರ ಜತೆಗೆ ದೇಗುಲಗಳಿಗೆ ಭೇಟಿ ನೀಡಬಹುದು ಎಂಬ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯ ಪ್ರವೇಶಕ್ಕೆ ಅನುಮತಿ ನೀಡಿದೆ. ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ ನೀಡಬೇಕು …

Read More »

ಚಿಕ್ಕಮಗಳೂರು: ಪುರುಷರನ್ನು ಸೆಳೆದು ವಿಡಿಯೋ ಮಾಡ್ತಿದ್ದ 6 ಮಹಿಳೆಯರು ಸೇರಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಚಿಕ್ಕಮಗಳೂರು: ಹನಿಟ್ರ್ಯಾಪ್ ನಡೆಸುತ್ತಿದ್ದ 6 ಮಹಿಳೆಯರು ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಪುರುಷರನ್ನು ಸೆಳೆದು ಮಹಿಳೆಯರು ವಿಡಿಯೋ ಚಿತ್ರೀಕರಿಸುತ್ತಿದ್ದರು. ನಂತರ ಪುರುಷರು ಪೊಲೀಸರ ಸೋಗಿನಲ್ಲಿ ಭೇಟಿ ನೀಡಿ ನಾವು ಕೇಳಿದಷ್ಟು ಹಣ ಕೊಟ್ಟರೆ ದಾಖಲಿಸುವುದಿಲ್ಲ. ಕೊಡದಿದ್ದರೆ ಕೇಸ್ ದಾಖಲಿಸುವುದಾಗಿ ಹೇಳಿ ಹಣ ಪಡೆದು ಬಿಟ್ಟು ಕಳಿಸುವ ನಾಟಕವಾಡುತ್ತಿದ್ದರು. ನಂತರ ಕರೆ ಮಾಡಿ ಹಣ ನೀಡುವಂತೆ ಒತ್ತಡ ಹೇರುತ್ತಿದ್ದರು. ಹಣ ಕೊಡದಿದ್ದರೆ …

Read More »

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಕ್ಕಳ ಆರೋಗ್ಯತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿ, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ …

Read More »

ಗೋವಾದಲ್ಲಿ ಜಾರಿಗೆ ತಂದ ‘ಹರ್ ಘರ್ ನಲ್’ ಯೋಜನೆ ಸಂಪೂರ್ಣ ವಿಫಲ : ಮಹಾದೇವ್ ನಾಯ್ಕ ವಾಗ್ದಾಳಿ

ಪಣಜಿ: ಮುಂಬರುವ ಐದು ವರ್ಷಗಳಲ್ಲಿ ಗೋವಾ ರಾಜ್ಯದಲ್ಲಿನ ಪ್ರತಿಯೊಂದು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆಯೇ…? ಎಂಬುದನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರಿಂದ ಖಚಿತಪಡಿಸಿಕೊಳ್ಳಲು ಸಾಧ್ಯವೇ..? ಮಳೆಗಾಲದಲ್ಲಂತೂ ಗೋವಾ ರಾಜ್ಯದ ಜನರು ಕೊಳಕು ಕುಡಿಯುವ ನೀರಿನ ಪೂರೈಕೆಯಿಂದ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಾವಂತ್ ರವರ ಹರ್ ಘರ್ ನಲ್ ಯೋಜನೆ ಸಂಪೂರ್ಣ ವಿಫಲವಾಗಿದ್ದು, ಜನರು ಕುಡಿಯುವ ನೀರಿಗಾಗಿ ಬಾವಿಗಳನ್ನು ಅವಲಂಭಿಸಿರುವಂತಾಗಿದೆ ಎಂದು ಆಮ್ ಆದ್ಮಿ ನಾಯಕ ಮಹಾದೇವ್ ನಾಯ್ಕ ವಾಗ್ದಾಳಿ …

Read More »

ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು-ನೀರು ಬಿಡಲು ಬಿಜೆಪಿ ತೀರ್ಮಾನ!

ಬೆಂಗಳೂರು: ಪಕ್ಷ ಸಂಘಟನೆ ಬಲಪಡಿಸುವುದು, ಗುಂಪುಗಾರಿಕೆ, ಜಾತಿಯತೆ ಆರ್ಭಟ ತಡೆಯುವ ಉದ್ದೇಶದಿಂದ ಇನ್ನು ಮುಂದೆ ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು- ನೀರು ಬಿಡಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರ ಕಾಲದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿತ್ತು. ಪಕ್ಷದ ಸಂಘಟನೆ ಗಿಂತಲೂ ಹೆಚ್ಚಾಗಿ, ಯಡಿಯೂರಪ್ಪ ಅವರನ್ನು ನಿಯಂತ್ರಣ ಮಾಡುವ ಉದ್ದೇಶವೇ ಇದರಲ್ಲಿ ಅಡಗಿತ್ತು ಎಂಬುದು ಬಿಜೆಪಿಯ ಮೂಲಗಳಿಂದಲೇ ಸ್ಪಷ್ಟವಾಗಿದೆ. ಯಡಿಯೂರಪ್ಪ ಅವರ …

Read More »

ಉಲ್ಟಾ ಮಚ್ಚೆ ಹೇಳಿಕೆ ನಿಜವಾಗಲಿ; ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಹೇಳುತ್ತಾರೆ ಅದು ಉಲ್ಟಾ ಆಗುತ್ತೆ, ಅವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ ಎಂದಿದ್ದಾರೆ. ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಚಿವರಾಗಲಿ ಎಂದು ಹಾರೈಸುತ್ತೇನೆ. ಆ ಮೂಲಕ ನನ್ನ ನಾಲಿಗೆ ಮೇಲೆ ಉಲ್ಟಾ …

Read More »