Breaking News
Home / ರಾಜ್ಯ (page 1560)

ರಾಜ್ಯ

ಡಿಕೆಶಿ-ಜಮೀರ್ ಅಹ್ಮದ್ ಗೆ ‘ಭಲೇ ಜೋಡಿ’ ಎಂದ ಬಿಜೆಪಿ: ಯಾಕೆ ಗೊತ್ತಾ..?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಗೆ ಭಲೇ ಜೋಡಿ ಅಂತಾ ಬಿಜೆಪಿ ವ್ಯಂಗ್ಯವಾಡಿದೆ. ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆಸಿದ ಬಳಿಕ ಅವರನ್ನು ಭೇಟಿಯಾಗಿದ್ದ ಡಿಕೆಶಿ ಧೈರ್ಯ ತುಂಬಿದ್ದರು. ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ಇಡಿ ದಾಳಿ ಯಾಕೆ ನಡೆದಿದೆ ಎಂದು ಚರ್ಚಿಸಿದ್ದೇನೆ. ಅವರಿಗೆ ಕೆಲವೊಂದು ಮಾರ್ಗದರ್ಶನ ನೀಡಿದ್ದೇನೆ ಅಂತಾ ಡಿಕೆಶಿ ಹೇಳಿದ್ದರು. ಈ ವಿಚಾರವಾಗಿ ಬುಧವಾರ …

Read More »

ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು

ನವದೆಹಲಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬುಧವಾರ (ಆಗಸ್ಟ್ 11) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೂ ಕುಲಕರ್ಣಿಗೆ ಸದ್ಯ ಜೈಲಿನಿಂದ ಬಿಡುಗಡೆ ಇಲ್ಲ ಎಂದು ವರದಿ ವಿವರಿಸಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕಳೆದ 9 ತಿಂಗಳಿನಿಂದ ಜೈಲಿನಲ್ಲಿದ್ದು, ಜಾಮೀನು ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಭೇಟಿ ನೀಡದಂತೆ …

Read More »

ಆನಂದ್ ಸಿಂಗ್ ರಾಜೀನಾಮೆ ಹೈಡ್ರಾಮ: ಯಾವ ಒತ್ತಡಕ್ಕೂ ಸೊಪ್ಪು ಹಾಕದಿರಲು ಸಿಎಂಗೆ ಹೈಕಮಾಂಡ್​ ಸಲಹೆ

ಬೆಂಗಳೂರು: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್​ ಸಿಂಗ್​, ತನ್ನ ಬೇಡಿಕೆ ಈಡೇರಿಸಿಕೊಳ್ಳಲು ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ಅತ್ತ ಯಾವುದೇ ಒತ್ತಡಕ್ಕೂ ಸೊಪ್ಪು ಹಾಕಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದು, ಬೊಮ್ಮಾಯಿ ಸಂಪುಟದತ್ತ ಎಲ್ಲರ ಚಿತ್ತ ಮೂಡಿದೆ. ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಮಾಡಬೇಡಿ. ಈಗ ಖಾತೆ ಬದಲಾವಣೆ ಮಾಡಿದರೆ ಮತ್ತೊಬ್ಬರು ಖಾತೆ ಕ್ಯಾತೆ ತೆಗೆಯುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರು ಮತ್ತು ಆರ್​ಎಸ್​ಎಸ್​ನಿಂದ ಸಿಎಂಗೆ ಸಲಹೆ ಬಂದಿದೆ. …

Read More »

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಜತೆಗೆ ರಾಜಕೀಯಕ್ಕೇ ನಿವೃತ್ತಿ ಘೋಷಿಸಲು ಸಜ್ಜಾದ ಆನಂದ್ ಸಿಂಗ್!

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಆನಂದ್ ಸಿಂಗ್ ನಿರ್ಧರಿಸಿದ್ದಾರೆ. ಈಗಾಗಲೇ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದು, ಇನ್ನು ಕೆಲವೇ ಗಂಟೆಯಲ್ಲಿ ಬೆಂಗಳೂರಿಗೆ ಆಗಮಿಸಿ ರಾಜೀನಾಮೆ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಮಾತ್ರವಲ್ಲ, ರಾಜಕೀಯಕ್ಕೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ. ಬೈ ಎಲೆಕ್ಷನ್ ನಡೆದರೂ ಅದಕ್ಕೂ ನಿಲ್ಲದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆನಂದ್​ ಸಿಂಗ್​ಗೆ ಪ್ರವಾಸೋದ್ಯಮ ಖಾತೆ ಸಿಕ್ಕಿದೆ. ತಾನು ಕೇಳಿದ್ದ ಖಾತೆಯನ್ನು ಕೊಟ್ಟಿಲ್ಲ …

Read More »

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು : ಸಿಎಂ ಬೊಮ್ಮಾಯಿ

ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಜೂಜು, ಡಾರ್ಕ್ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವಂತಿಲ್ಲ. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ …

Read More »

ಮಾಸ್ಕ್ ಧರಿಸದ್ದಕ್ಕೆ ದಂಡ ವಿಧಿಸಿದ ಅಧಿಕಾರಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ; ವಿಡಿಯೋ ವೈರಲ್

ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮಹಿಳೆಯೊಬ್ಬರಿಗೆ ದಂಡ ವಿಧಿಸಿದ ಅಧಿಕಾರಿಯೇ ಆಕೆಯಿಂದ ಒದೆ ತಿಂದಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ ಎಂದು ದಂಡ ವಿಧಿಸಿದ್ದಕ್ಕೆ ಆ ಅಧಿಕಾರಿಯ ಕೆನ್ನೆಗೆ ಹೊಡೆದು, ಕಾಲಿನಲ್ಲಿ ಒದ್ದು, ಆತನ ಕೂದಲನ್ನು ಹಿಡಿದು ಎಳೆದಾಡಿರುವ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಂಬಂಧ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ನವದೆಹಲಿಯಲ್ಲಿ ನಡೆದ ಈ ಘಟನೆಯ ವಿಡಿಯೋ ನೋಡಿದ ನೆಟ್ಟಿಗರು …

Read More »

7 ಮಕ್ಕಳ ತಂದೆ, 67 ವರ್ಷದ ವ್ಯಕ್ತಿ ಪ್ರೀತಿಗೆ ಬಿದ್ದ 19ರ ಹುಡುಗಿ.!

ಪ್ರೀತಿ ಕುರುಡು ಎನ್ನುತ್ತಾರೆ. ಅದಕ್ಕೆ ವಯಸ್ಸಿನ ಮಿತಿಯಿಲ್ಲ, ಜಾತಿಯ ಗಡಿಯಿಲ್ಲ. ಇದಕ್ಕೆ ಹರಿಯಾಣದ ಪಲ್ವಾಲ್‌ನಲ್ಲಿ ನಡೆದ ಘಟನೆ ಉತ್ತಮ ನಿದರ್ಶನ. 19 ವರ್ಷದ ಹುಡುಗಿ 7 ಮಕ್ಕಳ ತಂದೆಯಾಗಿರುವ 67 ವರ್ಷದ ವ್ಯಕ್ತಿಯ ಪ್ರೀತಿಗೆ ಬಿದ್ದಿದ್ದಾಳೆ. ಇಷ್ಟೇ ಅಲ್ಲ ಇಬ್ಬರೂ ಮದುವೆಯಾಗಿದ್ದಾರೆ. ನಂತ್ರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ಹೋಗಿ, ತಮಗೆ ರಕ್ಷಣೆ ಬೇಕೆಂದು ಮನವಿ ಸಲ್ಲಿಸಿದ್ದಾರೆ. ವರದಿ ಪ್ರಕಾರ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಈ ಬಗ್ಗೆ …

Read More »

ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು – ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ. ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 3ರಂದು ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

Read More »

ಜೊಲ್ಲೆ ನನ್ನ ಸಿಸ್ಟರ್ ಇದ್ದ ಹಾಗೆ, ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದ ಈಶ್ವರಪ್ಪ

ಬೆಳಗಾವಿ – ಶಶಿಕಲಾ ಜೊಲ್ಲೆ ನನ್ನ ಸಿಸ್ಟರ್ ಇದ್ದಹಾಗೆ. ಅವರ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಯಾರೋ ಹೇಳಿದ ತಕ್ಷಣ ಅದನ್ನೆಲ್ಲ ತನಿಖೆ ಮಾಡುವುದಕ್ಕಾಗುವುದಿಲ್ಲ. ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.     ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೊಲ್ಲೆಯವರ ಬಗ್ಗೆ ಬಂದಿರುವ ಆರೋಪಗಳಲ್ಲಿ ಹುರುಳಿಲ್ಲ. ಅದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸುಮ್ಮನೇ ಯಾರೋ ಹೇಳುತ್ತಾರೆಂದು ಎಲ್ಲವನ್ನೂ ತನಿಖೆಗೊಳಪಡಿಸಲು ಸಾಧ್ಯವಿಲ್ಲ. …

Read More »

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.

ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್​ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್​ ಸಿಂಗ್​ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …

Read More »