ಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 ಎಕರೆ ಜಮೀನು ಮಂಜೂರುಗೊಳಿಸಿದ್ದು ಮಹತ್ವದ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ವಿದ್ಯಾಪೀಠವು ಜ್ಞಾನಕೇಂದ್ರವಾಗಿ ಬೆಳೆಯಲಿ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ಶಿವಾನಂದ ಮಠದ ಶ್ರೀ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ ಸರ್ಕಾರದ ವತಿಯಿಂದ ಶೈಕ್ಷಣಿಕ …
Read More »ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ
ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಐ.ಹುಣಸೆಕೆರೆ ಗ್ರಾಮದ ಹೆಚ್.ಎಲ್.ಇಂದ್ರ (24) ಮೃತ ಗೃಹಿಣಿ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್.ಮೈಲಳ್ಳಿ ಗ್ರಾಮದ ಎಂ.ಹೆಚ್.ಸ್ವಾಮಿ ಜೊತೆ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ. ಮದುವೆ ವೇಳೆ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ ಹಾಗೂ 1.30 ಲಕ್ಷ ರೂ. ಹಣವನ್ನು ಹೆಚ್.ಎಲ್.ಇಂದ್ರ …
Read More »ಇಂದು ರಾಯಚೂರಿಗೆ ಸಿಎಂ – ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ
ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು (ಜ.1) ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ 10ಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಯಾದಗಿರಿಯ ಬಂಡೊಳ್ಳಿಗೆ ಬಂದು, ಅಲ್ಲಿಂದ ರಸ್ತೆ ಮಾರ್ಗವಾಗಿ ರಾಯಚೂರಿನ ದೇವದುರ್ಗದ ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಿದ್ದರಾಮನಂದ …
Read More »ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.
ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು. ಜನ್ಮದಿನ ನಿಮಿತ್ಯ ಮಾತ್ರಕೆ ಇಟ್ಟುಕೊಂಡು ನೆರೆಯ ಸಾಂಗ್ಲಿ ಜಿಲ್ಲೆಯ ಹೆಸರಾಂತ ನಂದಾದೀಪ ನೇತ್ರಾಲಯ, ಸೇವಾಸದನ, ಉಷಕಾಲ, ಆಸ್ಪತ್ರೆಗಳ ಖ್ಯಾತ ವೈದ್ಯರ ನೇತೃತ್ವದಲ್ಲಿ ಸುಮಾರು ನಾಲ್ಕು ಸಾವಿರ ಜನರ ಆರೋಗ್ಯ ತಪಾಸಣೆ ಮಾಡುವುದಂಧಿಗೆ ಉಪಚಾರಿಸುವ ಸೇವೆ ನೀಡಲಾಗಿದೆ. ಅನೇಕ ಬಡ ಕುಟುಂಬಗಳಿಗೆ ಆರೋಗ್ಯ ಉಚ್ಚಾರದ ವ್ಯವಸ್ಥೆ ಒದಗಿ ಬಂದಿದ್ದರಿಂದ ನನಗೆ …
Read More »ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು.
ಗೋಕಾಕ 31: ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು. ಈ ಕುರಿತು ನಗರದ ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಇಂದು ನಡೆದ ನಾಗರೀಕರ ಸಭೆಯಲ್ಲಿ ಈ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಗ್ಲಾö್ಯಕ್ಸೋ ಪ್ಯಾಕ್ಟರಿ ಮತ್ತು ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದ ನಡುವೆ ಇರುವ ಸರಕಾರಿ ಹಾದಿಯನ್ನು ಅಭಿವೃದ್ಧಿ ಪಡಿಸಿ ನದಿಯಲ್ಲಿ ಬ್ರಿಜ್ಡ …
Read More »ಫೆ.6ಕ್ಕೆ ‘ ಕರಿಕಾಡ ‘ ರಿಲೀಸ್
ಗಿಲ್ಲಿ ವೆಂಕಟೇಶ್ ನಿರ್ದೇಶನದ ಕರಿಕಾಡ ಚಿತ್ರ ಫೆಬ್ರವರಿ 6ರಂದು ಕನ್ನಡ ಸೇರಿದಂತೆ ಒಟ್ಟು 5 ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ವಿಭಿನ್ನ ಶೀರ್ಷಿಕೆಯ ಕರಿಕಾಡ ಚಿತ್ರ ಕನ್ನಡ ಅಲ್ಲದೇ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಕರ್ನಾಟಕದಲ್ಲಿ ಒಟ್ಟು ನೂರು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಚಿತ್ರದ ಟೀಸರ್ ಇದೊಂದು ಅಡ್ವೆಂಚರಸ್ ಹಾಗೂ ಹಳ್ಳಿ ಸೊಗಡಿನ ಸಿನಿಮಾ ಎನ್ನುವುದನ್ನು ಹೇಳುತ್ತದೆ. ಕಾಡಿನಲ್ಲಿ ನಡೆಯುವ ಕಥೆಯಲ್ಲಿ ದ್ವೇಷ, ಪ್ರೀತಿ, ಪ್ರತೀಕಾರ …
Read More »ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣಗಳ ಬಗ್ಗೆ ಕರ್ನಾಟಕ ಹೈಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ …
Read More »ಅನುಮಾನಾಸ್ಪದ ವಸ್ತು ಸ್ಫೋಟ – ಬಾಲಕ ಸೇರಿ ಮೂವರ ಸ್ಥಿತಿ ಗಂಭೀರ
ಬೀದರ್: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್‌ಗೆ ರವಾನೆ ಮಾಡಲಾಗಿದೆ. ವಸ್ತು ಬ್ಲಾಸ್ಟ್ ಆದಾಗ ಪಕ್ಕದಲ್ಲೇ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ನಿಂತಿದ್ದರು ಎಂದು ತಿಳಿದು …
Read More »40,000 ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ
ತುಮಕೂರು: ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪಿಎಸ್‌ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಮೂಲದ ವಕೀಲರ ವಾಹನ ಇದಾಗಿದ್ದು, ವಾಹನ ಬಿಡುಗಡೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿನ್ನೆ ರಾತ್ರಿ 11:30 ರ ಸುಮಾರಿಗೆ ಕ್ಯಾತಸಂದ್ರ ಬಳಿಯ ನಮಸ್ತೆ ತುಮಕೂರು ಹೋಟೆಲ್‌ನಲ್ಲಿ 40 ಸಾವಿರ ರೂ. ಲಂಚ ಪಡದುಕೊಳ್ಳುತ್ತಿದ್ದಾಗ ಪಿಎಸ್‌ಐ ಚೇತನ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. …
Read More »ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ
ಬೆಂಗಳೂರು: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ …
Read More »
Laxmi News 24×7